AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬಿಬಿಎಂಪಿ ಅಧಿಕಾರಿಗಳು

ಮೊನ್ನೆಯಷ್ಟೇ(ಸೆ.24) ಯಶವಂತಪುರ ಮತ್ತು ಬ್ಯಾಟರಾಯನಪುರ ಅಬಕಾರಿ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ, ಗಾಂಜಾ ಮತ್ತು ಮದ್ಯದ ಬಾಟಲಿಗಳನ್ನು ವಶಕ್ಕೆ ಪಡೆದಿದ್ದರು. ಅದರ ಬೆನ್ನಲ್ಲೇ ಇದೀಗ ಲಂಚ ಪಡೆಯುವ ವೇಳೆ ಬಿಬಿಎಂಪಿ ಯಶವಂತಪುರ ಕಚೇರಿ ಎಆರ್​ಒ ರಾಜೇಂದ್ರಪ್ರಸಾದ್ ಹಾಗೂ ತೆರಿಗೆ ಮೌಲ್ಯಮಾಪಕ ಪ್ರಕಾಶ್ ಎಂಬುವವರು ರೆಡ್​ಹ್ಯಾಂಡ್​ ಆಗಿ ಸಿಕ್ಕಿಬಿದ್ದಿದ್ದಾರೆ.

ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬಿಬಿಎಂಪಿ ಅಧಿಕಾರಿಗಳು
ಬಿಬಿಎಂಪಿ ಯಶವಂತಪುರ ಕಚೇರಿ ತೆರಿಗೆ ಮೌಲ್ಯಮಾಪಕ ಪ್ರಕಾಶ್ಎ. ಆರ್​ಒ ರಾಜೇಂದ್ರಪ್ರಸಾದ್
Jagadisha B
| Updated By: ಕಿರಣ್ ಹನುಮಂತ್​ ಮಾದಾರ್|

Updated on: Sep 26, 2024 | 9:31 PM

Share

ಬೆಂಗಳೂರು, ಸೆ.26: ಲಂಚ ಪಡೆಯುವ ವೇಳೆ ಬಿಬಿಎಂಪಿ ಅಧಿಕಾರಿಗಳು ಲೋಕಾಯುಕ್ತ(Lokayukta) ಬಲೆಗೆ ಬಿದ್ದಿದ್ದಾರೆ. ಬಿಬಿಎಂಪಿ ಯಶವಂತಪುರ ಕಚೇರಿ ಎಆರ್​ಒ ರಾಜೇಂದ್ರಪ್ರಸಾದ್ ಹಾಗೂ ತೆರಿಗೆ ಮೌಲ್ಯಮಾಪಕ ಪ್ರಕಾಶ್ ಎಂಬುವವರು ವಾಣಿಜ್ಯ ಕಟ್ಟಡದ ತೆರಿಗೆ ಮೊತ್ತ ಕಡಿಮೆ ಮಾಡಲು ಬರೋಬ್ಬರಿ 4.50 ಲಕ್ಷ ರೂ. ಲಂಚ ಸ್ವೀಕರಿಸುವಾಗ ರೆಡ್​ಹ್ಯಾಂಡ್​ ಆಗಿ​ ಸಿಕ್ಕಿಬಿದ್ದಿದ್ದಾರೆ. ಇದೀಗ ಇಬ್ಬರು ಅಧಿಕಾರಿಗಳು ಬಂಧಿಸಿ, ಲಂಚದ ಹಣವನ್ನು ಜಪ್ತಿ ಮಾಡಿದ್ದಾರೆ. ಈ ಕುರಿತು ಬೆಂಗಳೂರು ಲೋಕಾಯುಕ್ತ ಠಾಣೆಯಲ್ಲಿ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

ಮೊನ್ನೆಯಷ್ಟೇ (ಸೆ.24) ಯಶವಂತಪುರ ಮತ್ತು ಬ್ಯಾಟರಾಯನಪುರ ಅಬಕಾರಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ಮಾಡಿದ್ದು, ಈ ವೇಳೆ ಸರ್ಕಾರಿ ಕಚೇರಿಗಳಲ್ಲೇ ಗಾಂಜಾ ಮತ್ತು ಮದ್ಯದ ಬಾಟಲಿಗಳು ಪತ್ತೆಯಾಗಿದ್ದವು. ಈ ಕುರಿತು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ್ದ ಲೋಕಾಯುಕ್ತ ನ್ಯಾಯಮೂರ್ತಿ ಬಿಎಸ್ ಪಾಟೀಲ್, ‘ 61 ಅಬಕಾರಿ ಅಧಿಕಾರಿಗಳ ಮೇಲೆ ಸರ್ಚ್ ಮಾಡಲಾಗಿದೆ. ಲೊಕಾಯುಕ್ತ ಕಚೇರಿಗೆ ಸುಮಾರು 132 ದೂರುಗಳು ಬಂದಿವೆ. ಅದೆಲ್ಲವನ್ನೂ ವಿಚಾರ ಮಾಡಲಾಗಿ ಜೊತೆಗೆ ಅಬಕಾರಿ ಕಚೇರಿಯ ವ್ಯವಹಾರಗಳ ಬಗ್ಗೆ ಪರಿಶೀಲನೆ ನಡೆಸಲು ಸರ್ಚಿಂಗ್ ಮಾಡಲಾಗುತ್ತಿದೆ ಎಂದಿದ್ದರು. ಇದೀಗ ಇಬ್ಬರು ಅಧಿಕಾರಿಗಳು ಲೋಕಾ ಬಲೆಗೆ ಬಿದ್ದಿದ್ದಾರೆ.

ಇದನ್ನೂ ಓದಿ:ಬೆಂಗಳೂರಿನಲ್ಲಿ ಲೋಕಾಯುಕ್ತ ದಾಳಿ: ಸರ್ಕಾರಿ ಕಚೇರಿಯಲ್ಲಿ ಡ್ರಗ್ಸ್, ಗಾಂಜಾ, ಲಿಕ್ಕರ್​​​ ಬಾಟಲ್​ ಪತ್ತೆ

ಸರ್ಕಾರಿ ಶಾಲೆಯ ತರಗತಿಯಲ್ಲಿ ಛಾವಣಿ ಕುಸಿತ; ತಪ್ಪಿದ ಭಾರಿ ಅನಾಹುತ‌

ರಾಯಚೂರು: ರಾಯಚೂರು ತಾಲೂಕಿನ ಚಿಕ್ಕಸುಗೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ತರಗತಿಯಲ್ಲಿ ಛಾವಣಿ ಕುಸಿತವಾಗಿದೆ. ತರಗತಿಯಲ್ಲಿ ವಿದ್ಯಾರ್ಥಿಗಳು ಬ್ಯಾಗ್ ಇಟ್ಟು ಪ್ರಾರ್ಥನೆ ಸಲ್ಲಿಸುತ್ತಿದ್ದ ವೇಳೆ ಛಾವಣಿ ಕುಸಿದಿದ್ದು, ಅದೃಷ್ಟವಶಾತ್ ಭಾರಿ ಅನಾಹುತ‌ ತಪ್ಪಿದೆ. ಜಿಲ್ಲೆಯಲ್ಲಿ ಪದೇ ಪದೇ ಸರ್ಕಾರಿ ಶಾಲೆಗಳ ಛಾವಣಿ ಕುಸಿತ ಘಟನೆಗಳು ನಡೆಯುತ್ತಿರುವುದರಿಂದ ಪೋಷಕರು ಆಕ್ರೋಶ ಹೊರಹಾಕಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ