ಬೆಂಗಳೂರಿನ 86 ಪಬ್, ಬಾರ್ ಹಾಗೂ ರೆಸ್ಟೋರೆಂಟ್‌ಗಳಿಗೆ ನೋಟಿಸ್​​, 12 ಬಂದ್​ !

| Updated By: ವಿವೇಕ ಬಿರಾದಾರ

Updated on: Oct 21, 2023 | 9:28 AM

ಬಿಬಿಎಂಪಿಯ ಎಂಟು ವಲಯದ ಆರೋಗ್ಯಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿನ ಪಬ್‌, ಬಾರ್‌ ಮತ್ತು ರೆಸ್ಟೋರೆಂಟ್‌ಗಳಿಗೆ ಭೇಟಿ ನೀಡಿ ಅಗ್ನಿ ಅವಘಡದ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆಯೇ ಎಂಬುದನ್ನು ಪರಿಶೀಲನೆ ನಡೆಸಿದರು.

ಬೆಂಗಳೂರಿನ 86 ಪಬ್, ಬಾರ್ ಹಾಗೂ ರೆಸ್ಟೋರೆಂಟ್‌ಗಳಿಗೆ ನೋಟಿಸ್​​, 12 ಬಂದ್​ !
ಬಿಬಿಎಂಪಿ
Follow us on

ಬೆಂಗಳೂರು ಅ.21: ರಾಜ್ಯ ರಾಜಧಾನಿಯಲ್ಲಿ ಅಗ್ನಿ ದುರಂತ (Fire Accident) ಪ್ರಕರಣಗಳ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ಬಿಬಿಎಂಪಿ (BBMP) ಅಧಿಕಾರಿಗಳು ಅಲರ್ಟ್ ಆಗಿದ್ದು, ನಗರದಲ್ಲಿರುವ ಪಬ್, ಬಾರ್ ಮತ್ತು ರೆಸ್ಟೋರೆಂಟ್‌ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಿಬಿಎಂಪಿಯ ಆರೋಗ್ಯಾಧಿಕಾರಿಗಳು 12 ಪಬ್, ಬಾರ್‌ಗಳನ್ನು ಮುಚ್ಚಿಸಿದ್ದಾರೆ. ಇನ್ನು 86ಕ್ಕೆ ನೋಟಿಸ್ ನೀಡಿದ್ದಾರೆ. ಬಿಬಿಎಂಪಿಯ ಎಂಟು ವಲಯದ ಆರೋಗ್ಯಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿನ ಪಬ್‌, ಬಾರ್‌ ಮತ್ತು ರೆಸ್ಟೋರೆಂಟ್‌ಗಳಿಗೆ ಭೇಟಿ ನೀಡಿ ಅಗ್ನಿ ಅವಘಡದ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆಯೇ ಎಂಬುದನ್ನು ಪರಿಶೀಲನೆ ನಡೆಸಿದರು.

ಪಾಲಿಕೆ ವ್ಯಾಪ್ತಿಯಲ್ಲಿ ಒಟ್ಟು 1,118 ಉದ್ದಿಮೆಗಳಿಗೆ ಪರವಾನಿಗೆ ನೀಡಲಾಗಿದ್ದು, ಈ ಪೈಕಿ‌ 232 ಉದ್ದಿಮೆಗಳನ್ನು ಪರಿಶೀಲಿಸಲಾಗಿದೆ. ಅದರಲ್ಲಿ 86 ಉದ್ದಿಮೆಗಳಿಗೆ ನೋಟಿಸ್ ಜಾರಿಗೊಳಿಸಲಾಗಿದೆ. 12 ಉದ್ದಿಮೆಗಳನ್ನು ಬಂದ್​ ಮಾಡಲಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಹೆಚ್ಚಾದ ಅಗ್ನಿ ದುರಂತ: ಅಪಾರ್ಟ್ಮೆಂಟ್, ಅಂಗಡಿ, ಹೋಟೆಲ್, ರೆಸ್ಟೋರೆಂಟ್​ಗಳನ್ನು ಪರಿಶೀಲಿಸುವಂತೆ ಸೂಚನೆ

ವಲಯ ಆರೋಗ್ಯಾಧಿ ಕಾರಿಗಳಿಗೆ ಏಳು ದಿನ ಸಮಯ ನೀಡಲಾಗಿದೆ, ಈ ಏಳು ದಿನದಲ್ಲಿ ತಮ್ಮ ವಲಯ ವ್ಯಾಪ್ತಿಯಲ್ಲಿ ಎಷ್ಟು ಪಬ್, ಬಾರ್ ಮತ್ತು ಸ್ಟೋರೆಂಟ್‌ಗಳಿವೆ, ಎಷ್ಟು ಪಬ್, ಬಾರ್ ಮತ್ತು ಸೋರೆಂಟ್‌ಗಳಲ್ಲಿ ಅಗ್ನಿ ಸುರಕ್ಷತಾ ಕ್ರಮ ಕೈಗೊಳ್ಳಲಾಗಿದೆ. ಎಲ್ಲಿ ನ್ಯೂನ್ಯತೆಗಳಿವೆ. ಪಬ್, ಬಾರ್‌ ಮತ್ತು ರೆಸ್ಟೋರೆಂಟ್ ನಡೆಸುವುದಕ್ಕೆ ಬಿಬಿಎಂಪಿ ಸೇರಿದಂತೆ ಸಂಬಂಧಪಟ್ಟ ಇಲಾಖೆಗಳಿಂದ ಪರವಾನಗಿ ಪಡೆಯಲಾಗಿದೆಯೇ? ಎಷ್ಟು ಕಡೆ ಅನಧಿಕೃತವಾಗಿ ಮತ್ತು ಕಾನೂನು ಉಲ್ಲಂಘಿಸಿ ನಡೆಸಲಾಗುತ್ತಿದೆ ಎಂದು ಪರಿಶೀಲಿಸಲು ಸೂಚಿಸಲಾಗಿದೆ.

ಪಬ್​, ಬಾರ್, ರೆಸ್ಟೋರೆಂಟ್​ ತಪಾಸಣೆ ವಿವರ
ವಲಯ ಒಟ್ಟು ಪರಿಶೀಲನೆ ನೋಟಿಸ್​ ಬಂದ್​
ದಕ್ಷಿಣ 248 30 10 0
ಪಶ್ಚಿಮ 167 78 20 0
ಪೂರ್ವ 222 25 18 7
ರಾಜರಾಜೇಶ್ವರಿನಗರ 75 8 6 0
ದಾಸರಹಳ್ಳಿ 34 29 8 0
ಯಲಹಂಕ 110 18 0 0
ಮಹದೇವಪುರ 161 36 16 3
ಬೊಮ್ಮನಹಳ್ಳಿ 101 8 8 2
ಒಟ್ಟು 1118 232 86 12

ನಿರ್ಲಕ್ಷ್ಯ ವಹಿಸಿರುವ ಪಬ್‌, ಬಾರ್‌ ಮತ್ತು ರೆಸ್ಟೋರೆಂಟ್​ಗಳ ವಿರುದ್ಧ ಕೈಗೊಂಡ ಕ್ರಮಗಳು ಏನು ಎಂಬುದರ ಬಗ್ಗೆ ಸಂಪೂರ್ಣ ವರದಿ ನೀಡುವಂತೆ ಸೂಚನೆ ನೀಡಲಾಗಿದೆ. ಹೀಗಾಗಿ, ಸಮರೋಪಾದಿಯಲ್ಲಿ ನಗರದಲ್ಲಿ ತಪಾಸಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:13 am, Sat, 21 October 23