ಲಂಚ ಸ್ವೀಕರಿಸುವಾಗ ಲೋಕಾ ಬಲೆಗೆ ಬಿದ್ದ 2 ಬಿಬಿಎಂಪಿ ಕಂದಾಯ ಸಿಬ್ಬಂದಿ: ಓರ್ವ ಪರಾರಿ

1 ಲಕ್ಷ ರೂ. ಲಂಚ ಸ್ವೀಕರಿಸುವಾಗ ಬಿಬಿಎಂಪಿ ಕಂದಾಯ ಸಿಬ್ಬಂದಿ ಲೋಕಾ ಬಲೆಗೆ ಬಿದಿದ್ದು, ಇಬ್ಬರನ್ನು ಬಂಧಿಸಲಾಗಿದ್ದು, ಒಬ್ಬರು ಪರಾರಿಯಾಗಿರುವಂತಹ ಘಟನೆ ನಗರದಲ್ಲಿ ನಡೆದಿದೆ.

ಲಂಚ ಸ್ವೀಕರಿಸುವಾಗ ಲೋಕಾ ಬಲೆಗೆ ಬಿದ್ದ 2 ಬಿಬಿಎಂಪಿ ಕಂದಾಯ ಸಿಬ್ಬಂದಿ: ಓರ್ವ ಪರಾರಿ
ಪ್ರಾತಿನಿಧಿಕ ಚಿತ್ರ
Follow us
Shivaprasad
| Updated By: ಗಂಗಾಧರ​ ಬ. ಸಾಬೋಜಿ

Updated on:Aug 02, 2023 | 8:23 PM

ಬೆಂಗಳೂರು, ಆಗಸ್ಟ್​ 02: 1 ಲಕ್ಷ ರೂ. ಲಂಚ (bribe) ಸ್ವೀಕರಿಸುವಾಗ ಬಿಬಿಎಂಪಿ (BBMP) ಕಂದಾಯ ಸಿಬ್ಬಂದಿ ಲೋಕಾ ಬಲೆಗೆ ಬಿದಿದ್ದು, ಇಬ್ಬರನ್ನು ಬಂಧಿಸಲಾಗಿದ್ದು, ಒಬ್ಬರು ಪರಾರಿಯಾಗಿದ್ದಾರೆ. ಬಿಬಿಎಂಪಿ ವಾರ್ಡ್ ನಂ.166 ರ ರೆವೆನ್ಯೂ ಇನ್ಸ್ ಪೆಕ್ಟರ್ ರಾಜಗೋಪಾಲ್ ಪರಾರಿಯಾಗಿದ್ದು, ಎಫ್​ಡಿಎ ರಾಘವೇಂದ್ರ, ಡಾಟಾ ಎಂಟ್ರಿ ಆಪರೇಟರ್​ ಸುರೇಶ್ ದತ್ತಾರನ್ನು ಅಧಿಕಾರಿಗಳು ಬಂಧಿಸಿದ್ದಾರೆ.

ಖಾತೆ ಬದಲಾವಣೆ ಮಾಡಿಕೊಡಲು ಮಾಚೋಹಳ್ಳಿಯ ಅರುಣ್ ಎಂಬಾತನಿಂದ 1 ಲಕ್ಷದ 25 ಸಾವಿರ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಮುಂಗಡವಾಗಿ 1 ಲಕ್ಷ ಹಣ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ. ಭ್ರಷ್ಟಾಚಾರ ತಡೆ ಕಾಯ್ದೆಯಡಿ ಕೇಸ್ ದಾಖಲಿಸಿ ಆರೋಪಿಗಳಿಬ್ಬರ ಬಂಧನ ಮಾಡಲಾಗಿದೆ.

ಇದನ್ನೂ ಓದಿ: ಆ ಸಭ್ಯಸ್ಥ ಯುವಕನನ್ನು ಚಾಕುವಿನಿಂದ ಇರಿದು ಬರ್ಬರ ಕೊಲೆ, ಸ್ವಿಫ್ಟ್ ಕಾರಿನಲ್ಲಿ ಹಿಂಬಾಲಿಸಿ ಹತ್ಯೆಗೈದರು: ಕಾರಣವೇನು?

ಗೃಹ ಲಕ್ಷ್ಮೀ ಯೋಜನೆ: ಅರ್ಜಿ ಸಲ್ಲಿಕೆಗೆ ಮಹಿಳೆಯರಿಂದ ಹಣ ವಸೂಲಿ

ವಿಜಯಪುರ: ಗೃಹ ಲಕ್ಷ್ಮೀ ಯೋಜನೆ ಹಣ ಪಡೆಯಲು ಮಹಿಳೆಯರು ಆನ್ ಲೈನ್​ನಲ್ಲಿ ಅರ್ಜಿ ಸಲ್ಲಿಸಲು ಬ್ಯುಸಿಯಾಗಿದ್ದಾರೆ. ಅರ್ಜಿ ಸಲ್ಲಿಕೆಗೆ ಯಾರೂ ಹಣ ಪಡೆಯಬಾರದು ಎಂದು ಸಿಎಂ ಆದಿಯಾಗಿ ಎಲ್ಲರೂ ಸೂಚನೆ ನೀಡಿದ್ದರು. ಆದರೆ ಅರ್ಜಿ ಸಲ್ಲಿಕೆ ಮಾಡಲು ಮಹಿಳೆಯರಿಂದ ಹಣ ವಸೂಲಿ ಮಾಡುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಿವೆ.

ಜಿಲ್ಲೆಯ ಬಬಲೇಶ್ವರ ತಾಲೂಕಿನ ಗುಣಗಾಳ ಗ್ರಾಮದಲ್ಲಿ ಇತ್ತೀಚೆಗೆ ಗ್ರಾಮ ಒನ್ ಸೆಂಟರ್​ನಲ್ಲಿ ಗೃಹ ಲಕ್ಷ್ಮೀ ಅರ್ಜಿ ಸಲ್ಲಿಕೆಗೆ ಮಹಿಳೆಯರಿಂದ ಹಣ ವಸೂಲಿ ಮಾಡಲಾಗಿತ್ತು. ಗ್ರಾಮ ಒನ್ ಕೇಂದ್ರದ ಸಿಬ್ಬಂದಿ ಶ್ರೀಪತಿ ಹಾಗೂ ಇತರರು ಮಹಿಳೆಯರಿಂದ ಒಂದು ಅರ್ಜಿ ಸಲ್ಲಿಸಲು 50 ರಿಂದ 100 ರೂಪಾಯಿ ಹಣ ವಸೂಲಿ ಮಾಡಿದ್ದರು. ಇದು ಸ್ಥಳಿಯರ ಮೊಬೈಲ್​ನಲ್ಲಿ ಸೆರೆಯಾಗಿತ್ತು.

ಇದನ್ನೂ ಓದಿ: ಮಂಗಳೂರು ಬೆನ್ನಲ್ಲೇ ಇದೀಗ ರಾಯಚೂರಿನಲ್ಲಿ ಗಾಂಜಾ ಚಾಕೋಲೆಟ್ ದಂಧೆ; ಇಬ್ಬರ ಬಂಧನ

ಈ ಕುರಿತು ಟಿವಿ9 ನಲ್ಲಿ ಸುದ್ದಿ ಪ್ರಸಾರವಾದ ಹಿನ್ನಲೆ ಜಿಲ್ಲಾಡಳಿತ ಎಚ್ಚರ ವಹಿಸಲಾಗಿತ್ತು. ಜಿಲ್ಲಾಧಿಕಾರಿ ಭೂಬಾಲನ್ ಅವರು ಗುಣದಾಳ ಗ್ರಾಮದ ಗ್ರಾಮ ಒನ್ ಕೇಂದ್ರದ ಶ್ರೀಪತಿ ಎಂಬುವವರ ಲಾಗಿನ್ ಐಡಿಯನ್ನು ರದ್ದು ಮಾಡಿದ್ದಾರೆ.

ಜೊತೆಗೆ ಸೇವಾ ಕೇಂದ್ರಗಳಲ್ಲಿ ಅಕ್ರಮ ತಡೆಯಲು ಗ್ರಾಮ ಪಂಚಾಯತಿ ಕಾರ್ಯದರ್ಶಿಗಳ ಹಾಗೂ ಪಿಡಿಓಗಳನ್ನು ಮೇಲ್ವೀಚಾರಕರನ್ನಾಗಿ ನೇಮಿಸಲು ಮುಂದಾಗಿದ್ದಾರೆ. ಇಷ್ಟರ ಮದ್ಯೆ ಗೃಹ ಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಲು ಯಾರಾದರೂ ಹಣ ವಸೂಲಿ ಮಾಡಿದರೆ ಜಿಲ್ಲಾಡಳಿತದ ಗಮನಕ್ಕೆ ತರಬೇಕೆಂದು ಮಹಿಳೆಯರಿಗೆ ತಿಳಿಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:14 pm, Wed, 2 August 23

Video: ಕಜಾಕಿಸ್ತಾನ ವಿಮಾನ ಪತನದ ಮೊದಲು ಹಾಗೂ ನಂತರದ ಭಯಾನಕ ವಿಡಿಯೋ
Video: ಕಜಾಕಿಸ್ತಾನ ವಿಮಾನ ಪತನದ ಮೊದಲು ಹಾಗೂ ನಂತರದ ಭಯಾನಕ ವಿಡಿಯೋ
ಸುಖಾಸುಮ್ಮನೆ ವಿರಾಟ್ ಕೊಹ್ಲಿ ಕಿರಿಕ್: ತಿರುಗಿ ನಿಂತ ಸ್ಯಾಮ್ ಕೊನ್​ಸ್ಟಾಸ್
ಸುಖಾಸುಮ್ಮನೆ ವಿರಾಟ್ ಕೊಹ್ಲಿ ಕಿರಿಕ್: ತಿರುಗಿ ನಿಂತ ಸ್ಯಾಮ್ ಕೊನ್​ಸ್ಟಾಸ್
ಬಡತನದಿಂದ ಮುಕ್ತಿ ಹೊಂದಲು, ಮನೆಯಲ್ಲಿ ನೆಮ್ಮದಿಗೆ ಇಲ್ಲಿದೆ ಸುಲಭ ಉಪಾಯ
ಬಡತನದಿಂದ ಮುಕ್ತಿ ಹೊಂದಲು, ಮನೆಯಲ್ಲಿ ನೆಮ್ಮದಿಗೆ ಇಲ್ಲಿದೆ ಸುಲಭ ಉಪಾಯ
ಸಫಲ ಏಕಾದಶಿಯ ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿರಲಿದೆ ನೋಡಿ
ಸಫಲ ಏಕಾದಶಿಯ ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿರಲಿದೆ ನೋಡಿ
ಕ್ರಿಸ್​ಮಸ್ ಸಂಭ್ರಮ: ಬೆಂಗಳೂರಿನಲ್ಲಿ ಟ್ರಾಫಿಕ್ ​​ಜಾಮ್, ಸವಾರರು ಪರದಾಟ
ಕ್ರಿಸ್​ಮಸ್ ಸಂಭ್ರಮ: ಬೆಂಗಳೂರಿನಲ್ಲಿ ಟ್ರಾಫಿಕ್ ​​ಜಾಮ್, ಸವಾರರು ಪರದಾಟ
ಜೊಮ್ಯಾಟೊ ಡೆಲಿವರಿ ಬಾಯ್​ ಧರಿಸಿದ್ದ ಸಾಂತಾಕ್ಲಾಸ್​ ಡ್ರೆಸ್ ಬಿಚ್ಚಿಸಿದ ಹಿಂ
ಜೊಮ್ಯಾಟೊ ಡೆಲಿವರಿ ಬಾಯ್​ ಧರಿಸಿದ್ದ ಸಾಂತಾಕ್ಲಾಸ್​ ಡ್ರೆಸ್ ಬಿಚ್ಚಿಸಿದ ಹಿಂ
ದೇವರು ನನ್ನ ಹೊಟ್ಟೆಗೆ ಕಲ್ಲು ಮಣ್ಣು ತುಂಬಿಸಿ ಬಿಟ್ಟ: ತಾಯಿ ಆಕ್ರಂದನ
ದೇವರು ನನ್ನ ಹೊಟ್ಟೆಗೆ ಕಲ್ಲು ಮಣ್ಣು ತುಂಬಿಸಿ ಬಿಟ್ಟ: ತಾಯಿ ಆಕ್ರಂದನ
ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ