ಕೊರೊನಾ ನಿಯಂತ್ರಣಕ್ಕೆ ಬಿಬಿಎಂಪಿಗೆ ಪೂರ್ಣ ಸ್ವಾತಂತ್ರ್ಯ; ಮಹಾನಗರ ಪಾಲಿಕೆ ಮುಂದಿರುವ ಯೋಚನೆಗಳೇನು?
BBMP on Covid19 Guidelines: ಬೆಂಗಳೂರಿನಲ್ಲಿ ಮದುವೆ, ಸಭೆ, ಪಾರ್ಟಿಗಳಲ್ಲಿ ಭಾಗಿಯಾದವರಲ್ಲೇ ಹೆಚ್ಚು ಸೋಂಕು ಕಾಣಿಸಿಕೊಳ್ಳುವುದು ತಿಳಿದುಬಂದಿದೆ. ಹೀಗಾಗಿ, ಯಾವ ಪ್ರದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗತ್ತೋ ಆ ಪ್ರದೇಶದಲ್ಲಿರುವ ಮದುವೆ ಚೌಟ್ರಿ, ಪಾರ್ಟಿ ಹಾಲ್, ಮಾರುಕಟ್ಟೆ ಗಳನ್ನ 7 ದಿನಗಳ ಕಾಲ ಬಂದ್ ಮಾಡಲು ಬಿಬಿಎಂಪಿ ಪ್ಲಾನ್ ಮಾಡಿದೆ.
ಬೆಂಗಳೂರು: ಹೆಚ್ಚುತ್ತಿರುವ ಕೊರೊನಾ ನಿಯಂತ್ರಣಕ್ಕೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಕರ್ನಾಟಕ ರಾಜ್ಯ ಸರ್ಕಾರ (ಬಿಬಿಎಂಪಿ) ಪೂರ್ಣ ಸ್ವಾತಂತ್ರ್ಯ ನೀಡಿದೆ. ಕೊರೊನಾ ನಿಯಂತ್ರಣಕ್ಕೆ ಬಿಬಿಎಂಪಿ ಮುಖ್ಯ ಆಯುಕ್ತರೇ ಕ್ರಮ ತೆಗೆದುಕೊಳ್ಳಬಹುದು. ಕಂಟೇನ್ಮೆಂಟ್, ಸೀಲ್‌ಡೌನ್, ಕರ್ಫ್ಯೂ ಸಂಬಂಧ ನಿರ್ಧಾರವನ್ನು ಪರಿಸ್ಥಿತಿಗೆ ಅನುಗುಣವಾಗಿ ತೆಗೆದುಕೊಳ್ಳಲು ಅನುಮತಿ ನೀಡಲಾಗಿದೆ. ಈ ಹಿಂದೆ ರಾಜ್ಯ ಸರ್ಕಾರದ ಆದೇಶವನ್ನು ಪಾಲಿಸಬೇಕಿತ್ತು. ಆದರೆ ಈಗ ಸರ್ಕಾರ ಬಿಬಿಎಂಪಿಗೆ ಸ್ವಾತಂತ್ರ್ಯ ಕೊಟ್ಟಿರುವ ಬಗ್ಗೆ ತಿಳಿದುಬಂದಿದೆ.
ಸೋಂಕಿತರು ಹೆಚ್ಚಾಗಿ ಪತ್ತೆಯಾಗುವ ಏರಿಯಾದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ಒಂದು ಮನೆಯಲ್ಲಿ ಮೂರಕ್ಕಿಂತ ಹೆಚ್ಚು ಜನ ಸೋಂಕಿತರು ಪತ್ತೆಯಾದ್ರೆ ಇಡೀ ಮನೆ ಸೀಲ್ ಡೌನ್ ಮಾಡಲಾಗುವುದು. ಮನೆಯೊಳಗೆ, ಹೊರಗೆ ಯಾರು ಬರುವಂತಿಲ್ಲ ಹೋಗುವಂತಿಲ್ಲ. ಅಗತ್ಯ ವಸ್ತುಗಳ ಸರಬರಾಜು ಮಾಡುವ ಹೊಣೆ ಬಿಬಿಎಂಪಿಯದ್ದು. ಒಂದು ಮನೆ ಅಥವಾ ಒಂದೇ ಜಾಗದಲ್ಲಿ 10 ಅಥವಾ 10 ಕ್ಕಿಂತ ಹೆಚ್ಚು ಸೋಂಕಿತರು ಪತ್ತೆಯಾದರೆ 100 ಮೀಟರ್ ಪ್ರದೇಶವನ್ನ ಸೀಲ್ ಡೌನ್ ಮಾಡುವುದು. ರಸ್ತೆ, ಅಕ್ಕಪಕ್ಕದ ಮನೆಗಳು, ಬ್ಯಾರಿಕೇಡ್, ರೆಡ್ ಟೇಪ್ ಮೂಲಕ ಸೀಲ್ ಡೌನ್ ಮಾಡುವ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.
ವಿಕೇಂಡ್ ಕರ್ಫ್ಯೂ ಜಾರಿಗೆ ಬಿಬಿಎಂಪಿ ಮನವಿ ಮಾಡಿದೆ. ಹಾಫ್ ಡೇ ಕರ್ಫ್ಯೂ ಜಾರಿಗೆ ಸರ್ಕಾರಕ್ಕೆ ಬಿಬಿಎಂಪಿ ಮನವಿ ಮಾಡಿದೆ. ವಿಕೇಂಡ್ ದಿನ ಪಾರ್ಟಿಗಳ ಸಂಖ್ಯೆ ಹೆಚ್ಚಿದ್ದು, ಪಬ್ ಕೂಡ ಓಪನ್ ಆಗಿವೆ. ಪಬ್ಗಳಿಗೆ ಅನುಮತಿ ಇಲ್ಲದಿದ್ದರೂ ಪಬ್ಗಳು ತೆರೆದುಕೊಂಡಿವೆ. ಹೀಗಾಗಿ ಬೆಳಗ್ಗೆಯಿಂದ ಸಂಜೆ 5 ಗಂಟೆವರೆಗೂ ಮಾತ್ರ ಜನರ ಓಡಾಟಕ್ಕೆ ಅವಕಾಶ ನೀಡಿ. ವಿಕೇಂಡ್ ದಿನ ಸಂಜೆ 5 ಗಂಟೆಯಿಂದ ಕರ್ಫ್ಯೂ ಜಾರಿಗೆ ಮನವಿ ಮಾಡಲಾಗಿದೆ. ಬಿಬಿಎಂಪಿ ಅಧಿಕಾರಿಗಳ ಜೊತೆಗೆ ಸಿಎಂ ಸಭೆ ನಡೆಸಿದ ಬಳಿಕ ಆದೇಶ ಹೊರ ಬೀಳುವ ಸಾಧ್ಯತೆ ಕಂಡುಬಂದಿದೆ.
ಬೆಂಗಳೂರಿನಲ್ಲಿ ಮದುವೆ, ಸಭೆ, ಪಾರ್ಟಿಗಳಲ್ಲಿ ಭಾಗಿಯಾದವರಲ್ಲೇ ಹೆಚ್ಚು ಸೋಂಕು ಕಾಣಿಸಿಕೊಳ್ಳುವುದು ತಿಳಿದುಬಂದಿದೆ. ಹೀಗಾಗಿ, ಯಾವ ಪ್ರದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗತ್ತೋ ಆ ಪ್ರದೇಶದಲ್ಲಿರುವ ಮದುವೆ ಚೌಟ್ರಿ, ಪಾರ್ಟಿ ಹಾಲ್, ಮಾರುಕಟ್ಟೆ ಗಳನ್ನ 7 ದಿನಗಳ ಕಾಲ ಬಂದ್ ಮಾಡಲು ಬಿಬಿಎಂಪಿ ಪ್ಲಾನ್ ಮಾಡಿದೆ. ಸಾರ್ವಜನಿಕರು ಸಾಮೂಹಿಕವಾಗಿ ಸೇರುವ ಪ್ರದೇಶಗಳಿಗೆ ನಿರ್ಬಂಧ ಹೇರಲಾಗುವ ಬಗ್ಗೆ ತಿಳಿದುಬಂದಿದೆ. ಹೆಚ್ಚು ಸೋಂಕಿತರು ಇರುವ ಪ್ರದೇಶದಲ್ಲಿ 7 ದಿನಗಳ ಕಾಲ ಯಾವುದೇ ಕಾರ್ಯಕ್ರಮಗಳು ನಡೆಯುವಂತಿಲ್ಲ ಎಂಬ ಆದೇಶ ನೀಡುವ ಬಗ್ಗೆ ಯೋಜಿಸಲಾಗಿದೆ.
ಬಳ್ಳಾರಿ: ಬಳ್ಳಾರಿ ಜಿಲ್ಲೆಯಲ್ಲಿ ನೈಟ್ ಕರ್ಫ್ಯೂ ಮಾಡಲು ಚಿಂತನೆ 3ನೇ ಅಲೆ ತಡೆಯಲು ಜಿಲ್ಲಾಡಳಿತ ಅಗತ್ಯ ಸಿದ್ಧತೆ ನಡೆಸಿದೆ. ತರಕಾರಿ, ಹೂ ಮಾರಾಟಕ್ಕೆ ತಾತ್ಕಾಲಿಕ ಮಾರುಕಟ್ಟೆ ಆರಂಭ ಮಾಡಿದೆ. ಕೊರೊನಾ ಪತ್ತೆಯಾದ ಏರಿಯಾಗಳಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಯಿಂದ ಮನೆ-ಮನೆ ಸರ್ವೆ ನಡೆಸಲಾಗುವುದು. ಕೊರೊನಾ ಗುಣ ಲಕ್ಷಣಗಳು ಇದ್ದವರಿಗೆ ಕೊವಿಡ್ ಟೆಸ್ಟ್ ಮಾಡಲಾಗುವುದು. ಹೋಮ್ ಐಸೋಲೇಷನ್ ವ್ಯವಸ್ಥೆ ಇಲ್ಲದವರನ್ನು ಕೊರೊನಾ ಕೇರ್ ಸೆಂಟರ್ಗೆ ಶಿಫ್ಟ್ ಮಾಡಲಾಗುವುದು ಎಂದು ಬಳ್ಳಾರಿಯಲ್ಲಿ ಡಿಸಿ ಪವನ್ ಕುಮಾರ್ ಮಾಲಪಾಟಿ ಹೇಳಿದ್ದಾರೆ.
ಟ್ರಾಮಾ ಕೇರ್ ಸೆಂಟರ್ನಲ್ಲಿ 100 ವೆಂಟಿಲೇಟರ್ ಬೆಡ್ ಹಾಗೂ ಜಿಲ್ಲಾ ಆಸ್ಪತ್ರೆಯಲ್ಲಿ 50 ಐಸಿಯು ಬೆಡ್ ವ್ಯವಸ್ಥೆಗೆ ಸಿದ್ಧತೆ ನಡೆಸಲಾಗಿದೆ. ಮೂರು ಕಡೆ ಆಕ್ಸಿಜನ್ ಪ್ಲಾಂಟ್ ಮಾಡಲಾಗುತ್ತಿದೆ. ಹರಪನಹಳ್ಳಿ, ಹೂವಿನಹಡಗಲಿ, ಹೊಸಪೇಟೆಯಲ್ಲಿ ಸಿದ್ಧತೆ ಮಾಡಲಾಗಿದೆ. ಜಿಂದಾಲ್ನಲ್ಲಿ ಸಾವಿರ ತಾತ್ಕಾಲಿಕ ಆಕ್ಸಿಜನ್ ಬೆಡ್ ವ್ಯವಸ್ಥೆ ಮಾಡಲಾಗಿದೆ. ಹಂಪಿಗೆ ಬರುವ ಹೊರ ರಾಜ್ಯದವರಿಗೆ ಱಂಡಮ್ ಟೆಸ್ಟ್ ನಡೆಸಲಾಗುವುದು ಎಂದು ಡಿಸಿ ಪವನ್ ಕುಮಾರ್ ಮಾಲಪಾಟಿ ತಿಳಿಸಿದ್ದಾರೆ.
ರಾಜ್ಯದಲ್ಲಿ ಕೊರೊನಾ ಮೂರನೇ ಅಲೆಯ ಭೀತಿ ಹಿನ್ನೆಲೆ, ಬಳ್ಳಾರಿ ಜಿಲ್ಲೆಯಲ್ಲಿ ನೈಟ್ ಕರ್ಫ್ಯೂ ಮಾಡಲು ಚಿಂತನೆ ನಡೆಸಲಾಗಿದೆ. ಅಷ್ಟೇ ಅಲ್ಲದೆ, ಮದುವೆ ಸಮಾರಂಭಗಳಲ್ಲಿ 100 ಜನರಿಗೆ ಮಾತ್ರ ಅವಕಾಶ. ಹಬ್ಬಗಳಲ್ಲಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸುವಂತಿಲ್ಲ. ದೇವಸ್ಥಾನಗಳಲ್ಲಿ ದೇವರ ದರ್ಶನಕ್ಕೆ ಮಾತ್ರ ಅವಕಾಶವಿದೆ ಎಂಬ ನಿರ್ಧಾರ ಕೈಗೊಳ್ಳಲಾಗಿದೆ. ಮಾಸ್ಕ್ ಹಾಕದವರಿಗೆ ದಂಡ ಹಾಕಲಾಗುವುದು ಎಂದು ಬಳ್ಳಾರಿ ಪೊಲೀಸ್ ವರಿಷ್ಠಾಧಿಕಾರಿ ಸೈದುಲ್ಲ ಅಡಾವತ್ ಹೇಳಿಕೆ ನೀಡಿದ್ದಾರೆ.
ಆನೇಕಲ್: ನೆರೆ ರಾಜ್ಯಗಳಲ್ಲಿ ಕೊರೊನಾ ಹೆಚ್ಚುತ್ತಿದ್ದರೂ ನಿರ್ಲಕ್ಷ್ಯ ಅತ್ತಿಬೆಲೆ ಗಡಿಯಲ್ಲಿ ಯಾವುದೇ ರೀತಿ ತಪಾಸಣೆ ಇಲ್ಲ. ನೆರೆ ರಾಜ್ಯಗಳಲ್ಲಿ ಕೊರೊನಾ ಹೆಚ್ಚುತ್ತಿದ್ದರೂ ನಿರ್ಲಕ್ಷ್ಯ ವಹಿಸಲಾಗುತ್ತಿದೆ. ಅತ್ತಿಬೆಲೆ ಮೂಲಕ ಜನರು ಬೆಂಗಳೂರಿಗೆ ಬರುತ್ತಿದ್ದಾರೆ. ಕೊವಿಡ್ ಹೆಚ್ಚಿರುವ ತಮಿಳುನಾಡಿನಿಂದ ಜನರ ಆಗಮನ ಆಗುತ್ತಿದೆ. ತಮಿಳುನಾಡಿನಿಂದ ಜನರು ಅತ್ತಿಬೆಲೆ ಮೂಲಕ ಬರುತ್ತಿದ್ದಾರೆ. ರಾಜ್ಯದ ಅತ್ತಿಬೆಲೆ ಗಡಿಯಲ್ಲಿ ಹೇಳೋರಿಲ್ಲ ಕೇಳೋರಿಲ್ಲ ಎಂಬಂತಾಗಿದೆ. ಭಾನುವಾರ ಆಗಿರುವುದರಿಂದ ಸಾವಿರಾರು ಸಂಖ್ಯೆಯಲ್ಲಿ ಬರುತ್ತಿರುವ ವಾಹನಗಳಿಂದ ಅತ್ತಿಬೆಲೆ ಟೋಲ್ ಟ್ರಾಫಿಕ್ ಜಾಮ್ ಕೂಡ ಉಂಟಾಗಿದೆ ಎಂದು ತಿಳಿದುಬಂದಿದೆ.
ಶಿವಮೊಗ್ಗ: ಆಗುಂಬೆ ಚೆಕ್‌ಪೋಸ್ಟ್‌ನಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನಾ 3ನೇ ಅಲೆ ಭೀತಿ ಹಿನ್ನೆಲೆಯಲ್ಲಿ ಆಗುಂಬೆ ಚೆಕ್‌ಪೋಸ್ಟ್‌ನಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ ನೀಡಲಾಗಿದೆ. ಅಂತರ್ ಜಿಲ್ಲಾ ಚೆಕ್‌ಪೋಸ್ಟ್‌ನಲ್ಲಿ ಕಟ್ಟುನಿಟ್ಟಾಗಿ ತಪಾಸಣೆ ನಡೆಸಬೇಕು ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಸೂಚನೆ ನೀಡಿದ್ದಾರೆ.
ಇದನ್ನೂ ಓದಿ: Corona Virus: ಕರ್ನಾಟಕದ ಗಡಿಜಿಲ್ಲೆಗಳಲ್ಲಿ ಕೊರೊನಾ ನಿಯಂತ್ರಣಕ್ಕೆ ಕಠಿಣ ಸೂತ್ರ; ಮುಖ್ಯಾಂಶಗಳು ಇಲ್ಲಿದೆ
Covid 19 Updates: ದೇಶದಲ್ಲಿ ಇಂದೂ 40 ಸಾವಿರ ದಾಟಿದ ಕೊರೊನಾ ಕೇಸ್; ಚೇತರಿಕೆ ಪ್ರಮಾಣ ಶೇ.97
(BBMP on controlling Coronavirus Covid19 spread in Bengaluru Karnataka Corona Virus)