BBMP Lorry Accident: ಬೆಂಗಳೂರಿನಲ್ಲಿ ಬಿಬಿಎಂಪಿ ಕಸದ ಲಾರಿಗೆ ಮಹಿಳೆ ಬಲಿ

| Updated By: ಸಾಧು ಶ್ರೀನಾಥ್​

Updated on: Jul 09, 2022 | 10:05 PM

ರಾಜಧಾನಿ ಬೆಂಗಳೂರಿನಲ್ಲಿ ಬಿಬಿಎಂಪಿ ಲಾರಿಗೆ ಮತ್ತೊಬ್ಬರು ಬಲಿಯಾಗಿದ್ದಾರೆ. ಬಿಬಿಎಂಪಿ ಟಿಪ್ಪರ್ ಲಾರಿ ಡಿಕ್ಕಿಯಾಗಿ ಮಹಿಳೆ ಸಾವನ್ನಪ್ಪಿದ್ದಾರೆ.

BBMP Lorry Accident: ಬೆಂಗಳೂರಿನಲ್ಲಿ ಬಿಬಿಎಂಪಿ ಕಸದ ಲಾರಿಗೆ ಮಹಿಳೆ ಬಲಿ
ಬಿಬಿಎಂಪಿ ಕಚೇರಿ
Follow us on

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಬಿಬಿಎಂಪಿ ಲಾರಿಗೆ ಮತ್ತೊಬ್ಬರು ಬಲಿಯಾಗಿದ್ದಾರೆ. ಬಿಬಿಎಂಪಿ ಟಿಪ್ಪರ್ ಲಾರಿ ಡಿಕ್ಕಿಯಾಗಿ ಮಹಿಳೆ ಸಾವನ್ನಪ್ಪಿದ್ದಾರೆ. ಬ್ಯಾಟರಾಯನಪುರ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶನಿವಾರ ಬೆಳಗ್ಗೆ 9.50ರ ಸುಮಾರಿಗೆ ಘಟನೆ ನಡೆದಿದೆ.

ನಾಗರಭಾವಿ ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ಕಲಾ-ಯೋಗೇಂದ್ರ ದಂಪತಿ ಹೋಗ್ತಿದ್ದ ವೇಳೆ ಹಿಂಬದಿಯಿಂದ ಬಿಬಿಎಂಪಿ ಕಸದ ವಾಹನ ಬೈಕ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ನಲ್ಲಿದ್ದ ವಿಜಯ ಕಲಾ ಹಾಗೂ ಯೋಗೇಂದ್ರಗೆ ಗಂಭೀರ ಗಾಯಗಳಾಗಿತ್ತು. ಕೂಡಲೇ ಇಬ್ಬರನ್ನೂ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಗದೆ ವಿಜಯಕಲಾ ಅವರು ಮಧ್ಯಾಹ್ನ‌12.30ರ ಸುಮಾರಿಗೆ ಮೃತಪಟ್ಟಿದ್ದಾರೆ.

ಸದ್ಯ ಬೈಕ್ ಸವಾರ ಯೋಗೆಂದ್ರಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಪ್ರಕರಣ ದಾಖಲಿಸಿಕೊಂಡು, ಬ್ಯಾಟರಾಯನಪುರ ಸಂಚಾರಿ ಠಾಣೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Published On - 9:57 pm, Sat, 9 July 22