Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಶಾಸಕ ವಿಶ್ವನಾಥ್ ಹುಟ್ಟುಹಬ್ಬಕ್ಕೆ ಹಾಕಿದ್ದ ಫ್ಲೆಕ್ಸ್​ ಕುಸಿತ, ಕೋಮಕ್ಕೆ ಜಾರಿದ ವೃದ್ಧ

ಬೆಂಗಳೂರಿನ ಯಲಹಂಕ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ಹುಟ್ಟುಹಬ್ಬಕ್ಕೆ ಶುಭಕೋರಿ ಹಾಕಿದ್ದ ಬೃಹತ್ ಗಾತ್ರದ ಫ್ಲೆಕ್ಸ್ ತಲೆ ಮೇಲೆ ಬಿದ್ದು 70 ವರ್ಷದ ವೃದ್ಧ ಕೋಮಾಗೆ ಜಾರಿದ ಘಟನೆ ನಡೆದಿದೆ. ಮೊಮ್ಮಗಳನ್ನ ಶಾಲೆಯಿಂದ ಕರೆದುಕೊಂಡು ಬರಲು ಬೈಕ್ ಚಲಾಯಿಸಿಕೊಂಡು ಹೋಗ್ತಿದ್ದ ವೇಳೆ ಘಟನೆ ನಡೆದಿದೆ.

ಬಿಜೆಪಿ ಶಾಸಕ ವಿಶ್ವನಾಥ್ ಹುಟ್ಟುಹಬ್ಬಕ್ಕೆ ಹಾಕಿದ್ದ ಫ್ಲೆಕ್ಸ್​ ಕುಸಿತ, ಕೋಮಕ್ಕೆ ಜಾರಿದ ವೃದ್ಧ
ಬಿಬಿಎಂಪಿ ನಿರ್ಲಕ್ಷ್ಯ; ಫ್ಲೆಕ್ಸ್ ತಲೆ ಮೇಲೆ ಬಿದ್ದು ಕೋಮಾಗೆ ಜಾರಿದ ವೃದ್ಧ
Follow us
ಶಾಂತಮೂರ್ತಿ
| Updated By: ಆಯೇಷಾ ಬಾನು

Updated on:Jul 07, 2024 | 12:01 PM

ಬೆಂಗಳೂರು, ಜುಲೈ.07: ಮುಂಬೈನಲ್ಲಿ ನಡೆದ ಹೋರ್ಡಿಂಗ್ಸ್ ದುರಂತ (Mumbai Hoarding Collapse) ಬಳಿಕವೂ ಬೆಂಗಳೂರಿನಲ್ಲಿ (Bengaluru) BBMP ಎಚ್ಚೆತ್ತುಕೊಂಡಿಲ್ಲ. ಬಿಬಿಎಂಪಿ ನಿರ್ಲಕ್ಷ್ಯಕ್ಕೆ ವ್ಯಕ್ತಿಯೊಬ್ಬರ ಜೀವಕ್ಕೆ ಆಪತ್ತು ಬಂದಿದೆ. ಅನಧಿಕೃತ ಫ್ಲೆಕ್ಸ್​ ತಲೆ ಮೇಲೆ ಬಿದ್ದು ವೃದ್ಧನಿಗೆ ಗಂಭೀರ ಗಾಯವಾಗಿದ್ದು ತೀವ್ರ ರಕ್ತಸ್ರಾವವಾಗಿ 70 ವರ್ಷದ ಭಕ್ತವತ್ಸಲ ಎಂಬ ವೃದ್ಧ ಕೋಮಾಗೆ ಜಾರಿದ್ದಾರೆ. ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ.

ನಿನ್ನೆ ಯಲಹಂಕದ ಸಿಂಗನಾಯಕನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ರಾಜಾನುಕುಂಟೆಯ ನಿವಾಸಿಯಾಗಿರುವ ಭಕ್ತವತ್ಸಲ ಎಂಬುವವರು ಮೊಮ್ಮಗಳನ್ನ ಶಾಲೆಯಿಂದ ಕರೆದುಕೊಂಡು ಬರಲು ಬೈಕ್ ಚಲಾಯಿಸಿಕೊಂಡು ಹೋಗ್ತಿದ್ದ ವೇಳೆ ಅನಧಿಕೃತ ಫ್ಲೆಕ್ಸ್​ ತಲೆ ಮೇಲೆ ಬಿದ್ದಿದೆ. ಇದರಿಂದ ತೀವ್ರ ರಕ್ತಸ್ರಾವವಾಗಿದ್ದು ಕೋಮಾಗೆ ಜಾರಿದ್ದಾರೆ. ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಯಲಹಂಕ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ಹುಟ್ಟುಹಬ್ಬಕ್ಕೆ ಶುಭಕೋರಿ ಹಾಕಿದ್ದ ಬೃಹತ್ ಗಾತ್ರದ ಫ್ಲೆಕ್ಸ್​ ಬಿದ್ದಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಮೂರು ದಿನಗಳ ಹಿಂದೆ ಚರಂಡಿಗೆ ಬಿದ್ದ ಮಗನಿಗಾಗಿ ಅನ್ನ, ನೀರು ಬಿಟ್ಟು ಪೋಷಕರ ಹುಡುಕಾಟ

ಕೊಪ್ಪಳದಲ್ಲಿ ಗಾಂಜಾ ಮತ್ತಿನಲ್ಲಿ ಕಾರು ಚಾಲಕನ ಹುಚ್ಚಾಟ

ಗಾಂಜಾ ಮತ್ತಿನಲಿ ಕಾರ್ ಚಾಲಕ ಹುಚ್ಚಾಟ ಮೆರೆದಿದ್ದಾನೆ. ಕೊಪ್ಪಳ ನಗರಗ ಸಿಂಪಿ ಲಿಂಗಣ್ಣ ರಸ್ತೆಯಲ್ಲಿ ಕಳೆದ ರಾತ್ರಿ ಕಾರು ಚಾಲಕನೋರ್ವ ಬಾರ್ ಆ್ಯಂಡ್ ರೆಸ್ಟೋರೆಂಟ್ ಮುಂದೆ‌ ನಿಲ್ಲಿಸಿದ್ದ ಬೈಕ್​ಗಳಿಗೆ ಕಾರಿನಿಂದ ಗುದ್ದಿ ಹುಚ್ಚಾಟ ಮೆರೆದಿದ್ದಾನೆ. ಬಾರ್ ಮುಂದೆ ನಿಲ್ಲಿಸಿದ್ದ 10ಕ್ಕೂ ಹೆಚ್ಚು ಬೈಕ್ ಗಳಿಗೆ ಹಾನಿಯಾಗಿದೆ.

ಕಾರು ಮಾಲೀಕನೊಂದಿಗೆ ಬೈಕ್ ಸವಾರರು ವಾಗ್ವಾದ ನಡೆಸಿದ್ದು ಗಾಂಜಾ ಮತ್ತಿನಲ್ಲಿ ಕಾರು ಚಲಾಯಿಸಿ ಗುದ್ದಿದ್ದಾನೆ ಎಂದು ತಿಳಿದುಬಂದಿದೆ. ಸದ್ಯ ಕೊಪ್ಪಳ ನಗರ ಠಾಣೆ ಪೊಲೀಸರು ಕಾರು ಚಾಲಕ ವಿಶ್ವಾಸ್​ನನ್ನು ವಶಕ್ಕೆ ಪಡೆದಿದ್ದಾರೆ. ಘಟನಾ ಸ್ಥಳಕ್ಕೆ ನೂತನ ಎಸ್ಪಿ ಡಾ ರಾಮ್ ಅರಸಿದ್ದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:50 am, Sun, 7 July 24

VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
ಯಾವ ಮನೆಯಲ್ಲಿ ಲಕ್ಷ್ಮೀ ದೇವಿ ನೆಲೆಸುವುದಿಲ್ಲ ಅಂತ ನಿಮಗೆ ಗೊತ್ತಾ?
ಯಾವ ಮನೆಯಲ್ಲಿ ಲಕ್ಷ್ಮೀ ದೇವಿ ನೆಲೆಸುವುದಿಲ್ಲ ಅಂತ ನಿಮಗೆ ಗೊತ್ತಾ?
ಚಂದ್ರ ಸಿಂಹ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಚಂದ್ರ ಸಿಂಹ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ತುಂಬ ಸಮಯದ ಬಳಿಕ ಎಸಿ ಆನ್ ಮಾಡುತ್ತೀರಾ? ಒಳಗೆ ಹಾವಿರಬಹುದು ಎಚ್ಚರ!
ತುಂಬ ಸಮಯದ ಬಳಿಕ ಎಸಿ ಆನ್ ಮಾಡುತ್ತೀರಾ? ಒಳಗೆ ಹಾವಿರಬಹುದು ಎಚ್ಚರ!
ಮೃಗಾಲಯದ ಪ್ರಾಣಿಗಳಿಗೂ ತಟ್ಟಿದ ಬೇಸಿಗೆ ಬಿಸಿ: ಸ್ಪ್ರಿಂಕ್ಲರ್ ವ್ಯವಸ್ಥೆ
ಮೃಗಾಲಯದ ಪ್ರಾಣಿಗಳಿಗೂ ತಟ್ಟಿದ ಬೇಸಿಗೆ ಬಿಸಿ: ಸ್ಪ್ರಿಂಕ್ಲರ್ ವ್ಯವಸ್ಥೆ
ಕನ್ನಡ ಚಿತ್ರರಂಗದಲ್ಲಿ ಪುನೀತ್ ರೀತಿ ಡ್ಯಾನ್ಸ್ ಮಾಡೋರು ಯಾರೂ ಇಲ್ಲ: ರಕ್ಷಿತ
ಕನ್ನಡ ಚಿತ್ರರಂಗದಲ್ಲಿ ಪುನೀತ್ ರೀತಿ ಡ್ಯಾನ್ಸ್ ಮಾಡೋರು ಯಾರೂ ಇಲ್ಲ: ರಕ್ಷಿತ
ಬಜೆಟ್​ ಅಧಿವೇಶನ ಸಂದರ್ಭದಲ್ಲೇ ವಿಧಾನಸೌಧಕ್ಕೆ ಬಂದ ಬುಸ್​ ಬುಸ್ ನಾಗಪ್ಪ..!
ಬಜೆಟ್​ ಅಧಿವೇಶನ ಸಂದರ್ಭದಲ್ಲೇ ವಿಧಾನಸೌಧಕ್ಕೆ ಬಂದ ಬುಸ್​ ಬುಸ್ ನಾಗಪ್ಪ..!
ಯಾರ ಬಗ್ಗೆಯೂ ಪುನೀತ್ ನೆಗೆಟಿವ್ ಮಾತಾಡಿದ್ದು ನಾನು ಕೇಳಿಲ್ಲ: ಕೆ. ಕಲ್ಯಾಣ್
ಯಾರ ಬಗ್ಗೆಯೂ ಪುನೀತ್ ನೆಗೆಟಿವ್ ಮಾತಾಡಿದ್ದು ನಾನು ಕೇಳಿಲ್ಲ: ಕೆ. ಕಲ್ಯಾಣ್
ಸಿಎಂ ನೀಡಿರುವ ಸ್ಪಷ್ಟನೆ ರಾಜ್ಯದ ಜನತೆಗೆ ನೆಮ್ಮದಿ ನೀಡಿದೆ: ಸ್ಪೀಕರ್
ಸಿಎಂ ನೀಡಿರುವ ಸ್ಪಷ್ಟನೆ ರಾಜ್ಯದ ಜನತೆಗೆ ನೆಮ್ಮದಿ ನೀಡಿದೆ: ಸ್ಪೀಕರ್
ಒತ್ತೆಯಾಳುಗಳನ್ನು ಗಲ್ಲಿಗೇರಿಸುತ್ತೇವೆ; ಬಲೂಚ್ ದಂಗೆಕೋರರ ಎಚ್ಚರಿಕೆ
ಒತ್ತೆಯಾಳುಗಳನ್ನು ಗಲ್ಲಿಗೇರಿಸುತ್ತೇವೆ; ಬಲೂಚ್ ದಂಗೆಕೋರರ ಎಚ್ಚರಿಕೆ