AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi Bangalore Visit: ಮೋದಿ ಬೆಂಗಳೂರು ಆಗಮನ ಹಿನ್ನೆಲೆ ತರಾತುರಿಯಲ್ಲಿ ರಸ್ತೆ ದುರಸ್ತಿಗೆ ಮುಂದಾದ ಬಿಬಿಎಂಪಿ

ಪ್ರಧಾನಿ ಮೋದಿ ಓಡಾಡುವ ಬೆಂಗಳೂರಿನ ರಸ್ತೆಗಳಲ್ಲಿ ಬಿದ್ದ ಗುಂಡಿಗಳನ್ನು ಮುಚ್ಚಲು ಬಿಬಿಎಂಪಿಯು ತರಾತುರಿಯಲ್ಲಿ ರಸ್ತೆ ದುರಸ್ತಿಗೆ ಮುಂದಾಗಿದೆ. ಬೆಂಗಳೂರಿನ ಪ್ರಮುಖ ರಸ್ತೆ ಜಂಕ್ಷನ್ ಬಂದ್​ ಮಾಡಿ ದುರಸ್ತಿ ಕಾರ್ಯ ನಡೆಸುತ್ತಿದೆ.

PM Modi Bangalore Visit: ಮೋದಿ ಬೆಂಗಳೂರು ಆಗಮನ ಹಿನ್ನೆಲೆ ತರಾತುರಿಯಲ್ಲಿ ರಸ್ತೆ ದುರಸ್ತಿಗೆ ಮುಂದಾದ ಬಿಬಿಎಂಪಿ
ಪ್ರಧಾನಿ ನರೇಂದ್ರ ಮೋದಿ
TV9 Web
| Updated By: ಆಯೇಷಾ ಬಾನು|

Updated on:Nov 10, 2022 | 10:55 AM

Share

ಬೆಂಗಳೂರು: ಬೆಂಗಳೂರು ನಿರ್ಮಾತೃ ಕೆಂಪೇಗೌಡರ(Kempe Gowda) 108 ಅಡಿ ಎತ್ತರದ ಕಂಚಿನ ಪ್ರತಿಮೆ ಅನಾವರಣಗೊಳಿಸಲು ನವೆಂಬರ್ 11ರಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆ ನಗರದಲ್ಲಿ ಭರದ ಸಿದ್ಧತೆಗಳು ನಡೆಯುತ್ತಿವೆ. ಜೊತೆಗೆ ಬಿಬಿಎಂಪಿಯು ತರಾತುರಿಯಲ್ಲಿ ರಸ್ತೆ ದುರಸ್ತಿಗೆ ಮುಂದಾಗಿದೆ. ಹಲವೆಡೆ ರಸ್ತೆ ಬಂದ್​ ಮಾಡಿ ಡಾಂಬರ್​ ಹಾಕುವ ಕಾರ್ಯ ನಡೆಯುತ್ತಿದೆ.

ಬೆಂಗಳೂರಿನಲ್ಲಿ ಯಾವ ರಸ್ತೆಗೆ ಹೋದ್ರೂ ಗುಂಡಿ ಕಾಣಿಸುತ್ತದೆ. ಯಾವ ದಾರಿಗೆ ಇಳಿದ್ರೂ ಗುಂಡಿ ದರ್ಶನವಾಗುತ್ತೆ. ಬೆಂಗಳೂರಿನ ರೋಡ್​ಗಳೆಲ್ಲಾ ಅಧ್ವಾನ ಆಗಿವೆ. ಹೀಗಾಗಿ ಪ್ರಧಾನಿ ಮೋದಿ ಓಡಾಡುವ ಬೆಂಗಳೂರಿನ ರಸ್ತೆಗಳಲ್ಲಿ ಬಿದ್ದ ಗುಂಡಿಗಳನ್ನು ಮುಚ್ಚಲು ಬಿಬಿಎಂಪಿಯು ತರಾತುರಿಯಲ್ಲಿ ರಸ್ತೆ ದುರಸ್ತಿಗೆ ಮುಂದಾಗಿದೆ. ಜೊತೆಗೆ ಬೆಂಗಳೂರಿನ ಎಂಟು ವಲಯಗಳ ವ್ಯಾಪ್ತಿಯಲ್ಲಿ ಬಾಕಿ ಉಳಿದಿರುವ 2,494 ರಸ್ತೆಗುಂಡಿಗಳನ್ನು ನವೆಂಬರ್ 15ರೊಳಗೆ ಮುಚ್ಚಲು ಗಡುವು ನೀಡಿದೆ.

ಇದನ್ನೂ ಓದಿ: ಬಿಬಿಎಂಪಿ ವ್ಯಾಪ್ತಿಯಲ್ಲಿ 31 ಸಾವಿರ ರಸ್ತೆ ಗುಂಡಿಗಳು; ಮಧ್ಯಾಹ್ನದೊಳಗೆ ಮುಖ್ಯರಸ್ತೆಗಳ ಗುಂಡಿ ಮುಚ್ಚಲು ಆಡಳಿತಾಧಿಕಾರಿ ರಾಕೇಶ್ ಸಿಂಗ್ ಸೂಚನೆ

BBMP, ಬೆಂಗಳೂರಿನ ಪ್ರಮುಖ ರಸ್ತೆ ಜಂಕ್ಷನ್ ಬಂದ್​ ಮಾಡಿ ದುರಸ್ತಿ ಕಾರ್ಯ ನಡೆಸುತ್ತಿದೆ. ಮೆಜೆಸ್ಟಿಕ್​, ಮೈಸೂರು ಬ್ಯಾಂಕ್ ಸರ್ಕಲ್, ಓಕಳಿಪುರಂ, ಆನಂದ್ ರಾವ್​ ವೃತ್ತದಲ್ಲಿ ರಸ್ತೆ ದುರಸ್ತಿ ಮಾಡಲಾಗುತ್ತಿದೆ. ರಸ್ತೆ ದುರಸ್ತಿ ಹಿನ್ನೆಲೆ ಹಲವೆಡೆ ಟ್ರಾಫಿಕ್​ ಜಾಮ್​ ಉಂಟಾಗುವ ಸಾಧ್ಯತೆ ಇದೆ.

ಈ ಹಿಂದೆ ಅಪಹಾಸ್ಯಕ್ಕೆ ಕಾರಣವಾಗಿದ್ದ ಬಿಬಿಎಂಪಿ

ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸಿದ್ದ ವೇಳೆ 14ಕಿಲೋ ಮೀಟರ್‌ ರಸ್ತೆಯನ್ನು ಒಟ್ಟು 23ಕೋಟಿ ರೂ. ವೆಚ್ಚದಲ್ಲಿ ಬಿಬಿಎಂಪಿ ಮುಚ್ಚಿತ್ತು. ಆದರೆ ಕೆಲವೆಡೆ ಕಳೆಪೆ ಕಾಮಗಾರಿ ಆಗಿದ್ದರಿಂದ ಡಾಂಬರು ಎರಡೇ ದಿನಕ್ಕೆ ಕಿತ್ತು ಬಂದಿತ್ತು. ಇದರಿಂದಾಗಿ ಬೆಂಗಳೂರು ರಾಷ್ಟ್ರಮಟ್ಟದಲ್ಲಿ ಸುದ್ದಿಯಾದ ಬೆನ್ನಲ್ಲೆ ಪ್ರಧಾನಮಂತ್ರಿ ಕಚೇರಿ ರಸ್ತೆ ದುರಸ್ಥಿ ಕಾಮಗಾರಿ ಬಗ್ಗೆ ವರದಿ ಕೇಳಿತ್ತು.

ಎಎಪಿಯಿಂದ ‘ನಮ್ಮಲ್ಲಿಗೂ ಬನ್ನಿ ಮೋದಿ’ ಅಭಿಯಾನ

ಶಾಸಕರು ನಿರಂತರವಾಗಿ ಕೆಲಸ ಮಾಡಬೇಕೆಂದರೆ ಪ್ರಧಾನಿ ನರೇಂದ್ರ ಮೋದಿಯವರು ವಾರಕ್ಕೊಮ್ಮೆ ಬೆಂಗಳೂರಿಗೆ ಬರುತ್ತಿರಬೇಕು ಎಂದು ಆಮ್‌ ಆದ್ಮಿ ಪಾರ್ಟಿಯ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಟ್ವೀಟ್ ಮಾಡಿದ್ದಾರೆ. ಪ್ರಧಾನಿ ಆಗಮನ ಹಿನ್ನೆಲೆ ರಸ್ತೆ ದುರಸ್ತೆ ಕಾರ್ಯ ನಡೆಸಿದ್ದರಿಂದ ಎಎಪಿಯು ‘ನಮ್ಮಲ್ಲಿಗೂ ಬನ್ನಿ ಮೋದಿ’ ಅಭಿಯಾನ ಎಂಬ ಅಭಿಯಾನ ಆರಂಭಿಸಿದೆ.

ಸದಾ ಗೊರಕೆ ಹೊಡೆಯುವ ಇಲ್ಲಿನ ಬಿಜೆಪಿ ಶಾಸಕರು ರಸ್ತೆಗುಂಡಿ ಮುಚ್ಚಿಸುತ್ತಾರೆ. ಸುಣ್ಣಬಣ್ಣ ಹೊಡೆಯುತ್ತಾರೆ. ನನ್ನ ಒಂದೇ ಮನವಿ ಮೋದಿಯವರೇ, ನೀವು ಆಗಾಗ ವಾರಕ್ಕೊಮ್ಮೆ ಬರುತ್ತಿರಿ. ನಿಮ್ಮ ಶಾಸಕರು ಆಗಲಾದರೂ ಕೆಲಸ ಮಾಡುತ್ತಾರೋ ನೋಡೋಣ ಎಂದು ವ್ಯಂಗ್ಯವಾಡಿದ್ದಾರೆ. ​​

Published On - 10:55 am, Thu, 10 November 22

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?