AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಟಿ ಮಾರ್ಕೆಟ್​ನಲ್ಲಿ ‘ವ್ಯಾಕ್ಸಿನ್ ಹಾಕ್ಸಿಕೊಳೀ-ವ್ಯಾಕ್ಸಿನ್ ಹಾಕಿಸಿಕೊಳ್ಳಿ’ ಅಂತಾ ಅನೌನ್ಸ್​ಮೆಂಟ್​! ಹೌಹಾರಿದ ವ್ಯಾಪಾರಿಗಳು

ಈ ಬೆಳವಣಿಗೆಗಳ ಮಧ್ಯೆ ಕೋವಿಡ್ ಲಸಿಕೆ ಕಡ್ಡಾಯಗೊಳಿಸಿ ಇಂದು ಅಥವಾ ನಾಳೆ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ ಹೊರಬೀಳುವ ಸಾಧ್ಯತೆಯಿದೆ. ಬಿಬಿಎಂಪಿ ಪ್ರಸ್ತಾವನೆಗೆ ರಾಜ್ಯ ಸರ್ಕಾರದಿಂದ ಗ್ರೀನ್ ಸಿಗ್ನಲ್ ದೊರೆತಿದೆ ಎಂದು ಟಿವಿ9ಗೆ ಬಿಬಿಎಂಪಿ ಉನ್ನತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

ಸಿಟಿ ಮಾರ್ಕೆಟ್​ನಲ್ಲಿ ‘ವ್ಯಾಕ್ಸಿನ್ ಹಾಕ್ಸಿಕೊಳೀ-ವ್ಯಾಕ್ಸಿನ್ ಹಾಕಿಸಿಕೊಳ್ಳಿ’ ಅಂತಾ ಅನೌನ್ಸ್​ಮೆಂಟ್​! ಹೌಹಾರಿದ ವ್ಯಾಪಾರಿಗಳು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Dec 01, 2021 | 11:26 AM

Share

ಬೆಂಗಳೂರು: ಮಾರ್ಕೆಟ್​ ಅದೂ ಸಿಟಿ ಮಾರ್ಕೆಟ್​ ಅಂದ ಮೇಲೆ ಅಲ್ಲಿ ತಗೊಳ್ಳೀ ತಗೊಳ್ಳೀ… ರೂಪಾಯಿಗೆ ಒಂದು ಅಂತಾ ಕೂಗ್ತಾನೇ ಇರ್ತಾರೆ. ಆದರೆ ಬದಲಾದ ಕಾಲಮಾನದಲ್ಲಿ ಕೊರೊನಾ ಮಹಾಮಾರಿಗೆ ಅಂಜಿ ಸರ್ಕಾರ ಅನ್ನು ಕಟ್ಟಿಹಾಕಲು ಸರ್ವಪ್ರಯತ್ನ ಮಾಡುತ್ತಿದೆ. ಮಾರ್ಕೆಟ್ ನಲ್ಲಿ ವ್ಯಾಕ್ಸಿನ್ ಹಾಕಿಸಿಕೊಳ್ಳಿ-ವ್ಯಾಕ್ಸಿನ್ ಹಾಕಿಸಿಕೊಳ್ಳಿ ಅಂತಾ ಈಗ ಅನೌನ್ಸ್ ಮಾಡ್ತಿದ್ದಾರೆ. ಜೊತೆಗೆ ಮಾರ್ಕೆಟ್ ಒಳಗಡೆಯೇ ವ್ಯಾಕ್ಸಿನ್​ ಹಾಕುತ್ತಾ ಇದ್ದಾರೆ, ವ್ಯಾಕ್ಸಿನ್ ಹಾಕಿಸಿಕೊಳ್ಳಿ ಅಂತಾ ಬಿಬಿಎಂಪಿಯಿಂದ ನಿಯುಕ್ತಿಗೊಂಡ ಮಾರ್ಷಲ್ ಗಳು ಅನೌನ್ಸ್​ಮೆಂಟ್ ಕೊಡ್ತಿದ್ದಾರೆ.

ಮುಂದಿನ ದಿನಗಳಲ್ಲಿ ಮಾರುಕಟ್ಟೆಗಳಲ್ಲಿ ವ್ಯಾಪಾರ ಮಾಡುವುದಕ್ಕೆ ವ್ಯಾಕ್ಸಿನ್ ಸರ್ಟಿಫಿಕೇಟ್ ಕೇಳ್ತಾರೆ ಹಾಗಾಗಿ ವ್ಯಾಕ್ಸಿನ್ ಹಾಕಿಸಿಕೊಳ್ಳಿ ಅಂತಾ ಅನೌನ್ಸ್ ಮಾಡಿದ್ದಾರೆ. ಹಾಗಾದರೆ ಕೆ.ಆರ್ ಮಾರ್ಕೆಟ್ ನಲ್ಲಿ ವ್ಯಾಪಾರ ಮಾಡಲಿಕ್ಕೆ ವ್ಯಾಕ್ಸಿನ್ ಸರ್ಟಿಫಿಕೇಟ್ ಕಡ್ಡಾಯವಾ? ಬಿಬಿಎಂಪಿ ಹೊರ ರೂಲ್ಸ್ ಮಾಡಲಿಕ್ಕೆ ಹೊರಟಿದೆಯಾ ? ವ್ಯಾಕ್ಸಿನೇಷನ್‌ ಸರ್ಟಿಫಿಕೇಟ್ ಇದ್ದರೆ ಮಾತ್ರ ಖರೀದಿ/ ವ್ಯಾಪಾರಕ್ಕೆ ಅವಕಾಶ ನಾ ? ಹೀಗೆ ಅಚ್ಚರಿ ಮೂಡಿಸಿದೆ ಮಾರ್ಷಲ್ ಗಳ ಮೈಕ್ ಅನೌನ್ಸ್ ಮೆಂಟ್. ಇದರ ಮಧ್ಯೆ, ಕೆ.ಆರ್ ಮಾರ್ಕೆಟ್ ವ್ಯಾಪಾರಿಗಳಿಗೆ ವ್ಯಾಕ್ಸಿನೇಷನ್‌ ಶುರು ಮಾಡಲಾಗಿದೆ. ಬಸ್ ಸ್ಟಾಂಡ್ , ಮಾರ್ಕೆಟ್, ರೈಲ್ವೆ ಸ್ಟೇಷನ್ ಸ್ಥಳಗಳಲ್ಲಿ ವ್ಯಾಕ್ಸಿನೇಷನ್‌ ಡ್ರೈವ್ ಗೆ ತಙ್ಞರ ಸಮಿತಿ ಸಲಹೆ ನೀಡಿತ್ತು. ತಙ್ಞರ ಸಲಹೆಯಂತೆ ವ್ಯಾಕ್ಸಿನೇಷನ್‌ ಶುರು ಮಾಡಲಾಗಿದೆ ಅನ್ನುತ್ತಿದ್ದಾರೆ ಮಾರ್ಷಲ್ ಗಳು.

ಈ ಬೆಳವಣಿಗೆಗಳ ಮಧ್ಯೆ ಕೋವಿಡ್ ಲಸಿಕೆ ಕಡ್ಡಾಯಗೊಳಿಸಿ ಇಂದು ಅಥವಾ ನಾಳೆ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ ಹೊರಬೀಳುವ ಸಾಧ್ಯತೆಯಿದೆ. ಬಿಬಿಎಂಪಿ ಪ್ರಸ್ತಾವನೆಗೆ ರಾಜ್ಯ ಸರ್ಕಾರದಿಂದ ಗ್ರೀನ್ ಸಿಗ್ನಲ್ ದೊರೆತಿದೆ ಎಂದು ಟಿವಿ9ಗೆ ಬಿಬಿಎಂಪಿ ಉನ್ನತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

ಅಂತಹ ಯಾವುದೇ ಶಿಫಾರಸು ಒಪ್ಪುವುದಿಲ್ಲ: ಆರೋಗ್ಯ ಸಚಿವ ಡಾ. ಸುಧಾಕರ್ ಇನ್ನು ಲಸಿಕೆ ಪಡೆಯದವರಿಗೆ ಸರ್ಕಾರಿ ಸೌಲಭ್ಯ ನೀಡದ ವಿಚಾರವಾಗಿ ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಇಂತಹ ಯಾವುದೇ ಶಿಫಾರಸು ಒಪ್ಪುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದರಿಂದ ಸರ್ಕಾರಕ್ಕೆ ಒಳ್ಳೆ ಹೆಸರು ಬರೊಲ್ಲ. ಆಂದೋಲನ ಮಾಡಿ ಲಸಿಕೆ ಕೊಡ್ತೀವಿ. ಇನ್ನು, ಕ್ರಿಸ್ ಮಸ್ ಹಾಗೂ ವರ್ಷಾಚರಣೆ ಗೆ ನಿರ್ಬಂಧ ವಿಚಾರವಾಗಿ ಅಗತ್ಯವಿದ್ದರೆ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

ಲಸಿಕಾ ಮಿತ್ರ ಹೆಸರಿನಲ್ಲಿ ಲಸಿಕೆ ನೀಡಲಾಗ್ತಿದೆ: ಆರೋಗ್ಯ ಸಚಿವ ಡಾ. ಸುಧಾಕರ್ ರಾಜ್ಯದಲ್ಲಿ ಲಸಿಕೆ ಕೊರತೆ ಇಲ್ಲ. ಮನೆ ಮನೆಗೆ ಲಸಿಕೆ ನೀಡುವ ಕೆಲಸ ಮಾಡ್ತಿದ್ದೇವೆ‌. ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಲಸಿಕೆ ನೀಡಲಾಗ್ತಿದೆ. ಲಸಿಕಾ ಮಿತ್ರ ಹೆಸರಿನಲ್ಲಿ ಲಸಿಕೆ ನೀಡಲಾಗ್ತಿದೆ. ಅತ್ಯಂತ ಯಶಸ್ವಿಯಾಗಿ ಈ ಕಾರ್ಯಕ್ರಮ ನಡೆಯುತ್ತಿದೆ ಎಂದೂ ಆರೋಗ್ಯ ಸಚಿವ ಡಾ. ಸುಧಾಕರ್ ತಿಳಿಸಿದ್ದಾರೆ.

Market Corona Marshals|ಕೆ. ಆರ್. ಮಾರ್ಕೆಟ್​ನಲ್ಲಿ ಮಾರ್ಷಲ್​ಗಳಿಂದ ವ್ಯಾಕ್ಸಿನೇಷನ್ ಅನೌನ್ಸ್​ಮೆಂಟ್|Tv9kannada

Published On - 11:00 am, Wed, 1 December 21

ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್
ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್