ಬಿಬಿಎಂಪಿ ವಾರ್ಡ್​​ ವಿಂಗಡಣೆ ಕರಡು ಪ್ರತಿ ಅಧಿಸೂಚನೆ ಪ್ರಕಟ; ಸಾರ್ವಜನಿಕರ ಆಕ್ಷೇಪಣೆ ಕೋರಿದ ಸರ್ಕಾರ

BBMP election; ಹಿಂದಿನ ಬಿಜೆಪಿ ಸರ್ಕಾರದ ವಿಂಗಡಣೆಗೆ ಹಲವಾರು ಕಾಂಗ್ರೆಸ್ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದರು. ನಂತರ ಹೈಕೋರ್ಟ್ ವಾರ್ಡ್ ಮೀಸಲಾತಿಯನ್ನು ಪುನರ್ ವಿಂಗಡಣೆ ಮಾಡಲು ಸರ್ಕಾರಕ್ಕೆ ಆದೇಶ ನೀಡಿತ್ತು. ಈ ಮಧ್ಯೆ, ಈ ವರ್ಷ ಡಿಸೆಂಬರ್‌ನಲ್ಲಿ ಬಿಬಿಎಂಪಿ ಚುನಾವಣೆ ನಡೆಯುವ ಸಾಧ್ಯತೆ ಇದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ಬಿಬಿಎಂಪಿ ವಾರ್ಡ್​​ ವಿಂಗಡಣೆ ಕರಡು ಪ್ರತಿ ಅಧಿಸೂಚನೆ ಪ್ರಕಟ; ಸಾರ್ವಜನಿಕರ ಆಕ್ಷೇಪಣೆ ಕೋರಿದ ಸರ್ಕಾರ
ಬಿಬಿಎಂಪಿ
Follow us
TV9 Web
| Updated By: Ganapathi Sharma

Updated on: Aug 19, 2023 | 10:44 AM

ಬೆಂಗಳೂರು, ಆಗಸ್ಟ್ 19: ಕರ್ನಾಟಕ ಸರ್ಕಾರವು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ವಾರ್ಡ್‌ಗಳ ಸಂಖ್ಯೆಯನ್ನು 243 ರಿಂದ 225 ಕ್ಕೆ ಇಳಿಸಿದ ಕೆಲವು ದಿನಗಳ ನಂತರ, ನಗರಾಭಿವೃದ್ಧಿ ಇಲಾಖೆ (Urban Development Department / UDD) ಈ ವಾರ್ಡ್‌ಗಳ ಕರಡು ವಿಂಗಡಣೆ ಬಗ್ಗೆ ಅಧಿಸೂಚನೆ ಸೂಚಿಸಿದೆ. ಶುಕ್ರವಾರ ರಾತ್ರಿ ಇಲಾಖೆಯು ಈ ಬಗ್ಗೆ ಅಧಿಸೂಚನೆ ಹೊರಡಿಸಿದ್ದು, 15 ದಿನಗಳಲ್ಲಿ ಆಕ್ಷೇಪಣೆಗಳನ್ನು ಸಲ್ಲಿಸುವಂತೆ ಸಾರ್ವಜನಿಕರನ್ನು ಕೋರಿದೆ. 2011 ರ ಜನಗಣತಿ ಆಧಾರದ ಮೇಲೆ ಎಲ್ಲಾ 225 ವಾರ್ಡ್‌ಗಳ ಗಡಿಯನ್ನು ನಿಗದಿಪಡಿಸಲಾಗಿದೆ.

ಆಕ್ಷೇಪಣೆಗಳನ್ನು ಅಂಚೆ ಮೂಲಕ ಮಾತ್ರ ಸ್ವೀಕರಿಸಲಾಗುವುದು ಎಂದು ವಿಕಾಸ ಸೌಧದಲ್ಲಿರುವ ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಬರೆದ ಲಕೋಟೆಯಲ್ಲಿ ಇಲಾಖೆ ತಿಳಿಸಿದೆ.

ಹಿಂದಿನ ಆವೃತ್ತಿಯಲ್ಲಿ ಲೋಪದೋಷಗಳಿವೆ ಎಂದು ಕಾಂಗ್ರೆಸ್ ನೇತೃತ್ವದ ಸರ್ಕಾರವು ಕರ್ನಾಟಕ ಹೈಕೋರ್ಟ್‌ಗೆ ತಿಳಿಸಿದ ನಂತರ ಹೊಸದಾಗಿ ವಾರ್ಡ್ ಪುನರ್ ವಿಂಗಡಣೆ ಕಸರತ್ತು ನಡೆಸಲಾಯಿತು. ಜೂನ್ 19 ರಂದು ನ್ಯಾಯಾಲಯವು ಪುನರ್​ ವಿಂಗಡಣೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ 12 ವಾರಗಳ ಕಾಲಾವಕಾಶವನ್ನು ನೀಡಿತು. ಆ ನಂತರದ ಬೆಳವಣಿಗೆಯಲ್ಲಿ ಕರ್ನಾಟಕ ಸರ್ಕಾರವು ಆಗಸ್ಟ್ 5 ರ ಆದೇಶದಲ್ಲಿ ಬಿಬಿಎಂಪಿಯ ವಾರ್ಡ್‌ಗಳ ಸಂಖ್ಯೆಯನ್ನು 243 ರಿಂದ 225 ಕ್ಕೆ ಇಳಿಸಿದೆ.

ಇದನ್ನೂ ಓದಿ:  ಬೆಂಗಳೂರು: ಉದ್ಯಾನ್​​ ಎಕ್ಸ್​ಪ್ರೆಸ್​​​​ ರೈಲಿನಲ್ಲಿ ಅಗ್ನಿ ಅವಘಡ; ತಪ್ಪಿದ ಭಾರಿ ದುರಂತ

ವಾರ್ಡ್ ಪುನರ್ ವಿಂಗಡಣೆ ಕಸರತ್ತು ಪೂರ್ಣಗೊಂಡ ಬಳಿಕ ವಾರ್ಡ್ ಮೀಸಲು ಪ್ರಕಟವಾಗಲಿದ್ದು, ಬಿಬಿಎಂಪಿ ಚುನಾವಣೆಗೆ ನಾಂದಿ ಹಾಡಲಿದೆ.

ಹಿಂದಿನ ಬಿಜೆಪಿ ಸರ್ಕಾರದ ವಿಂಗಡಣೆಗೆ ಹಲವಾರು ಕಾಂಗ್ರೆಸ್ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದರು. ನಂತರ ಹೈಕೋರ್ಟ್ ವಾರ್ಡ್ ಮೀಸಲಾತಿಯನ್ನು ಪುನರ್ ವಿಂಗಡಣೆ ಮಾಡಲು ಸರ್ಕಾರಕ್ಕೆ ಆದೇಶ ನೀಡಿತ್ತು. ಈ ಮಧ್ಯೆ, ಈ ವರ್ಷ ಡಿಸೆಂಬರ್‌ನಲ್ಲಿ ಬಿಬಿಎಂಪಿ ಚುನಾವಣೆ ನಡೆಯುವ ಸಾಧ್ಯತೆ ಇದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ