ಬಿಬಿಎಂಪಿ ಚುನಾವಣೆಗೆ ಮತದಾರರ ಕರಡುಪಟ್ಟಿ ಬಿಡುಗಡೆ: ನಿಮ್ಮ ಹೆಸರು, ವಿವರ ಸರಿಯಿದೆಯಾ ಚೆಕ್​ ಮಾಡಿಕೊಳ್ಳಿ!

ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ ಬಿಬಿಎಂಪಿ ಚುನಾವಣೆಗೆ ಮತದಾರರ ಕರಡುಪಟ್ಟಿ ಬಿಡುಗಡೆ ಮಾಡಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್​ ಹೇಳಿದರು.

ಬಿಬಿಎಂಪಿ ಚುನಾವಣೆಗೆ ಮತದಾರರ ಕರಡುಪಟ್ಟಿ ಬಿಡುಗಡೆ: ನಿಮ್ಮ ಹೆಸರು, ವಿವರ ಸರಿಯಿದೆಯಾ ಚೆಕ್​ ಮಾಡಿಕೊಳ್ಳಿ!
BBMP
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Nov 09, 2022 | 5:37 PM

ಬೆಂಗಳೂರು: ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ ಬಿಬಿಎಂಪಿ (BBMP) ಚುನಾವಣೆಗೆ (elections) ಮತದಾರರ ಕರಡುಪಟ್ಟಿ ಬಿಡುಗಡೆ ಮಾಡಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್​ ಹೇಳಿದರು. ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳ ಮತದಾರರ ನೋಂದಣಾಧಿಕಾರಿಗಳ ಕಚೇರಿ, ಸಹಾಯಕ ಮತದಾರರ ನೋಂದಣಾಧಿಕಾರಿ ಕಚೇರಿ, ವಾರ್ಡ್ ಕಚೇರಿಗಳಲ್ಲಿ ಪಟ್ಟಿ ಪ್ರಕಟಿಸಲಾಗಿದೆ. ಸಾರ್ವಜನಿಕರಿಗೆ ಮತದಾರರ ಪಟ್ಟಿ ಪರಿಶೀಲಿಸಲು ಅವಕಾಶ ನೀಡಲಾಗಿದೆ. ತಮ್ಮ ಮೊಬೈಲ್​ನಲ್ಲಿ VHA ಆ್ಯಪ್ ಅಥವಾ NVSP ವೆಬ್​ಸೈಟ್ ​ಮೂಲಕ ಮಾಹಿತಿ ಪಡೆಯಬಹುದಾಗಿದೆ. e-EPIC download ಮಾಡಿಕೊಳ್ಳಲು ಇನ್ನಿತರ ಮತಗಟ್ಟೆ, ಶೇಖಡಾವಾರು ಮತದಾನದ ಮಾಹಿತಿ ಪಡೆಯಬಹುದು. ಈ ಹಿಂದೆ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 8614 ಮತಗಟ್ಟೆಗಳಿದ್ದವು. ಪ್ರಸ್ತುತ 8615 ಮತಗಟ್ಟೆಗಳಿವೆ. ಮತದಾರರ ಪಟ್ಟಿಯಲ್ಲಿ ದೋಷಗಳಿದ್ದರೆ ಆಕ್ಷೇಪಣೆ ಸಲ್ಲಿಸಲು ಒಂದು ತಿಂಗಳು ಅವಕಾಶ ಇದೆ. ಅಂದರೆ 8-12-22 ರವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶವಿದೆ. ಅಂತಿಮ‌ ಮತದಾರರ ಪಟ್ಟಿಯನ್ನು 5-1-2023 ಕ್ಕೆ ಪ್ರಕಟಿಸಲಾಗುತ್ತೆ ಎಂದು ತುಷಾರ್ ಗಿರಿನಾಥ್​ ತಿಳಿಸಿದರು.

ಇ-ಲಿಸ್ಟ್ ಇಂದು ಪ್ರಕಟನೆ ಮಾಡಿದ್ದೆವೆ. ಅದರ ಆಧಾರದ ಮೇಲೆ ಆಕ್ಷೇಪಣೆ ಮಾಡಲು ಅವಕಾಶ ಇದೆ. 18 ವರ್ಷ ಮೇಲ್ಪಟ್ಟವರ ಮತದಾನ ಮಾಡಲು ಪರಿಗಣಿಸುತ್ತಿವೆ. ಜನವರಿ, ಏಪ್ರಿಲ್, ಜುಲೈ, ಅಕ್ಟೋಬರ್ ನಾಲ್ಕು ಹಂತದಲ್ಲಿ 18 ವರ್ಷ ಆದವರಿಗೆ ಮತದಾನಕ್ಕೆ ಅವಕಾಶ ನೀಡಿ ಗುರುತಿನ ಚೀಟಿಯನ್ನಯ ನೀಡಲಾಗುತ್ತೆ. 17 ವರ್ಷ ಆದವರೂ ಕೂಡ ಮತದಾನ ಮಾಡಲು ಅಫ್ಲೈ ಮಾಡಲು ಅವಕಾಶ ಇದೆ. ಅವರಿಗೆ 18 ವರ್ಷ ಆದಾಗ ಅವರಿಗೆ ಗುರುತಿನ ಚೀತಿ ಸಿಗುತ್ತೆ. ಮತದಾರರ ಪಟ್ಟಿಗೆ ಸೇರ್ಪಡೆಯಾಗಲು ಹಂತ ಹಂತವಾಗಿ ಪರಿಷ್ಕರಣೆ ಮಾಡಲಾಗುತ್ತದೆ.

ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿ ಪರಿಷ್ಕರಣೆಗೆ ಅವಕಾಶ

ಮುಂದಿನ ವರ್ಷ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ಸಂಬಂಧ ರಾಜ್ಯದ 224 ವಿಧಾನಸಭೆ ಕ್ಷೇತ್ರಗಳ ಮತದಾರರ ಪಟ್ಟಿ ಪರಿಷ್ಕರಣೆಗೆ ಅವಕಾಶ ನೀಡಲಾಗಿದೆ ಎಂದು ಬೆಂಗಳೂರಿನಲ್ಲಿ ರಾಜ್ಯ ಚುನಾವಣಾ ಆಯುಕ್ತ ಮನೋಜ್ ಕುಮಾರ್ ಹೇಳಿದ್ದಾರೆ. ಭಾರತ ಚುನಾವಣಾ ಆಯೋಗದ ನಿರ್ದೇಶನಗಳನ್ವಯ ರಾಜ್ಯ ಚುನಾವಣಾ ಆಯೋಗ 224 ವಿಧಾನ ಸಭಾ ಕ್ಷೇತ್ರಗಳಲ್ಲಿ ಮತದಾರರ ಪಟ್ಟಿಗಳ ವಿಶೇಷ ಪರಿಷ್ಕರಣೆಯನ್ನು ಆರಂಭಿಸಿದೆ. ಪರಿಷ್ಕರಿಸಿದ ಕರುಡು ಮತದಾನ ಪಟ್ಟಿಯು ನವೆಂಬರ್​ 9ರಂದು ಪ್ರಕಟವಾಗಲಿದೆ. ಇದಕ್ಕೆ ಆಕ್ಷೇಪಣೆ ಸಲ್ಲಿಸಲು ನವೆಂಬರ್​ 9ರಿಂದ ಡಿಸೆಂಬರ್​ 8ರವರೆಗೆ ಅವಕಾಶ ನೀಡಲಾಗಿದೆ. ಹಕ್ಕುಗಳು ಮತ್ತು ಆಕ್ಷೇಪಣೆ ವಿಲೇವಾರಿಗೆ ಡಿಸೆಂಬರ್​​ 26ರವರೆಗೆ ಅವಕಾಶ ನೀಡಲಾಗಿದೆ ಎಂದು ಚುನಾವಣಾ ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ.

ಅಂತಿಮವಾಗಿ ಪರೀಕ್ಷಿಸಿದ ಪಟ್ಟಿಯನ್ನು 2023ರ ಜನವರಿ 5ರಂದು ಪ್ರಕಟಗೊಳ್ಳುತ್ತದೆ. ಮತದಾರರ ಪಟ್ಟಿಯಲ್ಲಿ ಸಾರ್ವಜನಿಕರು ತಮ್ಮ ಹೆಸರುನ್ನು ಪರಿಶೀಲಿಸಿಕೊಳ್ಳಲು ಚುನಾವಣಾ ಆಯೋಗದ ವೆಬ್​ಸೈಟ್​ಗೆ www.ceokarnataka.gov.in ಭೇಟಿ ನೀಡಬಹುದಾಗಿದೆ. ಒಂದು ವೇಳೆ ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದಿದ್ದರೇ ಫಾರ್ಮ್ 6ರ ಮೂಲಕ ಸೇರ್ಪಡೆಯಾಗಬಹುದು. ಗರುಡ ಆಪ್ ಮೂಲಕ ಅಥವಾ ಸ್ಮಾರ್ಟ್ ಫೋನ್ ಮೂಲಕ ಆನ್​ಲೈನ್​ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ವಿಧಾನಸಭಾ ಕ್ಷೇತಗಳ ಮತದಾರರ ಪಟ್ಟಿಯನ್ನು ಮುಖ್ಯ ಚುನಾವಣಾಧಿಕಾರಿಗಳು, ಕರ್ನಾಟಕ ರಾಜ್ಯ ಇವರ ಅಧಿಕೃತ www.ceokarnataka.gov.in de hamp ಆವೃತ್ತಿಯನ್ನು ಹಾಕಲಾಗುವುದು. ಸಾರ್ವಜನಿಕರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾದ ಬಗ್ಗೆ ಪರಿಶೀಲಿಸುವುದು ಹಾಗೂ ಸರಿಯಾದ ಹೆಸರನ್ನು ನಮೂದುಗಳೊಂದಿಗೆ ನೊಂದಾಯಿಸಿದ ಬಗ್ಗೆ ಖಚಿತಪಡಿಸಿಕೊಳ್ಳುವುದು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:25 pm, Wed, 9 November 22

ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ