AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಬಿಎಂಪಿಯ ಘನ ತ್ಯಾಜ್ಯ ನಿರ್ವಹಣೆಯ ಟೆಂಡರ್​ಗೆ​ ಹೈಕೋರ್ಟ್ ತಡೆ

ಕರ್ನಾಟಕ ಹೈಕೋರ್ಟ್ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) 4791 ಕೋಟಿ ರೂಪಾಯಿಗಳ ಘನ ತ್ಯಾಜ್ಯ ನಿರ್ವಹಣಾ ಟೆಂಡರ್‌ಗೆ ತಡೆ ನೀಡಿದೆ. ಬೆಂಗಳೂರು ಗುತ್ತಿಗೆದಾರರ ಸಂಘದ ಅರ್ಜಿಯನ್ನು ಪರಿಗಣಿಸಿ, ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಹೈಕೋರ್ಟ್​ ನ ಈ ಆದೇಶದಿಂದ ಸರ್ಕಾರಕ್ಕೆ ಹಿನ್ನಡೆಯಾಗಿದೆ.

ಬಿಬಿಎಂಪಿಯ ಘನ ತ್ಯಾಜ್ಯ ನಿರ್ವಹಣೆಯ ಟೆಂಡರ್​ಗೆ​ ಹೈಕೋರ್ಟ್ ತಡೆ
ಹೈಕೋರ್ಟ್​
Ramesha M
| Edited By: |

Updated on: Jun 16, 2025 | 9:52 PM

Share

ಬೆಂಗಳೂರು, ಜೂನ್​ 16: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (BBMP) ಘನ ತ್ಯಾಜ್ಯ ನಿರ್ವಹಣೆಯ ಹೊಸ ಟೆಂಡರ್​ಗೆ​ ಕರ್ನಾಟಕ ಹೈಕೋರ್ಟ್ (High Court)​ ತಡೆ ನೀಡಿದೆ. ಬೆಂಗಳೂರು ಮಹಾನಗರ ಗುತ್ತಿಗೆದಾರರ ಸಂಘ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್​ ಎರಡು ಕಾರಣಗಳಿಂದ 4791 ಕೋಟಿ ರೂಪಾಯಿಯ ಘನ ತ್ಯಾಜ್ಯ ನಿರ್ವಹಣೆಯ ಹೊಸ ಟೆಂಡರ್​ಗೆ ತಡೆ ನೀಡಿದೆ. ಈ ಮೂಲಕ ಸರ್ಕಾರಕ್ಕೆ ಹಿನ್ನೆಡೆಯಾಗಿದೆ.

ಎರಡು ಕಾರಣಗಳೇನು?

ನೀಡಿದ್ದ ಭರವಸೆ ಉಲ್ಲಂಘಿಸಿದ ಸರ್ಕಾರ

ಸರ್ಕಾರ ಹೈಕೋರ್ಟ್​ಗೆ ನಾಲ್ಕು ಪ್ಯಾಕೇಜ್​ಗಳ ಕಸದ ಟೆಂಡರ್ ಮುಂದುವರಿಸುವುದಾಗಿ ಹೇಳಿತ್ತು. ಆದರೆ, ಸರ್ಕಾರ 33 ಪ್ಯಾಕೇಜುಗಳ ಕಸದ ಟೆಂಡರ್​ಗಳಿಗೆ 7 ವರ್ಷಗಳ ಅವಧಿಗೆ ಟೆಂಡರ್ ನೀಡಿತ್ತು. ಈ ಒಂದು ಕಾರಣದಿಂದಲೂ ಹೈಕೋರ್ಟ್​ ಘನ ತ್ಯಾಜ್ಯ ನಿರ್ವಹಣೆಯ ಹೊಸ ಟೆಂಡರ್​ಗೆ​ ತಡೆ ನೀಡಿದೆ.

ಸಚಿವರ ಅನುಮೋದನೆ

ಸರ್ಕಾರ ತನ್ನ ಆದೇಶ ಪತ್ರದಲ್ಲಿ ಗುತ್ತಿಗೆದಾರರು ಸಕ್ಷಮ ಪ್ರಾಧಿಕಾರಗಳಿಂದ ಅಗತ್ಯ ಅನುಮೋದನೆಗಳನ್ನು ಪಡೆದು, ಇಲಾಖಾ ಸಚಿವರ ಅನುಮೋದನೆಯನ್ನು ತುರ್ತಾಗಿ ಅನುಷ್ಠಾನಗೊಳಿಸಲು ಆದೇಶಿಸಿದೆ. ಮತ್ತು ಕ್ರಿಯಾ ಯೋಜನೆಯಲ್ಲಿ ಅನುಷ್ಠಾನಗೊಳಿಸಬೇಕಿರುವ ಕಾಮಗಾರಿಗಳನ್ನು ಅನಿವಾರ್ಯ ಮತ್ತು ಅನಿಯಂತ್ರಿತ ಕಾರಣಗಳಿಂದಾಗಿ ಬದಲಿಸಿ ಅನುಷ್ಠಾನಗೊಳಿಸಬೇಕಾದಲ್ಲಿ ಮುಖ್ಯ ಆಯಕ್ತರ ಸ್ಪಷ್ಟ ಶಿಫಾರಸ್ಸಿನ ಮೇರೆಗೆ ಇಲಾಖಾ ಸಚಿವರ ಅನುಮೋದನೆ ಪಡೆದುಕೊಂಡು ಅನುಷ್ಠಾನಗೊಳಿಸಬೇಕು ಎಂದು ಹೇಳಿತ್ತು.

ಇದನ್ನೂ ಓದಿ
Image
ನಮ್ಮ ಮೆಟ್ರೋ ಗುಡ್ ನ್ಯೂಸ್: ಐಪಿಎಲ್ ಪ್ರಯುಕ್ತ ಸಂಚಾರ ಸಮಯ ವಿಸ್ತರಣೆ
Image
ಬೆಂಗಳೂರಿನಲ್ಲಿ ಆರ್​ಸಿಬಿ ಪಂದ್ಯ; ಪಾರ್ಕಿಂಗ್ ವಿವರ, ಸಂಚಾರ ಸಲಹೆ ಇಲ್ಲಿದೆ
Image
ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಹೆಲಿಪ್ಯಾಡ್ ನಿರ್ಮಿಸಲು ಕ್ರಮ
Image
ಈ ಸೈಟ್​ನಲ್ಲಿ ಅರ್ಜಿ ಸಲ್ಲಿಸಿದ್ರೆ ಎರಡೇ ದಿನಗಳಲ್ಲಿ ಸಿಗುತ್ತೆ ಇ ಖಾತಾ!

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಬೆಂಗಳೂರು ಗುತ್ತಿಗೆದಾರರ ಸಂಘ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದೆ. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಘನ ತ್ಯಾಜ್ಯ ನಿರ್ವಹಣೆಯ ಹೊಸ ಟೆಂಡರ್​ಗೆ​ ಮಧ್ಯಂತರ ತಡೆ ನೀಡಿದೆ.

ಕಸಕ್ಕೂ ಕಟ್ಟಬೇಕು ಟ್ಯಾಕ್ಸ್

ಮನೆ, ಅಂಗಡಿ ಮುಂಗಟ್ಟಿನ ಕಸಕ್ಕೂ ತೆರಿಗೆ ಪಾವತಿ ಮಾಡಬೇಕು ಎಂದು ಬೆಂಗಳೂರು ಮಹಾನಗರ ಪಾಲಿಕೆ ಸೂಚಿಸಿತ್ತು. ಈ ವಿಚಾರವಾಗಿ ಬಿಬಿಎಂಪಿ ಬಜೆಟ್​​​ನಲ್ಲೂ ಘೋಷಣೆ ಮಾಡಲಾಗಿತ್ತು. ಈ ಮೂಲಕ 600 ಕೋಟಿ ರೂಪಾಯಿ ಆದಾಯ ಸಂಗ್ರಹಕ್ಕೆ ಬಿಬಿಎಂಪಿ ಗುರಿ ಹಾಕಿಕೊಂಡಿತ್ತು.

ಇದನ್ನೂ ಓದಿ: ಬಿಬಿಎಂಪಿಯಿಂದ ಮತ್ತೊಂದು ಶಾಕ್: ಮನೆ ಕಾಂಪೌಂಡ್​ ಒಳಗಿನ ಪಾರ್ಕಿಂಗ್​ಗೂ ಕಟ್ಟಬೇಕು​ ಶುಲ್ಕ!​

ಎಷ್ಟಿರಲಿದೆ ಬಿಬಿಎಂಪಿ ಕಸ ತೆರಿಗೆ?

ಅಂಗಡಿ ಮುಂಗಟ್ಟುಗಳಲ್ಲಿ ಪ್ರತಿ ಕೆಜಿ ಕಸಕ್ಕೆ 12 ರೂಪಾಯಿ ತೆರಿಗೆ ವಸೂಲಿಗೆ ಪಾಲಿಕೆ ಸಜ್ಜಾಗಿದೆ. ಪ್ರತಿ ತಿಂಗಳು ಕಸ ಸಂಗ್ರಹ ಹಾಗೂ ವಿಲೇವಾರಿ ವೆಚ್ಚ ಹೆಚ್ಚಾಗುತ್ತಿದ್ದು, ಈ ಕಾರಣದಿಂದ ತೆರಿಗೆ ವಿಧಿಸಲಾಗುತ್ತಿದೆ ಎಂದು ಬಿಬಿಎಂಪಿ ಹೇಳಿತ್ತು. ಕಟ್ಟಡದ ವಿಸ್ತೀರ್ಣದ ಆಧಾರತದ ಮೇಲೆ ಕಸದ ಶುಲ್ಕ ನಿಗದಿಪಡಿಸಲಾಗುತ್ತದೆ. ಆಸ್ತಿ ತೆರಿಗೆ ಜೊತೆಯೇ ಕಸ ತೆರಿಗೆಯನ್ನೂ ಪಾಲಿಕೆ ಸಂಗ್ರಹ ಮಾಡಲಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್