AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾರ್ಡ್​ಗಳ ಸಂಖ್ಯೆ ಹೆಚ್ಚಿಸಿದ್ದರೂ, ಮತ್ತಗಟ್ಟೆಗಳ ಸಂಖ್ಯೆ ಹೆಚ್ಚಿಸದ ಬಿಬಿಎಂಪಿ ? ಸಾರ್ವಜನಿಕರಲ್ಲಿ ಮೂಡಿದ ಗೊಂದಲ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಾರ್ಡ್​ಗಳ ಸಂಖ್ಯೆ ಹೆಚ್ಚಿಸಿದ್ದರೂ, ಜನರು ಮತದಾನ ಮಾಡಲು ಮತಗಟ್ಟೆಗಳನ್ನು ಹೆಚ್ಚಿಸಿಲ್ಲ.

ವಾರ್ಡ್​ಗಳ ಸಂಖ್ಯೆ ಹೆಚ್ಚಿಸಿದ್ದರೂ, ಮತ್ತಗಟ್ಟೆಗಳ ಸಂಖ್ಯೆ ಹೆಚ್ಚಿಸದ ಬಿಬಿಎಂಪಿ ? ಸಾರ್ವಜನಿಕರಲ್ಲಿ ಮೂಡಿದ ಗೊಂದಲ
ಬಿಬಿಎಂಪಿ
TV9 Web
| Updated By: ವಿವೇಕ ಬಿರಾದಾರ|

Updated on:Aug 23, 2022 | 6:08 PM

Share

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ವಾರ್ಡ್​ಗಳ ಸಂಖ್ಯೆ ಹೆಚ್ಚಿಸಿದ್ದರೂ, ಜನರು ಮತದಾನ ಮಾಡಲು ಮತಗಟ್ಟೆಗಳನ್ನು (Polling Station) ಹೆಚ್ಚಿಸಿಲ್ಲ. ಇದರಿಂದ ಜನರಲ್ಲಿ ಗೊಂದಲ ಮೂಡಿದ್ದು, ಯಾವ ಮತಗಟ್ಟೆಗೆ ಹೋಗಿ ಮತದಾನ ಮಾಡಬೇಕೆಂದು ತಿಳಿಯದೆ ಗೊಂದಲ್ಲಿದ್ದಾರೆ. ಬಿಬಿಎಂಪಿ ಈಗಾಗಲೇ ವಾರ್ಡ್​​ಗಳ ಸಂಖ್ಯೆ 198 ರಿಂದ 243 ಏರಿಕೆ ಮಾಡಿದೆ.

ಈಗಾಗಲೇ ಬಿಬಿಎಂಪಿ ಅಧಿಕಾರಿಗಳು ನಗರದಾದ್ಯಂತ ಮತಗಟ್ಟೆಗಳ ಪರಿಶೀಲನೆಯನ್ನು ಪೂರ್ಣಗೊಳಿಸಿದ್ದಾರೆ ಮತ್ತು ಕರಡು ಮತದಾರರ ಪಟ್ಟಿಯನ್ನು ಅಂತಿಮಗೊಳಿಸುವ ಪ್ರಕ್ರಿಯೆಯಲ್ಲಿದ್ದು, ಆಗಸ್ಟ್ 25 ರಂದು ಬಿಬಿಎಂಪಿ ಪ್ರಕಟಿಸಲಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ : ಆಗಸ್ಟ್ 25 ರಂದು ಮತದಾರರ ಪಟ್ಟಿಯ ಕರಡು ಪ್ರಕಟ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ  ಚುನಾವಣೆಗೆ ರಂಗ ಸಜ್ಜಾಗಿದ್ದು, ಆಗಸ್ಟ್ 25 ರಂದು ಮತದಾರರ ಪಟ್ಟಿಯ ಕರಡು ಪ್ರಕಟವಾಗಲಿದೆ. ರಾಜ್ಯ ಚುನಾವಣಾ ಆಯೋಗದ ಆಯುಕ್ತ ಬಸವರಾಜು ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮತದಾರರ ಪಟ್ಟಿಯ ಕರಡು ಪ್ರಕಟಗೊಂಡಿದೆ. ಮತದಾರರ ಪಟ್ಟಿಯ ಕರಡನ್ನು ಪಾಲಿಕೆಯ ಅಂತರ್ಜಾಲ ತಾಣದ ಜೊತೆಗೆ, ನೋಂದಾಯಿತ ರಾಜಕೀಯ ಪಕ್ಷಗಳ ಕಚೇರಿಗೆ ಹಾಗೂ ನಿವಾಸಿ ಕ್ಷೇಮಾಭಿವೃದ್ಧಿ ಸಂಘಗಳಿಗೆ ಪ್ರತಿಯನ್ನು ನೀಡುವಂತೆ ಪಾಲಿಕೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಈ ಬಾರಿಯ ಚುನಾವಣೆಯಲ್ಲಿ ವಾರ್ಡ್​ಗಳ ಸಂಖ್ಯೆ 198 ರಿಂದ 243 ಕ್ಕೆ ಏರಿಕೆಯಾಗಿದೆ. ವಾರ್ಡ್ ಮರು ವಿಂಗಡನೆಯಾಗಿರುವ ಹಿನ್ನೆಲೆಯಲ್ಲಿ ಮೊದಲು ಮತಗಟ್ಟೆಗಳ ಪರಿಶೀಲನೆ ಆಗಬೇಕಿದೆ. ವಾರ್ಡ್​​ಗಳಿಗೆ ಉಸ್ತುವಾರಿ ಅಧಿಕಾರಿಗಳನ್ನು ಗುರುತಿಸಿ ನೇಮಕ ಮಾಡಲು ಪಟ್ಟಿ ಸಿದ್ಧಗೊಳಿಸಬೇಕಿದೆ ಎಂದು ಅವರು ಪಾಲಿಕೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಪ್ರತಿ ಬಾರಿ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಮತದಾನದ ಪ್ರಮಾಣ ಅತ್ಯಂತ ಕಡಿಮೆ ಇರುತ್ತದೆ. ಮತದಾನದ ಪ್ರಮಾಣ ಹೆಚ್ಚಿಸಲು ವ್ಯಾಪಕ ಪ್ರಚಾರ ಕಾರ್ಯ ಚಟುವಟಿಕೆಗಳನ್ನು ಹಮ್ಮಿಕೊಳ್ಳುವ ಅವಶ್ಯಕತೆ ಇದೆ ಆದರೆ, ಈ ನಿಟ್ಟಿನಲ್ಲಿ ವೆಚ್ಚ ಮಾಡುವಲ್ಲಿ ಮಿತವ್ಯಯ ಸಾಧಿಸುವುದು ಮುಖ್ಯ ಹಾಗೂ ಸೂಕ್ತ ಎಂದರು.

ಸಭೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ವಿಶೇಷ ಆಯುಕ್ತರು, ಎಲ್ಲಾ ಎಂಟೂ ವಲಯಗಳ‌ ಜಂಟಿ ಆಯುಕ್ತರು, ಬೆಂಗಳೂರು ನಗರ ಜಿಲ್ಲಾಧಿಕಾರಿ ಕಚೇರಿಯ ಪ್ರತಿನಿಧಿ, ರಾಜ್ಯ ಚುನಾವಣಾ ಆಯೋಗದ ಕಾರ್ಯದರ್ಶಿ ಹೊನ್ನಾಂಬ ಹಾಜರಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:04 pm, Tue, 23 August 22

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!