ಆದಾಯ ಹೆಚ್ಚಿಸಿಕೊಳ್ಳಲು ಜಾಹೀರಾತು ನಿಯಮ ತಿದ್ದುಪಡಿಗೆ ಮುಂದಾದ ಬಿಬಿಎಂಪಿ

ರಾಜ್ಯ ಸರ್ಕಾರ ಪಾಲಿಕೆ ಅದಾಯ ಹೆಚ್ಚಿಸಿಕೊಳ್ಳಲು ಹಾಗೂ ಗ್ಯಾರಂಟಿ ಯೋಜನೆಗೆ ಹಣ ಕೃಢಿಕರಿಸಲು ಜಾಹೀರಾತು ನಿಯಮ ಜಾರಿಗೆ ತರಲು ಚಿಂತನೆ ನಡೆಸಿದೆ. ಒಂದಾನೊಂದು ಕಾಲದಲ್ಲಿ ಬೆಂಗಳೂರನ್ನೇ ಆಳಿದ್ದ ಜಾಹೀರಾತು ಮಾಫಿಯಾಗೆ ಕಾಂಗ್ರೆಸ್ ಮತ್ತೆ ಮಣೆ ಹಾಕುತ್ತಿದೆ. ಅನಧಿಕೃತ ಪ್ಲೇಕ್ಸ್ , ಬ್ಯಾನರ್ ಹಾವಳಿ ತಪ್ಪಿಸಲು ರಾಜ್ಯ ಸರ್ಕಾರ ಮತ್ತೆ ಜಾಹೀರಾತು ಮಾಫಿಯಗೆ ಹೊಸ ರೂಪ ಕೊಟ್ಟು ಮುಂದಿನ ವಾರ ಹೊಸ ನಿಯಮ ಜಾರಿಗೆ ತರುತ್ತಿದೆ.

ಆದಾಯ ಹೆಚ್ಚಿಸಿಕೊಳ್ಳಲು ಜಾಹೀರಾತು ನಿಯಮ ತಿದ್ದುಪಡಿಗೆ ಮುಂದಾದ ಬಿಬಿಎಂಪಿ
ಬಿಬಿಎಂಪಿ ಅಧಿಕಾರಿಗಳೊಂದಿಗೆ ಡಿಕೆ ಶಿವಕುಮಾರ್ ಸಭೆ
Follow us
| Updated By: ವಿವೇಕ ಬಿರಾದಾರ

Updated on:Jun 22, 2024 | 8:32 AM

ಬೆಂಗಳೂರು, ಜೂನ್​ 22: ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ (BBMP) ವ್ಯಾಪ್ತಿಯಲ್ಲಿ ಅನಧಿಕೃತ ಜಾಹೀರಾತಿಗೆ ಕಡಿವಾಣ ಹಾಕಲು, ಗ್ಯಾರಂಟಿ ಯೋಜನೆಗೆ ಹಣ ಸರಿದೂಗಿಸಲು ಹಾಗೂ ಸರ್ಕಾರದ ಖಜಾನೆ ಭರ್ತಿ ಮಾಡಲು ಜಾಹೀರಾತು ನಿಯಮ (BBMP Advertisement Bye Law) ತಿದ್ದುಪಡಿ ಮಾಡಿ ಹೊಸ ಜಾಹೀರಾತು ನಿಯಮ ಜಾರಿಗೆ ತರುವುದಕ್ಕೆ ರಾಜ್ಯ ಸರ್ಕಾರ (Karnataka Government) ಮುಂದಾಗಿದೆ. ಶುಕ್ರವಾರ (ಜೂ.21) ರಂದು ಪಾಲಿಕೆಯ ಕೇಂದ್ರ ಕಚೇರಿಯಲ್ಲಿ ಪಾಲಿಕೆ ಹಿರಿಯ ಅಧಿಕಾರಿಗಳು ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆದಿದ್ದು, ಅಂದುಕೊಂಡಂತೆ ಎಲ್ಲವೂ ನಡೆದರೆ ಕೆಲವೆ ದಿನಗಳಲ್ಲಿ ಹೊಸ ಜಾಹಿರಾತು ನಿಯಮ ಜಾರಿಗೆ ಬರಲಿದೆ.

ನಗರದ ಸೌಂದರ್ಯ ಮತ್ತು ಪರಿಸರ ಹಾಳು ಮಾಡುತ್ತಿರುವ ಜಾಹೀರಾತು ಪ್ರದರ್ಶನವನ್ನು ಹೈಕೋರ್ಟ ನಿಷೇಧಿಸಲಾಗಿದೆ. ಆದರೂ ಕೂಡ ಬಿಬಿಎಂಪಿ ವ್ಯಾಪ್ತಿಯಲ್ಲಿ ಆಯ್ದ ಭಾಗಗಳಲ್ಲಿ ಜಾಹೀರಾತು ಪ್ರದರ್ಶನಕ್ಕೆ ಅನುಮತಿ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ ಅಂತ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ತಿಳಿಸಿದರು.

ಸಾರ್ವಜನಿಕ ಸ್ಥಳದಲ್ಲಿ ಜಾಹೀರಾತು ಪ್ರದರ್ಶನಕ್ಕೆ ಖಾಸಗಿಯವರಿಗೆ ಅನುಮತಿಸುವುದರಿಂದ ಬಿಬಿಎಂಪಿಯ ಆದಾಯ ವೃದ್ಧಿಯಾಗಲಿದೆ. ಈ ಹಿಂದೆ ಜಾಹೀರಾತು ಪ್ರದರ್ಶನ ನಿಷೇಧಿಸುವವರೆಗೆ ಬಿಬಿಎಂಪಿಗೆ ವಾರ್ಷಿಕ 40 ರಿಂದ 50 ಕೋಟಿ ರೂಪಾಯಿ ಮಾತ್ರ ಆದಾಯ ಬರುತ್ತಿತ್ತು. ಅದಕ್ಕೆ ಪ್ರಮುಖ ಕಾರಣ ಬಿಬಿಎಂಪಿ ವ್ಯಾಪ್ತಿಯಲ್ಲಿದ್ದ 8 ಸಾವಿರಕ್ಕೂ ಹೆಚ್ಚಿನ ಜಾಹೀರಾತು ಹೋರ್ಡಿಂಗ್‌ಸ್‌‌ಗಳಲ್ಲಿ ಶೇ. 50 ಅಕ್ರಮ ಹಾಗೂ ಬಿಬಿಎಂಪಿಯಲ್ಲಿ ನೋಂದಣಿ ಮಾಡಿಕೊಳ್ಳದೆ ಅನಧಿಕೃತವಾಗಿತ್ತು.

ಇದನ್ನೂ ಓದಿ: ಬಿಬಿಎಂಪಿ ಶಾಲೆಗಳಲ್ಲಿ ದಾಖಲಾತಿ ಇಳಿಕೆ, ಏಕಾಏಕಿಯಾಗಿ ಶೇ 40 ರಷ್ಟು ಕುಸಿತ!

ಆದರೆ ಬಿಬಿಎಂಪಿ ಜಾಹೀರಾತು ನಿಯಮ 2019 ಜಾರಿಯಾದರೆ ಬಿಬಿಎಂಪಿಗೆ 1000 ಕೋಟಿ ರೂ. ಆದಾಯ ಬರುವ ನಿರೀಕ್ಷೆ ಹೊಂದಲಾಗಿದೆ. ಹೊಸ ಜಾಹೀರಾತು ಕಾಯ್ದೆಯಲ್ಲಿ ಕೆಲ ಮಾನದಂಡಗಳು ಇದ್ದು 60 ಅಡಿ ರಸ್ತೆಗಳು ಹಾಗೂ ಕಮರ್ಷಿಯಲ್ ಜಾಗಗಳಲ್ಲಿ ಕೆಲವೆಡೆಗೆ ಜಾಹಿರಾತುಗೆ ಅವಕಾಶ ನೀಡಲಾಗುವುದು. ಹಳೆಯ ಬಾಕಿ ಇಟ್ಟುಕೊಂಡವರು ಆ ಹಣ ಕಟ್ಟಿದ ಮೇಲೆಯೇ ಟೆಂಡರ್​ನಲ್ಲಿ ಅವಕಾಶ ನೀಡಲಾಗುವುದು. ಇಲ್ಲದಿದ್ದರೆ ಅಂತಹವರಿಗೆ ಟೆಂಡರ್‌ನಲ್ಲಿ ಅವಕಾಶ ಇಲ್ಲ. ಮೆಟ್ರೋ ಹೊರಗೆ ಬಿಬಿಎಂಪಿ ಮತ್ತು ನಮ್ಮ ಮೆಟ್ರೋ ಸಹಭಾಗಿತ್ವದಲ್ಲಿ ಜಾಹೀರಾತು ಅಳವಡಿಕೆಗೆ ಪ್ರತ್ಯೇಕ ಪ್ಯಾಕೇಜ್ ಎಂದು ಹೇಳಿದರು.

ಒಟ್ಟಿನಲ್ಲಿ ನಗರದಲ್ಲಿ ಜಾಹೀರಾತು ಪ್ರದರ್ಶನಕ್ಕೆ ಸಂಬಂಧಿಸಿದಂತೆ ಚರ್ಚೆಗಳು ನಡೆಯುತ್ತಿವೆ. ಈಗಾಗಲೆ ಸಿದ್ಧಪಡಿಸಲಾಗಿರುವ ಬಿಬಿಎಂಪಿ ಜಾಹೀರಾತು ನಿಯಮ 2019 ರಲ್ಲಿ ಎಲ್ಲ ಅಂಶಗಳಿದ್ದು, ಹೊಸ ಜಾಹಿರಾತು ನೀತಿಗೆ 15 ದಿನಗಳ ವರೆಗೆ ಆಕ್ಷೇಪಣೆಗೆ ಸಮಯಾವಕಾಶ ನೀಡಲಾಗಿದ್ದು, ಯಾರೆ ಒಪ್ಪಿಗೆ ಸೂಚಿಸಿದರೂ ಮುಂದಿನ ದಿನಗಳಲ್ಲಿ ಹೊಸ ಜಾಹೀರಾತು ನೀತಿ ಬೆಂಗಳೂರಿಗೆ ಜಾರಿಯಾಗಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:32 am, Sat, 22 June 24

ತಾಜಾ ಸುದ್ದಿ
ಜೈಲಿನಲ್ಲಿ ದರ್ಶನ್​ನ​ ಅಪ್ಪಿ ಕಣ್ಣೀರು ಹಾಕಿದ ತಾಯಿ ಮೀನಾ
ಜೈಲಿನಲ್ಲಿ ದರ್ಶನ್​ನ​ ಅಪ್ಪಿ ಕಣ್ಣೀರು ಹಾಕಿದ ತಾಯಿ ಮೀನಾ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!