ಬೆಂಗಳೂರು: ಬಿಬಿಎಂಪಿಯಿಂದ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದ್ದು, ಯಾವುದೇ ಮುಲಾಜಿಲ್ಲದೆ ಬಿಬಿಎಂಪಿ ಒತ್ತವರಿಯನ್ನು ತೆರವುಗೊಳಿಸುತ್ತಿದೆ. ಮಹಾದೇವಪುರ ನಗರದಲ್ಲಿರುವ ಪೂರ್ವ ಪಾರ್ಕ್ರಿಡ್ಜ್ನ ವಿಲ್ಲಾಗಳಿಂದ ರಾಜಕಾಲುವೆ ಒತ್ತುವರಿಯಾಗಿದೆ. ಹೀಗಾಗಿ ಒತ್ತುವರಿ ಮಾಡಿದ 3 ವಿಲ್ಲಾಗಳಿಗೆ ಬಿಬಿಎಂಪಿ ಮಾರ್ಕ್ ಮಾಡಿದೆ. ಮಹಾದೇವಪುರದ ಬಾಗ್ಮನೆ ಟೆಕ್ಮಾರ್ಕ್ನಿಂದ ಕೂಡ ಕೋಟ್ಯಂತರ ಮೌಲ್ಯದ ರಾಜಕಾಲುವೆ ಜಾಗ ಒತ್ತುವರಿಯಾಗಿದೆ. ರಾಜಕಾಲುವೆ ವಿಲ್ಲಾದೊಳಗಿಂದ ಬಾಗಮನೆ ಟೆಕ್ಪಾರ್ಕ್ ಒಳಗೆ ಹಾದುಹೋಗುತ್ತದೆ. ಕೋಟ್ಯಾಂತರ ಬೆಲೆ ಬಾಳುವ ಇಂತಹ ವಿಲ್ಲಾಗಳಿಗೆ ಬಿಬಿಎಂಪಿ ಮಾರ್ಕ್ ಮಾಡಿದೆ.
ಬಿಬಿಎಂಪಿ ವ್ಯಾಪ್ತಿಯಲ್ಲಿನ ರಾಜಕಾಲುವೆ ಒತ್ತುವರಿ ತೆರವು ವಿಚಾರವಾಗಿ ಸರ್ಕಾರ ನಾಳೆ (ಸೆ. 15) ಕೆವಿಯೆಟ್ ಅರ್ಜಿ ಸಲ್ಲಿಸಲು ನಿರ್ಧರಿಸಿದೆ. ಬಿಬಿಎಂಪಿ ಆಯುಕ್ತರ ಮೇಲೆ ಒತ್ತುವರಿ ತೆರವು ಮಾಡದಂತೆ ಶಾಸಕ ಹ್ಯಾರಿಸ್ ಸೇರಿ ಹಲವರು ಒತ್ತಡ ಹೇರುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರ ಕೆವಿಯೆಟ್ ಸಲ್ಲಿಸಲು ನಿರ್ಧರಿಸಿದೆ. ಈ ಸಂಬಂಧ ಅಡ್ವೋಕೇಟ್ ಜನರಲ್ಗೆ ಕಂದಾಯ ಸಚಿವ ಆರ್ ಅಶೋಕ್ ಸೂಚನೆ ನೀಡಿದ್ದಾರೆ.
ಒತ್ತುವರಿ ಜಾಗ ತೆರವುಗೊಳಿಸುವಂತೆ ಬೆಂಗಳೂರಿನ ರೈನ್ಬೋ ಡ್ರೈವ್ ಲೇಔಟ್ ವಿಲ್ಲಾಗಳಿಗೆ ನೋಟಿಸ್
ಮಳೆ ನೀರು ನಿಂತು ರೈನ್ ಬೋ ಡ್ರೈವ್ ಲೇಔಟ್ ದೇಶಾದ್ಯಂತ ಹೆಸರುವಾಸಿಯಾಗಿತ್ತು. ಸದ್ಯ ಕಾಲುವೆ ಒತ್ತುವರಿ ಜಾಗ ತೆರವುಗೊಳಿಸುವಂತೆ ನಗರದ ರೈನ್ಬೋ ಡ್ರೈವ್ ಲೇಔಟ್ ವಿಲ್ಲಾಗಳಿಗೆ ಬೆಂಗಳೂರು ಪೂರ್ವ ತಹಶೀಲ್ದಾರ್ ನೋಟಿಸ್ ಜಾರಿ ಮಾಡಿದ್ದಾರೆ. ಒತ್ತುವರಿ ಜಾಗವನ್ನು ತೆರವು ಮಾಡದಿದ್ದರೆ ನಾವೇ ಮಾಡುತ್ತೇವೆ. ತೆರವು ಕಾರ್ಯಾಚರಣೆ ವೆಚ್ಚ ನೀವೇ ಭರಿಸಬೇಕೆಂದು, 15ಕ್ಕೂ ಹೆಚ್ಚು ವಿಲ್ಲಾಗಳಿಗೆ ತಹಶೀಲ್ದಾರ್ ನೋಟಿಸ್ ಜಾರಿಗೊಳಿಸಿದ್ದರು. ಮಳೆಯಿಂದ ರೈನ್ಬೋ ಡ್ರೈವ್ ಲೇಔಟ್ ಜಲಾವೃತಗೊಂಡಿತ್ತು. ರೈನ್ಬೋ ಡ್ರೈವ್ ಲೇಔಟ್ನಲ್ಲಿ ಜಿಲ್ಲಾಡಳಿತ ಸರ್ವೆ ನಡೆಸಿದ್ದು, ಕಾಲುವೆ ಒತ್ತುವರಿ ಮಾಡಿ ವಿಲ್ಲಾಗಳನ್ನ ನಿರ್ಮಿಸಿರುವುದು ಬಹಿರಂಗವಾಗಿದೆ. ಇದೀಗ ವಿಲ್ಲಾಗಳನ್ನ ತೆರವುಗೊಳಿಸುವಂತೆ ಮಾಲೀಕರಿಗೆ ನೋಟಿಸ್ ನೀಡಲಾಗಿತ್ತು. ಮಳೆ ನಿಂತು ಹೋದ ಮೇಲೆ ರೈನ್ ಬೋ ಡ್ರೈವ್ಗೆ ಆತಂಕ ಶುರುವಾಗಿದ್ದು, ಮಳೆ ಹಿನ್ನೆಲೆ ಸುಮ್ಮನಿದ್ದ ಅಧಿಕಾರಿಗಳು, ಈಗ ತೆರವು ಮಾಡಲೇ ಬೇಕೆಂದು ಪಟ್ಟು ಹಿಡಿದಿದ್ದರು.
ಒತ್ತುವರಿ ಜಾಗ ತೆರವು: ರೈನ್ಬೋ ಡ್ರೈವ್ ಲೇಔಟ್ ವಿಲ್ಲಾಗಳಿಗೆ ನೋಟಿಸ್
ಮಳೆ ನೀರು ನಿಂತು ರೈನ್ ಬೋ ಡ್ರೈವ್ ಲೇಔಟ್ ದೇಶಾದ್ಯಂತ ಹೆಸರುವಾಸಿಯಾಗಿತ್ತು. ಸದ್ಯ ಕಾಲುವೆ ಒತ್ತುವರಿ ಜಾಗ ತೆರವುಗೊಳಿಸುವಂತೆ ನಗರದ ರೈನ್ಬೋ ಡ್ರೈವ್ ಲೇಔಟ್ ವಿಲ್ಲಾಗಳಿಗೆ ಬೆಂಗಳೂರು ಪೂರ್ವ ತಹಶೀಲ್ದಾರ್ ನೋಟಿಸ್ ಜಾರಿ ಮಾಡಿದ್ದರು. ಒತ್ತುವರಿ ಜಾಗವನ್ನು ತೆರವು ಮಾಡದಿದ್ದರೇ ನಾವೇ ಮಾಡುತ್ತೇವೆ. ತೆರವು ಕಾರ್ಯಾಚರಣೆ ವೆಚ್ಚ ನೀವೇ ಭರಿಸಬೇಕೆಂದು, 15ಕ್ಕೂ ಹೆಚ್ಚು ವಿಲ್ಲಾಗಳಿಗೆ ತಹಶೀಲ್ದಾರ್ ನೋಟಿಸ್ ಜಾರಿಗೊಳಿಸಿದ್ದರು. ಮಳೆಯಿಂದ ರೈನ್ಬೋ ಡ್ರೈವ್ ಲೇಔಟ್ ಜಲಾವೃತಗೊಂಡಿತ್ತು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 7:36 pm, Wed, 14 September 22