ಬೆಂಗಳೂರು, ಜುಲೈ.07: ಮುಂಬೈನಲ್ಲಿ ನಡೆದ ಹೋರ್ಡಿಂಗ್ಸ್ ದುರಂತ (Mumbai Hoarding Collapse) ಬಳಿಕವೂ ಬೆಂಗಳೂರಿನಲ್ಲಿ (Bengaluru) BBMP ಎಚ್ಚೆತ್ತುಕೊಂಡಿಲ್ಲ. ಬಿಬಿಎಂಪಿ ನಿರ್ಲಕ್ಷ್ಯಕ್ಕೆ ವ್ಯಕ್ತಿಯೊಬ್ಬರ ಜೀವಕ್ಕೆ ಆಪತ್ತು ಬಂದಿದೆ. ಅನಧಿಕೃತ ಫ್ಲೆಕ್ಸ್ ತಲೆ ಮೇಲೆ ಬಿದ್ದು ವೃದ್ಧನಿಗೆ ಗಂಭೀರ ಗಾಯವಾಗಿದ್ದು ತೀವ್ರ ರಕ್ತಸ್ರಾವವಾಗಿ 70 ವರ್ಷದ ಭಕ್ತವತ್ಸಲ ಎಂಬ ವೃದ್ಧ ಕೋಮಾಗೆ ಜಾರಿದ್ದಾರೆ. ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ.
ನಿನ್ನೆ ಯಲಹಂಕದ ಸಿಂಗನಾಯಕನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ರಾಜಾನುಕುಂಟೆಯ ನಿವಾಸಿಯಾಗಿರುವ ಭಕ್ತವತ್ಸಲ ಎಂಬುವವರು ಮೊಮ್ಮಗಳನ್ನ ಶಾಲೆಯಿಂದ ಕರೆದುಕೊಂಡು ಬರಲು ಬೈಕ್ ಚಲಾಯಿಸಿಕೊಂಡು ಹೋಗ್ತಿದ್ದ ವೇಳೆ ಅನಧಿಕೃತ ಫ್ಲೆಕ್ಸ್ ತಲೆ ಮೇಲೆ ಬಿದ್ದಿದೆ. ಇದರಿಂದ ತೀವ್ರ ರಕ್ತಸ್ರಾವವಾಗಿದ್ದು ಕೋಮಾಗೆ ಜಾರಿದ್ದಾರೆ. ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಯಲಹಂಕ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ಹುಟ್ಟುಹಬ್ಬಕ್ಕೆ ಶುಭಕೋರಿ ಹಾಕಿದ್ದ ಬೃಹತ್ ಗಾತ್ರದ ಫ್ಲೆಕ್ಸ್ ಬಿದ್ದಿದೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ: ಮೂರು ದಿನಗಳ ಹಿಂದೆ ಚರಂಡಿಗೆ ಬಿದ್ದ ಮಗನಿಗಾಗಿ ಅನ್ನ, ನೀರು ಬಿಟ್ಟು ಪೋಷಕರ ಹುಡುಕಾಟ
ಗಾಂಜಾ ಮತ್ತಿನಲಿ ಕಾರ್ ಚಾಲಕ ಹುಚ್ಚಾಟ ಮೆರೆದಿದ್ದಾನೆ. ಕೊಪ್ಪಳ ನಗರಗ ಸಿಂಪಿ ಲಿಂಗಣ್ಣ ರಸ್ತೆಯಲ್ಲಿ ಕಳೆದ ರಾತ್ರಿ ಕಾರು ಚಾಲಕನೋರ್ವ ಬಾರ್ ಆ್ಯಂಡ್ ರೆಸ್ಟೋರೆಂಟ್ ಮುಂದೆ ನಿಲ್ಲಿಸಿದ್ದ ಬೈಕ್ಗಳಿಗೆ ಕಾರಿನಿಂದ ಗುದ್ದಿ ಹುಚ್ಚಾಟ ಮೆರೆದಿದ್ದಾನೆ. ಬಾರ್ ಮುಂದೆ ನಿಲ್ಲಿಸಿದ್ದ 10ಕ್ಕೂ ಹೆಚ್ಚು ಬೈಕ್ ಗಳಿಗೆ ಹಾನಿಯಾಗಿದೆ.
ಕಾರು ಮಾಲೀಕನೊಂದಿಗೆ ಬೈಕ್ ಸವಾರರು ವಾಗ್ವಾದ ನಡೆಸಿದ್ದು ಗಾಂಜಾ ಮತ್ತಿನಲ್ಲಿ ಕಾರು ಚಲಾಯಿಸಿ ಗುದ್ದಿದ್ದಾನೆ ಎಂದು ತಿಳಿದುಬಂದಿದೆ. ಸದ್ಯ ಕೊಪ್ಪಳ ನಗರ ಠಾಣೆ ಪೊಲೀಸರು ಕಾರು ಚಾಲಕ ವಿಶ್ವಾಸ್ನನ್ನು ವಶಕ್ಕೆ ಪಡೆದಿದ್ದಾರೆ. ಘಟನಾ ಸ್ಥಳಕ್ಕೆ ನೂತನ ಎಸ್ಪಿ ಡಾ ರಾಮ್ ಅರಸಿದ್ದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 11:50 am, Sun, 7 July 24