BBMP Election: ಅಂತಿಮ ಮತದಾರರ ಪಟ್ಟಿ ಪ್ರಕಟ, ಒಟ್ಟು 79,19,563 ವೋಟರ್ಸ್

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಚುನಾವಣೆಗೆ ಚುನಾವಣೆ ಆಯೋಗ ಸಕಲ ಸಿದ್ಧತೆ ನಡೆಸಿದ್ದು, ಇದೀಗ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಿದೆ.

BBMP Election: ಅಂತಿಮ ಮತದಾರರ ಪಟ್ಟಿ ಪ್ರಕಟ, ಒಟ್ಟು 79,19,563 ವೋಟರ್ಸ್
ಬಿಬಿಎಂಪಿ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Sep 28, 2022 | 7:07 PM

ಬೆಂಗಳೂರು: ಬಹುನಿರೀಕ್ಷಿತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(BBMP) ಚುನಾವಣೆಗಾಗಿ ಅಂತಿಮ ಮತದಾರರ ಪಟ್ಟಿ ಪ್ರಕಟವಾಗಿದೆ. ಬಿಬಿಎಂಪಿ ಚುನಾವಣೆ ಮೀಸಲಾತಿ ಪ್ರಕರಣಗಳು ಹೈಕೋರ್ಟ್​ನಲ್ಲಿ ವಿಚಾರಣೆ ನಡೆಯುತ್ತಿದೆ. ಇದರ ಮಧ್ಯೆಯೇ ಇಂದು(ಸೆಪ್ಟೆಂಬರ್ 28) ಚುನಾವಣೆ ಆಯೋಗ ಮತದಾರರ ಅಂತಿಮ ಪಟ್ಟಿಯನ್ನು ಪ್ರಕಟಿಸಿದೆ.

ಚುನಾವಣೆ ಆಯೋಗದ ಪ್ರಕಟಿಸಿದ ಮತದಾರರ ಪಟ್ಟಿ ಪ್ರಕಾರ 243 ವಾರ್ಡ್​ಗಳಲ್ಲಿ ಒಟ್ಟು 79,19,563 ಮತದಾರರು ಇದ್ದಾರೆ. ಈ ಪೈಕಿ 41,14,383 ಪುರುಷರು, 38,03,747 ಮಹಿಳೆಯರು ಹಾಗೂ 1433 ಇತರೆ ಮತದಾರರು ಇದ್ದಾರೆ.

ಅಂತಿಮ ಮತದಾರರ ಪಟ್ಟಿಯನ್ನು ಬಿಬಿಎಂಪಿ ವೆಬ್​ಸೈಟ್ bbmp.gov.in ನಲ್ಲಿ ಅಪ್ಲೋಡ್ ಮಾಡಲಾಗಿದ್ದು, ಹೊಸದಾಗಿ ಮತದಾರರಾಗಿ ನೊಂದಾಯಿಸಿಕೊಳ್ಳಲು ಮೊಬೈಲ್ ಪ್ ಆದ Voter Helpline App ಮತ್ತು NVSP Portal ವೆಬ್‌ಸೈಟ್ ಮುಖೇನಾ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

 ಇದನ್ನೂ ಓದಿ: BBMP Election: ಬಗೆಹರಿಯದ ಮೀಸಲಾತಿ ಗೊಂದಲ, ಸರ್ಕಾರಕ್ಕೆ ಮಹತ್ವದ ವರದಿ ಕೇಳಿದ ಕೋರ್ಟ್

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವಾರ್ಡ್​ಗಳ ಪುನರ್​ ವಿಂಗಡಣೆ ಕರಡು ಪ್ರಕಟವಾಗಿದೆ. 2011ರ ಜನಸಂಖ್ಯೆ ಆಧಾರದ ಮೇಲೆ ಎಲ್ಲ 243 ವಾರ್ಡ್​ಗಳಿಗೂ ಮತದಾರರನ್ನು ವಿಂಗಡಣೆ ಮಾಡಲಾಗಿದೆ. ಕೆಲ ವಾರ್ಡ್​ಗಳ ಮತದಾರರ ಸಂಖ್ಯೆಯಲ್ಲಿ ಹೆಚ್ಚು ಕಡಿಮೆ ಆಗಿರಬಹುದು. ಕೆಲ ವಿಧಾನಸಭಾ ಕ್ಷೇತ್ರದಲ್ಲಿ ವಾರ್ಡ್​ಗಳ ಸಂಖ್ಯೆ ಹೆಚ್ಚಾಗಿದ್ದರೆ, ಹಲವೆಡೆ ಕಡಿಮೆಯಾಗಿದೆ.

2011ರ ಜನಗಣತಿ ಆಧರಿಸಿ 198 ವಾರ್ಡ್‌ಗಳ ಸಂಖ್ಯೆಯನ್ನು 243ಕ್ಕೆ ಹೆಚ್ಚಳ ಮಾಡಿದೆ. ಇದಕ್ಕೆ ಅನೇಕ ಆಕ್ಷೇಪಗಳು ವ್ಯಕ್ತವಾಗಿದ್ದವು, ಆದರೂ ರಾಜ್ಯ ಸರಕಾರವು ಬಿಬಿಎಂಪಿ ವಾರ್ಡ್‌ಗಳ ಮರು ವಿಂಗಡಣೆಯನ್ನು ಅಂತಿಮಗೊಳಿಸಿ ಈಗಾಗಲೇ ವಿರೋಧದ ನಡುವೆ ಅಧಿಸೂಚನೆ ಹೊರಡಿಸಿದೆ.

ವಾರ್ಡ್‌ ಮರು ವಿಂಗಡಣೆಯ ಕರಡು ಪಟ್ಟಿಗೆ ಸುಮಾರು 2,500 ಆಕ್ಷೇಪಣೆಗಳು ಸಲ್ಲಿಕೆಯಾಗಿದ್ದವು. ಈ ಆಕ್ಷೇಪಣೆ ಮತ್ತು ಸಲಹೆಗಳನ್ನು ಪರಿಶೀಲಿಸಿ ಸೂಕ್ತ ಶಿಫಾರಸು ಮಾಡುವ ಸಲುವಾಗಿ ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಪರಿಶೀಲನಾ ಸಮಿತಿಯನ್ನು ರಚಿಸಲಾಗಿತ್ತು. ಅದರಂತೆ ಜುಲೈ 11 ಮತ್ತು 12 ರಂದು ನಡೆದ ಸಮಿತಿ ಸಭೆಯಲ್ಲಿ ಕೂಲಂಕಷವಾಗಿ ಪರಿಶೀಲಿಸಿ, ವಾರ್ಡ್‌ಗಳ ಮರು ವಿಂಗಡಣಾ ಕರಡು ಅಧಿ ಸೂಚನೆಗೆ ಕೆಲವೊಂದು ಬದಲಾವಣೆಗಳನ್ನು ಸೂಚಿಸಿ ಶಿಫಾರಸು ಮಾಡಿತ್ತು.

ಜನಸಂಖ್ಯೆಯ ಏಕರೂಪತೆಯನ್ನು ಸಾಧಿಸುವ ಸಲುವಾಗಿ 243 ವಾರ್ಡುಗಳ ಸೀಮಾರೇಖೆಯನ್ನು ಗುರುತಿಸುವ ಕಾರ್ಯ ನಿರ್ವಹಿಸಲು ಕರ್ನಾಟಕ ಸರ್ಕಾರವು ಪುನರ್ವಿಂಗಡಣಾ ಸಮಿತಿಯನ್ನು ರಚಿಸಿತ್ತು. ಈ ಸಮಿತಿಯು BBMP Act 2020 (Karnataka ACT NO. 53 OF 2020 The Bruhat Bengaluru Mahanagara Palike ACT, 2020 FT PAR: G.O. No UDD 4 MLR 2014 dt.215.02.2014) ರಲ್ಲಿನ ಮಾನದಂಡಗಳನ್ನು ಅನುಸರಿಸಿ, 2011ರ ಜನಸಂಖ್ಯೆಯನ್ನು ಆಧಾರವಾಗಿಟ್ಟುಕೊಂಡು ಬಿಬಿಎಂಪಿ ವ್ಯಾಪ್ತಿಯಲ್ಲಿ 243 ವಾರ್ಡುಗಳ ವಿಂಗಡಣೆ ಮಾಡಿ ಪ್ರತೀ ವಾರ್ಡಿನ ಗಡಿಗಳನ್ನು ಗುರುತಿಸಿದೆ.

Published On - 6:59 pm, Wed, 28 September 22

ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ