ಕೊವಿಡ್ ಲಸಿಕೆ ಪಡೆಯುವುದಕ್ಕೆ ಜನರ ಹಿಂದೇಟು; ಮನೆ ಮನೆಗೆ ತೆರಳಿ ಲಸಿಕೆ ಹಾಕಲು ಮುಂದಾದ ಬಿಬಿಎಂಪಿ

| Updated By: ಆಯೇಷಾ ಬಾನು

Updated on: Dec 02, 2021 | 8:18 AM

ಕೊವಿಡ್ ಲಸಿಕೆ ಪಡೆಯುವುದಕ್ಕೆ ಜನರು ಹಿಂದೇಟು ಹಾಕುತ್ತಿರುವ ಹಿನ್ನೆಲೆಯಲ್ಲಿ ಜನರ ಬಳಿಯೇ ತೆರಳಿ ಲಸಿಕೆ ಹಾಕಲು ಬಿಬಿಎಂಪಿ ನಿರ್ಧರಿಸಿದೆ. ಕಡ್ಡಾಯವಾಗಿ 2 ಡೋಸ್ ಲಸಿಕೆ ಹಾಕಲು BBMP ಪ್ಲ್ಯಾನ್ ಮಾಡಿಕೊಂಡಿದೆ.

ಕೊವಿಡ್ ಲಸಿಕೆ ಪಡೆಯುವುದಕ್ಕೆ ಜನರ ಹಿಂದೇಟು; ಮನೆ ಮನೆಗೆ ತೆರಳಿ ಲಸಿಕೆ ಹಾಕಲು ಮುಂದಾದ ಬಿಬಿಎಂಪಿ
ಸಾಂಕೇತಿಕ ಚಿತ್ರ
Follow us on

ಬೆಂಗಳೂರು: ಮಹಾಮಾರಿ ಕೊರೊನಾ ತನ್ನ ರೂಪ ಬದಲಿಸಿ ಮತ್ತೆ ಬೇಟೆ ಶುರು ಮಾಡಿದೆ. ರಾಜ್ಯದಲ್ಲಿ ಆತಂಕ ಸೃಷ್ಟಿಸಿದೆ. ದಕ್ಷಿಣ ಆಫ್ರಿಕಾದ ಒಮಿಕ್ರಾನ್ ಇನ್ನಿಲ್ಲದ ಟೆನ್ಷನ್ ತಂದಿಟ್ಟಿದೆ. ಹೀಗಾಗೇ ರಾಜ್ಯದಲ್ಲಿ ಸರ್ಕಾರ ಈಗ ಕಠಿಣ ರೂಲ್ಸ್ ಜಾರಿಗೆ ತರೋಕೆ ಮುಂದಾಗಿದೆ. ಇಷ್ಟೇ ಅಲ್ಲ, ಬಿಬಿಎಂಪಿ ಮತ್ತು ಆರೋಗ್ಯ ಇಲಾಖೆಯೂ ಫುಲ್ ಅಲರ್ಟ್ ಆಗಿದೆ. ರೂಪಾಂತರಿ ವೈರಸ್ನನ್ನ ಪ್ರಾರಂಭದಲ್ಲಿ ಮಟ್ಟ ಹಾಕೋಕೆ ತಯಾರಿ ನಡೆಸ್ತಿದೆ. ಸದ್ಯ ಈಗ ಮನೆ ಮನೆಗೆ ತೆರಳಿ ಲಸಿಕೆ ಹಾಕಲು ಬಿಬಿಎಂಪಿ ಮುಂದಾಗಿದೆ.

ಕೊವಿಡ್ ಲಸಿಕೆ ಪಡೆಯುವುದಕ್ಕೆ ಜನರು ಹಿಂದೇಟು ಹಾಕುತ್ತಿರುವ ಹಿನ್ನೆಲೆಯಲ್ಲಿ ಜನರ ಬಳಿಯೇ ತೆರಳಿ ಲಸಿಕೆ ಹಾಕಲು ಬಿಬಿಎಂಪಿ ನಿರ್ಧರಿಸಿದೆ. ಕಡ್ಡಾಯವಾಗಿ 2 ಡೋಸ್ ಲಸಿಕೆ ಹಾಕಲು BBMP ಪ್ಲ್ಯಾನ್ ಮಾಡಿಕೊಂಡಿದೆ. ಬೆಂಗಳೂರಿನ ಪ್ರತಿ ಗಲ್ಲಿ, ಮನೆಗೆ ಬಿಬಿಎಂಪಿ ಸಿಬ್ಬಂದಿ ಭೇಟಿ ನೀಡಿ ಲಸಿಕೆ ಹಾಕಿಸಿಕೊಳ್ಳುವಂತೆ ಮನವಿ ಮಾಡಲಿದ್ದಾರೆ. ಇದೇ ವೇಳೆ BBMP ಆರೋಗ್ಯ ಸಿಬ್ಬಂದಿ ಲಸಿಕೆ ನೀಡಲಿದ್ದಾರೆ. ಬೆಂಗಳೂರಲ್ಲಿ 80 ಲಕ್ಷ ಜನರಿಗೆ ಫಸ್ಟ್ ಡೋಸ್ ಲಸಿಕೆ ನೀಡಲಾಗಿದೆ. ಈ ಪೈಕಿ 55.70 ಲಕ್ಷ ಜನರು 2ನೇ ಡೋಸ್ ಪಡೆದಿದ್ದಾರೆ. ಸುಮಾರು 20 ಲಕ್ಷ ಜನರು 2ನೇ ಡೋಸ್ ಲಸಿಕೆ ಪಡೆದಿಲ್ಲ. ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯಲು ಜನರು ಹಿಂದೇಟು ಹಾಕುತ್ತಿರುವುದರಿಂದ ಬಿಬಿಎಂಪಿ ಮನೆ ಮನೆಗೆ ತೆರಳಿ ಲಸಿಕೆ ನೀಡುತ್ತಿದೆ.

ಹೊಸ ತಳಿ ಪತ್ತೆಗೆ ಸುತ್ತೋಲೆ
ರಾಜ್ಯದ ಕ್ಲಸ್ಟ್ರರ್ ಮಟ್ಟದಲ್ಲಿ ಕೊರೊನ?ಆ ಸೋಂಕು ಪತ್ತೆಯಾದ್ರೆ ಸ್ಯಾಂಪಲ್ಸ್ನ್ನ ಜಿನೋಮ್ ಸೀಕ್ವೆನ್ಸಿಂಗ್ ಲ್ಯಾಬ್ಗೆ ಸ್ಯಾಂಪಲ್ಸ್ ಕಳುಹಿಸಬೇಕು. ಅದು ಕೂಡ INSACOG ಪ್ರಮಾಣಿತ ಲ್ಯಾಬ್ಗಳಿಗೆ ಕಡ್ಡಾಯವಾಗಿ ಸ್ಯಾಂಪಲ್ಸ್ ಕಳುಹಿಸಬೇಕು. ಅಂದ್ರೆ, ಜಿಲ್ಲಾ ಕೇಂದ್ರಗಳಲ್ಲಿ ಗುರುತಿಸಿರುವ ಲ್ಯಾಬ್ಗಳಿಗೆ ಕಳುಹಿಸಬೇಕು. ಆದ್ರೆ, ಯಾವುದೇ ಕಾರಣಕ್ಕೂ ಖಾಸಗಿ ಪ್ರಯೋಗಾಲಯಗಳಿಗೆ ಸ್ಯಾಂಪಲ್ಸ್ ಕಳಿಸುವಂತಿಲ್ಲ.

ಬಿಬಿಎಂಪಿಗೆ ಸಲಹೆಗಳನ್ನು ನೀಡಿದ ತಜ್ಞರ ಸಮಿತಿ
ಮೂಲೆ ಸೇರಿದ್ದ ಕೊರೊನಾ ಒಂದ್ಕಡೆ ನಿಧಾನವಾಗಿ ಸವಾರಿ ಶುರುಮಾಡಿದೆ. ಮತ್ತೊಂದ್ಕಡೆ ಒಮಿಕ್ರಾನ್ ಆಂತಕ ಹೆಚ್ಚಾಗುತ್ತಿದೆ. ರೂಪಾಂತರಿ ತೆಡಗಟ್ಟುವುದು ಹೇಗೆ ಅನ್ನೋ ಪ್ರಶ್ನೆ ಎದ್ದಿದೆ. ಹೀಗಾಗಿ ಎಚ್ಚೆತ್ತುಕೊಂಡಿರೋ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ನಿನ್ನೆ ಕೊವಿಡ್ ತಜ್ಞರ ಸಮಿತಿ ಜೊತೆ ಸಭೆ ನಡೆಸಿದ್ರು. ಸಭೆಯಲ್ಲಿ ತಜ್ಞರು ಕೆಲ ಮಹತ್ವದ ಸಲಹೆಗಳನ್ನ ನೀಡಿದ್ದಾರೆ. ಆ ಎಲ್ಲಾ ಸಲಹೆಗಳನ್ನ ಜಾರಿಗೆ ತರಲು ವಿಶೇಷ ಆಯುಕ್ತರಿಗೆ ಬಿಬಿಎಂಪಿ ಆಯುಕ್ತ ಗುಪ್ತಾ ಸೂಚನೆ ನೀಡಿದ್ದಾರೆ.

ರೂಪಾಂತರಿ ತಡೆಗೆ ತಜ್ಞರ ಸಲಹೆ
ಹೊಸ ತಳಿಗೆ ಬ್ರೇಕ್ ಕೊಡ್ಬೇಕು ಅಂದ್ರೆ ಮೊದಲು ವಿದೇಶದಿಂದ ಬರುವ ಪ್ರಯಾಣಿಕರಿಗೆ ಕೊವಿಡ್ ಟೆಸ್ಟ್ ಮಾಡ್ಬೇಕು. ಬಳಿಕ ಪಾಸಿಟಿವ್ ಬಂದ್ರೆ ಕ್ವಾರಂಟೈನ್ ಮಾಡಿ, ಸ್ವಾಂಪಲ್ಸ್ನ್ನು ಜಿನೋಮ್ ಸೀಕ್ವೆನ್ಸಿಂಗ್ಗೆ ಕಳಿಸಬೇಕು. ಇದ್ರ ಜೊತೆಗೆ ನಗರದ ಕಂಟೇನ್ಮೆಂಟ್ ಜೋನ್ಗಳ ಮೇಲೆ ನಿಗಾವಹಿಸಬೇಕು.. ಅಲ್ದೆ, ಸಭೆ-ಸಮಾರಂಭ, ಪಾರ್ಟಿ, ಕಾರ್ಯಕ್ರಮಕ್ಕೆ ರೂಲ್ಸ್ ಮಾಡ್ಬೇಕು. ಇಷ್ಟೇ ಅಲ್ಲ, ಅಗತ್ಯವಾದ್ರೆ ಕೊವಿಡ್ ಟೆಸ್ಟಿಂಗ್ ಪ್ರಮಾಣವನ್ನ ಹೆಚ್ಚಿಸ್ಬೇಕು.. ಇನ್ನು, ಪಾರ್ಕ್, ಚಿತ್ರಮಂದಿರ, ಮಾಲ್ ಪ್ರವೇಶಕ್ಕೆ ಲಸಿಕೆ ಕಡ್ಡಾಯಗೊಳಿಸ್ಬೇಕು. ಅದು ಕೂಡ ಎರಡೂ ಡೋಸ್ ಲಸಿಕೆ ಪಡೆದವರಿಗಷ್ಟೇ ಪ್ರವೇಶ ಮಾಲ್ ಪ್ರವೇಶಕ್ಕೆ ಅವಕಾಶ ಕೊಡ್ಬೇಕು. ಮುಖ್ಯವಾಗಿ ಶಾಲೆಗಳಲ್ಲಿ ತಿಂಗಳಿಗೊಮ್ಮೆ ಶೇ.10ರಷ್ಟು ಮಕ್ಕಳಿಗೆ ಪರೀಕ್ಷೆ ಮಾಡ್ಬೇಕು ಅಂತಾ ತಜ್ಞರು ಸಲಹೆ ಕೊಟ್ಟಿದ್ದಾರೆ.

ಇದನ್ನೂ ಓದಿ: Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 322 ಜನರಿಗೆ ಕೊರೊನಾ ದೃಢ; 2 ಮಂದಿ ಸಾವು