Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರ್ವಾಹಣೆ ಇಲ್ಲದೆ ಹಳ್ಳ ಹಿಡಿಯುತ್ತಿವೆ ಬಿಜೆಪಿ ಸರ್ಕಾರದ ನಮ್ಮ ಕ್ಲಿನಿಕ್​ಗಳು; 8 ತಿಂಗಳಿಂದ ಬಾಗಿಲು ತೆರೆದಿಲ್ಲ, ಚಿಕಿತ್ಸೆಯೂ ಇಲ್ಲ

ಬಿಜೆಪಿ ಸರ್ಕಾರದ ನಮ್ಮ‌ ಕ್ಲಿನಿಕ್ ಯೋಜನೆಯಡಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಕಟ್ಟಿದ ನಮ್ಮ ಕ್ಲಿನಿಕ್ ಗಳು ಹಳ್ಳ ಹಿಡಿತಾ ಇದಿಯಾ ಎನ್ನುವ ಪ್ರಶ್ನೆ ಎದುರಾಗಿದೆ. ಏಕೆಂದರೆ ಮಹಾಕವಿ ಕುವೆಂಪು ಮೆಟ್ರೋ ಬಳಿಯಿರುವ ಕ್ಲಿನಿಕ್‌ ಕಳೆ‌ದ 8 ತಿಂಗಳಿಂದ ಬಾಗಿಲು ತೆಗೆದಿಲ್ಲ. ಹೀಗಾಗಿ ಸಾರ್ವಜನಿಕರು ಆಕ್ರೋಶ ಹೊರ ಹಾಕಿದ್ದಾರೆ.

ನಿರ್ವಾಹಣೆ ಇಲ್ಲದೆ ಹಳ್ಳ ಹಿಡಿಯುತ್ತಿವೆ ಬಿಜೆಪಿ ಸರ್ಕಾರದ ನಮ್ಮ ಕ್ಲಿನಿಕ್​ಗಳು; 8 ತಿಂಗಳಿಂದ ಬಾಗಿಲು ತೆರೆದಿಲ್ಲ, ಚಿಕಿತ್ಸೆಯೂ ಇಲ್ಲ
ನಮ್ಮ ಕ್ಲಿನಿಕ್ (ಸಾಂದರ್ಭಿಕ ಚಿತ್ರ)
Follow us
Vinayak Hanamant Gurav
| Updated By: ಆಯೇಷಾ ಬಾನು

Updated on: Dec 16, 2023 | 8:09 AM

ಬೆಂಗಳೂರು, ಡಿ.16: ಬಿಜೆಪಿ (BJP) ಸರ್ಕಾರದ ನಮ್ಮ‌ ಕ್ಲಿನಿಕ್ (Namma Clinic) ಯೋಜನೆಯಡಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಕಟ್ಟಿದ ನಮ್ಮ ಕ್ಲಿನಿಕ್ ಗಳು ಹಳ್ಳ ಹಿಡಿತಾ ಇದಿಯಾ ಎನ್ನುವ ಪ್ರಶ್ನೆ ಎದುರಾಗಿದೆ. ಇದಕ್ಕೆ ಸಾಕ್ಷಿ ಎಂಬಂತೆ ಮಹಾಕವಿ ಕುವೆಂಪು ಮೆಟ್ರೋ ಬಳಿಯಿರುವ ಕ್ಲಿನಿಕ್‌ ಕಳೆ‌ದ 8 ತಿಂಗಳಿಂದ ಬಾಗಿಲು ತೆಗೆದಿಲ್ಲ. ಲಕ್ಷಾಂತರ ರೂಪಾಯಿ ಹಣ ವ್ಯರ್ಥವಾಗುತ್ತಿದೆ. ಬಿಬಿಎಂಪಿ (BBMP) ನಿರ್ಲಕ್ಷ್ಯದಿಂದಾಗಿ ಬಡ ರೋಗಿಗಳು ಖಾಸಗಿ ಆಸ್ಪತ್ರೆಗಳತ್ತ ಮುಖ ಮಾಡಬೇಕಾದ ಪರಿಸ್ಥಿತಿ ಬಂದಿದ್ದು, ಕೂಡಲೆ ಆಸ್ಪತ್ರೆ ಪುನರಾರಂಭಿಸುವಂತೆ ಸಾರ್ವಜನಿಕರು ಮನವಿ ಮಾಡಿದ್ದಾರೆ.

ಬೆಂಗಳೂರಿನ ಮಹಾಕವಿ ಕುವೆಂಪು ಮೆಟ್ರೋ ಬಳಿಯಿರುವ ನಮ್ಮ ಕ್ಲಿನಿಕ್‌ಗೆ ಡಾಕ್ಟರ್​ಗಳು ಬಾರದೆ ಬೀಗ ಬಿದ್ದಿದೆ. ಬೀಗ ಹಾಕಿ 8 ತಿಂಗಳುಗಳೇ ಕಳೆದರು ಬಿಬಿಎಂಪಿ ನಿರ್ಲಕ್ಷ್ಯ ವಹಿಸುತ್ತಿದೆ. ಬೆಳಿಗ್ಗೆ, ಸಾಯಂಕಾಲ ಎರಡು ಪಾಳಿಯಲ್ಲಿ ನಮ್ಮ ಕ್ಲಿನಿಕ್ ‌ಕಾರ್ಯ ನಿರ್ವಹಿಸುತ್ತಿತ್ತು.‌ ಬಿಬಿಎಂಪಿ‌ ವ್ಯಾಪ್ತಿಯಲ್ಲಿ ಅತಿ‌ ಹೆಚ್ಚು ಜನರು ನಮ್ಮ‌ ಕ್ಲಿನಿಕ್​ಗೆ ಬಂದು‌ ಚಿಕಿತ್ಸೆ ಪಡೆಯುತ್ತಿದ್ರು.‌ ಆದರೆ ರೋಗಿಗಳಿಗೆ ಉಪಯೋಗವಾಗಬೇಕಿದ್ದ ನಮ್ಮ ಕ್ಲಿನಿಕ್​ಗಳಿಗೆ ಈಗ ಒಂದೊಂದಾಗಿ ಬೀಗ ಹಾಕಲಾಗುತ್ತಿದೆ. ಬಿಬಿಎಂಪಿ ನಿರ್ಲಕ್ಷ್ಯದಿಂದಾಗಿ ಬಡ ರೋಗಿಗಳು ಖಾಸಗಿ ಆಸ್ಪತ್ರೆಗಳತ್ತ ಮುಖ ಮಾಡಬೇಕಾದ ಪರಿಸ್ಥಿತಿ ಬಂದಿದ್ದು, ಕೂಡಲೆ ಆಸ್ಪತ್ರೆ ಪುನರಾರಂಭಿಸುವಂತೆ ಸಾರ್ವಜನಿಕರು ಮನವಿ ಮಾಡಿದ್ದಾರೆ.

ಇದನ್ನೂ ಓದಿ:Namma Clinic: ನಮ್ಮ ಕ್ಲಿನಿಕ್ ಎಂದರೇನು? ಕರ್ನಾಟಕದಾದ್ಯಂತ ಇಂದಿನಿಂದ ಅಸ್ತಿತ್ವಕ್ಕೆ ಬರಲಿರುವ ಹೊಸ ಆರೋಗ್ಯ ಕೇಂದ್ರಗಳ ಬಗ್ಗೆ ಇಲ್ಲಿದೆ ಮಾಹಿತಿ

ಈ ಬಗ್ಗೆ ಬಿಬಿಎಂಪಿ ಆರೋಗ್ಯ ಇಲಾಖೆ ಸಂಬಂಧಪಟ್ಟ ವಿಶೇಷ ಆಯುಕ್ತರನ್ನ ಕೇಳಿದರೆ, ನಮ್ಮ ಕ್ಲಿನಿಕ್​ಗಳು‌ ಬಡವರಿಗಾಗಿ, ಕಾರ್ಮಿಕರಿಗಾಗಿ ಬೆಳಿಗ್ಗೆ, ಸಾಯಂಕಾಲ‌ ನಿಗಧಿ ಮಾಡಿದ ಸಮಯದಲ್ಲಿ ತೆರೆಯಬೇಕು. ಬರುವಂತಹ ಬಡ ರೋಗಿಗಳಿಗೆ ಉಪಯೋಗ ಆಗಬೇಕು ಅಂತ ಸರ್ಕಾರ ಬೆಂಗಳೂರಿನ ಪ್ರತಿ ವಾರ್ಡ್ ಗೆ ಒಂದರಂತೆ 144 ನಮ್ಮ‌ ಕ್ಲಿನಿಕ್​ಗಳನ್ನ ತೆರೆದಿದೆ. ಈ ಕ್ಲಿನಿಕ್​ಗಳಿಗೆ ಸರಿಯಾಗಿ ವೈದ್ಯರು ಬರುತ್ತಿಲ್ಲ. ಹಾಗೂ ಮಹಾಕವಿ ಕುವೆಂಪು ಮೆಟ್ರೋ ಬಳಿ ಇರುವ ನಮ್ಮ‌ ಕ್ಲಿನಿಕ್ ಓಪನ್ ಮಾಡುತ್ತಿಲ್ಲ ಎಂಬುದು ನಿಮ್ಮ ಮೂಲಕ ಗಮನಕ್ಕೆ ಬಂದಿದೆ. ಈ ಬಗ್ಗೆ ನಾವು ಆದಷ್ಟು ಬೇಗ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಭರವಸೆ ನೀಡಿದ್ದಾರೆ.

ಒಟ್ಟಿನಲ್ಲಿ ಬಡ ರೋಗಿಗಳ ಪಾಲಿಗೆ ಸಂಜೀವಿನಿ ಆಗಬೇಕಿದ್ದ ಆಸ್ಪತ್ರೆಗಳು ಬಿಬಿಎಂಪಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಇನ್ನಾದರು ಅಧಿಕಾರಿಗಳು ಕೊಟ್ಟ ಭರವಸೆಯಂತೆ ಕ್ರಮಕ್ಕೆ ಮುಂದಾಗುತ್ತಾರಾ ಇಲ್ವಾ ಕಾದು ನೋಡಬೇಕಿದೆ.

ಬೆಂಗಳೂರಿಗೆ ಸಂಬಂಧಪಟ್ಟ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ