ಬಿಬಿಎಂಪಿ ವ್ಯಾಪ್ತಿಯ ಅಪಾರ್ಟ್​ಮೆಂಟ್​ಗಳ ಆವರಣದಲ್ಲಿ ಕೊವಿಡ್ ಕೇರ್ ಸೆಂಟರ್ ತೆರೆಯಲು ಚಿಂತನೆ

ಬಿಬಿಎಂಪಿ ಪ್ರತಿ ವಲಯದಲ್ಲಿ ತುರ್ತಾಗಿ 500 ಐಸಿಯು ಬೆಡ್ ಗಳ ವ್ಯವಸ್ಥೆಗೆ ಪ್ರತ್ಯೇಕ ನೋಡಲ್ ಅಧಿಕಾರಿಯ ನೇಮಕ ಮಾಡಲಾಗಿದೆ. 

ಬಿಬಿಎಂಪಿ ವ್ಯಾಪ್ತಿಯ ಅಪಾರ್ಟ್​ಮೆಂಟ್​ಗಳ ಆವರಣದಲ್ಲಿ ಕೊವಿಡ್ ಕೇರ್ ಸೆಂಟರ್ ತೆರೆಯಲು ಚಿಂತನೆ
ಗೌರವ್ ಗುಪ್ತಾ
Follow us
guruganesh bhat
|

Updated on: Apr 30, 2021 | 10:11 PM

ಬೆಂಗಳೂರು: ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಕಾರಣ ಬಿಬಿಎಂಪಿ ಹೊಸ ಯೋಜನೆ ರೂಪಿಸಿದ್ದು, ಅಪಾರ್ಟ್​ಮೆಂಟ್​​ ಮಾಲೀಕರ ಅಸೋಸಿಯೇಷನ್​, ಕಂಪನಿಗಳು ಹಾಗೂ ಎನ್​ಜಿಒಗಳು ಸ್ವಂತ ಆವರಣದಲ್ಲಿ ಕೊವಿಡ್ ಕೇರ್ ಸೆಂಟರ್ ಸ್ಥಾಪಿಸಲು ಆಸಕ್ತಿ ವಹಿಸಿವೆ. ಹೀಗಾಗಿ ಈ ಕುರಿತು ಅನುಮೋದನೆ ನೀಡುವಂತೆ ಸೂಚಿಸಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್​​​​ ಗುಪ್ತಾ ತಿಳಿಸಿದರು.

ಬೆಡ್​ ವ್ಯವಸ್ಥೆಗೆ ಪ್ರತ್ಯೇಕ ನೋಡಲ್ ಅಧಿಕಾರಿಯಾಗಿ ಪಿ.ಎಸ್.ಹರ್ಷ ನೇಮಕವಾಗಿದ್ದಾರೆ.  ಐಪಿಎಸ್​ ಅಧಿಕಾರಿ ಡಾ.ಪಿ.ಎಸ್.ಹರ್ಷ ನೇಮಿಸಿ ಆದೇಶ ಹೊರಡಿಸಲಾಗಿದ್ದು, ಪ್ರಸ್ತುತ ವಾರ್ತಾ ಇಲಾಖೆ ಆಯುಕ್ತರಾಗಿ ಡಾ.ಹರ್ಷ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಬಿಎಂಪಿ ಪ್ರತಿ ವಲಯದಲ್ಲಿ ತುರ್ತಾಗಿ 500 ಐಸಿಯು ಬೆಡ್ ಗಳ ವ್ಯವಸ್ಥೆಗೆ ಪ್ರತ್ಯೇಕ ನೋಡಲ್ ಅಧಿಕಾರಿಯ ನೇಮಕ ಮಾಡಲಾಗಿದೆ.

ಕರ್ನಾಟಕದಲ್ಲಿ ಇಂದು ಒಂದೇ ದಿನ 48,296 ಜನರಿಗೆ ಕೊರೊನಾ ಸೋಂಕು ಪತ್ತೆಯಾಗಿದೆ. ರಾಜ್ಯದಲ್ಲಿ ಇಂದೊಂದೇ ಒಂದೇ ದಿನ ಕೊರೊನಾಗೆ 217 ಜನರು ಸಾವಿಗೀಡಾಗಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಇಂದು ಒಂದೇ ದಿನ 26,756 ಜನರಿಗೆ ಸೋಂಕು ಕಾಣಿಸಿಕೊಂಡಿದೆ. ಬೆಂಗಳೂರಲ್ಲಿ ಇಂದು ಕೊರೊನಾ ಸೋಂಕಿಗೆ 93 ಜನರ ಬಲಿಯಾಗಿದ್ದಾರೆ.

ಇಂದಿನ ಸೋಂಕಿತರ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಒಟ್ಟಾರೆ ಸಂಖ್ಯೆ 15,23,142ಕ್ಕೇರಿಕೆಯಾಗಿದೆ. ಸೋಂಕಿತರ ಪೈಕಿ 11,24,909 ಜನ ಈವರೆಗೆ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇಂದು ಕೊರೊನಾ ಸೋಂಕಿನಿಂದ ಮೃತಪಟ್ಟ 217 ಜನರನ್ನೂ ಸೇರಿ ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 15,523 ಜನರ ಸಾವನ್ನಪ್ಪಿದ್ದಾರೆ. ಸದ್ಯ 38,2690 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಇದನ್ನೂ ಓದಿ: Karnataka Covid Update: ರಾಜ್ಯದಲ್ಲಿ ಇಂದು ಒಂದೇ ದಿನ 48,296 ಸೋಂಕಿತರು ಪತ್ತೆ, 217 ಜನರ ಸಾವು

Covid Helpline Numbers: ಆಕ್ಸಿಜನ್​, ರೆಮ್​ಡೆಸಿವರ್​ ಬೇಕಾದಲ್ಲಿ ಈ ಸಂಖ್ಯೆಗಳನ್ನು ಸಂಪರ್ಕಿಸಿ

(BBMP plans to start covid care centres in apartments in Bengaluru NGO and company places)