Sign In

By signing in or creating an account, you agree with Associated Broadcasting Company's Terms & Conditions and Privacy Policy.

BBMP Budget 2023: ಇಂದು ಬಿಬಿಎಂಪಿ ಬಜೆಟ್ ಮಂಡನೆ, ಜನಪರ ಯೋಜನೆಗಳಿಗೆ ಆಧ್ಯತೆ

ಬಿಬಿಎಂಪಿ ಹಣಕಾಸು ವಿಭಾಗದ ವಿಶೇಷ ಆಯುಕ್ತ ಜಯರಾಂ ರಾಯಪುರ ಇಂದು ಬೆಳಿಗ್ಗೆ 11:30ಕ್ಕೆ ಬಜೆಟ್​​ ಮಂಡಿಸಲಿದ್ದಾರೆ.

BBMP Budget 2023: ಇಂದು ಬಿಬಿಎಂಪಿ ಬಜೆಟ್ ಮಂಡನೆ, ಜನಪರ ಯೋಜನೆಗಳಿಗೆ ಆಧ್ಯತೆ
ಬಿಬಿಎಂಪಿ
Follow us
ಆಯೇಷಾ ಬಾನು
|

Updated on:Mar 02, 2023 | 8:26 AM

ಬೆಂಗಳೂರು: ಬಿಬಿಎಂಪಿಯು(BBMP) ಇಂದು 2023-24ನೇ ಸಾಲಿನ ಬಿಬಿಎಂಪಿ ಬಜೆಟ್ ಮಂಡಿಸುತ್ತಿದೆ(BBMP Budget 2023). ಬೆಂಗಳೂರಿನ ಟೌನ್​ಹಾಲ್​ನಲ್ಲಿ(Townhall) ಬಿಬಿಎಂಪಿ ಬಜೆಟ್ ಮಂಡನೆ ಮಾಡಲಾಗುತ್ತಿದೆ. ರಾಜ್ಯದಲ್ಲಿ ಚುನಾವಣೆ(Karnataka Assembly Elections 2023) ಸಮೀಪಿಸುತ್ತಿರುವ ಹಿನ್ನೆಲೆ ನಿರೀಕ್ಷೆಯಂತೆ ಸರಕಾರದ ಆಣತಿಯಂತೆ ಜನಪರ ಯೋಜನೆಗಳಿಗೆ ಬಜೆಟ್‌ನಲ್ಲಿ ಆದ್ಯತೆ ನೀಡುವ ಸಾಧ್ಯತೆಗಳು ಹೆಚ್ಚಿವೆ.

ಬಿಬಿಎಂಪಿ ಹಣಕಾಸು ವಿಭಾಗದ ವಿಶೇಷ ಆಯುಕ್ತ ಜಯರಾಂ ರಾಯಪುರ ಇಂದು ಬೆಳಿಗ್ಗೆ 11:30ಕ್ಕೆ ಬಜೆಟ್​​ ಮಂಡಿಸಲಿದ್ದಾರೆ. ಸುಮಾರು 10 ಸಾವಿರ ಕೋಟಿ ಆಯವ್ಯಯ ಮಂಡನೆ ಸಾಧ್ಯತೆ ಇದೆ. ವೃದ್ಧರಿಗೆ ಆಶ್ರಯ ನೀಡುವ ಶ್ರವಣ ವಸತಿ ಯೋಜನೆ, ಉದ್ಯೋಗಸ್ಥ ಮಹಿಳೆಯರಿಗೆ ವಸತಿ ಕಲ್ಪಿಸಲು ಸಾವಿತ್ರಿಬಾಯಿ ಫುಲೆ ಹೆಸರಲ್ಲಿ ಯೋಜನೆ ಜಾರಿ ಸಾಧ್ಯತೆ. ಇಂದಿರಾ ಕ್ಯಾಂಟೀನ್ ಗೆ ಅನುದಾನ ಮೀಸಲಿಡುವ ಸಾಧ್ಯತೆ ಇದೆ. ಹಾಗೂ ನೂತನ ಫ್ಲೈಓವರ್, ಒಂಟಿ ಮನೆ ಯೋಜನೆ, ಬಿಬಿಎಂಪಿ ಶಾಲಾ ಕಾಲೇಜು ಅಭಿವೃದ್ಧಿ, ನೂತನ ರಸ್ತೆಗೆ ಹಣ ಮೀಸಲು ಬಗ್ಗೆ ಬಜೆಟ್​ನಲ್ಲಿ ಘೋಷಣೆಯಾಗುವ ನಿರೀಕ್ಷೆ ಇದೆ.

ಇದನ್ನೂ ಓದಿ: ಜಿಲ್ಲಾ-ತಾಲೂಕು ಪಂಚಾಯಿತಿ ಚುನಾವಣೆ: ಇಂದು ಆಯೋಗದ ಪಿಐಎಲ್​ ವಿಚಾರಣೆ ನಡೆಸಲಿರುವ ಹೈಕೋರ್ಟ್

2022-23ನೇ ಸಾಲಿನಲ್ಲಿ ಮಾ. 31ರ ರಾತ್ರಿ 10,484.28 ಕೋಟಿ ರೂ. ಗಾತ್ರದ ಬಜೆಟ್‌ ಅನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಿತ್ತು. ಆನಂತರ ಸರಕಾರ ಆಯವ್ಯಯದ ಗಾತ್ರವನ್ನು 377.5 ಕೋಟಿಗಳಷ್ಟು ಹೆಚ್ಚಿಸಿ ಒಪ್ಪಿಗೆ ನೀಡಿತ್ತು. ಈ ಬಾರಿ ಸಹ ಅಧಿಕಾರಿಗಳೇ ಬಜೆಟ್ ಮಂಡನೆ ಮಾಡಲಿದ್ದು, ಸುಮಾರು 10 ಸಾವಿರ ಕೋಟಿ ರೂ. ಆಯವ್ಯಯ ಮಂಡನೆ ಸಾಧ್ಯತೆ ಇದ್ದು, ಚುನಾವಣೆಗೆ ಪೂರಕವಾದ ಯೋಜನೆಗಳು ಘೋಷಣೆಯಾಗುವ ನಿರೀಕ್ಷೆಗಳಿವೆ.

ಹಲವು ನಿರೀಕ್ಷೆಗಳು

ವೃದ್ಧವರಿಗೆ ಆಶ್ರಯ ನೀಡುವ ಶ್ರವಣ ವಸತಿ ಯೋಜನೆ, ಉದ್ಯೋಗಸ್ಥ ಮಹಿಳೆಯರಿಗೆ ವಸತಿ ಕಲ್ಪಿಸಲಿ ಸಾವಿತ್ರಿಬಾಯಿ ಫುಲೆ ಹೆಸರಲ್ಲಿ ಯೋಜನೆ ಜಾರಿ ಸಾಧ್ಯತೆ ಇದೆ. ಇನ್ನು ಇಂದಿರಾ ಕ್ಯಾಂಟೀನ್​ಗೂ ಅನುದಾನ ಮೀಸಲಿಡುವ ಸಾಧ್ಯತೆಗಳಿವೆ. ಕೇಂದ್ರ ಮತ್ತು ರಾಜ್ಯ ಬಜೆಟ್‌ಗಳನ್ನು ಮಂಡಿಸಿರುವ ಬಿಜೆಪಿ, ಬೆಂಗಳೂರಿಗರನ್ನು ಒಲಿಸಿಕೊಳ್ಳಲು ಬಜೆಟ್‌ನಲ್ಲಿ ಹಲವಾರು ಯೋಜನೆಗಳನ್ನು ಘೋಷಿಸುವ ನಿರೀಕ್ಷೇಯಿದ. ಶಿಕ್ಷಣ, ಆರೋಗ್ಯ ಮತ್ತು ಕಲ್ಯಾಣ ಕ್ರಮಗಳ ಮೇಲೆ ಬಜೆಟ್ ಒತ್ತು ನೀಡಿದರೆ ಆಸ್ತಿ ತೆರಿಗೆಯಲ್ಲಿ ಇಳಿಕೆಯಾಗುವ ಸಾಧ್ಯತೆಯಿದೆ. ಕಳೆದ ವರ್ಷದ ಕೆಲವು ಯೋಜನೆಗಳನ್ನು ಉಳಿಸಿಕೊಳ್ಳಲು ಬಿಬಿಎಂಪಿ ಚಿಂತನೆ ನಡೆಸಿದೆ ಎನ್ನಲಾಗಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:26 am, Thu, 2 March 23

ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ