ಮೋದಿ ಬರ್ತಾರೆಂದು 23 ಕೋಟಿ ರೂ ಖರ್ಚು ಮಾಡಿ ನಿರ್ಮಿಸಿದ್ದ ರಸ್ತೆ ಅಧೋಗತಿಗೆ! ರಾಜ್ಯ ಸರ್ಕಾರಕ್ಕೆ ವರದಿ ಕೇಳಿದ ಪ್ರಧಾನಿ ಕಚೇರಿ

ಬಿಬಿಎಂಪಿ ಡಾಂಬರ್ ರಸ್ತೆ ಕಳಪೆ ಕಾಮಗಾರಿ ವಿಚಾರ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗುತ್ತಿದೆ. ಹೀಗಾಗಿ ರಾಜ್ಯ ಸರ್ಕಾರಕ್ಕೆ, ಪ್ರಧಾನಿ ಕಾರ್ಯಾಲಯ ವರದಿ ಕೇಳಿದ್ದು ಬಿಬಿಎಂಪಿ ಆಯುಕ್ತರಿಗೆ ವರದಿ ನೀಡುವಂತೆ ಸಿಎಂ ಕಚೇರಿ ಸೂಚನೆ ನೀಡಿದೆ. 

ಮೋದಿ ಬರ್ತಾರೆಂದು 23 ಕೋಟಿ ರೂ ಖರ್ಚು ಮಾಡಿ ನಿರ್ಮಿಸಿದ್ದ ರಸ್ತೆ ಅಧೋಗತಿಗೆ! ರಾಜ್ಯ ಸರ್ಕಾರಕ್ಕೆ ವರದಿ ಕೇಳಿದ ಪ್ರಧಾನಿ ಕಚೇರಿ
ಮೋದಿ ಬರ್ತಾರೆಂದು 23 ಕೋಟಿ ರೂ ಖರ್ಚು ಮಾಡಿ ನಿರ್ಮಿಸಿದ್ದ ರಸ್ತೆ ಅಧೋಗತಿಗೆ
Follow us
TV9 Web
| Updated By: ಆಯೇಷಾ ಬಾನು

Updated on:Jun 23, 2022 | 7:59 PM

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ(Narendra Modi) ಜೂನ್ 20ರಂದು ಬೆಂಗಳೂರಿಗೆ ಬಂದಾಗ, ಅವರು ಸಂಚರಿಸುವ ರಸ್ತೆಗಳು ಲಕಲಕ ಅಂತ ಹೊಳೆಯುತ್ತಿದ್ವು. ಆದ್ರೆ ಮೋದಿ ವಾಪಸ್ ಹೋದ್ಮೇಲೆ ತರಾತುರಿಯಲ್ಲಿ ಮಾಡಿದ್ದ ರಸ್ತೆಗಳು ಅದ್ವಾನ ಎದ್ದುಹೋಗಿವೆ. 23 ಕೋಟಿ ರೂಪಾಯಿ ಖರ್ಚು ಮಾಡಿ ನಿರ್ಮಾಣ ಮಾಡಿದ ರಸ್ತೆಯ ಸ್ಥಿತಿ ನೋಡುವಂತಿಲ್ಲ. ಸದ್ಯ ಬಿಬಿಎಂಪಿ(BBMP) ಡಾಂಬರ್ ರಸ್ತೆ ಕಳಪೆ ಕಾಮಗಾರಿ ವಿಚಾರ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗುತ್ತಿದೆ. ಹೀಗಾಗಿ ರಾಜ್ಯ ಸರ್ಕಾರಕ್ಕೆ, ಪ್ರಧಾನಿ ಕಾರ್ಯಾಲಯ ವರದಿ ಕೇಳಿದ್ದು ಬಿಬಿಎಂಪಿ ಆಯುಕ್ತರಿಗೆ ವರದಿ ನೀಡುವಂತೆ ಸಿಎಂ ಕಚೇರಿ ಸೂಚನೆ ನೀಡಿದೆ.

ಮೂರೇ ದಿನಕ್ಕೆ ಬಯಲಾಯ್ತು ಬಿಬಿಎಂಪಿ ‘ಕಳಪೆ’ ಮುಖ ಪ್ರಧಾನಿ ಮೋದಿ ಬೆಂಗಳೂರಿಗೆ ಭೇಟಿ ಕೊಟ್ಟು ಕೇವಲ ಮೂರು ದಿನ ಮಾತ್ರ ಕಳೆದಿದೆ. ತರಾತುರಿಯಲ್ಲಿ ಬಿಬಿಎಂಪಿ ನಿರ್ಮಿಸಿದ ರಸ್ತೆಯ ಕಳಪೆ ಮುಖ ಬಯಲಾಗಿದೆ. ಸ್ವತಃ ಪ್ರಧಾನಿಯವ್ರೇ ಶಾಕ್ ಆಗುವಂತೆ ಬಿಬಿಎಂಪಿ ಕೆಲವೇ ದಿನಗಳಲ್ಲಿ ಕಾಮಗಾರಿ ಮುಗಿಸಿತ್ತು. ಬೆಂಗಳೂರು ವಿವಿ, ಕೊಮ್ಮಘಟ್ಟ ಸೇರಿದಂತೆ ಮೋದಿ ಸಂಚರಿಸೋ ಮಾರ್ಗದಲ್ಲಿ ಲಕಲಕ ಹೊಳೆಯುವಂತೆ ರಸ್ತೆ ಮಾಡಲಾಗಿತ್ತು. ಇದಕ್ಕೆ ಬರೋಬ್ಬರಿ 23 ಕೋಟಿ ರೂಪಾಯಿ ಖರ್ಚು ಮಾಡಲಾಗಿತ್ತು. ಆದ್ರೀಗ ಬಿಬಿಎಂಪಿಯ ನಿರ್ಮಿಸಿದ್ದ ರಸ್ತೆಯ ಅಸಲಿಯತ್ತು ಬಯಲಾಗಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಮೋದಿ ಸಂಚರಿಸುವ ರಸ್ತೆ ಕಾಮಗಾರಿಗೆ ಬಿಬಿಎಂಪಿ ಖರ್ಚು ಮಾಡಿದ್ದು ಎಷ್ಟು ಕೋಟಿ ರೂ. ಗೊತ್ತಾ?

ಬೆಂಗಳೂರಿನ ವಿವಿಯಿಂದ ಮರಿಯಪ್ಪನಪಾಳ್ಯದ ಕಡೆ ಹೋಗುವ ರಸ್ತೆಯಲ್ಲಿ ಮೋದಿ ಬರ್ತಾರೆ ಅನ್ನೋ ಕಾರಣಕ್ಕೆ ಡಾಂಬರೀಕರಣ ಮಾಡಿದ್ರು. ಆದ್ರೆ, ಮೂರೇ ದಿನಕ್ಕೆ ಡಾಂಬರ್ ಕಿತ್ಕೊಂಡು ಬರ್ತಿದೆ. ಪ್ರಧಾನಿ ಭೇಟಿ ಕೊಟ್ಟ ಅಂಬೇಡ್ಕರ್ ಎಕನಾಮಿಕ್ ಕಾಲೇಜಿನ ರಸ್ತೆಯಲ್ಲೂ ಬೃಹತ್ ಗುಂಡಿ ಬಿದ್ದಿದೆ. ಅಂಬೇಡ್ಕರ್ ಕಾಲೇಜಿಗೆ ಮೋದಿ ಭೇಟಿ ಕೊಡ್ತಾರೆ ಅಂತಾ ಗುಂಡಿಗಳನ್ನ ಮುಚ್ಚಲಾಗಿತ್ತು. ಆದ್ರೀಗ ಮುಚ್ಚಿದ ಗುಂಡಿ ಕೂಡಾ ಬಾಯಿತೆರೆದಿದೆ.

ಈ ಬಗ್ಗೆ ಬಿಬಿಎಂಪಿ ಮುಖ್ಯ ಆಯುಕ್ತರನ್ನ ಕೇಳಿದ್ರೆ, ಮಳೆ ಬಂದ ಕಾರಣ ಹೀಗೆ ಆಗಿದೆ ಸರಿ ಮಾಡ್ತೇವೆ ಅಂತಾ ಸಬೂಬು ಹೇಳ್ತಾರೆ. ಸದ್ಯ ಬಿಬಿಎಂಪಿ ಡಾಂಬರ್ ರಸ್ತೆ ಕಳಪೆ ಕಾಮಗಾರಿ ವಿಚಾರ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗುತ್ತಿದೆ. ಹೀಗಾಗಿ ರಾಜ್ಯ ಸರ್ಕಾರಕ್ಕೆ, ಪ್ರಧಾನಿ ಕಾರ್ಯಾಲಯ ವರದಿ ಕೇಳಿದ್ದು ಬಿಬಿಎಂಪಿ ಆಯುಕ್ತರಿಗೆ ವರದಿ ನೀಡುವಂತೆ ಸಿಎಂ ಕಚೇರಿ ಸೂಚನೆ ನೀಡಿದೆ.

Published On - 7:59 pm, Thu, 23 June 22

ಸತ್ತವರ ಹೆಸರಲ್ಲಿ ಅರ್ಚನೆ! ಸಂಕಲ್ಪ ಮಾಡಿಸಬಹುದಾ? ವಿಡಿಯೋ ನೋಡಿ
ಸತ್ತವರ ಹೆಸರಲ್ಲಿ ಅರ್ಚನೆ! ಸಂಕಲ್ಪ ಮಾಡಿಸಬಹುದಾ? ವಿಡಿಯೋ ನೋಡಿ
ಈ ರಾಶಿಯವರು ಮದುವೆ ಮತ್ತು ಮನೆ ವಿಷಯಗಳಲ್ಲಿ ಇಂದು ಶುಭ ಸುದ್ದಿ ಕೇಳುವರು
ಈ ರಾಶಿಯವರು ಮದುವೆ ಮತ್ತು ಮನೆ ವಿಷಯಗಳಲ್ಲಿ ಇಂದು ಶುಭ ಸುದ್ದಿ ಕೇಳುವರು
ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?