AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಸ್ಕ್ ಹಾಕದೆ ಇರುವವರಿಗೆ ಮೇ 2ರಿಂದ ದಂಡ ಪ್ರಯೋಗ; ಈ ಬಗ್ಗೆ ಬಿಬಿಎಂಪಿ ಅಧಿಕಾರಿಗಳು ನೀಡಿದ ಸ್ಪಷ್ಟನೆ ಏನು ಗೊತ್ತಾ?

ಮಾಸ್ಕ್ ಹಾಕದೆ ಇರುವವರಿಗೆ ದಂಡ ವಿಧಿಸಲಾಗಿದೆಯೇ ಇಲ್ಲವೇ ಎಂಬ ಬಗ್ಗೆ ಜನರಿಗೆ ಗೊಂದಲ ಇದೆ. ಸದ್ಯ ಈ ಬಗ್ಗೆ ಬಿಬಿಎಂಪಿ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ. ಮಾಸ್ಕ್ ಹಾಕದೇ ಇರುವವರಿಗೆ ದಂಡ ಹಾಕುವ ವಿಚಾರಕ್ಕೆ ಸಂಬಂಧಿಸಿ ಮಾಸ್ಕ್ ಹಾಕದವರಿಂದ ದಂಡ ವಸೂಲಿಗೆ ಆದೇಶಿಸಿಲ್ಲ.

ಮಾಸ್ಕ್ ಹಾಕದೆ ಇರುವವರಿಗೆ ಮೇ 2ರಿಂದ ದಂಡ ಪ್ರಯೋಗ; ಈ ಬಗ್ಗೆ ಬಿಬಿಎಂಪಿ ಅಧಿಕಾರಿಗಳು ನೀಡಿದ ಸ್ಪಷ್ಟನೆ ಏನು ಗೊತ್ತಾ?
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: May 02, 2022 | 11:21 AM

Share

ಬೆಂಗಳೂರು: ನಗರದಲ್ಲಿ ಮಹಾಮಾರಿ ಕೊರೊನಾ 4ನೇ ಅಲೆ ಆತಂಕ ಶುರುವಾಗಿದೆ. ಸೋಂಕಿತರ ಸಂಖ್ಯೆಯಲ್ಲೂ ಏರಿಕೆ ಕಂಡುಬರುತ್ತಿದೆ. ಹೀಗಾಗಿ ಮಾಸ್ಕ್ ಹಾಕುವುದು ಅನಿವಾರ್ಯವೆಂದೆನಿಸಿದೆ. ಈ ಬಗ್ಗೆ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಕೂಡ ಮಾಸ್ಕ್ ಹಾಕಿದರೆ ಕೊರೊನಾ ನಿಯಂತ್ರಿಸಬಹುದು ಹೀಗಾಗಿ ಕಡ್ಡಾಯವಾಗಿ ಮಾಸ್ಕ್ ಧರಿಸಿ ಎಂದು ಸಲಹೆ ನೀಡಿದ್ದಾರೆ. ಆದ್ರೆ ಮೇ2ರಿಂದ ಮಾಸ್ಕ್ ಹಾಕದವರಿಗೆ ದಂಡ ವಿಧಿಸಲಾಗುತ್ತೆ ಎಂಬ ಬಗ್ಗೆ ಕೆಲವು ಗೊಂದಲಗಳು ಉಂಟಾಗಿವೆ.

ಮಾಸ್ಕ್ ಹಾಕದೆ ಇರುವವರಿಗೆ ದಂಡ ವಿಧಿಸಲಾಗಿದೆಯೇ ಇಲ್ಲವೇ ಎಂಬ ಬಗ್ಗೆ ಜನರಿಗೆ ಗೊಂದಲ ಇದೆ. ಸದ್ಯ ಈ ಬಗ್ಗೆ ಬಿಬಿಎಂಪಿ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ. ಮಾಸ್ಕ್ ಹಾಕದೇ ಇರುವವರಿಗೆ ದಂಡ ಹಾಕುವ ವಿಚಾರಕ್ಕೆ ಸಂಬಂಧಿಸಿ ಮಾಸ್ಕ್ ಹಾಕದವರಿಂದ ದಂಡ ವಸೂಲಿಗೆ ಆದೇಶಿಸಿಲ್ಲ. ಸರ್ಕಾರದ ಆದೇಶ ಬರುವವರೆಗೂ ದಂಡ ವಸೂಲಿ ಇಲ್ಲ. ಜನರಿಗೆ ಮಾಸ್ಕ್ ಬಗ್ಗೆ ಅರಿವು ಮೂಡಿಸುವ ಕೆಲಸವಾಗುತ್ತಿದೆ. ಮೇ 2ರಿಂದ ದಂಡ ವಸೂಲಿ ಮಾಡಲಾಗುತ್ತೆ ಎಂದು ಹೇಳಿಲ್ಲ ಎಂದು ಟಿವಿ9ಗೆ ಬಿಬಿಎಂಪಿ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.

ದೇಶದ ಐದು ಮಹಾನಗರಗಳಲ್ಲಿ ಕೊವಿಡ್ ಪ್ರಕರಣಗಳ ಏರಿಕೆ, ಬೆಂಗಳೂರಿಗೆ ನಂ. 2 ಸ್ಥಾನ ಬೆಂಗಳೂರು: ದೇಶದಲ್ಲಿ ಮಹಾಮಾರಿ ಕೊರೊನಾ(Coronavirus) ನಾಲ್ಕನೇ ಅಲೆ ಹಾವಳಿ ಶುರುವಾಗಿದೆ. ಐದು ಮಹಾನಗರಗಳಲ್ಲಿ ಕೊವಿಡ್ ಪ್ರಕರಣಗಳು ಹೆಚ್ಚುತ್ತಿವೆ. 2 ಮಹಾನಗರಗಳಲ್ಲಿ ಸಾವಿರ ಸಂಖ್ಯೆಯಲ್ಲಿ ಕೇಸ್ ದಾಖಲಾಗುತ್ತಿವೆ. ದೇಶದ ಐದು ಮಹಾನಗರಗಳ ಪೈಕಿ ದೆಹಲಿ ಮೊದಲ ಸ್ಥಾನ ಪಡೆದಿದ್ದು ಬೆಂಗಳೂರು 2ನೇ ಸ್ಥಾನ ಪಡೆದಿದೆ. ಹಾಗೂ ಕ್ರಮವಾಗಿ ಮುಂಬೈ, ಚೆನ್ನೈ, ಕೋಲ್ಕತ್ತಾ 3, 4, 5ನೇ ಸ್ಥಾನದಲ್ಲಿದೆ.

ದೆಹಲಿಯಲ್ಲಿ 4,508 ಸಕ್ರಿಯ ಕೊವಿಡ್ ಪ್ರಕರಣಗಳು ಪತ್ತೆಯಾಗಿವೆ. ಬೆಂಗಳೂರಲ್ಲಿ 1,648 ಸಕ್ರಿಯ ಕೊವಿಡ್ ಪ್ರಕರಣಗಳು ಸಿಕ್ಕಿದ್ದು ಮುಂಬೈ-549 ಸಕ್ರಿಯ ಕೇಸ್, ಚೆನ್ನೈ-255 ಸಕ್ರಿಯ ಕೇಸ್, ಕೋಲ್ಕತ್ತಾದಲ್ಲಿ 272 ಆ್ಯಕ್ಟೀವ್ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.

ಬೆಂಗಳೂರಿನ ಇತರೆ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ