AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ನಗರದಲ್ಲಿ ನೂರರ ಗಡಿ ದಾಟಿದ ಕಂಟೈನ್ಮೆಂಟ್ ವಲಯ; ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾದ ಬಿಬಿಎಂಪಿ

ಬೊಮ್ಮನಹಳ್ಳಿ-36, ದಕ್ಷಿಣ ವಲಯ-24, ಮಹದೇವಪುರ-12, ಪೂರ್ವ ವಲಯ-11, ಪಶ್ಚಿಮ ವಲಯ-8, ಆರ್.ಆರ್.ನಗರ-4, ಯಲಹಂಕ-4, ದಾಸರಹಳ್ಳಿ-2. 8 ವಲಯಗಳ ಪೈಕಿ ಬೊಮ್ಮನಹಳ್ಳಿಯಲ್ಲಿ ಹೆಚ್ಚು ಕಂಟೈನ್ಮೆಂಟ್ ಜೋನ್ ಮಾಡಲಾಗಿದೆ.

ಬೆಂಗಳೂರು: ನಗರದಲ್ಲಿ ನೂರರ ಗಡಿ ದಾಟಿದ ಕಂಟೈನ್ಮೆಂಟ್ ವಲಯ; ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾದ ಬಿಬಿಎಂಪಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Dec 21, 2021 | 8:25 AM

Share

ಬೆಂಗಳೂರು: ಕೊರೊನಾದ ವಿವಿಧ ತಳಿಗಳು ಈಗಾಗಲೇ ವಿಶ್ವವನ್ನು ಬಾಧಿಸುತ್ತಿವೆ. ಅದರಲ್ಲೂ ಮುಖ್ಯವಾಗಿ ಡೆಲ್ಟಾ (Delta Variant) ಮತ್ತು ಒಮಿಕ್ರಾನ್ (Omicron Variant)​ ದೊಡ್ಡ ತಲೆನೋವು ಸೃಷ್ಟಿಸಿದ ತಳಿಗಳು. ಇತ್ತೀಚೆಗಷ್ಟೇ ಪತ್ತೆಯಾದ ಒಮಿಕ್ರಾನ್ ಸೋಂಕಿನ ಪ್ರಸರಣದ ಪ್ರಮಾಣ ಹೆಚ್ಚಾಗಿದೆ. ಹೀಗಾಗಿ ಮುನ್ನೇಚ್ಚರಿಕೆ ಕ್ರಮಕ್ಕೆ ಮುಂದಾಗಿದ್ದು, ಬೆಂಗಳೂರಲ್ಲಿ ಕಂಟೈನ್ಮೆಂಟ್ ಜೋನ್ ಸಂಖ್ಯೆ ನೂರರ ಗಡಿದಾಟಿದೆ. 8 ವಲಯಗಳಲ್ಲಿ ಕಂಟೈನ್ಮೆಂಟ್​ ಜೋನ್‌ಗಳ ಸಂಖ್ಯೆ 106ಕ್ಕೇರಿಕೆಯಾಗಿದೆ.

ನಗರದಲ್ಲಿ ನೂರರ ಗಡಿದಾಟಿದ ಕಂಟೈನ್ಮೆಂಟ್​ ವಲಯ ಬೊಮ್ಮನಹಳ್ಳಿ-36, ದಕ್ಷಿಣ ವಲಯ-24, ಮಹದೇವಪುರ-12, ಪೂರ್ವ ವಲಯ-11, ಪಶ್ಚಿಮ ವಲಯ-8, ಆರ್.ಆರ್.ನಗರ-4, ಯಲಹಂಕ-4, ದಾಸರಹಳ್ಳಿ-2. 8 ವಲಯಗಳ ಪೈಕಿ ಬೊಮ್ಮನಹಳ್ಳಿಯಲ್ಲಿ ಹೆಚ್ಚು ಕಂಟೈನ್ಮೆಂಟ್ ಜೋನ್ ಮಾಡಲಾಗಿದೆ. ಒಟ್ಟಾರೆ ಕೊವಿಡ್ ಕೇಸ್ ಪತ್ತೆ ಸಂಖ್ಯೆ ಹೆಚ್ಚಳವಾಗುತ್ತಿರುವುದರಿಂದ ಕಟ್ಟುನಿಟ್ಟಿನ ಕ್ರಮಕ್ಕೆ ಬಿಬಿಎಂಪಿ ಮುಂದಾಗಿದೆ.

ಒಮಿಕ್ರಾನ್ ಹಾಗೂ ಕೊರೊನಾತಂಕ ಹೆಚ್ಚಳ; ಸರ್ಕಾರದಿಂದ ಶೀಘ್ರದಲ್ಲೇ ಮಹತ್ವದ ಆದೇಶ ಸಾಧ್ಯತೆ ಕೊರೊನಾ 3ನೇ ಅಲೆ, ಒಮಿಕ್ರಾನ್ ಸೋಂಕಿನ ಆಂತಕ ಹಿನ್ನೆಲೆ ಸರ್ಕಾರ ಶೀಘ್ರದಲ್ಲೇ ಮತ್ತೊಂದು ಮಹತ್ವದ ಆದೇಶ ನೀಡುವ ಸಾಧ್ಯತೆ ಇದೆ ಎಂದು ಸರ್ಕಾರದ ಉನ್ನತ ಅಧಿಕಾರಿಗಳು ಟಿವಿ9 ಡಿಜಿಟಲ್​ಗೆ ಮಾಹಿತಿ ನೀಡಿದ್ದಾರೆ. ಈಗಾಗಲೇ ಮಾಲ್, ಸಿನಿಮಾ ಥಿಯೇಟರ್, ಕಮರ್ಷಿಯಲ್ ಕಾಂಪ್ಲೆಕ್ಸ್​ಗಳ ಪ್ರವೇಶಕ್ಕೆ ಸರ್ಕಾರ 2 ಡೋಸ್​ ಲಸಿಕೆ ಕಡ್ಡಾಯಗೊಳಿಸಿದೆ. ಈಗ ದೇವಸ್ಥಾನ, ಬಸ್, ಮೆಟ್ರೋ, ಬಾರ್, ರೆಸ್ಟೋರೆಂಟ್​ಗಳ ಪ್ರವೇಶಕ್ಕೂ 2 ಡೋಸ್ ಲಸಿಕೆ ಕಡ್ಡಾಯ ಮಾಡಲು ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆ ಇದೆ.

2 ಡೋಸ್ ಲಸಿಕೆ ಪಡೆದಿರುವ ಸರ್ಟಿಫಿಕೇಟ್ ಇದ್ದರೆ ಮಾತ್ರ ದೇವಸ್ಥಾನ, ಬಾರ್, ರೆಸ್ಟೋರೆಂಟ್, ಬಸ್, ಮೆಟ್ರೋ ಸಂಚಾರಕ್ಕೆ ಅವಕಾಶ ನೀಡಲಾಗುತ್ತದೆ. ಹೊಸ ವರ್ಷಕ್ಕೂ ಮುನ್ನವೇ ಇಂತಹದೊಂದು ಆದೇಶವನ್ನು ಸರ್ಕಾರ ಹೊರಡಿಸುವ ಸಾಧ್ಯತೆ ಇದೆ.

ಇದನ್ನೂ ಓದಿ: ದೇಶದಲ್ಲಿ 161 ಒಮಿಕ್ರಾನ್‌ ಪ್ರಕರಣ ಪತ್ತೆ: ರಾಜ್ಯಸಭೆಯಲ್ಲಿ ಕೇಂದ್ರ ಆರೋಗ್ಯ ಸಚಿವ ಮಾಂಡವಿಯಾ

ಒಬ್ಬ ವ್ಯಕ್ತಿಗೆ ಏಕಕಾಲಕ್ಕೆ ಡೆಲ್ಟಾ ಮತ್ತು ಒಮಿಕ್ರಾನ್​ ಸೋಂಕು ತಗುಲಿದರೆ ಏನಾಗುತ್ತದೆ? ಆರೋಗ್ಯ ತಜ್ಞರು ನೀಡಿದ ಉತ್ತರ ಭಯಹುಟ್ಟಿಸುವಂತಿದೆ !

Published On - 8:18 am, Tue, 21 December 21

Follow Us
Web contact
Web contact

TV9 Kannada

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ
ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ