BBMP Wards: ಬಿಬಿಎಂಪಿ ವಾರ್ಡ್​ ಪುನರ್​ ವಿಂಗಡಣೆಗೆ ಆಯೋಗ ರಚಿಸಿದ ಸರ್ಕಾರ

ಹೈಕೋರ್ಟ್ ಸೂಚನೆ ಸಿಕ್ಕ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಸರ್ಕಾರ ಕಾರ್ಯಪ್ರವೃತ್ತವಾಗಿದೆ. ಆ ಮೂಲಕ ಹಿಂದಿನ ಸರ್ಕಾರ ಮಾಡಿದ್ದ ಪುನರ್​​ ವಿಂಗಡಣೆಯನ್ನು ಬದಲಾಯಿಸಹೊರಟಿದೆ.

BBMP Wards: ಬಿಬಿಎಂಪಿ ವಾರ್ಡ್​ ಪುನರ್​ ವಿಂಗಡಣೆಗೆ ಆಯೋಗ ರಚಿಸಿದ ಸರ್ಕಾರ
ಬಿಬಿಎಂಪಿ

Updated on: Jun 23, 2023 | 7:37 PM

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ವಾರ್ಡ್​ ಪುನರ್​ ವಿಂಗಡಣೆಗೆ ಆಯೋಗ ರಚನೆ ಮಾಡಿ ಕರ್ನಾಟಕ ರಾಜ್ಯ ಸರ್ಕಾರ ಶುಕ್ರವಾರ ಅಧಿಸೂಚನೆ ಹೊರಡಿಸಿದೆ. ಬಿಬಿಎಂಪಿ ಮುಖ್ಯ ಆಯುಕ್ತರು, ಬಿಡಿಎ ಆಯುಕ್ತರು, ಬೆಂಗಳೂರು ನಗರ ಜಿಲ್ಲಾಧಿಕಾರಿ, ಬಿಬಿಎಂಪಿ ಆಯುಕ್ತರು (ಕಂದಾಯ) ಇವರನ್ನೊಳಗೊಂಡ ಆಯೋಗ ರಚಿಸಿ ಅಧಿಸೂಚನೆ ಹೊರಡಿಸಲಾಗಿದೆ.

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಾಡಲಾಗಿದ್ದ ವಾರ್ಡ್ ಪುನರ್​ ವಿಂಗಡಣೆಯನ್ನು ಪ್ರಶ್ನಿಸಲಾಗಿತ್ತು. ಕಾಂಗ್ರೆಸ್​ನ ಮಾಜಿ ಮೇಯರ್, ಮುಖಂಡರು ಹೈಕೋರ್ಟ್​ನಲ್ಲಿ ಪ್ರಶ್ನಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ್ದ ಹೈಕೋರ್ಟ್, ಹೊಸದಾಗಿ ವಾರ್ಡ್ ಪುನರ್​ ವಿಂಗಡಣೆಗೆ ರಾಜ್ಯ ಸರ್ಕಾರಕ್ಕೆ 12 ವಾರ ಕಾಲಾವಕಾಶ ನೀಡಿತ್ತು.

ಹೈಕೋರ್ಟ್ ಸೂಚನೆ ಸಿಕ್ಕ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಸರ್ಕಾರ ಕಾರ್ಯಪ್ರವೃತ್ತವಾಗಿದೆ. ಆ ಮೂಲಕ ಹಿಂದಿನ ಸರ್ಕಾರ ಮಾಡಿದ್ದ ಪುನರ್​​ ವಿಂಗಡಣೆಯನ್ನು ಬದಲಾಯಿಸಹೊರಟಿದೆ.

ಇದನ್ನೂ ಓದಿ: BBMP Election: ವಾರ್ಡ್ ಪುನರ್ವಿಂಗಡಣೆ ಅನಿವಾರ್ಯ, ಬಿಬಿಎಂಪಿ ಚುನಾವಣೆ ಮುಂದೂಡಿಕೆ ಖಚಿತ

ಬಿಬಿಎಂಪಿ ಚುನಾವಣೆಯಲ್ಲಿ ಬಿಜೆಪಿಗೆ ತಿರುಗೇಟು

ವಾರ್ಡ್ ಪುನರ್​​ ವಿಂಗಡಣೆಯು ಮುಂಬರುವ ಬಿಬಿಎಂಪಿ ಚುನಾವಣೆಯಲ್ಲಿ ಬಿಜೆಪಿಗೆ ಸೆಡ್ಡು ಹೊಡೆಯಲು ಕಾಂಗ್ರೆಸ್ ಸರ್ಕಾರ ರೂಪಿಸುತ್ತಿರುವ ತಂತ್ರಗಾರಿಕೆ ಎಂದೇ ವಿಶ್ಲೇಷಿಸಲಾಗುತ್ತಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಿಬಿಎಂಪಿ ವಾರ್ಡ್​​ಗಳನ್ನು 198 ರಿಂದ 243ಕ್ಕೆ ಹೆಚ್ಚಿಸಲಾಗಿತ್ತು. ಇದೀಗ 250ಕ್ಕೆ ಹೆಚ್ಚಿಸಲು ನೂತನ ಸರ್ಕಾರ ಮುಂದಾಗಿದೆ ಎನ್ನಲಾಗಿದೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ