AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBMP: ಮಳೆ ಅವಘಡ ತಪ್ಪಿಸಲು ಕಂಟ್ರೋಲ್ ರೂಮ್ ಸ್ಥಾಪನೆಗೆ ಮುಂದಾದ ಬಿಬಿಎಂಪಿ

ಕಳೆದ ಮೂರ್ನಾಲ್ಕು ದಿನಗಳಿಂದ ಬೆಂಗಳೂರಿನ ಹಲವೆಡೆ ಮಹಾ ಮಳೆಯಿಂದ ಅನೇಕ ಅವಘಡಗಳು ಸಂಭವಿಸಿವೆ. ಹೀಗಾಗಿ BBMP ನಗರದಾದ್ಯಂತ ತಾತ್ಕಾಲಿಕ ಮಾನ್ಸೂನ್ ಕಂಟ್ರೋಲ್ ರೂಮ್ ಸ್ಥಾಪಿಸಲು ಮುಂದಾಗಿದೆ.

BBMP: ಮಳೆ ಅವಘಡ ತಪ್ಪಿಸಲು ಕಂಟ್ರೋಲ್ ರೂಮ್ ಸ್ಥಾಪನೆಗೆ ಮುಂದಾದ ಬಿಬಿಎಂಪಿ
ಬಿಬಿಎಂಪಿ
ಆಯೇಷಾ ಬಾನು
|

Updated on:May 24, 2023 | 11:26 AM

Share

ಬೆಂಗಳೂರು: ನಗರದಾದ್ಯಂತ ವರುಣನ ಅಬ್ಬರ ಜೋರಾಗಿದ್ದು ಭಾರೀ ಅನಾಹುತಗಳು ಸಂಭವಿಸುತ್ತಿವೆ(Bengaluru Rain). ಹೀಗಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ನಗರದಾದ್ಯಂತ ತಾತ್ಕಾಲಿಕ ಮಾನ್ಸೂನ್  ಕಂಟ್ರೋಲ್ ರೂಮ್ ಸ್ಥಾಪಿಸಲಿದೆ(Monsoon Control Rooms). ಈ ಕಂಟ್ರೋಲ್ ರೂಮ್​ಗಳು ಭಾರೀ ಮಳೆಯ ಸಮಯದಲ್ಲಿ ಜನರಿಗೆ ಸಹಾಯ ಮಾಡಲಿವೆ.

ಕಳೆದ ಮೂರ್ನಾಲ್ಕು ದಿನಗಳಿಂದ ಬೆಂಗಳೂರಿನ ಹಲವೆಡೆ ಮಹಾ ಮಳೆಯಿಂದ ಅನೇಕ ಅವಘಡಗಳು ಸಂಭವಿಸಿವೆ. ಮರಗಳು, ವಿದ್ಯುತ್ ಕಂಬಗಳು ಧರೆಗೆ ಉರುಳಿವೆ. ಮನೆಗಳಲ್ಲಿ ಮಳೆ ನೀರು ತುಂಬಿ ಜನಜೀವನ ಅಸ್ತವ್ಯಸ್ತವಾಗಿದೆ. ರಸ್ತೆಗಳು ಕೆರೆಯಂತಾಗಿ ವಾಹನ ಸವಾರರು ಜೀವ ಕೈಯಲ್ಲಿಡಿದು ಸಂಚರಿಸುವಂತಾಗಿದೆ. ಹೀಗಾಗಿ ಮಳೆಯಿಂದಾದ ಸಮಸ್ಯೆಗಳನ್ನು ಕಡಿಮೆ ಮಾಡಲು ಮತ್ತು ಸಕಾಲಿಕ ಸಹಾಯವನ್ನು ನೀಡಲು ಬಿಬಿಎಂಪಿಯು ನಗರದಲ್ಲಿ ತಾತ್ಕಾಲಿಕ ಮಾನ್ಸೂನ್ ಕಂಟ್ರೋಲ್ ರೂಮ್ಗಳನ್ನು ಸ್ಥಾಪಿಸಲು ಮುಂದಾಗಿದೆ. ಪಾಲಿಕೆ ಉಪವಿಭಾಗ ಮಟ್ಟದಲ್ಲಿ 63 ತಾತ್ಕಾಲಿಕ ಮಾನ್ಸೂನ್ ಕಂಟ್ರೋಲ್ ರೂಮ್​ಗಳನ್ನು ಸ್ಥಾಪಿಸಲು ಸಿದ್ಧತೆ ನಡೆಯುತ್ತಿದೆ. ಜೂನ್ 1ಕ್ಕೆ ಈ ಕೊಠಡಿಗಳು ಕಾರ್ಯಾರಂಭ ಮಾಡುವ ನಿರೀಕ್ಷೆ ಇದೆ.

ಇದನ್ನೂ ಓದಿ: Karnataka Rains: ರಾಜ್ಯದ ಈ 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​, 3 ದಿನ ಮಹಾ ಮಳೆಯ ಮುನ್ಸೂಚನೆ

ಬಿಬಿಎಂಪಿ ತಾತ್ಕಾಲಿಕ ಮಾನ್ಸೂನ್ ಕಂಟ್ರೋಲ್ ರೂಂಗಳ ಸ್ಥಾಪನೆಗೆ ಟೆಂಡರ್ ನಡೆಸಿದ್ದು, ಪ್ರತಿ ನಿಯಂತ್ರಣ ಕೊಠಡಿಗೆ ಸುಮಾರು 1.25 ಲಕ್ಷ ರೂ. ವೆಚ್ಚವಾಗಲಿದೆ. ನಿಯಂತ್ರಣ ಕೊಠಡಿಗಳು ವರ್ಷವಿಡೀ ವಲಯ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತವೆ ಎಂದು ಬಿಬಿಎಂಪಿ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಮಾನ್ಸೂನ್ ಸಮಯದಲ್ಲಿ, ನಾವು ಉಪ-ವಿಭಾಗ ಮಟ್ಟದಲ್ಲಿ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸುತ್ತೇವೆ. ಭಾರೀ ಮಳೆಯಿಂದ ಉಂಟಾಗುವ ತುರ್ತು ಸಂದರ್ಭಗಳಲ್ಲಿ ನಿಯಂತ್ರಣ ಕೊಠಡಿಯ ಮೂಲಕ ಸಮಸ್ಯೆಯ ಮಾಹಿತಿ ಕಲೆ ಹಾಕಿ ಸಮಸ್ಯೆಯನ್ನು ಪರಿಹರಿಸಲಾಗುತ್ತೆ ಎಂದು ಅಧಿಕಾರಿ ತಿಳಿಸಿದರು.”

ಪ್ರತಿಯೊಂದು ನಿಯಂತ್ರಣ ಕೊಠಡಿಯು ಎಲ್ಲಾ ತುರ್ತು ಪರಿಸ್ಥಿತಿಗಳನ್ನು ನಿಭಾಯಿಸುವ ರೀತಿ ಸಂಪೂರ್ಣವಾಗಿ ಸಜ್ಜುಗೊಳಿಸಲಾಗುತ್ತದೆ ಮತ್ತು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಮೂಲಕ ಇದು ನಿರ್ವಹಿಸಲ್ಪಡುತ್ತದೆ. ಇದು ಐದು ಸಿಬ್ಬಂದಿ ತಂಡವಾಗಿರುತ್ತದೆ. ನಿಯಂತ್ರಣ ಕೊಠಡಿಗಳಲ್ಲಿ ಮರಗಳು ಬಿದ್ದ ಸಂದರ್ಭದಲ್ಲಿ ಮರ ಕಡಿಯುವ ಉಪಕರಣಗಳು, ಮುಳುಗಡೆಯ ಸಂದರ್ಭದಲ್ಲಿ 10 ಎಚ್‌ಪಿ ನೀರಿನ ಪಂಪ್‌ಗಳು, ಮಣ್ಣು ತೆಗೆಯುವ ಯಂತ್ರಗಳು ಮತ್ತು ಸಿಬ್ಬಂದಿಗೆ ತುರ್ತು ಸಹಾಯಕ್ಕಾಗಿ ಗಂಬೂಟ್ ಮತ್ತು ಜಾಕೆಟ್‌ಗಳನ್ನು ಬಳಸಿಕೊಳ್ಳಲು ಎಲ್ಲಾ ರೀತಿಯ ಉಪಕರಣಗಳು ಲಭ್ಯವಿರಲಿದೆ. ಸಮಸ್ಯೆ ಏನೆಂದು ತಿಳಿದು ಸಿಬ್ಬಂದಿ ಸ್ಥಳಕ್ಕೆ ಬಂದು ಸಮಸ್ಯೆ ಬಗೆಹರಿಸುತ್ತಾರೆ. ಹೀಗಾಗಿ ಅವಶ್ಯಕ ಉಪಕರಣಗಳ ಖರೀದಿಗೆ ಸಿದ್ಧತೆ ನಡೆದಿದೆ ಎಂದರು.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:24 am, Wed, 24 May 23

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!