ಬೆಂಗಳೂರು, ಆಗಸ್ಟ್ 02: 1 ಲಕ್ಷ ರೂ. ಲಂಚ (bribe) ಸ್ವೀಕರಿಸುವಾಗ ಬಿಬಿಎಂಪಿ (BBMP) ಕಂದಾಯ ಸಿಬ್ಬಂದಿ ಲೋಕಾ ಬಲೆಗೆ ಬಿದಿದ್ದು, ಇಬ್ಬರನ್ನು ಬಂಧಿಸಲಾಗಿದ್ದು, ಒಬ್ಬರು ಪರಾರಿಯಾಗಿದ್ದಾರೆ. ಬಿಬಿಎಂಪಿ ವಾರ್ಡ್ ನಂ.166 ರ ರೆವೆನ್ಯೂ ಇನ್ಸ್ ಪೆಕ್ಟರ್ ರಾಜಗೋಪಾಲ್ ಪರಾರಿಯಾಗಿದ್ದು, ಎಫ್ಡಿಎ ರಾಘವೇಂದ್ರ, ಡಾಟಾ ಎಂಟ್ರಿ ಆಪರೇಟರ್ ಸುರೇಶ್ ದತ್ತಾರನ್ನು ಅಧಿಕಾರಿಗಳು ಬಂಧಿಸಿದ್ದಾರೆ.
ಖಾತೆ ಬದಲಾವಣೆ ಮಾಡಿಕೊಡಲು ಮಾಚೋಹಳ್ಳಿಯ ಅರುಣ್ ಎಂಬಾತನಿಂದ 1 ಲಕ್ಷದ 25 ಸಾವಿರ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಮುಂಗಡವಾಗಿ 1 ಲಕ್ಷ ಹಣ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ. ಭ್ರಷ್ಟಾಚಾರ ತಡೆ ಕಾಯ್ದೆಯಡಿ ಕೇಸ್ ದಾಖಲಿಸಿ ಆರೋಪಿಗಳಿಬ್ಬರ ಬಂಧನ ಮಾಡಲಾಗಿದೆ.
ಇದನ್ನೂ ಓದಿ: ಆ ಸಭ್ಯಸ್ಥ ಯುವಕನನ್ನು ಚಾಕುವಿನಿಂದ ಇರಿದು ಬರ್ಬರ ಕೊಲೆ, ಸ್ವಿಫ್ಟ್ ಕಾರಿನಲ್ಲಿ ಹಿಂಬಾಲಿಸಿ ಹತ್ಯೆಗೈದರು: ಕಾರಣವೇನು?
ವಿಜಯಪುರ: ಗೃಹ ಲಕ್ಷ್ಮೀ ಯೋಜನೆ ಹಣ ಪಡೆಯಲು ಮಹಿಳೆಯರು ಆನ್ ಲೈನ್ನಲ್ಲಿ ಅರ್ಜಿ ಸಲ್ಲಿಸಲು ಬ್ಯುಸಿಯಾಗಿದ್ದಾರೆ. ಅರ್ಜಿ ಸಲ್ಲಿಕೆಗೆ ಯಾರೂ ಹಣ ಪಡೆಯಬಾರದು ಎಂದು ಸಿಎಂ ಆದಿಯಾಗಿ ಎಲ್ಲರೂ ಸೂಚನೆ ನೀಡಿದ್ದರು. ಆದರೆ ಅರ್ಜಿ ಸಲ್ಲಿಕೆ ಮಾಡಲು ಮಹಿಳೆಯರಿಂದ ಹಣ ವಸೂಲಿ ಮಾಡುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಿವೆ.
ಜಿಲ್ಲೆಯ ಬಬಲೇಶ್ವರ ತಾಲೂಕಿನ ಗುಣಗಾಳ ಗ್ರಾಮದಲ್ಲಿ ಇತ್ತೀಚೆಗೆ ಗ್ರಾಮ ಒನ್ ಸೆಂಟರ್ನಲ್ಲಿ ಗೃಹ ಲಕ್ಷ್ಮೀ ಅರ್ಜಿ ಸಲ್ಲಿಕೆಗೆ ಮಹಿಳೆಯರಿಂದ ಹಣ ವಸೂಲಿ ಮಾಡಲಾಗಿತ್ತು. ಗ್ರಾಮ ಒನ್ ಕೇಂದ್ರದ ಸಿಬ್ಬಂದಿ ಶ್ರೀಪತಿ ಹಾಗೂ ಇತರರು ಮಹಿಳೆಯರಿಂದ ಒಂದು ಅರ್ಜಿ ಸಲ್ಲಿಸಲು 50 ರಿಂದ 100 ರೂಪಾಯಿ ಹಣ ವಸೂಲಿ ಮಾಡಿದ್ದರು. ಇದು ಸ್ಥಳಿಯರ ಮೊಬೈಲ್ನಲ್ಲಿ ಸೆರೆಯಾಗಿತ್ತು.
ಇದನ್ನೂ ಓದಿ: ಮಂಗಳೂರು ಬೆನ್ನಲ್ಲೇ ಇದೀಗ ರಾಯಚೂರಿನಲ್ಲಿ ಗಾಂಜಾ ಚಾಕೋಲೆಟ್ ದಂಧೆ; ಇಬ್ಬರ ಬಂಧನ
ಈ ಕುರಿತು ಟಿವಿ9 ನಲ್ಲಿ ಸುದ್ದಿ ಪ್ರಸಾರವಾದ ಹಿನ್ನಲೆ ಜಿಲ್ಲಾಡಳಿತ ಎಚ್ಚರ ವಹಿಸಲಾಗಿತ್ತು. ಜಿಲ್ಲಾಧಿಕಾರಿ ಭೂಬಾಲನ್ ಅವರು ಗುಣದಾಳ ಗ್ರಾಮದ ಗ್ರಾಮ ಒನ್ ಕೇಂದ್ರದ ಶ್ರೀಪತಿ ಎಂಬುವವರ ಲಾಗಿನ್ ಐಡಿಯನ್ನು ರದ್ದು ಮಾಡಿದ್ದಾರೆ.
ಜೊತೆಗೆ ಸೇವಾ ಕೇಂದ್ರಗಳಲ್ಲಿ ಅಕ್ರಮ ತಡೆಯಲು ಗ್ರಾಮ ಪಂಚಾಯತಿ ಕಾರ್ಯದರ್ಶಿಗಳ ಹಾಗೂ ಪಿಡಿಓಗಳನ್ನು ಮೇಲ್ವೀಚಾರಕರನ್ನಾಗಿ ನೇಮಿಸಲು ಮುಂದಾಗಿದ್ದಾರೆ. ಇಷ್ಟರ ಮದ್ಯೆ ಗೃಹ ಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಲು ಯಾರಾದರೂ ಹಣ ವಸೂಲಿ ಮಾಡಿದರೆ ಜಿಲ್ಲಾಡಳಿತದ ಗಮನಕ್ಕೆ ತರಬೇಕೆಂದು ಮಹಿಳೆಯರಿಗೆ ತಿಳಿಸಿದ್ದಾರೆ.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 8:14 pm, Wed, 2 August 23