ತ್ವರಿತವಾಗಿ ಬೀದಿ ಬದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ನೀಡಿ: ಬಿಬಿಎಂಪಿ ಮುಖ್ಯ ಆಯುಕ್ತ

|

Updated on: Mar 04, 2025 | 8:37 AM

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನಗರದ ಸುಮಾರು 27,000 ಬೀದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ನೀಡಲು ಯೋಜನೆ ರೂಪಿಸಿದೆ. ಮುಖ್ಯ ಆಯುಕ್ತರು ಅಧಿಕಾರಿಗಳಿಗೆ ತ್ವರಿತ ಗುರುತಿನ ಚೀಟಿ ವಿತರಣೆಗೆ ಸೂಚನೆ ನೀಡಿದ್ದಾರೆ. ಈ ಚೀಟಿಗಳ ವಿನ್ಯಾಸವನ್ನು ಅಂತಿಮಗೊಳಿಸಲಾಗುವುದು ಮತ್ತು ಗುರುತಿಸಲಾದ ವ್ಯಾಪಾರ ವಲಯಗಳಲ್ಲಿ ವ್ಯಾಪಾರಕ್ಕೆ ಅವಕಾಶ ನೀಡಲಾಗುವುದು. ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆಯನ್ನೂ ಪರಿಣಾಮಕಾರಿಯಾಗಿ ನಡೆಸಲು ಸೂಚಿಸಲಾಗಿದೆ.

ತ್ವರಿತವಾಗಿ ಬೀದಿ ಬದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ನೀಡಿ: ಬಿಬಿಎಂಪಿ ಮುಖ್ಯ ಆಯುಕ್ತ
ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್
Follow us on

ಬೆಂಗಳೂರು, ಮಾರ್ಚ್​ 04: ನಗರದಲ್ಲಿನ ಬೀದಿ ಬದಿ ವ್ಯಾಪಾರಿಗಳಿಗೆ (Street Vendors) ಗುರುತಿನ ಚೀಟಿ (Identity Card) ನೀಡಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಮುಂದಾಗಿದೆ. ಸಮೀಕ್ಷೆ ಮೂಲಕ ಗುರುತಿಸಲಾಗಿರುವ ಬೀದಿ ಬದಿ ವ್ಯಾಪಾರಿಗಳಿಗೆ ತ್ವರಿತವಾಗಿ ಗುರುತಿನ ಚೀಟಿ ನೀಡುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಸಂಗ್ರಹ, ಕಲ್ಯಾಣ ಕಾರ್ಯಕ್ರಮಗಳು, ಬೀದಿ ಬದಿ ವ್ಯಾಪಾರಿಗಳು, ಶಾಲೆಯಿಂದ ಹೊರಗುಳಿದ ಮಕ್ಕಳ‌ ಸಮೀಕ್ಷೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ಸೋಮವಾರ (ಮಾರ್ಚ್​ 03) ರಂದು ಅಧಿಕಾರಿಗಳ ಜೊತೆ ನಡೆಸಿದ ಸಭೆಯಲ್ಲಿ, ಪಾಲಿಕೆ ವ್ಯಾಪ್ತಿಯ ಎಂಟು ವಲಯಗಳಲ್ಲಿ ಸುಮಾರು 27 ಸಾವಿರ ಮಂದಿ ಬೀದಿ ಬದಿ ವ್ಯಾಪಾರಿಗಳನ್ನು ಗುರುತಿಲಾಗಿದೆ. ಎಲ್ಲರಿಗೂ ಶೀಘ್ರವಾಗಿ ಗುರುತಿನ ಚೀಟಿ ವಿತರಣೆ ಮಾಡಿ ಎಂದು ಹೇಳಿದರು.

ಇದನ್ನೂ ಓದಿ
ಬಿಬಿಎಂಪಿ ತೆರಿಗೆ ಬಾಕಿ: ವಿಧಾನಸೌಧ ಸೇರಿ 258 ಸರ್ಕಾರಿ ಕಚೇರಿಗಳಿಗೂ ನೋಟಿಸ್
ರೇಪ್ ಮಾಡಿ ಬಿಸಾಕಿದ್ರಾ: ಮಹಿಳಾ ಸಿಬ್ಬಂದಿಗೆ ಪಾಲಿಕೆ ಅಧಿಕಾರಿ ನಿಂದನೆ ಆರೋಪ
ಬೆಂಗಳೂರು ಆಸ್ತಿ ಮಾಲೀಕರಿಗೆ ಶಾಕ್ ನೀಡಲು ಮುಂದಾದ ಬಿಬಿಎಂಪಿ
ಬೆಂಗಳೂರಿನಲ್ಲಿ ಬೀದಿನಾಯಿಗಳಿಂದಾಗುವ ಅಪಾಯ ತಡೆಯಲು ಬಿಬಿಎಂಪಿ ಹೊಸ ಪ್ಲಾನ್

ಟ್ವಿಟರ್​ ಪೋಸ್ಟ್​

ಬೀದಿ ಬದಿ ವ್ಯಾಪಾರಿಗಳಿಗೆ ನೀಡುವ ಗುರುತಿನ ಚೀಟಿ ಯಾವ ಮಾದರಿಯಲ್ಲಿ ಇರಬೇಕೆಂದು ಅಂತಿಗೊಳಿಸಿ. ಗುರುತಿನ ಚೀಟಿ ನೀಡಿದ ಬಳಿಕ ಗುರುತಿಸಿರುವಂತಹ ವ್ಯಾಪಾರ ವಲಯಗಳಲ್ಲಿ, ಬೀದಿ ಬದಿ ವ್ಯಾಪಾರಿಗಳು ವ್ಯಾಪಾರ ಮಾಡಲು ಅನುವು ಮಾಡಿಕೊಬೇಕು ಎಂದು ಸೂಚಿಸಿದರು.

ಇದನ್ನೂ ಓದಿ: ಸ್ವಚ್ಛ ಬೆಂಗಳೂರಿಗಾಗಿ ವಿದೇಶಿ ಕಸ ಗುಡಿಸುವ ಯಂತ್ರ ಬಾಡಿಗೆ ಪಡೆಯಲು ಮುಂದಾದ ಬಿಬಿಎಂಪಿ: ಕೋಟ್ಯಂತರ ಖರ್ಚು

ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆ

ಬಿಬಿಎಂಪಿ ವ್ಯಾಪ್ತಿಯಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷಾ ಕಾರ್ಯವನ್ನು ಪರಿಣಾಮಕಾರಿಯಾಗಿ ನಡೆಸುವುದರ ಜೊತೆಗೆ ತ್ವರಿತಗತಿಯಲ್ಲಿ ಗುರುತಿಸಿ ಎಂದು ಸೂಚಿಸಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ