ಬೆಂಗಳೂರಿನಲ್ಲಿ ರಾರಾಜಿಸುತ್ತಿದ್ದ ನಲಪಾಡ್ ಬ್ಯಾನರ್​ಗಳ ತೆರವು: ಕ್ರಮಕ್ಕೆ ಮುಂದಾದ ಬಿಬಿಎಂಪಿ

| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Feb 11, 2022 | 11:15 PM

ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಮೊಹಮದ್ ಹ್ಯಾರಿಸ್ ನಲಪಾಡ್ ಅವರಿಗೆ ಅಭಿನಂದನೆ ಹೇಳುವ ಬ್ಯಾನರ್​ಗಳೇ ಗಮನಾರ್ಹ ಸಂಖ್ಯೆಯಲ್ಲಿದ್ದವು

ಬೆಂಗಳೂರಿನಲ್ಲಿ ರಾರಾಜಿಸುತ್ತಿದ್ದ ನಲಪಾಡ್ ಬ್ಯಾನರ್​ಗಳ ತೆರವು: ಕ್ರಮಕ್ಕೆ ಮುಂದಾದ ಬಿಬಿಎಂಪಿ
ಮೊಹಮ್ಮದ್ ನಲಪಾಡ್ (ಸಂಗ್ರಹ ಚಿತ್ರ)
Follow us on

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಅಳವಡಿಸಿದ್ದ ಬ್ಯಾನರ್, ಬಂಟಿಂಗ್ಸ್​ಗಳನ್ನು ಬಿಬಿಎಂಪಿ ಸಿಬ್ಬಂದಿ ಶುಕ್ರವಾರ ತೆರವುಗೊಳಿಸಿದರು. ಸಂಬಂಧಿಸಿದವರ ವಿರುದ್ಧ ಕ್ರಮ ಜರುಗಿಸಲು ವಲಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಬಿಬಿಎಂಪಿ ಎಲ್ಲಾ ವಲಯಗಳಲ್ಲಿ ಅನಧಿಕೃತ ಬ್ಯಾನರ್, ಫ್ಲೆಕ್ಸ್, ಪೋಸ್ಟರ್ಸ್, ಬಂಟಿಂಗ್ಸ್​ ಗಳ ತೆರವು ಕಾರ್ಯಾಚರಣೆ ನಡೆಯಿತು. ಮುಖ್ಯ ಎಂಜಿನಿಯರ್​ಗಳು ತೆರವು ಕಾರ್ಯಾಚರಣೆಯ ನೇತೃತ್ವ ವಹಿಸಿದ್ದರು. ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಮೊಹಮದ್ ಹ್ಯಾರಿಸ್ ನಲಪಾಡ್ ಅವರಿಗೆ ಅಭಿನಂದನೆ ಹೇಳುವ ಬ್ಯಾನರ್​ಗಳೇ ಗಮನಾರ್ಹ ಸಂಖ್ಯೆಯಲ್ಲಿದ್ದವು.

ಬಿಜೆಪಿ ಸರಣಿ ಟ್ವೀಟ್
ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ನಲಪಾಡ್ ಅಧಿಕಾರ ಸ್ವೀಕರಿಸಿದ ಬೆನ್ನಿಗೇ ಬಿಜೆಪಿ ಸರಣಿ ಟ್ವೀಟ್ ಮಾಡಿ ವ್ಯಂಗ್ಯವಾಡಿದೆ. 2018ರಲ್ಲಿ 6 ವರ್ಷಗಳ ಅವಧಿಗೆ ಪಕ್ಷದಿಂದ ಉಚ್ಚಾಟನೆಗಳೊಂಡವರು, ಕೇವಲ ನಾಲ್ಕವೇ ವರ್ಷಗಳಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷರಾದರು. ಇದು ಎಂಥ ವಿಚಿತ್ರ. ಕೊಲೆ ಯತ್ನ, ಕ್ರಿಮಿನಲ್ ಬೆದರಿಕೆ, ಅಕ್ರಮ ಗುಂಪು ಸೇರಿಸುವುದು ಯುವ ಕಾಂಗ್ರೆಸ್ ಅಧ್ಯಕ್ಷರಾಗಲು ಬೇಕಿರುವ ಅರ್ಹತೆಯೇ ಎಂದು ಬಿಜೆಪಿ ಪ್ರಶ್ನಿಸಿದೆ.

ಒಮ್ಮೆ ತಲೆ ಕಡಿಯುತ್ತೇನೆ ಎನ್ನುತ್ತಾರೆ, ಮತ್ತೊಬ್ಬರ ಕಾಲು ಮುರಿಯುತ್ತಾರೆ, ಮಗದೊಮ್ಮೆ ಅಮಾಯಕರ ಮುಖ ಜಜ್ಜುತ್ತಾರೆ. ಅಂಥ ವ್ಯಕ್ತಿಗೆ ಅಧಿಕಾರ ನೀಡುವ ಮೂಲಕ ಕಾಂಗ್ರೆಸ್ ಯಾವ ಸಂದೇಶ ನೀಡಲು ಹೊರಟಿದೆ ಎಂದು ಬಿಜೆಪಿ ಪ್ರಶ್ನಿಸಿದೆ.

ಹೋರಾಟದಿಂದ ಪಾಠ ಕಲಿತೆ: ನಲಪಾಡ್
ಕರ್ನಾಟಕ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಪಡೆಯಲು ಕಳೆದ ಒಂದು-ಒಂದೂವರೆ ವರ್ಷದಿಂದ ಸತತವಾಗಿ ಹೋರಾಟ ಮಾಡಿದೆ. ಈ ಅವಧಿಯಲ್ಲಿ ಹಲವು ಪಾಠಗಳನ್ನು ಕಲಿತೆ ಎಂದು ಕರ್ನಾಟಕ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಪದಗ್ರಹಣ ಮಾಡಿದ ಮೊಹಮ್ಮದ್ ನಲಪಾಡ್ ಹೇಳಿದ್ದರು. ಯುವ ಕಾಂಗ್ರೆಸ್ ಅಧ್ಯಕ್ಷನಾಗಿ ಪದಗ್ರಹಣ ಸ್ವೀಕರಿಸಿದ ನಂತರ ಮಾತನಾಡಿದ್ದ ಅವರು, ಯುವಕರ ಧ್ವನಿಯಾಗಲು ಛಲತೊಟ್ಟು ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಪಡೆದಿದ್ದೇನೆ ಎಂದು ಹೇಳಿದ್ದರು.

ಇದನ್ನೂ ಓದಿ: ಮೊಹಮದ್ ನಲಪಾಡ್ ಅಂಡ್​ ಗ್ಯಾಂಗ್ ನನಗೆ ಹಿಂಸಿಸುತ್ತಿದ್ದಾರೆ- ಹೈಗ್ರೌಂಡ್ಸ್​ ಠಾಣೆಯಲ್ಲಿ 3 ಪುಟಗಳ ದೂರು ದಾಖಲು

ಇದನ್ನೂ ಓದಿ: ಮತೀಯ ಗಲಭೆ ಸೃಷ್ಟಿಸಿ ಸಮಾಜದ ಸ್ವಾಸ್ಥ್ಯ ಹಾಳುಮಾಡುವ ಕೆಲಸದಲ್ಲಿ ಕಾಂಗ್ರೆಸ್ ತೊಡಗಿದೆ: ನಳಿನ್ ಕುಮಾರ್ ಕಟೀಲ್

Published On - 11:14 pm, Fri, 11 February 22