BBMP Property Tax: ಬಿಬಿಎಂಪಿ ಆಸ್ತಿ ತೆರಿಗೆ ಮೇಲಿನ ಶೇ 5ರ ರಿಯಾಯಿತಿ ಜೂನ್​ 30ರ ವರೆಗೆ ವಿಸ್ತರಣೆ

ಆಸ್ತಿ ತೆರಿಗೆ ಮೇಲಿನ ಶೇ 5ರ ರಿಯಾಯಿತಿಯನ್ನು ವಿಸ್ತರಣೆ ಮಾಡಬೇಕು ಎಂದು ಕಾರ್ಪೊರೇಟರ್‌ಗಳು ಮನವಿ ಮಾಡಿದ್ದರು. ಇದರ ಆಧಾರದಲ್ಲಿ ಬಿಬಿಎಂಪಿ ಪ್ರಸ್ತಾವನೆ ಸಿದ್ಧಪಡಿಸಿ, ರಾಜ್ಯ ಸರ್ಕಾರಕ್ಕೆ ಕಳುಹಿಸಿಕೊಟ್ಟಿತ್ತು.

BBMP Property Tax: ಬಿಬಿಎಂಪಿ ಆಸ್ತಿ ತೆರಿಗೆ ಮೇಲಿನ ಶೇ 5ರ ರಿಯಾಯಿತಿ ಜೂನ್​ 30ರ ವರೆಗೆ ವಿಸ್ತರಣೆ
ಬಿಬಿಎಂಪಿ

Updated on: Jun 01, 2023 | 8:05 PM

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (BBMP) ಆಸ್ತಿ ತೆರಿಗೆ ಮೇಲಿನ ಶೇ 5ರ ರಿಯಾಯಿತಿಯನ್ನು ಜೂನ್ 30ರ ವರೆಗೆ ವಿಸ್ತರಣೆ ಮಾಡಲಾಗಿದೆ. ಈ ರಿಯಾಯಿತಿಯು ಏಪ್ರಿಲ್ ಅಂತ್ಯಕ್ಕೆ ಮುಕ್ತಾಯಗೊಂಡಿತ್ತು. ಬೃಹತ್‌ ಬೆ೦ಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಸಾರ್ವಜನಿಕರ ಅನುಕೂಲಕ್ಕಾಗಿ ಹಾಗೂ ಪಾಲಿಕೆಯ ಆರ್ಥಿಕ ಹಿತದೃಷ್ಟಿಯಿ೦ದ, 2023-24ನೇ ಸಾಲಿನ ಆಸ್ತಿ ತೆರಿಗೆಯನ್ನು ಪೂರ್ಣವಾಗಿ ಪಾವತಿಸುವ ತೆರಿಗೆದಾರರಿಗೆ ಶೇಕಡ 5 ರಷ್ಟು ರಿಯಾಯಿತಿ ಅವಧಿಯನ್ನು ಜೂನ್ 30ರ ವರೆಗೆ ವಿಸ್ತರಿಸಿ ಆದೇಶಿಸಲಾಗಿದೆ ಎಂದು ಸರ್ಕಾರದ ಅಧಿಸೂಚನೆ ತಿಳಿಸಿದೆ.

ಆಸ್ತಿ ತೆರಿಗೆ ಮೇಲಿನ ಶೇ 5ರ ರಿಯಾಯಿತಿಯನ್ನು ವಿಸ್ತರಣೆ ಮಾಡಬೇಕು ಎಂದು ಕಾರ್ಪೊರೇಟರ್‌ಗಳು ಮನವಿ ಮಾಡಿದ್ದರು. ಇದರ ಆಧಾರದಲ್ಲಿ ಬಿಬಿಎಂಪಿ ಪ್ರಸ್ತಾವನೆ ಸಿದ್ಧಪಡಿಸಿ, ರಾಜ್ಯ ಸರ್ಕಾರಕ್ಕೆ ಕಳುಹಿಸಿಕೊಟ್ಟಿತ್ತು. ಸಾಮಾನ್ಯವಾಗಿ, ಪ್ರತಿ ವರ್ಷ ರಿಯಾಯಿತಿಯನ್ನು ಮೇ ಅಂತ್ಯದವರೆಗೆ ಒಂದು ತಿಂಗಳವರೆಗೆ ವಿಸ್ತರಿಸಲಾಗುತ್ತದೆ. ಆದರೆ ಈ ವರ್ಷ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಅದನ್ನು ವಿಸ್ತರಿಸಿರಲಿಲ್ಲ.

ಆಸ್ತಿ ತೆರಿಗೆ ಮೇಲಿನ ಶೇ 5ರ ರಿಯಾಯಿತಿಯನ್ನು ವಿಸ್ತರಣೆ ಮಾಡುವ ಸಾಧ್ಯತೆ ಇದೆ. ಹೀಗಾಗಿ ಮೇ ತಿಂಗಳಲ್ಲಿ ಆಸ್ತಿ ತೆರಿಗೆ ಪಾವತಿಸಿದವರು ಮುಂದಿನ ಹಣಕಾಸು ವರ್ಷದಲ್ಲಿ ಪಾವತಿ ಮಾಡುವಾಗ ಶೇಕಡಾ 5 ರಷ್ಟು ರಿಯಾಯಿತಿಯನ್ನು ಪಡೆದು ಸರಿಹೊಂದಿಸಬಹುದಾಗಿದೆ ಎಂದು ಬಿಬಿಎಂಪಿ ಮೂಲಗಳು ಮೇ ಮಧ್ಯಭಾಗದಲ್ಲಿ ತಿಳಿಸಿದ್ದವು.

ಇದನ್ನೂ ಓದಿ: ಗ್ಯಾರಂಟಿಯಿಂದ ಗುತ್ತಿಗೆದಾರಿಗೆ ಆತಂಕ: ಬಾಕಿ ಹಣ ಪಾವತಿಸುವಂತೆ ಬಿಬಿಎಂಪಿಗೆ ಡೆಡ್ ಲೈನ್

ಬಿಬಿಎಂಪಿಯು 2023-24ರ ಬಜೆಟ್‌ನಲ್ಲಿ ಆಸ್ತಿ ತೆರಿಗೆಯಿಂದ ಇತರ ಸೆಸ್‌ಗಳು ಸೇರಿದಂತೆ 4,690 ಕೋಟಿ ರೂ. ಸಂಗ್ರಹಿಸುವ ಗುರಿ ಹೊಂದಿದೆ. ಕಳೆದ ವರ್ಷ ಪಾಲಿಕೆಯು 3,332 ಕೋಟಿ ರೂ.ಗೂ ಅಧಿಕ ಮೊತ್ತವನ್ನು ಸಂಗ್ರಹಿಸಿದ್ದು, ಮಹದೇವಪುರ ಮತ್ತು ಬಿಬಿಎಂಪಿಯ ಪೂರ್ವ ವಲಯಗಳಿಂದ ಗಮನಾರ್ಹ ಮೊತ್ತ ಸಂಗ್ರಹವಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
Loading...
Unable to load recommendations.
Follow Us