Bengaluru Ganesh Chaturthi: ಗಣೇಶ ಪೆಂಡಾಲ್​ಗಳಿಗೆ ಅನುಮತಿ ನೀಡಲು 63 ಏಕಗವಾಕ್ಷಿ ಕೇಂದ್ರಗಳನ್ನು ತೆರೆದ ಬಿಬಿಎಂಪಿ

ರಾಸಾಯನಿಕ ಬಣ್ಣ, ಥರ್ಮಾಕೋಲ್ ಮತ್ತು ಪ್ಲಾಸ್ಟರ್ ಆಫ್ ಪ್ಯಾರಿಸ್ ಬಳಸಿ ಗಣೇಶ ಮೂರ್ತಿಗಳನ್ನು ಮಾರಾಟ ಮಾಡಲು ಯತ್ನಿಸುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಬಿಬಿಎಂಪಿ ಸೂಚಿಸಿದೆ. ಮಣ್ಣಿನಿಂದ ತಯಾರಿಸಿದ ಗಣೇಶ ಮೂರ್ತಿಗಳನ್ನು ಬಳಸುವಂತೆ ಜನರಲ್ಲಿ ಜಾಗೃತಿ ಮೂಡಿಸುವಂತೆ ಪಾಲಿಕೆ ವಿಭಾಗೀಯ ಅಧಿಕಾರಿಗಳಿಗೆ ಸೂಚಿಸಿದೆ.

Bengaluru Ganesh Chaturthi: ಗಣೇಶ ಪೆಂಡಾಲ್​ಗಳಿಗೆ ಅನುಮತಿ ನೀಡಲು 63 ಏಕಗವಾಕ್ಷಿ ಕೇಂದ್ರಗಳನ್ನು ತೆರೆದ ಬಿಬಿಎಂಪಿ
ಗಣೇಶ ಪೆಂಡಾಲ್​ಗಳಿಗೆ ಅನುಮತಿ ನೀಡಲು 63 ಏಕಗವಾಕ್ಷಿ ಕೇಂದ್ರಗಳನ್ನು ತೆರೆದ ಬಿಬಿಎಂಪಿ
Follow us
TV9 Web
| Updated By: Digi Tech Desk

Updated on:Sep 12, 2023 | 10:45 AM

ಬೆಂಗಳೂರು, ಸೆಪ್ಟೆಂಬರ್ 9: ಗಣೇಶ ಹಬ್ಬದ (Ganesh Chaturthi) ಪ್ರಯುಕ್ತ ಪೆಂಡಾಲ್​ಗಳನ್ನು ಹಾಕಲು ಅನುಮತಿ ನೀಡುವುದಕ್ಕಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು (BBMP) ನಗರದ ಎಲ್ಲಾ ವಿಭಾಗಗಳಲ್ಲಿ 63 ಏಕ ಗವಾಕ್ಷಿ ತೆರವು ಕೇಂದ್ರಗಳನ್ನು ಅಥವಾ ಸಿಂಗಲ್ ವಿಂಡೋ ಕ್ಲಿಯರೆನ್ಸ್​​ ಸೆಂಟರ್​ಗಳನ್ನು ಸ್ಥಾಪಿಸಿದೆ. ಕೇಂದ್ರದಲ್ಲಿಯೂ ಬಿಬಿಎಂಪಿ, ಪೊಲೀಸ್, ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಮತ್ತು ಅಗ್ನಿಶಾಮಕ ಇಲಾಖೆಯ ಪ್ರತಿನಿಧಿಗಳು ಇರಲಿದ್ದಾರೆ.

ಗಣೇಶ ಪೆಂಡಾಲ್​ಗಳಿಗೆ / ಮಂಟಪಗಳಿಗೆ ಸಂಬಂಧಿಸಿದ ಅರ್ಜಿಗಳನ್ನು ತ್ವರಿತವಾಗಿ ತೆರವುಗೊಳಿಸಲು ವಿವಿಧ ಇಲಾಖೆಗಳ ನೋಡಲ್ ಅಧಿಕಾರಿಗಳನ್ನು ರಚಿಸುವ ಸುತ್ತೋಲೆಯನ್ನು ಬಿಬಿಎಂಪಿ ಶನಿವಾರ ಹೊರಡಿಸಿದೆ.

ಅರ್ಜಿಗಳನ್ನು ಎಲ್ಲಾ ವಿಭಾಗಗಳಲ್ಲಿನ ಸಹಾಯಕ ಕಾರ್ಯಪಾಲಕ ಅಭಿಯಂತರರ ಕಚೇರಿಯಲ್ಲಿ ತೆಗೆದುಕೊಳ್ಳಬಹುದು ಮತ್ತು ಎಲ್ಲಾ ಸಂಬಂಧಿತ ದಾಖಲೆಗಳನ್ನು ಸಲ್ಲಿಸಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಪರಿಸರಸ್ನೇಹಿ ಗಣೇಶ

ರಾಸಾಯನಿಕ ಬಣ್ಣ, ಥರ್ಮಾಕೋಲ್ ಮತ್ತು ಪ್ಲಾಸ್ಟರ್ ಆಫ್ ಪ್ಯಾರಿಸ್ ಬಳಸಿ ಗಣೇಶ ಮೂರ್ತಿಗಳನ್ನು ಮಾರಾಟ ಮಾಡಲು ಯತ್ನಿಸುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಬಿಬಿಎಂಪಿ ಸೂಚಿಸಿದೆ.

ಮಣ್ಣಿನಿಂದ ತಯಾರಿಸಿದ ಗಣೇಶ ಮೂರ್ತಿಗಳನ್ನು ಬಳಸುವಂತೆ ಜನರಲ್ಲಿ ಜಾಗೃತಿ ಮೂಡಿಸುವಂತೆ ಪಾಲಿಕೆ ವಿಭಾಗೀಯ ಅಧಿಕಾರಿಗಳಿಗೆ ಸೂಚಿಸಿದೆ. ಜನರು ತಮ್ಮ ತಮ್ಮ ಮನೆಗಳಲ್ಲಿ ಬಕೆಟ್‌ಗಳಲ್ಲಿ ಗಣೇಶ ಮೂರ್ತಿಯನ್ನು ವಿಸರ್ಜನೆಗೊಳಿಸಲು ಮತ್ತು ಉದ್ಯಾನಗಳಲ್ಲಿನ ನೀರನ್ನು ಬಳಸಲು ಪ್ರೋತ್ಸಾಹಿಸುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ.

ಇದನ್ನೂ ಓದಿ: ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸೋಮವಾರ ಖಾಸಗಿ ಸಾರಿಗೆ ಬಂದ್; ಬೆಂಬಲ ಸೂಚಿಸಿದ ಓಲಾ, ಉಬರ್ ಚಾಲಕರು

ಬೃಹತ್ ಗಾತ್ರದ ವಿಗ್ರಹಗಳನ್ನು ವಿಸರ್ಜಿಸಲು ಸ್ಥಳಗಳನ್ನು ಗುರುತಿಸಿ ತಾತ್ಕಾಲಿಕ ಕೊಳಗಳನ್ನು ನಿರ್ಮಿಸುವಂತೆ ಅಧಿಕಾರಿಗಳಿಗೆ ಬಿಬಿಎಂಪಿ ಆದೇಶಿಸಿದೆ. ವಿಗ್ರಹ ವಿಸರ್ಜನೆ ಸ್ಥಳಗಳಲ್ಲಿ ಜನರ ಸುರಕ್ಷತೆಗಾಗಿ ಪ್ರತ್ಯೇಕ ತಂಡವನ್ನು ರಚಿಸಲು ಅಧಿಕಾರಿಗಳಿಗೆ ಆದೇಶಿಸಲಾಗಿದೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:15 pm, Sat, 9 September 23