ಚೀನಾದಲ್ಲಿ ಮತ್ತೆ ಕೊರೊನಾ ಕಾಟ! ಬೆಂಗಳೂರಿನಲ್ಲಿ ಮಾಸ್ಕ್ ಕಡ್ಡಾಯಕ್ಕೆ ಬಿಬಿಎಂಪಿ ಚಿಂತನೆ
ಹೊರದೇಶಗಳಲ್ಲಿ ಕೋವಿಡ್ ಹೆಚ್ಚಳ ಹಿನ್ನೆಲೆ ನಗರ ವ್ಯಾಪ್ತಿಯಲ್ಲಿ ಮಾಸ್ಕ್ ಕಡ್ಡಾಯಗೊಳಿಸಲು ಬಿಬಿಎಂಪಿ ಮುಂದಾಗಿದೆ. ಕೋವಿಡ್ ಸಲಹಾ ಸಮಿತಿಗೆ ಈಗಾಗಲೇ ಈ ಬಗ್ಗೆ ಬಿಬಿಎಂಪಿ ಮನವಿ ಸಲ್ಲಿಸಿದೆ.
ಬೆಂಗಳೂರು: ವಿಶ್ವದಲ್ಲೇ ಅತಿ ಹೆಚ್ಚು ಜನ ಸಂಖ್ಯೆ ಹೊಂದಿರುವ ನೆರೆಯ ಚೀನಾ ದೇಶದಲ್ಲಿ ಇದೀಗ ಮತ್ತೆ ಕೊರೊನಾ ಸೋಂಕು(Coronavirus) ಉಲ್ಬಣಗೊಂಡಿದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯಾ(Mansukh Mandaviya) ನೇತೃತ್ವದಲ್ಲಿ ಸಭೆ ಕರೆಯಲಾಗಿದೆ. ದೇಶದಲ್ಲಿ ಕೊವಿಡ್ ಪರಿಸ್ಥಿತಿ ಬಗ್ಗೆ ಹಿರಿಯ ಅಧಿಕಾರಿಗಳು, ತಜ್ಞರ ಜೊತೆ ಕೇಂದ್ರ ಸಚಿವ ಮನ್ಸುಖ್ ಚರ್ಚೆ ನಡೆಸುತ್ತಿದ್ದಾರೆ. ಇದರ ಬೆನ್ನಲ್ಲೆ ಈಗ ಮಾಸ್ಕ್ ಕಡ್ಡಾಯಕ್ಕೆ ಬಿಬಿಎಂಪಿ(BBMP) ಚಿಂತನೆ ನಡೆಸಿದೆ.
ಹೊರದೇಶಗಳಲ್ಲಿ ಕೋವಿಡ್ ಹೆಚ್ಚಳ ಹಿನ್ನೆಲೆ ನಗರ ವ್ಯಾಪ್ತಿಯಲ್ಲಿ ಮಾಸ್ಕ್ ಕಡ್ಡಾಯಗೊಳಿಸಲು ಬಿಬಿಎಂಪಿ ಮುಂದಾಗಿದೆ. ಕೋವಿಡ್ ಸಲಹಾ ಸಮಿತಿಗೆ ಈಗಾಗಲೇ ಈ ಬಗ್ಗೆ ಬಿಬಿಎಂಪಿ ಮನವಿ ಸಲ್ಲಿಸಿದೆ. ಹೊಸ ವರ್ಷಕ್ಕೆ ಜನಸಂದಣಿ ಹೆಚ್ಚಾಗುವ ಸಾಧ್ಯತೆ ಇದೆ. ಹಾಗೂ ಹೊರದೇಶಗಳಿಂದ ನಗರಕ್ಕೆ ವಿದೇಶಿಗರು ಬರ್ತಾರೆ. ಈ ಸಂದರ್ಭದಲ್ಲಿ ಕೋವಿಡ್ ಹೆಚ್ಚಾಗುವ ಸಾಧ್ಯತೆಯೇ ಹೆಚ್ಚು. ಹೀಗಾಗಿ ಮೊದಲ ಹಂತರದಲ್ಲಿ ಯಾವುದೇ ಫೈನ್ ಇಲ್ಲದೇ ಮಾಸ್ಕ್ ಧರಿಸುವಂತೆ ಅರಿವು ಮೂಡಿಸಬೇಕು. ಮಾರ್ಕೆಟ್, ಮಾಲ್, ಥಿಯೇಟರ್, ಪಾರ್ಕ್, ಮೆಟ್ರೋ, ಬಸ್, ವಿಮಾನಯಾನ ಸೇರಿದಂತೆ ಬಹುತೇಕ ಜಾಗದಲ್ಲಿ ಮಾಸ್ಕ್ ಕಡ್ಡಾಯ ಮಾಡಬೇಕೆಂಬ ನಿಲುವನ್ನು ಬಿಬಿಎಂಪಿ ವ್ಯಕ್ತಪಡಿಸಿದೆ. ಹೀಗಾಗಿ ಮಾಸ್ಕ್ ಕಡ್ಡಾಯ ಆಗುವ ಸಾಧ್ಯತೆ ಇದೆ.
ಇದನ್ನೂ ಓದಿ: China Covid Case: ವಿದೇಶ ಪ್ರಯಾಣ ನಿರ್ಬಂಧ ಸೇರಿದಂತೆ ಕೇಂದ್ರ ತೆಗೆದುಕೊಳ್ಳಬಹುದಾದ ಸಂಭಾವ್ಯ ಕ್ರಮಗಳ ಬಗ್ಗೆ ಮಾಹಿತಿ
ದೇಶದ ಕೋವಿಡ್ 19 ಪರಿಸ್ಥಿತಿಯನ್ನು ಪರಿಶೀಲಿಸಲು ಸಭೆ ಕರೆದ ಕೇಂದ್ರ ಆರೋಗ್ಯ ಸಚಿವ; ಸಭೆಯ ಮುಖ್ಯಾಂಶಗಳು
ದೇಶದ ಕೋವಿಡ್ -19 (Covid 19) ಪರಿಸ್ಥಿತಿಯನ್ನು ಪರಿಶೀಲಿಸಲು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯ (Mansukh Mandaviya) ಬುಧವಾರ ದೆಹಲಿಯಲ್ಲಿ ತಜ್ಞರ ತಂಡದೊಂದಿಗೆ ಸಭೆ ನಡೆಸಿದ್ದಾರೆ. ಚೀನಾ, ದಕ್ಷಿಣ ಕೊರಿಯಾ, ಅಮೆರಿಕ, ಜಪಾನ್ ಮತ್ತು ಬ್ರೆಜಿಲ್‌ನಲ್ಲಿ ಕೋವಿಡ್ ಪ್ರಕರಣಗಳ ಹೆಚ್ಚಳವನ್ನು ಗಮನದಲ್ಲಿಟ್ಟುಕೊಂಡು ಮತ್ತೊಂದು ಆರೋಗ್ಯ ಬಿಕ್ಕಟ್ಟನ್ನು ತಪ್ಪಿಸಲು ದೇಶದ ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳಲು ಕೇಂದ್ರ ನಿರ್ಧರಿಸಿದೆ.ಈ ಸಭೆಯಲ್ಲಿ ಆರೋಗ್ಯ ಮತ್ತು ಆಯುಷ್ ಸಚಿವಾಲಯದ ಕಾರ್ಯದರ್ಶಿಗಳು, ಫಾರ್ಮಸ್ಯುಟಿಕಲ್ಸ್ ಮತ್ತು ಬಯೋಟೆಕ್ನಾಲಜಿ ವಿಭಾಗ, ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ನಿರ್ದೇಶಕ ರಾಜೀವ್ ಬೇಲ್, ನೀತಿ ಆಯೋಗ (ಆರೋಗ್ಯ) ಸದಸ್ಯ ವಿ.ಕೆ ಪೌಲ್ ಮತ್ತು ನ್ಯಾಷನಲ್ ಟೆಕ್ನಿಕಲ್ ಅಡ್ವಸರಿ ಗ್ರೂಪ್ ಆನ್ ಇಮ್ಯುನೈಜೇಷನ್ (NTAGI) ಅಧ್ಯಕ್ಷ ಎನ್.ಎಲ್ ಆರೋರಾ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದಾರೆ.
ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 1:24 pm, Wed, 21 December 22