ಬೆಂಗಳೂರು, ಡಿಸೆಂಬರ್ 18: ನಾಲ್ಕು ಎಸ್ಐಟಿಗಳಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದ ಹಿನ್ನೆಲೆ ಬಿಬಿಎಂಪಿ (BBMP) ಕಾಮಗಾರಿ ತನಿಖೆಗೆ ರಚಿಸಿದ್ದ ಎಸ್‌ಐಟಿ ತಂಡಗಳನ್ನು ರಾಜ್ಯ ಸರ್ಕಾರ ಹಿಂಪಡೆದಿದೆ. SIT ಬದಲು ನಾಗಮೋಹನದಾಸ್ ಕಮಿಟಿಯಿಂದ ಮಾತ್ರ ತನಿಖೆ ನಡೆಸಲು ಸೂಚನೆ ನೀಡಲಾಗಿದೆ. 4 SIT ತನಿಖಾ ತಂಡ ಸಂಗ್ರಹಿಸಿದ ಮಾಹಿತಿಯನ್ನು ನಾಗಮೋಹನದಾಸ್ ಆಯೋಗಕ್ಕೆ ಮಾಹಿತಿ ಸಲ್ಲಿಸುವಂತೆ ಸೂಚಿಸಲಾಗಿದೆ.
ಆಗಸ್ಟ್ ತಿಂಗಳಿನಲ್ಲಿ ರಾಜ್ಯ ಸರ್ಕಾರ ಎಸ್‌ಐಟಿ ರಚನೆ ಮಾಡಿತ್ತು. 2019ರಿಂದ 2023ರವರೆಗಿನ ಬಿಬಿಎಂಪಿ ವ್ಯಾಪ್ತಿಯ ಯೋಜನೆ, ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾಗಿದ್ದ ಅಕ್ರಮದ ಬಗ್ಗೆ ತನಿಖೆಗೆ ವಿಶೇಷ ತನಿಖಾ ತಂಡವನ್ನು ಸರ್ಕಾರ ರಚಿಸಿತ್ತು. ಸದ್ಯ ಹೈಕೋರ್ಟ್ನಲ್ಲಿ ಹಿನ್ನಡೆ ಹಿನ್ನೆಲೆ SIT ತಂಡ ಹಿಂಪಡೆದು ಆದೇಶ ಹೊರಡಿಸಲಾಗಿದೆ.
ಇದನ್ನೂ ಓದಿ: ಆಸ್ತಿ ತೆರಿಗೆ ವಸೂಲಿಗೆ ಹೊಸ ಪ್ಲಾನ್; ಚರಾಸ್ತಿ ಜಪ್ತಿ ಮಾಡಿ ಹರಾಜು ಹಾಕಲು ಮುಂದಾದ ಬಿಬಿಎಂಪಿ
ಟೆಂಡರ್ ಪ್ರಕ್ರಿಯೆ ನಿಯಮಗಳ ಉಲ್ಲಂಘನೆ, ನಿರ್ದಿಷ್ಟ ಗುತ್ತಿಗೆದಾರರನ್ನು ಬಿಟ್ಟು ನಕಲಿ ಗುತ್ತಿಗೆದಾರರಿಗೆ ಹಣ ಪಾವತಿ ಆರೋಪ, ನಕಲಿ ಬಿಲ್ ಸೃಷ್ಟಿ, ಕಾಮಗಾರಿ ನಡೆಸದೆಯೇ ಬಿಲ್ ಪಾವತಿ, ಗುಣಮಟ್ಟ ಕಾಪಾಡದಿರುವುದು ಸೇರಿ ಹಲವು ಆರೋಪಗಳು ಕೇಳಿಬಂದಿದ್ದರಿಂದ ಅಕ್ರಮಗಳ ತನಿಖೆಗೆ ಎಸ್‌ಐಟಿ ರಚಿಸಲಾಗಿತ್ತು.
ಅಕ್ರಮಗಳ ಆರೋಪದ ಬಗ್ಗೆ ಮಾತನಾಡಿದ ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್, ಆರೋಪದ ಬಗ್ಗೆ ತನಿಖೆ ಮಾಡಿಸೋಣ. ನನ್ನ ವಿರುದ್ಧ ತನಿಖೆ ಮಾಡಿಸಬೇಕೆಂದು ಡಾ.ಅಶ್ವತ್ಥ ನಾರಾಯಣ ಹೇಳಿದ್ದರು. ಮುನಿರತ್ನ ವಿರುದ್ಧದ ಆರೋಪ ಬಗ್ಗೆ ತನಿಖೆ ಮಾಡಿಸಿ ಎಂದಿದ್ದರು. ಬಿಬಿಎಂಪಿಯಲ್ಲಿ ನಡೆದ ಅಕ್ರಮಗಳ ಬಗ್ಗೆಯೂ ತನಿಖೆ ಮಾಡುತ್ತೇವೆ ಎಂದು ಹೇಳಿದ್ದರು.
ಇದನ್ನೂ ಓದಿ: ಕಾಮಗಾರಿ ನಡೆಸದೇ 118 ಕೋಟಿ ರೂ. ನಕಲಿ ಬಿಲ್ ಸೃಷ್ಟಿ: 11 ಅಧಿಕಾರಿಗಳು ಅಮಾನತು
ಬಿಬಿಎಂಪಿಯಲ್ಲಿ ಕೆಲಸ ಯಾರು ಕೊಟ್ಟರು ಗೊತ್ತಿಲ್ಲ, ಟೆಂಡರ್ ಆಗಿಲ್ಲ ಆದರೂ ಕಾಮಗಾರಿ ಮಾಡಿದ್ದಾರೆ. 25 ದಿನಕ್ಕೆ, 15 ದಿನಕ್ಕೆ ಬಿಲ್ ಆಗಿಡುತ್ತದಯೇ? ಹದಿನೈದೇ ದಿನಕ್ಕೆ ಇಲ್ಲಿ ಕೆಲಸ ಆಗಿಬಿಡತ್ತಾ? ಈ ಅನುಮಾನ ಹಿನ್ನೆಲೆ ಪರಿಶೀಲನೆಗೆ ಅಧಿಕಾರಿಗಳನ್ನು ಹಾಕಿದ್ದೇನೆ ಎಂದು ಡಿಕೆ ಶಿವಕುಮಾರ್ ಹೇಳಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.