ಬಿಬಿಎಂಪಿ ವಾರ್ಡ್ ಪುನರ್​ ವಿಂಗಡಣೆಯಲ್ಲಿ ಲೋಪದೋಷ ಆರೋಪ: ಹೈಕೋರ್ಟ್​​​ಗೆ ರಿಟ್ ಅರ್ಜಿ ಸಲ್ಲಿಕೆ

ಬಿಬಿಎಂಪಿ ವಾರ್ಡ್ ಪುನರ್ ​ವಿಂಗಡಣೆಯಲ್ಲಿ ಲೋಪದೋಷವಾಗಿದೆ ಎಂದು ಆರೋಪಿಸಿ ಹೈಕೋರ್ಟ್ ಏಕಸದಸ್ಯ ಪೀಠಕ್ಕೆ ಹಲವು ರಿಟ್ ಅರ್ಜಿ ಸಲ್ಲಿಕೆಯಾಗಿದ್ದು, ಸದ್ಯ ವಿಚಾರಣೆ ನಡೆಯುತ್ತಿದೆ.

ಬಿಬಿಎಂಪಿ ವಾರ್ಡ್ ಪುನರ್​ ವಿಂಗಡಣೆಯಲ್ಲಿ ಲೋಪದೋಷ ಆರೋಪ: ಹೈಕೋರ್ಟ್​​​ಗೆ ರಿಟ್ ಅರ್ಜಿ ಸಲ್ಲಿಕೆ
ಕರ್ನಾಟಕ ಹೈಕೋರ್ಟ್
Follow us
TV9 Web
| Updated By: ವಿವೇಕ ಬಿರಾದಾರ

Updated on:Aug 16, 2022 | 2:12 PM

ಬೆಂಗಳೂರು: ಬಿಬಿಎಂಪಿ ವಾರ್ಡ್ (BBMP Ward) ಪುನರ್​ ವಿಂಗಡಣೆಯಲ್ಲಿ ಲೋಪದೋಷವಾಗಿದೆ ಎಂದು ಆರೋಪಿಸಿ ಹೈಕೋರ್ಟ್ (High Court) ಏಕಸದಸ್ಯ ಪೀಠಕ್ಕೆ ಹಲವು ರಿಟ್ ಅರ್ಜಿ ಸಲ್ಲಿಕೆಯಾಗಿದ್ದು, ಸದ್ಯ ವಿಚಾರಣೆ ನಡೆಯುತ್ತಿದೆ. ಕಾನೂನು ಬಾಹಿರವಾಗಿ ವಾರ್ಡ್​ಗಳನ್ನು ಪುನರ್ವಿಂಗಡಿಸಲಾಗಿದೆ. ಆಡಳಿತ ಪಕ್ಷದವರಿಗೆ ಅನುಕೂಲವಾಗುವಂತೆ ವಾರ್ಡ್ ರೂಪಿಸಲಾಗಿದೆ. ಅವೈಜ್ಞಾನಿಕವಾಗಿ ವಾರ್ಡ್​ಗಳ ಗಡಿ ಬದಲಿಸಲಾಗಿದೆ ಎಂದು ಶಾಂತಿನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಪರ ವಕೀಲ ಅಶೋಕ್ ಹಾರನಹಳ್ಳಿ ವಾದ ಮಂಡಿಸಿದ್ದಾರೆ.

ವಿರೋಧ ಪಕ್ಷದ ಶಾಸಕರಿರುವ ವಾರ್ಡ್ ಸಂಖ್ಯೆ ಕಡಿಮೆ ಮಾಡಲಾಗಿದೆ. ಆಡಳಿತ ಪಕ್ಷದ ಶಾಸಕರಿರುವ ವಾರ್ಡ್​ಗಳ ಸಂಖ್ಯೆ ಹೆಚ್ಚಿಸಲಾಗಿದೆ ಎಂದು ಮಾಜಿ ಮೇಯರ್ ಮಂಜುನಾಥ ರೆಡ್ಡಿ ಪರ ವಕೀಲ ಎಸ್.ಪೊನ್ನಣ್ಣ ವಾದ ಮಂಡಿಸುತ್ತಿದ್ದಾರೆ.

ಬಿಬಿಎಂಪಿ ವಾರ್ಡ್ ಪುನರ್ವಿಂಗಡಣೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವಾರ್ಡ್​ಗಳ ಪುನರ್​ ವಿಂಗಡಣೆ ಕರಡು ಪ್ರಕಟವಾಗಿದೆ. 2011ರ ಜನಸಂಖ್ಯೆ ಆಧಾರದ ಮೇಲೆ ಎಲ್ಲ 243 ವಾರ್ಡ್​ಗಳಿಗೂ ಮತದಾರರನ್ನು ವಿಂಗಡನೆ ಮಾಡಲಾಗಿದೆ. ಕೆಲ ವಾರ್ಡ್​ಗಳ ಮತದಾರರ ಸಂಖ್ಯೆಯಲ್ಲಿ ಹೆಚ್ಚು ಕಡಿಮೆ ಆಗಿರಬಹುದು. ಕೆಲ ವಿಧಾನಸಭಾ ಕ್ಷೇತ್ರದಲ್ಲಿ ವಾರ್ಡ್​ಗಳ ಸಂಖ್ಯೆ ಹೆಚ್ಚಾಗಿದ್ದರೆ, ಹಲವೆಡೆ ಕಡಿಮೆಯಾಗಿದೆ.

ನಗರದ ಹೊರವಲಯದ ಕ್ಷೇತ್ರಗಳಲ್ಲಿ ಹೆಚ್ಚು ವಾರ್ಡ್​ಗಳು ಸೇರ್ಪಡೆಯಾಗಿವೆ. ಎಲ್ಲ ವಾರ್ಡ್​ಗಳ ನಕಾಶೆಗಳನ್ನು ಶೀಘ್ರ ಬಿಡುಗಡೆ ಮಾಡುತ್ತೇವೆ. ಎಲ್ಲ ವಾರ್ಡ್​ಗಳಿಗೂ ಸಾರ್ವಜನಿಕರ ಭಾವನೆ ಆಧರಿಸಿ ನಾಮಕರಣ ಮಾಡಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯಕ್ತ ತುಷಾರ್ ಗಿರಿನಾಥ್ ಹೇಳಿದ್ದರು.

ರಸ್ತೆಗಳಿಗೆ ಗುಂಡಿ ಬಿದ್ದಿರುವ ಕುರಿತು ಕೆಲವರು ಟ್ವೀಟ್ ಮಾಡಿದ್ದಾರೆ. ಈಗ ಗುಂಡಿಗಳು ಬಿದ್ದಿರುವ ಜಾಗದಲ್ಲಿ ಮೊದಲಿನಿಂದಲೂ ಗುಂಡಿಗಳಿದ್ದವು. ಮೋದಿ ಬರುತ್ತಿರುವ ಕಾರಣ ಅವನ್ನು ರಿಪೇರಿ ಮಾಡಲಾಗಿತ್ತು ಎಂದು ಹೇಳಲಾಗಿದೆ. ಈ ಬಗ್ಗೆ ತನಿಖೆ ನಡೆಸಲು ಸೂಚನೆ ನೀಡಲಾಗಿದೆ. ತನಿಖೆಯ ವರದಿಯನ್ನು ಮುಖ್ಯ ಕಾರ್ಯದರ್ಶಿಗೆ, ಪ್ರಧಾನಿ ಕಾರ್ಯಾಲಯಕ್ಕೆ ಕಳಿಸಲಾಗುವುದು. ಅಧಿಕಾರಿಗಳು ನಿನ್ನೆ ರಾತ್ರಿಯೇ ಸ್ಥಳಕ್ಕೆ ಭೇಟಿ ನೀಡಿದ್ದರು. ಡಾಂಬರು ಕಿತ್ತು ಬರುತ್ತಿರುವುದನ್ನು ಗಮನಿಸಿದ್ದಾರೆ. ಅದರ ಬಗ್ಗೆಯೂ ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದರು.

ಬೆಂಗಳೂರು ನಗರವು ಅತೀ ವೇಗದಲ್ಲಿ ಅಭಿವೃದ್ಧಿ ಹೊಂದುತ್ತಿದ್ದು 2001-2011ರ ಅವಧಿಯಲ್ಲಿ ಜನಸಂಖ್ಯೆಯ ಹೆಚ್ಚಳವು ಶೇ. 44ಕ್ಕಿಂತಲೂ ಮೀರಿ ದಾಖಲೆಯಾಗಿದೆ. 2011ರ ಜನಗಣತಿಯ ಪ್ರಕಾರ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಪ್ರದೇಶದಲ್ಲಿನ ಜನಸಂಖ್ಯೆ 84,43,675 ಇತ್ತೆಂದು ನಿಗದಿತವಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿರುವ 198 ವಾರ್ಡುಗಳ ಜನಸಂಖ್ಯೆಯಲ್ಲಿ ಅಸಮಾನತೆ ಸೃಷ್ಟಿಯಾದ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಕರ್ನಾಟಕ ಸರ್ಕಾರವು ಬಿಬಿಎಂಪಿಯ ವಾರ್ಡುಗಳನ್ನು 198 ರಿಂದ 243ಕ್ಕೆ ಹೆಚ್ಚಿಸಲಾಗಿದೆ.

ಜನಸಂಖ್ಯೆಯ ಏಕರೂಪತೆಯನ್ನು ಸಾಧಿಸುವ ಸಲುವಾಗಿ 243 ವಾರ್ಡುಗಳ ಸೀಮಾರೇಖೆಯನ್ನು ಗುರುತಿಸುವ ಕಾರ್ಯ ನಿರ್ವಹಿಸಲು ಕರ್ನಾಟಕ ಸರ್ಕಾರವು ಪುನರ್ವಿಂಗಡಣಾ ಸಮಿತಿಯನ್ನು ರಚಿಸಿತ್ತು. ಈ ಸಮಿತಿಯು BBMP Act 2020 (KARNATAKA ACT NO. 53 OF 2020 THE BRUHAT BENGALURU MAHANAGARA PALIKE ACT, 2020 FT PAR: G.O. No UDD 4 MLR 2014 dt.215.02.2014) ರಲ್ಲಿನ ಮಾನದಂಡಗಳನ್ನು ಅನುಸರಿಸಿ, 2011ರ ಜನಸಂಖ್ಯೆಯನ್ನು ಆಧಾರವಾಗಿಟ್ಟುಕೊಂಡು ಬಿಬಿಎಂಪಿ ವ್ಯಾಪ್ತಿಯಲ್ಲಿ 243 ವಾರ್ಡುಗಳ ವಿಂಗಡಣೆ ಮಾಡಿ ಪ್ರತೀ ವಾರ್ಡಿನ ಗಡಿಗಳನ್ನು ಗುರುತಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ  ಕ್ಲಿಕ್​ ಮಡಿ 

Published On - 2:02 pm, Tue, 16 August 22

ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್