BBMP helpline: ಕನಕಪುರ ರಸ್ತೆಯಲ್ಲಿ ಕಾಣಿಸಿತು ಬೃಹತ್​​​ ಹೆಬ್ಬಾವು, ಹಾವು ಕಂಡರೆ ಬಿಬಿಎಂಪಿಗೆ ಕರೆ ಮಾಡಿ

ಬೆಂಗಳೂರಿನಲ್ಲಿ ಬಿಸಿಲಿನ ತಾಪ ಹೆಚ್ಚಾಗುತ್ತಿದ್ದು, ಶೆಖೆ ಕಾಟದಿಂದ ಹೊರಬರುವ ಹಾವುಗಳಿಗೆ ಹಾನಿ ಮಾಡದೆ ಬಿಬಿಎಂಪಿ ಅರಣ್ಯ ವಿಭಾಗದ ವನ್ಯಜೀವಿ ತಂಡ ಅಥವಾ ಸಹಾಯವಾಣಿ ಸಂಖ್ಯೆ 08-2222 1188 (helpline)ಗೆ ಕರೆ ಮಾಡಿ

BBMP helpline: ಕನಕಪುರ ರಸ್ತೆಯಲ್ಲಿ ಕಾಣಿಸಿತು ಬೃಹತ್​​​ ಹೆಬ್ಬಾವು, ಹಾವು ಕಂಡರೆ ಬಿಬಿಎಂಪಿಗೆ ಕರೆ ಮಾಡಿ
ಅಂಜನಾಪುರದಲ್ಲಿ 7 ಅಡಿ ಉದ್ದದ ಹೆಬ್ಬಾವು ರಕ್ಷಣೆ
Follow us
ಸಾಧು ಶ್ರೀನಾಥ್​
|

Updated on:Apr 26, 2023 | 1:12 PM

ಬೆಂಗಳೂರು: ಬಿಬಿಎಂಪಿ (BBMP) ಅರಣ್ಯ (Forest) ವಿಭಾಗದ ವನ್ಯಜೀವಿ ಸಂರಕ್ಷಕರು (wildlife conservation team) ದಕ್ಷಿಣ ಬೆಂಗಳೂರಿನ ಕನಕಪುರ ರಸ್ತೆಯಲ್ಲಿರುವ ಅಂಜನಾಪುರದಲ್ಲಿ (Anjanapura) ಸುಮಾರು 7 ಅಡಿ ಉದ್ದದ ಹೆಬ್ಬಾವನ್ನು ಸಂರಕ್ಷಿಸಿದ್ದಾರೆ. ಅಂಜನಾಪುರದ ರಾಜದಾಸ್ ಅವರು ನೀಡಿದ ಮಾಹಿತಿ ಆಧರಿಸಿ ಬಿಬಿಎಂಪಿ, ಅರಣ್ಯ ವಿಭಾಗದ ವನ್ಯಜೀವಿ ಸಂರಕ್ಷಕ ಪ್ರಸನ್ನಕುಮಾರ್ ತಂಡವು ನಿನ್ನೆ ಮಂಗಳವಾರ ಅಂಜನಾಪರದಲ್ಲಿ ಸುಮಾರು 7 ಅಡಿ ಉದ್ದದ ಇಂಡಿಯನ್ ರಾಕ್ ಪೈತಾನ್ (Indian Rock Python) ಹಾವನ್ನು ಸಂರಕ್ಷಿಸಿ, ಹಾವನ್ನು ಸೂಕ್ತ ಸ್ಥಳದಲ್ಲಿ ಬಿಟ್ಟುಬಂದಿದ್ದಾರೆ.

ಬೆಂಗಳೂರಿನಲ್ಲಿ ಬಿಸಿಲಿನ ತಾಪ ಹೆಚ್ಚಾಗುತ್ತಿದ್ದು, ಶೆಖೆ ಕಾಟದಿಂದ ಹೊರಬರುವ ಹಾವುಗಳಿಗೆ ಹಾನಿ ಮಾಡದೆ ಬಿಬಿಎಂಪಿ ಅರಣ್ಯ ವಿಭಾಗದ ವನ್ಯಜೀವಿ ತಂಡ ಅಥವಾ ಸಹಾಯವಾಣಿ ಸಂಖ್ಯೆ 08-2222 1188 (helpline)ಗೆ ಕರೆ ಮಾಡಿ ಹಾವುಗಳ ಸಂರಕ್ಷಣೆಗೆ ಸಾರ್ವಜನಿಕರು ಸಹಕರಿಸಬೇಕೆಂದು ಪಾಲಿಕೆಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಸರಿನಾ ಸಿಕ್ಕಲಿಗ‌ ಮನವಿ ಮಾಡಿದ್ದಾರೆ.

ರ‍್ಯಾಪಿಡೊ ಚಾಲಕನಿಂದ ಲೈಂಗಿಕ ಕಿರುಕುಳ; ಚಲಿಸುತ್ತಿದ್ದ ಬೈಕ್‌ನಿಂದಲೇ ಜಿಗಿದ ಯುವತಿ!

ಸಿಲಿಕಾನ್ ಸಿಟಿ ಬೆಂಗಳೂರು(Bengaluru) ಹೆಣ್ಮಕ್ಕಳಿಗೆ ರಾತ್ರಿ ಸಂಚಾರಕ್ಕೆ ಸೇಫ್ ಅಲ್ಲ ಎಂಬ ವಿಚಾರ ಪದೇ ಪದೇ ಸಾಬೀತಾಗುತ್ತಿದೆ. ಈ ರೀತಿಯ ಘಟನೆಗಳು ಆಗಬಾರದೆಂದು ಎಷ್ಟೇ ನೀತಿ-ನಿಯಮಗಳು, ಕಟ್ಟುನಿಟ್ಟಿನ ಕ್ರಮ ಕೈಗೊಂಡರೂ ಇಂತಹ ಘಟನೆಗಳು ಮರುಕಳಿಸುತ್ತಲೇ ಇವೆ. ನಗರದಲ್ಲಿ ಹೆಣ್ಮಕ್ಕಳಿಗೆ ಎಷ್ಟರ ಮಟ್ಟಿಗೆ ಸೇಫ್ಟಿ ಇದೆ ಎಂಬ ಪ್ರಶ್ನೆಗಳು ಏಳುತ್ತಿವೆ. ತಡ ರಾತ್ರಿ ರ‍್ಯಾಪಿಡೊ ಬುಕ್​ ಮಾಡಿ ಹೊರಟಿದ್ದ ಯುವತಿಗೆ ರ‍್ಯಾಪಿಡೊ(Rapido) ಚಾಲಕ ಲೈಂಗಿಕ ಕಿರುಕುಳ ನೀಡಿದ್ದು ಕಿರುಕುಳಕ್ಕೆ ಬೇಸತ್ತು ಯುವತಿ ಬೈಕ್ ನಿಂದ ಜಂಪ್ ಮಾಡಿದ ಘಟನೆ ನಡೆದಿದೆ. ಬೆಂಗಳೂರಿನ ಯಲಹಂಕ ಉಪನಗರ ನಾಗೇನಹಳ್ಳಿ ಸಮೀಪದ ಖಾಸಗಿ ಕಾಲೇಜು ಬಳಿ ಘಟನೆ ನಡೆದಿದೆ.

ಖಾಸಗಿ ಕಂಪನಿಯಲ್ಲಿ ಆರ್ಕಿಟೆಕ್ಚರ್‌ ಆಗಿರುವ 30 ವರ್ಷದ ಯುವತಿಯೊಬ್ಬಳು ಕಳೆದ ಏಪ್ರಿಲ್ 21ರಂದು ರಾತ್ರಿ ಸುಮಾರು 11.30ರ ಸಮಯದಲ್ಲಿ ಯಲಹಂಕದಿಂದ ಇಂದಿರಾನಗರಕ್ಕೆ ತೆರಳಲು ಆನ್‌ಲೈನ್‌ ಆ್ಯಪ್ ಮೂಲಕ ರ‍್ಯಾಪಿಡೊ ಬೈಕ್ ಅನ್ನು ಬುಕ್‌ ಮಾಡಿದ್ದಳು. ಸ್ವಲ್ಪ ಸಮಯದ ನಂತರ ಸ್ಥಳಕ್ಕೆ ಬಂದ ರ‍್ಯಾಪಿಡೊ ಬೈಕ್‌ ಚಾಲಕ ಯುವತಿಯನ್ನು ಹತ್ತಿಸಿಕೊಂಡಿದ್ದಾನೆ. ಬಳಿಕ ಓಟಿಪಿ ಪಡೆಯುವ ನೆಪದಲ್ಲಿ ಯುವತಿ ಮೊಬೈಲ್ ಕಸಿದುಕೊಂಡಿದ್ದಾನೆ. ನಂತರ ಯುವತಿಯ ಮೈ ಕೈ ಮುಟ್ಟಿ ಲೈಂಗಿಕ ಕಿರುಕುಳ ನೀಡಿದ್ದಾನೆ. ಅಷ್ಟೇ ಅಲ್ಲದೆ ಇಂದಿರಾನಗರಕ್ಕೆ ಹೋಗದೆ ರಾಜಾನುಕುಂಟೆ ಕಡೆಗೆ ಬೈಕ್ ತಿರುಗಿಸಿದ್ದಾನೆ. ಲೊಕೇಶನ್ ಚೇಂಜ್ ಆಗ್ತಿದ್ದಂತೆ ಯುವತಿಗೆ ಭಯ ಶುರುವಾಗಿದೆ. ಜೊತೆಗೆ ಲೈಂಗಿಕ ಕಿರುಕುಳ ಸಹಿಸಲಾಗದೇ ಯುವತಿ ಬೈಕ್​ನಿಂದ ಜಿಗಿದಿದ್ದಾಳೆ.

ಘಟನೆ ಸಂಬಂಧ ಯಲಹಂಕ ಪೊಲೀಸ್ ಠಾಣೆಗೆ ಯುವತಿ ದೂರು ನೀಡಿದ್ದು ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನ ಬಂಧಿಸಿದ್ದಾರೆ. ಆಂಧ್ರ ಪ್ರದೇಶ ಮೂಲದ ದೀಪಕ್ ರಾವ್ ಬಂಧಿತ ಆರೋಪಿ. ಸದ್ಯ ಯಲಹಂಕ ಪೊಲೀಸ್ರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಯುವತಿಯ ಘನತೆಗೆ ಧಕ್ಕೆ ತರುವ ಉದ್ದೇಶದಿಂದ ಲೈಂಗಿಕ ಕಿರುಕುಳ, ಅಪಹರಣ, ಹಲ್ಲೆ ಅಥವಾ ಕ್ರಿಮಿನಲ್ ಕೇಸ್‌ ದಾಖಲು ಮಾಡಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮತ್ತೊಂದೆಡೆ ಘಟನೆ ಸಂಬಂಧ ಯುವತಿ ರ‍್ಯಾಪಿಡೊ ಸಂಸ್ಥೆಗೂ ದೂರು ನೀಡಿದ್ದು ಇದುವರೆಗೂ ಯಾವುದೇ ಕರೆ ಅಥವಾ ಯುವತಿಯನ್ನು ಸಂಪರ್ಕಿಸುವ ಪ್ರಯತ್ನಗಳಾಗಿಲ್ಲ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:08 pm, Wed, 26 April 23

ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ