SSLC: ಅತ್ಯುನ್ನತ ಶ್ರೇಣಿಯಲ್ಲಿ ಪಾಸಾದವರಿಗೆ ಬಿಬಿಎಂಪಿ ಪ್ರೋತ್ಸಾಹ ಧನ ವಿತರಣೆ, ಶೇ. 100 ರಷ್ಟು ಫಲಿತಾಂಶದೊಂದಿಗೆ ಮೊದಲ ಸ್ಥಾನ ಪಡೆದ ಶಾಂತಿನಗರ ಪ್ರೌಢಶಾಲೆ

| Updated By: ಆಯೇಷಾ ಬಾನು

Updated on: May 20, 2022 | 7:01 PM

ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಬಿಬಿಎಂಪಿ ಶಾಲೆಯ 144 ವಿದ್ಯಾರ್ಥಿಗಳಿಗೆ 25,000 ರೂ. ಪ್ರೋತ್ಸಾಹ ಧನ ವಿತರಿಸಲಾಗಿದೆ. ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅಭಿನಂದನೆ ಸಲ್ಲಿಸಿದ್ದಾರೆ.

SSLC: ಅತ್ಯುನ್ನತ ಶ್ರೇಣಿಯಲ್ಲಿ ಪಾಸಾದವರಿಗೆ ಬಿಬಿಎಂಪಿ ಪ್ರೋತ್ಸಾಹ ಧನ ವಿತರಣೆ, ಶೇ. 100 ರಷ್ಟು ಫಲಿತಾಂಶದೊಂದಿಗೆ ಮೊದಲ ಸ್ಥಾನ ಪಡೆದ ಶಾಂತಿನಗರ ಪ್ರೌಢಶಾಲೆ
ಬಿಬಿಎಂಪಿ ಕಚೇರಿ
Follow us on

ಬೆಂಗಳೂರು: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು 2021-2022ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶವನ್ನು ಮೇ 19ರಂದು ಪ್ರಕಟಿಸಿದೆ. ಎಕ್ಸಾಂ ಬರೆದು ಫಲಿತಾಂಶಕ್ಕೆ ಕುತೂಹಲದಿಂದ ಕಾಯ್ತಿದ್ದ ವಿದ್ಯಾರ್ಥಿಗಳ ಶ್ರಮಕ್ಕೆ ಬೆಲೆ ಸಿಕ್ಕಿದ್ದು ಕೊರೊನಾ ಜಂಜಾಟದ ಮಧ್ಯೆ ಉತ್ತಮ ರಿಸಲ್ಟ್ ಬಂದಿದೆ. ಸದ್ಯ ಈಗ SSLCಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಪಾಸಾದವರಿಗೆ ಪ್ರೋತ್ಸಾಹ ಧನ ನೀಡಲು ಬಿಬಿಎಂಪಿ ಮುಂದಾಗಿದೆ. ಬಿಬಿಎಂಪಿ ಶಾಲೆಗಳ ಒಟ್ಟು 144 ವಿದ್ಯಾರ್ಥಿಗಳಿಗೆ ಬಿಬಿಎಂಪಿಯಿಂದ 25,000 ರೂಪಾಯಿ ಪ್ರೋತ್ಸಾಹ ಧನ ವಿತರಣೆ ಮಾಡಲಾಗಿದೆ. ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅಭಿನಂದನೆ ಸಲ್ಲಿಸಿದ್ದಾರೆ.

ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಬಿಬಿಎಂಪಿ ಶಾಲೆಯ 144 ವಿದ್ಯಾರ್ಥಿಗಳಿಗೆ 25,000 ರೂ. ಪ್ರೋತ್ಸಾಹ ಧನ ವಿತರಿಸಲಾಗಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವಿದ್ಯಾ ಇಲಾಖೆಯಲ್ಲಿ ಒಟ್ಟು 33 ಪ್ರೌಢಶಾಲೆಗಳಿದ್ದು, 2021-22ನೇ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಒಟ್ಟು 1,991 ವಿದ್ಯಾರ್ಥಿಗಳು ಹಾಜರಾಗಿದ್ದರು. ಈ ಪೈಕಿ 1,419 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇ. 71 ರಷ್ಟು ಫಲಿತಾಂಶ ಬಂದಿದೆ. ಅದರಂತೆ, ಪರೀಕ್ಷೆಗೆ ಹಾಜರಾಗಿದ್ದ ಒಟ್ಟು 1,991 ವಿದ್ಯಾರ್ಥಿಗಳ ಪೈಕಿ 742 ಗಂಡು ಮಕ್ಕಳಲ್ಲಿ 41 ಹಗೂ 1,249 ಹೆಣ್ಣು ಮಕ್ಕಳಲ್ಲಿ 103 ವಿದ್ಯಾರ್ಥಿಗಳು ಸೇರಿದಂತೆ 144 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಬಿಬಿಎಂಪಿ ಶ್ರೀರಾಮಪುರ ಬಾಲಕಿಯರ ಪ್ರೌಢಶಾಲೆಯಲ್ಲಿ ಉಜ್ವಲ.ಎಂ.ಸಿ ಎಂಬ ವಿದ್ಯಾರ್ಥಿನಿಯು 625ಕ್ಕೆ 616 ಅಂಕಗಳನ್ನು ಪಡೆದು ಪಾಲಿಕೆ ಪ್ರೌಢಶಾಲೆಗಳಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಲ್ಲಿ ಅಗ್ರಸ್ಥಾನ ಪಡೆದಿದ್ದಾರೆ. ಇದನ್ನೂ ಓದಿ: ಟಿಕೆಟ್ ಕೊಟ್ಟರೆ ಬಿಜೆಪಿಯಿಂದ ಸ್ಪರ್ಧೆ ಮಾಡ್ತೀನಿ ಎಂದ ನಟ ಸಾಯಿ ಕುಮಾರ್

ಪಾಲಿಕೆಯ ಶಾಂತಿನಗರ ಪ್ರೌಢಶಾಲೆಯು ಶೇ. 100 ರಷ್ಟು ಫಲಿತಾಂಶ ಬಂದಿದ್ದು, ಮೊದಲ ಸ್ಥಾನದಲ್ಲಿದೆ. ಭೈರವೇಶ್ವರ ನಗರ ಪ್ರೌಢಶಾಲೆಯು ಶೇ. 91.52 ರಷ್ಟು ಫಲಿತಾಂಶವನ್ನು ನೀಡಿ ಎರಡನೇ ಸ್ಥಾನ ಪಡೆದಿದೆ. ಹೇರೋಹಳ್ಳಿ ಪ್ರೌಢಶಾಲೆಯು ಶೇ. 90.12 ರಷ್ಟು ಫಲಿತಾಂಶವನ್ನು ನೀಡಿ ಮೂರನೇ ಸ್ಥಾನವನ್ನು ಪಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ