Demolition Drive: ಇಂದು ಘರ್ಜಿಸಲಿದೆ ಬುಲ್ಡೋಜರ್, ಬೆಂಗಳೂರಿನಲ್ಲಿ ಒತ್ತುವರಿ ತೆರವು ಕಾರ್ಯ ಮತ್ತೆ ಶುರು

BBMP: ರಾಜಕಾಲುವೆ ಒತ್ತುವರಿ ಎಂದು ಗುರುತಿಸಿ ತೆರವುಗೊಳಿಸುವುದಕ್ಕೆ ತಹಶೀಲ್ದಾರ್ ಆದೇಶ ನೀಡಿದ್ದಾರೆ. ಒತ್ತುವರಿದಾರರಿಗೆ ಬಿಬಿಎಂಪಿ ಅಧಿಕಾರಿಗಳಿಂದ ತೆರವುಗೊಳಿಸುವ ಬಗ್ಗೆ ಮಾಹಿತಿ ನೀಡಿದ್ದು, ಅಗತ್ಯವಿರುವ ವಸ್ತುಗಳನ್ನು ತೆಗೆದುಕೊಳ್ಳುವಂತೆ ಸೂಚನೆ ನೀಡಲಾಗಿದೆ

Demolition Drive: ಇಂದು ಘರ್ಜಿಸಲಿದೆ ಬುಲ್ಡೋಜರ್, ಬೆಂಗಳೂರಿನಲ್ಲಿ ಒತ್ತುವರಿ ತೆರವು ಕಾರ್ಯ ಮತ್ತೆ ಶುರು
ಬೆಂಗಳೂರಿನಲ್ಲಿ ಒತ್ತುವರಿ ತೆರವು ಕಾರ್ಯ ಮತ್ತೆ ಶುರು
Follow us
ಸಾಧು ಶ್ರೀನಾಥ್​
|

Updated on:Jun 17, 2023 | 7:47 AM

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಇಂದು ಮತ್ತೆ ಬುಲ್ಡೋಜರ್ ಘರ್ಜಿಸಲಿದೆ. ಬೃಹತ್​​ ಬೆಂಗಳೂರು ಮಹಾನಗರ ಪಾಲಿಕೆ (Bruhat Bengaluru Mahanagara Palike) ಕಡೆಯಿಂದ 9 ಗಂಟೆಯ ಬಳಿಕ ತೆರವು ಕಾರ್ಯ (anti-encroachment drive and demolish) ಶುರುವಾಗಲಿದ್ದು, ಒತ್ತುವರಿ ತೆರುವುದಾರರಿಗೆ ಪಾಲಿಕೆ ಬಿಗ್ ಶಾಕ್ ನೀಡಿದೆ. ಮಹಾದೇವಪುರ (Mahadevapura) ಹಾಗೂ ಕೆ ಆರ್ ಪುರಂ (KR Puram) ಎರಡು ಕಡೆ ಜೆಸಿಬಿಗಳು ಘರ್ಜಿಸಲಿವೆ. ಪಾಲಿಕೆಯು ಸದ್ಯಕ್ಕೆ ಒಟ್ಟು 571 ಕಡೆ ಬೆಂಗಳೂರಿನಲ್ಲಿ ನಡೆದಿರುವ ಅಕ್ರಮ ಒತ್ತುವರಿಯ ವರದಿ ಸಿದ್ದಪಡಿಸಿದೆ.

ಒಟ್ಟಾರೆಯಾಗಿ ಪಾಲಿಕೆಯ ಎಂಟು ವಲಯಗಳಲ್ಲಿ 571 ಕಡೆ ಒತ್ತುವರಿಯ ಬಗ್ಗೆ ಸರ್ವೆ ವರದಿ ಪಡೆದು ಕಾರ್ಯಚರಣೆ ನಡೆಯಲಿದೆ. ಇಂದಿನಿಂದ ಎರಡು ವಲಯಗಳಲ್ಲಿ ಪಾಲಿಕೆಯಿಂದ ತೆರವು ಕಾರ್ಯಚರಣೆ ನಡೆಯಲಿದೆ. ಮಹಾದೇವಪುರ ಹಾಗೂ ಕೆ ಆರ್ ಪುರಂ ಎರಡು ಕ್ಷೇತ್ರದಲ್ಲಿ ಎರಡು ಕಡೆ ತೆರವು ನಡೆಯಲಿದೆ. ಕೆ.ಆರ್.ಪುರ ವಿಧಾನಸಭಾ ಕ್ಷೇತ್ರದ ಹೊರಮಾವು ವಾರ್ಡ್‌ನ ಹೊಯ್ಸಳ ನಗರದಲ್ಲಿ ರಾಜಕಾಲುವೆ ಒತ್ತುವರಿ ತೆರವು ನಡೆಯಲಿದೆ. ಹೊಯ್ಸಳ ನಗರದಲ್ಲಿ ರಾಜಕಾಲುವೆ ತೆರವು ಮಾಡಿಕೊಂಡು ಅಂಗಡಿ ಮಳಿಗೆ ನಿರ್ಮಿಸಲಾಗಿದ್ದು ಇಂದು ಅದರ ತೆರವು ಕಾರ್ಯಚರಣೆ ನಡೆಯಲಿದೆ.

Also Read:  ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಪರಿಹಾರಕ್ಕೆ ಡ್ರೋನ್‌ ಬಳಕೆ; ಮೂರು ತಿಂಗಳಲ್ಲಿ ಟ್ರಾಫಿಕ್ ಮುಕ್ತ ನಗರವಾಗಿಸಲು ಸೂಚನೆ

ರಾಜಕಾಲುವೆ ಒತ್ತುವರಿ ಎಂದು ಗುರುತಿಸಿ ತೆರವುಗೊಳಿಸುವುದಕ್ಕೆ ತಹಶೀಲ್ದಾರ್ ಆದೇಶ ನೀಡಿದ್ದಾರೆ. ಒತ್ತುವರಿದಾರರಿಗೆ ಬಿಬಿಎಂಪಿ ಅಧಿಕಾರಿಗಳಿಂದ ತೆರವುಗೊಳಿಸುವ ಬಗ್ಗೆ ಮಾಹಿತಿ ನೀಡಿದ್ದು, ಅಗತ್ಯವಿರುವ ವಸ್ತುಗಳನ್ನು ತೆಗೆದುಕೊಳ್ಳುವಂತೆ ಸೂಚನೆ ನೀಡಲಾಗಿದೆ, ಹೀಗಾಗಿ ಇಂದು ಮಹದೇವಪುರದಲ್ಲಿ ಜೆಸಿಬಿ ಘರ್ಜನೆ ಕೇಳಿಬರುವುದು ಖಚಿತವಾಗಿದೆ.

ಇನ್ನು ಮಹಾದೇವಪುರ ವಲಯದ ಪೈಕ್ ಗಾರ್ಡ್‌ನಲ್ಲಿ ಒತ್ತುವರಿ ತೆರವು ನಡೆಯಲಿದೆ. ಅನಧಿಕೃತವಾಗಿ ಪಿ.ಜಿ. ಕಟ್ಟಡ, ಕಾಂಪೌಂಡ್ ನಿರ್ಮಿಸಲಾಗಿದ್ದು ಒಟ್ಟು 20 ಕಟ್ಟಡಗಳಿಂದ ಒತ್ತುವರಿ ಆಗಿರುವುದು ಗುರುತಿಸಲಾಗಿದೆ. ಇದನ್ನೆಲ್ಲ ಇಂದು ಪಾಲಿಕೆ ತೆರವು ಮಾಡಲಿದೆ. ಮಹಾದೇವಪುರ ವಿಭಾಗದ ಮುನೇಕೊಳಲು ಹಾಗೂ ಪೈಸ್ ಗಾರ್ಡನ್ ಲೇಔಟ್ ಹೊರಮಾವು ಬಡವಾಣೆಯ ಹೊಯ್ಸಳ ಲೇಔಟ್ ನಲ್ಲಿ ತೆರವು ನಡೆಯಲಿದೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:39 am, Sat, 17 June 23

‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ