ಬೆಂಗಳೂರಿನಲ್ಲಿ ಮೂರನೇ ಅಲೆ ಆತಂಕದ ಹಿನ್ನಲೆ ಕಡ್ಡಾಯ ವ್ಯಾಕ್ಸಿನ್ ಗೆ ಬಿಬಿಎಂಪಿ ಆದೇಶ

ಆಗಸ್ಟ್ ತಿಂಗಳಾಂತ್ಯದೊಳಗೆ ಲಸಿಕೆ ಪಡೆದಿರಬೇಕು. ಕನಿಷ್ಠ ಒಂದು ಡೋಸ್ ಲಸಿಕೆಯನ್ನಾದರೂ ಪಡೆದಿರಬೇಕು. ಸೆಪ್ಟೆಂಬರ್ 1ರಿಂದ ಬಿಬಿಎಂಪಿ ಮಾರ್ಷಲ್‌ಗಳು, ಆರೋಗ್ಯ ಇಲಾಖೆ ಅಧಿಕಾರಿಗಳು ಪ್ರತಿ ಹೋಟೆಲ್ ಹಾಗೂ ವಾಣಿಜ್ಯ ಕೇಂದ್ರಗಳಿಗೆ ಭೇಟಿ ನೀಡಿ ವ್ಯಾಕ್ಸಿನ್ ಪಡೆದಿರುವ ಬಗ್ಗೆ ತಪಾಸಣೆ ಮಾಡಬೇಕು.

ಬೆಂಗಳೂರಿನಲ್ಲಿ ಮೂರನೇ ಅಲೆ ಆತಂಕದ ಹಿನ್ನಲೆ ಕಡ್ಡಾಯ ವ್ಯಾಕ್ಸಿನ್ ಗೆ ಬಿಬಿಎಂಪಿ ಆದೇಶ
ಬಿಬಿಎಂಪಿ ಆಯುಕ್ತ ಗೌರವ್​ ಗುಪ್ತಾ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೊನಾ 3ನೇ ಅಲೆ(Corona 3rd Wave) ಆತಂಕ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲರೂ ಕಡ್ಡಾಯವಾಗಿ ಲಸಿಕೆ ಪಡೆಯುವಂತೆ ಬಿಬಿಎಂಪಿ(BBMP) ಆದೇಶ ಹೊರಡಿಸಿದೆ. ಬೆಂಗಳೂರಿನಲ್ಲಿರುವ ವಾಣಿಜ್ಯ ಚಟುವಟಿಕೆ, ಹೋಟೆಲ್‌ಗಳು, ರೆಸ್ಟೋರೆಂಟ್‌ನ ಸಿಬ್ಬಂದಿ ಕಡ್ಡಾಯವಾಗಿ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಬಿಬಿಎಂಪಿ ಆದೇಶಿಸಿದೆ.

ಆಗಸ್ಟ್ ತಿಂಗಳಾಂತ್ಯದೊಳಗೆ ಲಸಿಕೆ ಪಡೆದಿರಬೇಕು. ಕನಿಷ್ಠ ಒಂದು ಡೋಸ್ ಲಸಿಕೆಯನ್ನಾದರೂ ಪಡೆದಿರಬೇಕು. ಸೆಪ್ಟೆಂಬರ್ 1ರಿಂದ ಬಿಬಿಎಂಪಿ ಮಾರ್ಷಲ್‌ಗಳು, ಆರೋಗ್ಯ ಇಲಾಖೆ ಅಧಿಕಾರಿಗಳು ಪ್ರತಿ ಹೋಟೆಲ್ ಹಾಗೂ ವಾಣಿಜ್ಯ ಕೇಂದ್ರಗಳಿಗೆ ಭೇಟಿ ನೀಡಿ ವ್ಯಾಕ್ಸಿನ್ ಪಡೆದಿರುವ ಬಗ್ಗೆ ತಪಾಸಣೆ ಮಾಡಬೇಕು. ಕೊವಿಡ್ ಲಸಿಕೆ ಪಡೆಯದಿದ್ದರೆ ದಂಡ ಹಾಕಲು ಸೂಚನೆ ನೀಡಿದ್ದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ ಗುಪ್ತ ಆದೇಶ ಹೊರಡಿಸಿದ್ದಾರೆ.

ಇನ್ನು ಇದೇ ವೇಳೆ ಸಾರ್ವಜನಿಕವಾಗಿ ಗಣೇಶ ಹಬ್ಬ ಆಚರಿಸುವ ವಿಚಾರ ಸಂಬಂಧ ಮಾತನಾಡಿದ ಅವರು, ಸದ್ಯಕ್ಕೆ ಸಾರ್ವಜನಿಕವಾಗಿ ಗಣೇಶ ಆಚರಣೆಗೆ ಅವಕಾಶವಿಲ್ಲ. ಈ ಬಗ್ಗೆ ಸರ್ಕಾರ ಈಗ ಮತ್ತೊಮ್ಮೆ ನಿರ್ಧಾರ ಮಾಡಿದರೆ ಸರ್ಕಾರದ ನಿರ್ಧಾರದಂತೆ ನಾವು ನಡೆದುಕೊಳ್ಳಬೇಕಾಗಿದೆ. ಆದರೆ ಕೊರೊನಾ ಹರಡದಂತೆ ಎಚ್ಚರಿಕೆ ವಹಿಸಬೇಕಾಗಿದೆ ಎಂದು ಹೇಳಿದರು.

ಕರ್ನಾಟಕದಲ್ಲಿ ಬುಧವಾರ ಒಟ್ಟು 1224 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, 22 ಜನರು ಸಾವನ್ನಪ್ಪಿದ್ದಾರೆ. ಒಟ್ಟು 1668 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ರಾಜ್ಯದ ಪಾಸಿಟಿವಿಟಿ ಪ್ರಮಾಣ ಶೇ 0.62, ಸೋಂಕಿತರ ಸಾವಿನ ಪ್ರಮಾಣ ಶೇ 1.79 ಇದೆ. ಕರ್ನಾಟಕದಲ್ಲಿ ಈವರೆಗೆ 29,42,250 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 28,85,700 ಮಂದಿ ಚೇತರಿಸಿಕೊಂಡಿದ್ದಾರೆ. ಮೃತರ ಒಟ್ಟು ಸಂಖ್ಯೆ 37,206. ರಾಜ್ಯದಲ್ಲಿ ಪ್ರಸ್ತುತ 19,318 ಮಂದಿಯಲ್ಲಿ ಸೋಂಕು ಸಕ್ರಿಯವಾಗಿದೆ.

ಬೆಂಗಳೂರು ನಗರದಲ್ಲಿ ಬುಧವಾರ 309 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ಮೂವರು ಸಾವನ್ನಪ್ಪಿದ್ದಾರೆ. 657 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ನಗರದಲ್ಲಿ ಈವರೆಗೆ ಒಟ್ಟು 12,35,910 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 12,12,705 ಮಂದಿ ಚೇತರಿಸಿಕೊಂಡಿದ್ದಾರೆ. 7231 ಮಂದಿಯಲ್ಲಿ ಸೋಂಕು ಸಕ್ರಿಯವಾಗಿವೆ.

ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿಗೆ ಸೋಂಕು?
ಬೆಂಗಳೂರು ನಗರ 309, ದಕ್ಷಿಣ ಕನ್ನಡ 217, ಉಡುಪಿ 130, ಮೈಸೂರು 102, ಹಾಸನ 95, ತುಮಕೂರು 52, ಉತ್ತರ ಕನ್ನಡ 48, ಕೊಡಗು 41, ಶಿವಮೊಗ್ಗ 42, ಮಂಡ್ಯ 38, ಚಿಕ್ಕಮಗಳೂರು 28, ಬೆಳಗಾವಿ 19, ಕೋಲಾರ 17, ಬೆಂಗಳೂರು ಗ್ರಾಮಾಂತರ 13, ಧಾರವಾಡ 11, ಚಿತ್ರದುರ್ಗ, ಕಲಬುರಗಿ 10, ಯಾದಗಿರಿ 8, ಚಾಮರಾನಗರ 6, ಬಳ್ಳಾರಿ, ಹಾವೇರಿ, ವಿಜಯಪುರ, ದಾವಣಗೆರೆ 3, ಚಿಕ್ಕಬಳ್ಳಾಪುರ, ಕೊಪ್ಪಳ, ಬಾಗಲಕೋಟೆ 2, ರಾಯಚೂರು, ರಾಮನಗರ 1.

ಇದನ್ನೂ ಓದಿ: ಕೊರೊನಾ ಲಸಿಕೆಯಲ್ಲಿ ಭಾರತ ಹೊಸ ದಾಖಲೆ; ದೇಶದಲ್ಲಿ 59 ಕೋಟಿ ಡೋಸ್ ಲಸಿಕೆ ವಿತರಣೆ

Read Full Article

Click on your DTH Provider to Add TV9 Kannada