ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ವಾರ್ಡ್ಗಳ ಸಂಖ್ಯೆ ಹೆಚ್ಚಿಸಿದ್ದರೂ, ಜನರು ಮತದಾನ ಮಾಡಲು ಮತಗಟ್ಟೆಗಳನ್ನು (Polling Station) ಹೆಚ್ಚಿಸಿಲ್ಲ. ಇದರಿಂದ ಜನರಲ್ಲಿ ಗೊಂದಲ ಮೂಡಿದ್ದು, ಯಾವ ಮತಗಟ್ಟೆಗೆ ಹೋಗಿ ಮತದಾನ ಮಾಡಬೇಕೆಂದು ತಿಳಿಯದೆ ಗೊಂದಲ್ಲಿದ್ದಾರೆ. ಬಿಬಿಎಂಪಿ ಈಗಾಗಲೇ ವಾರ್ಡ್ಗಳ ಸಂಖ್ಯೆ 198 ರಿಂದ 243 ಏರಿಕೆ ಮಾಡಿದೆ.
ಈಗಾಗಲೇ ಬಿಬಿಎಂಪಿ ಅಧಿಕಾರಿಗಳು ನಗರದಾದ್ಯಂತ ಮತಗಟ್ಟೆಗಳ ಪರಿಶೀಲನೆಯನ್ನು ಪೂರ್ಣಗೊಳಿಸಿದ್ದಾರೆ ಮತ್ತು ಕರಡು ಮತದಾರರ ಪಟ್ಟಿಯನ್ನು ಅಂತಿಮಗೊಳಿಸುವ ಪ್ರಕ್ರಿಯೆಯಲ್ಲಿದ್ದು, ಆಗಸ್ಟ್ 25 ರಂದು ಬಿಬಿಎಂಪಿ ಪ್ರಕಟಿಸಲಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ : ಆಗಸ್ಟ್ 25 ರಂದು ಮತದಾರರ ಪಟ್ಟಿಯ ಕರಡು ಪ್ರಕಟ
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಚುನಾವಣೆಗೆ ರಂಗ ಸಜ್ಜಾಗಿದ್ದು, ಆಗಸ್ಟ್ 25 ರಂದು ಮತದಾರರ ಪಟ್ಟಿಯ ಕರಡು ಪ್ರಕಟವಾಗಲಿದೆ. ರಾಜ್ಯ ಚುನಾವಣಾ ಆಯೋಗದ ಆಯುಕ್ತ ಬಸವರಾಜು ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮತದಾರರ ಪಟ್ಟಿಯ ಕರಡು ಪ್ರಕಟಗೊಂಡಿದೆ. ಮತದಾರರ ಪಟ್ಟಿಯ ಕರಡನ್ನು ಪಾಲಿಕೆಯ ಅಂತರ್ಜಾಲ ತಾಣದ ಜೊತೆಗೆ, ನೋಂದಾಯಿತ ರಾಜಕೀಯ ಪಕ್ಷಗಳ ಕಚೇರಿಗೆ ಹಾಗೂ ನಿವಾಸಿ ಕ್ಷೇಮಾಭಿವೃದ್ಧಿ ಸಂಘಗಳಿಗೆ ಪ್ರತಿಯನ್ನು ನೀಡುವಂತೆ ಪಾಲಿಕೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಈ ಬಾರಿಯ ಚುನಾವಣೆಯಲ್ಲಿ ವಾರ್ಡ್ಗಳ ಸಂಖ್ಯೆ 198 ರಿಂದ 243 ಕ್ಕೆ ಏರಿಕೆಯಾಗಿದೆ. ವಾರ್ಡ್ ಮರು ವಿಂಗಡನೆಯಾಗಿರುವ ಹಿನ್ನೆಲೆಯಲ್ಲಿ ಮೊದಲು ಮತಗಟ್ಟೆಗಳ ಪರಿಶೀಲನೆ ಆಗಬೇಕಿದೆ. ವಾರ್ಡ್ಗಳಿಗೆ ಉಸ್ತುವಾರಿ ಅಧಿಕಾರಿಗಳನ್ನು ಗುರುತಿಸಿ ನೇಮಕ ಮಾಡಲು ಪಟ್ಟಿ ಸಿದ್ಧಗೊಳಿಸಬೇಕಿದೆ ಎಂದು ಅವರು ಪಾಲಿಕೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಪ್ರತಿ ಬಾರಿ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಮತದಾನದ ಪ್ರಮಾಣ ಅತ್ಯಂತ ಕಡಿಮೆ ಇರುತ್ತದೆ. ಮತದಾನದ ಪ್ರಮಾಣ ಹೆಚ್ಚಿಸಲು ವ್ಯಾಪಕ ಪ್ರಚಾರ ಕಾರ್ಯ ಚಟುವಟಿಕೆಗಳನ್ನು ಹಮ್ಮಿಕೊಳ್ಳುವ ಅವಶ್ಯಕತೆ ಇದೆ ಆದರೆ, ಈ ನಿಟ್ಟಿನಲ್ಲಿ ವೆಚ್ಚ ಮಾಡುವಲ್ಲಿ ಮಿತವ್ಯಯ ಸಾಧಿಸುವುದು ಮುಖ್ಯ ಹಾಗೂ ಸೂಕ್ತ ಎಂದರು.
ಸಭೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ವಿಶೇಷ ಆಯುಕ್ತರು, ಎಲ್ಲಾ ಎಂಟೂ ವಲಯಗಳ ಜಂಟಿ ಆಯುಕ್ತರು, ಬೆಂಗಳೂರು ನಗರ ಜಿಲ್ಲಾಧಿಕಾರಿ ಕಚೇರಿಯ ಪ್ರತಿನಿಧಿ, ರಾಜ್ಯ ಚುನಾವಣಾ ಆಯೋಗದ ಕಾರ್ಯದರ್ಶಿ ಹೊನ್ನಾಂಬ ಹಾಜರಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 6:04 pm, Tue, 23 August 22