ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡವರಿಗೆ ಬಿಬಿಎಂಪಿಯಿಂದ ಗುಡ್ನ್ಯೂಸ್: ಒಟಿಎಸ್ ಕಾಲಾವಕಾಶ 2 ತಿಂಗಳು ವಿಸ್ತರಣೆ
ಬಿಬಿಎಂಪಿ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡವರಿಗೆ ಸಿಹಿ ಸುದ್ದಿ ನೀಡಲಾಗಿದೆ. ಬಿಬಿಎಂಪಿ ಆಸ್ತಿ ತೆರಿಗೆ ಬಾಕಿಯನ್ನು ಒನ್ ಟೈಮ್ ಸೆಟಲ್ಮೆಂಟ್ ಅವಕಾಶ ಅವಧಿಯನ್ನು ಮತ್ತೆ ವಿಸ್ತರಣೆ ಮಾಡಲಾಗಿದೆ. ಒಟಿಎಸ್ ಮೂಲಕ ತೆರಿಗೆ ಪಾವತಿಗೆ ಬರೋಬ್ಬರಿ ಎರಡು ತಿಂಗಳು ಕಾಲ ಅವಕಾಶ ನೀಡಲಾಗಿದೆ.
ಬೆಂಗಳೂರು, (ಆಗಸ್ಟ್ 08): ಬಿಬಿಎಂ ಆಸ್ತಿ ತೆರಿಗೆ ಸುಸ್ತಿದಾರರಿಗಾಗಿ ಜಾರಿಗೆ ತರಲಾಗಿದ್ದ ‘ಒಂದು ಬಾರಿ ಪರಿಹಾರ ಯೋಜನೆ’ (ಒಟಿಎಸ್ -ಒನ್ ಟೈಮ್ ಸೆಟಲ್ಮೆಂಟ್)ಯ ಕಾಲಾವಧಿ ವಿಸ್ತರಣೆ ಮಾಡಲಾಗಿದೆ. ಜುಲೈ 31ಕ್ಕೆ ಮುಕ್ತಾಯಗೊಂಡಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರ ಮನವಿ ಮೇರೆಗೆ ಎರಡು ತಿಂಗಳ ಕಾಲ ಅಂದರೆ ಸೆಪ್ಟೆಂಬರ್ 30ರ ವರೆಗೆ ವಿಸ್ತರಣೆ ಮಾಡಲಾಗಿದೆ. ಈ ಬಗ್ಗೆ ರಾಜ್ಯ ಸರ್ಕಾರ ಮತ್ತು ಬಿಬಿಎಂಪಿ ಇಂದು (ಆಗಸ್ಟ್ 08) ಅಧಿಕೃತ ಆದೇಶ ಹೊರಡಿಸಿದೆ.
ಒಟಿಎಸ್ ಮೂಲಕ ತೆರಿಗೆ ಪಾವತಿಗೆ ಜುಲೈ 31ರವರೆಗೆ ಮಾತ್ರ ಡೆಡ್ಲೈನ್ ನೀಡಲಾಗಿತ್ತು. ಆದ್ರೆ, ತೆರಿಗೆದಾರರಿಂದ ವಿಸ್ತರಣೆಗೆ ಮನವಿ ಬಂದ ಹಿನ್ನೆಲೆಯಲ್ಲಿ ಒಂದು ತಿಂಗಳ ಕಾಲ ವಿಸ್ತರಣೆ ಮಾಡುವ ಚಿಂತನೆ ನಡೆದಿತ್ತು. ಆದ್ರೆ ಇದೀಗ 2 ತಿಂಗಳವರೆಗೆ ಒಟಿಎಸ್ ತೆರಿಗೆ ಪಾವತಿಗೆ ಅವಧಿ ವಿಸ್ತರಣೆ ಮಾಡಲಾಗಿದೆ.
ಇದನ್ನೂ ಓದಿ: ಸ್ವಾತಂತ್ರ್ಯ ದಿನಾಚರಣೆಗೆ ಉಗ್ರರ ಕರಿನೆರಳು: ಬೆಂಗಳೂರಿನಲ್ಲಿ ಪೊಲೀಸರು ಹೈಅಲರ್ಟ್
ಸಿಎಂ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೂಚನೆಯಂತೆ ಸೆಪ್ಟೆಂಬರ್ 30 ಅಂದರೆ ಎರಡು ತಿಂಗಳು ಆಸ್ತಿ ತೆರಿಗೆ ಬಾಕಿ ಪಾವತಿಗೆ ಬಿಬಿಎಂಪಿ ಅವಕಾಶ ನೀಡಿದೆ. ಇನ್ನು ಸಂಪೂರ್ಣ ಬಡ್ಡಿ ಮನ್ನಾ, ಜೊತೆಗೆ ದಂಡದಲ್ಲಿ ಶೇ.50 ರಷ್ಟು ರಿಯಾಯಿತಿ ನೀಡಲಾಗಿದೆ. ಜುಲೈ ತಿಂಗಳ ಅಂತ್ಯದ ವೇಳೆಗೆ ಬಿಬಿಎಂಪಿ ಕಂದಾಯ ವಿಭಾಗದ ಅಧಿಕಾರಿಗಳು ದಾಖಲೆಯ 3,200 ಕೋಟಿ ರೂಪಾಯಿ ಆಸ್ತಿ ತೆರಿಗೆ ಸಂಗ್ರಹಿಸಿದೆ.
ಮೊನ್ನೇ ಅಷ್ಟೇ ಬೆಂಗಳೂರಿನಲ್ಲಿ ನಡೆದಿದ್ದ 11ನೇ ನ್ಯಾನೋ ತಂತ್ರಜ್ಞಾನ ಅಂತಾರಾಷ್ಟ್ರೀಯ ಸಮ್ಮೇಳನ ಕಾರ್ಯಕ್ರಮದ ಬಳಿಕ ಮಾಧ್ಯಮಗಳ ಜತೆ ಶುಕ್ರವಾರ ಮಾತನಾಡಿದ್ದ ಶಿವಕುಮಾರ್ , “ಇಲ್ಲಿವರೆಗೆ ಸುಮಾರು 3 ಸಾವಿರ ಕೋಟಿಯಷ್ಟು ಆಸ್ತಿ ತೆರಿಗೆ ಸಂಗ್ರಹವಾಗಿದ್ದು, ಹೆಚ್ಚುವರಿಯಾಗಿ 400 ಕೋಟಿ ತೆರಿಗೆ ಸಂಗ್ರಹವಾಗಿದೆ. ಕೆಲ ಬದಲಾವಣೆ ಮಾಡಿಕೊಳ್ಳಬೇಕು ಮತ್ತು ಒಟಿಎಸ್ ಕಾಲಾವಧಿ ಒಂದು ತಿಂಗಳು ವಿಸ್ತರಣೆ ಮಾಡಬೇಕು ಎಂದು ಅಧಿಕಾರಿಗಳು ಹಾಗೂ ಸಾರ್ವಜನಿಕರಿಂದ ಒತ್ತಡ ಬರುತ್ತಿದೆ. ಸರ್ವರ್ ಸಮಸ್ಯೆಗಳಿದ್ದು, ಕೆಲವರು ಚೆಕ್ ಮೂಲಕ ಪಾವತಿ ಮಾಡಿದ್ದರಿಂದ ವಿಸ್ತರಣೆಯ ಅಗತ್ಯವಿತ್ತು., ಜುಲೈ 31ರವರೆಗೆ ನೀಡಲಾಗಿದ್ದ ಕಾಲಾವಧಿಯನ್ನು ಒಂದು ತಿಂಗಳ ಕಾಲ ಅಂದರೆ ಆಗಸ್ಟ್ 31ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಹೇಳಿದ್ದರು.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ