ಬಿಬಿಎಂಪಿ ವ್ಯಾಪ್ತಿಯಲ್ಲಿ ಎಲ್ಲೆಂದರಲ್ಲಿ ಕಟ್ಟಡ ತ್ಯಾಜ್ಯ ಎಸೆದರೆ 10 ಸಾವಿರ ದಂಡ

ಬಿಬಿಎಂಪಿ ವ್ಯಾಪ್ತಿಯ ಪ್ರದೇಶಗಳು, ನಗರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳ ಇಕ್ಕೆಲಗಳು ಹಾಗೂ ಹೊರವಲಯದಲ್ಲಿ ಅನಧಿಕೃತವಾಗಿ ಕಟ್ಟಡದ ಅವಶೇಷಗಳು ಮತ್ತು ಇತರೆ ಭಗ್ನಾವಶೇಷಗಳನ್ನು ಹಾಕುವಂತಿಲ್ಲ. ಹಾಕಿದರೆ ಅಂತವರ ಮೇಲೆ ದಂಡ ವಿಧಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಬಿಬಿಎಂಪಿ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಎಲ್ಲೆಂದರಲ್ಲಿ ಕಟ್ಟಡ ತ್ಯಾಜ್ಯ ಎಸೆದರೆ 10 ಸಾವಿರ ದಂಡ
ಬಿಬಿಎಂಪಿ
Follow us
TV9 Web
| Updated By: ಆಯೇಷಾ ಬಾನು

Updated on: Sep 20, 2023 | 11:42 AM

ಬೆಂಗಳೂರು, ಸೆ.20: ಬೇಕಾಬಿಟ್ಟಿಯಾಗಿ ಎಲ್ಲೆಂದರಲ್ಲಿ ಕಟ್ಟಡಗಳ ತ್ಯಾಜ್ಯ ಸೇರಿದಂತೆ ಇನ್ನಿತರೆ ವಸ್ತುಗಳನ್ನು ಎಸೆಯುವವರಿಗೆ ಬಿಬಿಎಂಪಿ ಖಡಲ್ ಎಚ್ಚರಿಕೆ ನೀಡಿದೆ. ಬಿಬಿಎಂಪಿ(BBMP) ವ್ಯಾಪ್ತಿಯ ಪ್ರದೇಶಗಳು, ನಗರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳ ಇಕ್ಕೆಲಗಳು ಹಾಗೂ ಹೊರವಲಯದಲ್ಲಿ ಅನಧಿಕೃತವಾಗಿ ಕಟ್ಟಡದ ಅವಶೇಷಗಳು ಮತ್ತು ಇತರೆ ಭಗ್ನಾವಶೇಷಗಳನ್ನು ಹಾಕುವಂತಿಲ್ಲ. ಹಾಕಿದರೆ ಅಂತವರ ಮೇಲೆ ದಂಡ ವಿಧಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಬಿಬಿಎಂಪಿ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ.

ಪ್ರತಿ ಟನ್ ಕಟ್ಟಡಗಳ ತ್ಯಾಜ್ಯಕ್ಕೆ ಹತ್ತು ಸಾವಿರ ರೂಪಾಯಿ ದಂಡ ವಿಧಿಸುವುದಾಗಿ ಬಿಬಿಎಂಪಿ ಕಟ್ಟಡ ಮಾಲೀಕರಿಗೆ ಎಚ್ಚರಿಕೆ ನೀಡಿದೆ. ಜಂಟಿ ನಿರ್ದೇಶಕರು (SWM) ಹೊರಡಿಸಿದ ಆದೇಶದಲ್ಲಿ, ಅನಾಮಧೇಯ ವ್ಯಕ್ತಿಗಳು, ಏಜೆನ್ಸಿಗಳು ಅನಧಿಕೃತವಾಗಿ ಕಟ್ಟಡಗಳ ಅವಶೇಷಗಳನ್ನು ಮತ್ತು ಇತರೆ ಭಗ್ನಾವಶೇಷದ ತ್ಯಾಜ್ಯವನ್ನು ನಗರದ ಹೊರವಲಯದಲ್ಲಿ ಎಸೆದು ಹೋಗುತ್ತಿದ್ದಾರೆ. ಇದರಿಂದ ನಗರದೊಳಗೆ ಪ್ರವೇಶಿಸುವ ಸಾರ್ವಜನಿಕರಲ್ಲಿ ಸ್ವಚ್ಛತೆ ಕುರಿತಂತೆ ನಕಾರಾತ್ಮಕ ಮನೋಭಾವ ಮೂಡುತ್ತಿದೆ. ಅಲ್ಲದೆ, ನಗರದ ಘನತೆಗೆ ಧಕ್ಕೆಯಾಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಬಿಬಿಎಂಪಿಯ ಘನತ್ಯಾಜ್ಯ ವಿಭಾಗದ ಜಂಟಿ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಗರದ ಹೊರವಲಯದಲ್ಲಿ ಕಟ್ಟಡ ಮತ್ತು ಭಗ್ನಾವಶೇಷ ತ್ಯಾಜ್ಯವನ್ನು ಅನಧಿಕೃತವಾಗಿ ವಿಲೇವಾರಿ ಮಾಡುವ ಎಲ್ಲ ವಾಹನಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಪಾಲಿಕೆಯ ಎಲ್ಲಾ ಸೂಪರವೈಸರ್‌, ಕಿರಿಯ ಆರೋಗ್ಯ ಪರಿವೀಕ್ಷಕರು, ವಾರ್ಡ್‌ ಮಾರ್ಷಲ್‌ಗಳು, ಮಾರ್ಷಲ್‌ ಸೂಪರ್‌ವೈಸರ್‌ಗಳು ತಪಾಸಣೆ ನಡೆಸಲು ಬಿಬಿಎಂಪಿ ಸೂಚಿಸಿದೆ. ನಿಯಮ ಉಲ್ಲಂಘಿಸಿದವರಿಗೆ ನಿಯಮಾವಳಿಗಳನ್ವಯ ದಂಡ ವಿಧಿಸಲಾಗುತ್ತದೆ. ಬಳಿಕ ವಾಹನಗಳನ್ನು ವಶಪಡಿಸಿಕೊಂಡು ಮುಂದಿನ ಕ್ರಮಕ್ಕಾಗಿ ಸಮೀಪದ ಪೊಲೀಸ್‌ ಠಾಣೆಯ ಸುಪರ್ದಿಗೆ ನೀಡಲು ಬಿಬಿಎಂಪಿ ಆದೇಶಿಸಿದೆ.

ಇದನ್ನೂ ಓದಿ: ಕಾವೇರಿ ನೀರು ಸಂಕಷ್ಟ: ದೆಹಲಿ ಸಭೆಯಲ್ಲಿ ಮಹತ್ವದ ತೀರ್ಮಾನ, ಸಿದ್ದರಾಮಯ್ಯ-ಡಿಕೆ ಶಿವಕುಮಾರ್ ಹೇಳಿದ್ದಿಷ್ಟು

ಇನ್ನು ಕಟ್ಟಡಗಳ ಮತ್ತು ಭಗ್ನಾವಶೇಷ ತ್ಯಾಜ್ಯವನ್ನು ವೈಜ್ಞಾನಿಕವಾಗಿ ಸಂಗ್ರಹಿಸಿ ಅದನ್ನು ಸಾಗಣೆ ಮಾಡುವುದು ಅಥವಾ ವಿಲೇವಾರಿ ಮಾಡುವ ಜವಾಬ್ದಾರಿಯು ಸಂಬಂಧಪಟ್ಟ ತ್ಯಾಜ್ಯ ಉತ್ಪಾದಕರದ್ದೇ ಆಗಿರುತ್ತದೆ. ಈ ತ್ಯಾಜ್ಯವನ್ನು ಪಾಲಿಕೆಯಿಂದ ಅಧಿಕೃತವಾಗಿ ಗುರುತಿಸಲಾಗಿರುವ ಸಂಸ್ಕರಣಾ ಘಟಕಗಳಿಗೆ ಸಾಗಿಸಿ ವಿಲೇವಾರಿ ಮಾಡಬೇಕು. ಕಟ್ಟಡ ತ್ಯಾಜ್ಯವನ್ನು ಅನಧಿಕೃತವಾಗಿ ಎಲ್ಲೆಂದರಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ, ರಸ್ತೆಗಳ ಬದಿಯ ಇಕ್ಕೆಲಗಳು, ಚರಂಡಿಗಳು, ಖಾಲಿ ನಿವೇಶನ ಅಥವಾ ಕ್ವಾರಿಗಳಲ್ಲಿ ಸುರಿಯುವುದು ತಪ್ಪು. ಕಟ್ಟಡ ಮತ್ತು ಭಗ್ನಾವಶೇಷ ತ್ಯಾಜ್ಯ ನಿರ್ವಹಣಾ ನಿಯಮಗಳು-2016 ರನ್ವಯ ನಿಷೇಧಿಸಲಾಗಿದೆ. ಇದು ದಂಡಾರ್ಹ ಮತ್ತು ಕಾನೂನಾತ್ಮಕವಾಗಿ ಅಪರಾಧವಾಗಿದೆ.

ತ್ಯಾಜ್ಯ ಸಂಗ್ರಹಣೆ ಮತ್ತು ಸಾಗಾಣೆ, ವಿಲೇವಾರಿದಾರರಿಗೂ ಸಹ ನಿಯಮಾವಳಿಗಳನ್ವಯ 10,000 ಪ್ರತಿ ಟನ್‌ಗೆ ದಂಡವನ್ನು ವಿಧಿಸಲಾಗುವುದು. ಅಷ್ಟೇ ಅಲ್ಲದೆ, ಪರಿಸರ (ಸಂರಕ್ಷಣೆ) ಕಾಯ್ದೆ 1986ರನ್ವಯ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಮುಖೇನ ಕಾನೂನಾತ್ಮಕವಾಗಿ ಕ್ರಮಕೈಗೊಳ್ಳಲಾಗುವುದು.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ