BBMP Property Tax: ಬಿಬಿಎಂಪಿ ಆಸ್ತಿ ತೆರಿಗೆ ಮೇಲಿನ ಶೇ 5ರ ರಿಯಾಯಿತಿ ಜೂನ್​ ಅಂತ್ಯದ ವರೆಗೆ ವಿಸ್ತರಣೆ ಸಾಧ್ಯತೆ

|

Updated on: May 18, 2023 | 8:30 PM

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆಸ್ತಿ ತೆರಿಗೆ ಮೇಲಿನ ಶೇ 5ರ ರಿಯಾಯಿತಿ ಏಪ್ರಿಲ್ ಅಂತ್ಯಕ್ಕೆ ಮುಕ್ತಾಯಗೊಂಡಿದ್ದು, ಅದನ್ನು ಜೂನ್ ಕೊನೆಯ ವರೆಗೆ ವಿಸ್ತರಣೆ ಮಾಡಬೇಕು ಎಂದು ಕಾರ್ಪೊರೇಟರ್‌ಗಳು ಮನವಿ ಮಾಡಿದ್ದಾರೆ.

BBMP Property Tax: ಬಿಬಿಎಂಪಿ ಆಸ್ತಿ ತೆರಿಗೆ ಮೇಲಿನ ಶೇ 5ರ ರಿಯಾಯಿತಿ ಜೂನ್​ ಅಂತ್ಯದ ವರೆಗೆ ವಿಸ್ತರಣೆ ಸಾಧ್ಯತೆ
ಬಿಬಿಎಂಪಿ
Follow us on

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಆಸ್ತಿ ತೆರಿಗೆ ಮೇಲಿನ ಶೇ 5ರ ರಿಯಾಯಿತಿ ಏಪ್ರಿಲ್ ಅಂತ್ಯಕ್ಕೆ ಮುಕ್ತಾಯಗೊಂಡಿದ್ದು, ಅದನ್ನು ಜೂನ್ ಕೊನೆಯ ವರೆಗೆ ವಿಸ್ತರಣೆ ಮಾಡಬೇಕು ಎಂದು ಕಾರ್ಪೊರೇಟರ್‌ಗಳು ಮನವಿ ಮಾಡಿದ್ದಾರೆ. ಇದರ ಆಧಾರದಲ್ಲಿ ಬಿಬಿಎಂಪಿ ಪ್ರಸ್ತಾವನೆ ಸಿದ್ಧಪಡಿಸಲು ಮುಂದಾಗಿದ್ದು, ರಾಜ್ಯ ಸರ್ಕಾರಕ್ಕೆ ಕಳುಹಿಸಿಕೊಡುವ ನಿರೀಕ್ಷೆ ಇದೆ. ಸಾಮಾನ್ಯವಾಗಿ, ರಿಯಾಯಿತಿಯನ್ನು ಪ್ರತಿ ವರ್ಷ ಮೇ ಅಂತ್ಯದವರೆಗೆ ಒಂದು ತಿಂಗಳವರೆಗೆ ವಿಸ್ತರಿಸಲಾಗುತ್ತದೆ. ಆದರೆ ಈ ವರ್ಷ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಅದನ್ನು ವಿಸ್ತರಿಸಲಾಗಿಲ್ಲ.

ಆಸ್ತಿ ತೆರಿಗೆ ಮೇಲಿನ ಶೇ 5ರ ರಿಯಾಯಿತಿಯನ್ನು ವಿಸ್ತರಣೆ ಮಾಡುವ ಸಾಧ್ಯತೆ ಇದೆ. ಹೀಗಾಗಿ ಮೇ ತಿಂಗಳಲ್ಲಿ ಆಸ್ತಿ ತೆರಿಗೆ ಪಾವತಿಸಿದವರು ಮುಂದಿನ ಹಣಕಾಸು ವರ್ಷದಲ್ಲಿ ಪಾವತಿ ಮಾಡುವಾಗ ಶೇಕಡಾ 5 ರಷ್ಟು ರಿಯಾಯಿತಿಯನ್ನು ಪಡೆದು ಸರಿಹೊಂದಿಸಬಹುದಾಗಿದೆ ಎಂದು ಬಿಬಿಎಂಪಿ ಮೂಲಗಳು ತಿಳಿಸಿವೆ.

ಮಾಜಿ ಕಾರ್ಪೊರೇಟರ್ ಅಬ್ದುಲ್ ವಾಜಿದ್ ಅವರು ಸೋಮವಾರ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರಿಗೆ ಪತ್ರ ಬರೆದು, ಕಂದಾಯ ಅಧಿಕಾರಿಗಳು ಚುನಾವಣಾ ಕರ್ತವ್ಯದಲ್ಲಿ ನಿರತರಾಗಿದ್ದುದರಿಂದ ಆಸ್ತಿ ತೆರಿಗೆ ಸಂಗ್ರಹದಲ್ಲಿ ನಿಧಾನಗತಿಯ ಪ್ರಗತಿಯಾಗಿತ್ತು. ಹೀಗಾಗಿ ಶೇ 5 ರಷ್ಟು ರಿಯಾಯಿತಿಯನ್ನು ವಿಸ್ತರಿಸಬೇಕು ಎಂದು ಮನವಿ ಮಾಡಿದ್ದರು.

ಬಿಬಿಎಂಪಿಯು 2023-24ರ ಬಜೆಟ್‌ನಲ್ಲಿ ಆಸ್ತಿ ತೆರಿಗೆಯಿಂದ ಇತರ ಸೆಸ್‌ಗಳು ಸೇರಿದಂತೆ 4,690 ಕೋಟಿ ರೂ. ಸಂಗ್ರಹಿಸುವ ಗುರಿ ಹೊಂದಿದೆ. ಕಳೆದ ವರ್ಷ ಪಾಲಿಕೆಯು 3,332 ಕೋಟಿ ರೂ.ಗೂ ಅಧಿಕ ಮೊತ್ತವನ್ನು ಸಂಗ್ರಹಿಸಿದ್ದು, ಮಹದೇವಪುರ ಮತ್ತು ಬಿಬಿಎಂಪಿಯ ಪೂರ್ವ ವಲಯಗಳಿಂದ ಗಮನಾರ್ಹ ಮೊತ್ತ ಸಂಗ್ರಹವಾಗಿತ್ತು.