AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಬೊಮ್ಮಾಯಿ ಸೂಚನೆ ಮೇರೆಗೆ ಬಿಡಿಎ ವತಿಯಿಂದ ಸಾಲುಮರದ ತಿಮ್ಮಕ್ಕಗೆ ನಿವೇಶನ ಹಂಚಿಕೆ; ಇಂದು ನಿವೇಶನ ಪತ್ರ ಹಸ್ತಾಂತರ

ಬಿಡಿಎ ಅಧ್ಯಕ್ಷ S.R.ವಿಶ್ವನಾಥ್, ಬಿಡಿಎ ಆಯುಕ್ತರಾದ ರಾಜೇಶ್ ಗೌಡರಿಂದ ಸೈಟ್ ನೋಂದಣಿ ಮಾಡಲಾಗಿದೆ. ಇಂದು ನಿವೇಶನ ಪತ್ರವನ್ನು ಸಾಲುಮರದ ತಿಮ್ಮಕ್ಕರಿಗೆ ಹಸ್ತಾಂತರಿಸಲಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ ಮೇರೆಗೆ ನಿವೇಶನ ಹಸ್ತಾಂತರ ಮಾಡಲಾಗಿದೆ.

ಸಿಎಂ ಬೊಮ್ಮಾಯಿ ಸೂಚನೆ ಮೇರೆಗೆ ಬಿಡಿಎ ವತಿಯಿಂದ ಸಾಲುಮರದ ತಿಮ್ಮಕ್ಕಗೆ ನಿವೇಶನ ಹಂಚಿಕೆ; ಇಂದು ನಿವೇಶನ ಪತ್ರ ಹಸ್ತಾಂತರ
ಸಾಲುಮರದ ತಿಮ್ಮಕ್ಕಗೆ ನಿವೇಶನ ಹಂಚಿಕೆ
TV9 Web
| Edited By: |

Updated on:Jun 22, 2022 | 8:27 PM

Share

ಬೆಂಗಳೂರು: ಸಾಲು ಮರದ ತಿಮ್ಮಕ್ಕ (Saalumarada Thimmakka) ಅವರಿಗೆ ಒಂದು ಸೈಟು ಹಾಗೂ ಮತ್ತಷ್ಟು ಮರ ಬೆಳೆಸಿ ಪೋಷಿಸಲು ಸೂಕ್ತ ಜಮೀನು ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಅವರು ಭರವಸೆ ನೀಡಿದ್ದರು. ಅದರಂತೆಯೇ ಸಾಲುಮರದ ತಿಮ್ಮಕ್ಕ ಅವರಿಗೆ ಬಿಡಿಎ(BDA) ವತಿಯಿಂದ ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ 50×80 ಅಳತೆಯ ಸೈಟ್ ನೀಡಲಾಗಿದೆ.

ಬಿಡಿಎ ಅಧ್ಯಕ್ಷ S.R.ವಿಶ್ವನಾಥ್, ಬಿಡಿಎ ಆಯುಕ್ತರಾದ ರಾಜೇಶ್ ಗೌಡರಿಂದ ಸೈಟ್ ನೋಂದಣಿ ಮಾಡಲಾಗಿದೆ. ಇಂದು ನಿವೇಶನ ಪತ್ರವನ್ನು ಸಾಲುಮರದ ತಿಮ್ಮಕ್ಕರಿಗೆ ಹಸ್ತಾಂತರಿಸಲಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ ಮೇರೆಗೆ ನಿವೇಶನ ಹಸ್ತಾಂತರ ಮಾಡಲಾಗಿದೆ. ಕೆಂಪೇಗೌಡ ಬಡಾವಣೆಯ 7ನೇ ಬ್ಲಾಕ್ನಲ್ಲಿರುವ ನಿವೇಶನದ ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಯಿತು. ಇದನ್ನೂ ಓದಿ: Vijaykanth: ಖ್ಯಾತ ನಟ ವಿಜಯ್​ಕಾಂತ್ ಅವರ ಮೂರು ಬೆರಳು ಕತ್ತರಿಸಿದ ವೈದ್ಯರು..!

ಸಾಲುಮರದ ತಿಮ್ಮಕ್ಕ ಅವರಿಗೆ ಜಮೀನು ಮಂಜೂರು ಮಾಡಲು ಅಧಿಕಾರಿಗಳಿಗೆ ಸೂಚಿಸಿದ್ದ ಸಿಎಂ ಬೊಮ್ಮಾಯಿ ವೃಕ್ಷ ಮಾತೆ ಖ್ಯಾತಿಯ ಸಾಲುಮರದ ತಿಮ್ಮಕ್ಕ ಅವರು ಬೆಂಗಳೂರಿನಲ್ಲಿ ಮಂಗಳವಾರ ಸಿಎಂ ಬಸವರಾಜ್ ಬೊಮ್ಮಾಯಿ (Basavaraj Bommai) ಅವರನ್ನು ಭೇಟಿಯಾದರು. ಶತಾಯುಷಿ ಆಗಿರುವ ತಿಮ್ಮಕ್ಕ ಅವರ ಕಾಲಿಗೆ ನಮಸ್ಕರಿಸಿ ಆಶೀವಾರ್ದ ಪಡೆದ ಸಿಎಂ ಬೊಮ್ಮಾಯಿ ಅವರ ತಲೆ ಮುಟ್ಟಿದ ತಿಮ್ಮಕ್ಕ, ರಾಷ್ಟ್ರಪತಿಗಳಿಗೆ ಆಶೀರ್ವದಿಸಿದಂತೆ ನಿಮಗೆ ಹಾಗೂ ನಿಮ್ಮ ಕುಟುಂಬಕ್ಕೆ ಒಳ್ಳೆಯದಾಗಲಿ ಎಂದು ಹಾರೈಸಿದರು. ಇದೇ ವೇಳೆ ತಿಮ್ಮಕ್ಕ ಅವರ ಯೋಗ ಕ್ಷೇಮ ವಿಚಾರಿಸಿದ ಸಿಎಂ, ಒಂದು ಸೈಟು ಹಾಗೂ ಮರಗಳನ್ನು ಬೆಳೆಸಲು ತಿಮ್ಮಕ್ಕ ಅವರಿಗೆ ಸೂಕ್ತ ಜಮೀನು ನೀಡಲು ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅದರಂತೆ ಇಂದು ಸಾಲುಮರದ ತಿಮ್ಮಕ್ಕಗೆ ನಿವೇಶನ ಹಂಚಿಕೆಯಾಗಿದೆ. ಬಿಡಿಎ ಅಧ್ಯಕ್ಷ S.R.ವಿಶ್ವನಾಥ್, ಬಿಡಿಎ ಆಯುಕ್ತರಾದ ರಾಜೇಶ್ ಗೌಡ ನಿವೇಶನ ಪತ್ರ ಹಸ್ತಾಂತರಿಸಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:18 pm, Wed, 22 June 22

Follow Us
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್