ಬಿಡಿಎ ಏಜೆಂಟ್​ಗಿರಿ ವಿರುದ್ಧ ಹರಿಹಾಯ್ದ ಅಧ್ಯಕ್ಷ ಎಸ್ಆರ್ ವಿಶ್ವನಾಥ್: ಬಿಡಿಎನಲ್ಲಿ ಏಜೆಂಟ್​ಗಳ ಕಾರುಬಾರು

ನಾನು ಅಧ್ಯಕ್ಷನಾದ ನಂತರ ಬಿಡಿಎ ಸರಿಪಡಿಸಲು ಯತ್ನಿಸಿದೆ. ಬಿಡಿಎಯನ್ನು ಏಜೆಂಟ್ ಕಾಟದಿಂದ ಮುಕ್ತಗೊಳಿಸುವುದಾಗಿ ಹೇಳಿದ್ದೆ. ಆದರೆ ಈ ಮಾತಿಗೆ ನನ್ನ ಮೇಲೆಯೇ ಮಾನನಷ್ಟ ಮೊಕದ್ದಮೆ ಹಾಕಿದ್ದರು ಎಂದು ನೆನಪಿಸಿಕೊಂಡರು.

ಬಿಡಿಎ ಏಜೆಂಟ್​ಗಿರಿ ವಿರುದ್ಧ ಹರಿಹಾಯ್ದ ಅಧ್ಯಕ್ಷ ಎಸ್ಆರ್ ವಿಶ್ವನಾಥ್: ಬಿಡಿಎನಲ್ಲಿ ಏಜೆಂಟ್​ಗಳ ಕಾರುಬಾರು
ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Mar 22, 2022 | 1:10 PM

ಬೆಂಗಳೂರು: ಬೆಂಗಳೂರು ನಗರಾವೃದ್ಧಿ ಪ್ರಾಧಿಕಾರದ (Bengaluru Development Authority – BDA) ಮಧ್ಯವರ್ತಿಗಳ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (Anti Corruption Bureau – ACB) ಸಿಬ್ಬಂದಿ ದಾಳಿ ನಡೆಸಿರುವುದನ್ನು ಬಿಡಿಎ ಅಧ್ಯಕ್ಷರೂ ಆಗಿರುವ ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಸ್ವಾಗತಿಸಿದ್ದಾರೆ. ವಿಧಾನಸೌಧದಲ್ಲಿ ಈ ಕುರಿತು ಪ್ರತಿಕ್ರಿಯಿಸಿದ ಅವರು, ‘ಬಿಡಿಎನಲ್ಲಿ ಏಜೆಂಟ್‌ಗಳ ಕಾರುಬಾರು ನಡೆಯುತ್ತಿದೆ. ಸಾಕಷ್ಟು ಮಾಹಿತಿ ಕಲೆಹಾಕಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆದರೆ ಈ ದಾಳಿಯಲ್ಲಿಯೂ ಮೂವರು ಪ್ರಭಾವಿಗಳು ತಪ್ಪಿಸಿಕೊಂಡಿದ್ದಾರೆ’ ಎಂದು ಹೇಳಿದರು.

ಬಿಡಿಎ ಕುರಿತು ಸಾಕಷ್ಟು ತಪ್ಪು ಅಭಿಪ್ರಾಯಗಳು ಹರಿದಾಡುತ್ತಿವೆ. ನಾನು ಅಧ್ಯಕ್ಷನಾದ ನಂತರ ಇದನ್ನು ಸರಿಪಡಿಸಲು ಯತ್ನಿಸಿದೆ. ಬಿಡಿಎಯನ್ನು ಏಜೆಂಟ್ ಕಾಟದಿಂದ ಮುಕ್ತಗೊಳಿಸುವುದಾಗಿ ಹೇಳಿದ್ದೆ. ಆದರೆ ಈ ಮಾತಿಗೆ ನನ್ನ ಮೇಲೆಯೇ ಮಾನನಷ್ಟ ಮೊಕದ್ದಮೆ ಹಾಕಿದ್ದರು. ₹ 25 ಕೋಟಿ ಮಾನನಷ್ಟು ಮೊಕದ್ದಮೆ ಹೂಡಿದವರ ಮನೆಯ ಮೇಲೆಯೇ ಈಗ ದಾಳಿಯಾಗಿದೆ. ಬಿಡಿಎ ವಿಚಾರವಾಗಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲು ನಮ್ಮ ಸರ್ಕಾರ ನನಗೆ ಅಧಿಕಾರ ಕೊಟ್ಟಿದೆ. ದಾಳಿ ನಡೆದಿರುವುದು ಉತ್ತಮ ಬೆಳವಣಿಗೆ. ಬಿಡಿಎಯಲ್ಲಿ ಏಜೆಂಟ್‌ಗಿರಿ ನಿಲ್ಲಬೇಕು ಎಂದು ಒತ್ತಾಯಿಸಿದರು.

ವಾಸ್ತವದಲ್ಲಿ ಬಿಡಿಎ ಎನ್ನುವುದು ಅತ್ಯುತ್ತಮ ಸಂಸ್ಥೆ. ಕೆಲವರ ದುರುದ್ದೇಶದಿಂದ ಇದು ಹಾಳಾಗಿದೆ. ಸಂಸ್ಥೆಗೆ ನೇರವಾಗಿ ರೈತರು ಬಂದರೆ ಕೆಲಸಗಳು ಆಗುವುದಿಲ್ಲ. ಆದರೆ ಬ್ರೋಕರ್‌ಗಳ ಮೂಲಕ ಬಂದರೆ ಮಾತ್ರ ಕೆಲಸಗಳು ಸರಾಗವಾಗಿ ಆಗುತ್ತವೆ. ಇದೀಗ ಇಂಥ ಬ್ರೋಕರ್‌ಗಳ ಮನೆಹಳ ಮೇಲೆಯೇ ಎಸಿಬಿ ದಾಳಿ ಆಗಿದೆ. ಮುಂದಿನ ದಿನಗಳಲ್ಲಿ ಎಲ್ಲ ಅವ್ಯವಹಾರಗಳು ಬಯಲಾಗಲಿವೆ ಎಂದರು. ಕುಮಾರಸ್ವಾಮಿ ಹೇಳಿದಂತೆ ಏಜೆಂಟ್‌ಗಿರಿ ನಿಲ್ಲಬೇಕು. ಇವರು ಕೋಟ್ಯಂತರ ರೂಪಾಯಿ ಮೋಸ ಮಾಡಿದ್ದಾರೆ. ಅಲ್ಲಿ ನಡೆದಿರುವ ಅವ್ಯವಹಾರಗಳು ಇದೀಗ ಬಯಲಾಗಿವೆ. ಈ ದಾಳಿಯನ್ನು ನಾನು ಸ್ವಾಗತಿಸುತ್ತೇನೆ ಎಂದರು.

ಎಚ್​ಡಿಕೆಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಉತ್ತರ

ಭಷ್ಟ್ರಾಚಾರ ನಿಗ್ರಹ ದಳ (Anti Corruption Bureau – ACB) ಸಿಬ್ಬಂದಿ ಇತ್ತೀಚೆಗೆ ಹಲವು ದಾಳಿಗಳನ್ನು ನಡೆಸಿದ್ದಾರೆ. ಆದರೆ ಈ ಪೈಕಿ ಎಷ್ಟು ಮಂದಿಗೆ ಶಿಕ್ಷೆಯಾಗಿದೆ ಎಂದು ಜೆಡಿಎಸ್ ನಾಯಕ ಎಚ್​.ಡಿ.ಕುಮಾರಸ್ವಾಮಿ ಪ್ರಶ್ನಿಸಿದರು. ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಗೃಹಸಚಿವ ಆರಗ ಜ್ಞಾನೇಂದ್ರ, ‘ಹಿಂದೆ ಎಸಿಬಿ ಕಾರ್ಯಾಚರಣೆಗಳು ಹೇಗೆ ನಡೆಯುತ್ತಿದ್ದವೋ ಗೊತ್ತಿಲ್ಲ. ಆದರೆ ಈಗ ದಾಳಿಗಳು ಮತ್ತು ಎಫ್​ಐಆರ್ ದಾಖಲಿಸುವ ಕೆಲಸ ಪ್ರಾಮಾಣಿಕವಾಗಿ ನಡೆಯುತ್ತಿದೆ’ ಎಂದು ಹೇಳಿದರು.

ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಎಚ್​.ಡಿ.ಕುಮಾರಸ್ವಾಮಿ, ‘ಇತ್ತೀಚೆಗೆ ಎಸಿಬಿ ದಾಳಿಗಳು ಹೆಚ್ಚಾಗಿವೆ. ಆದರೆ ಎಷ್ಟು ಪ್ರಕರಣಗಳಲ್ಲಿ ಶಿಕ್ಷೆಯಾಗಿದೆ? ಎಷ್ಟು ಪ್ರಕರಣಗಳಲ್ಲಿ ಆಸ್ತಿ ಮುಟ್ಟುಗೋಲು ಆಗಿದೆ? ಕೇವಲ ಎಸಿಬಿ ದಾಳಿ ಆದರೆ ಅದರಿಂದ ಏನೂ ಪರಿಣಾಮ ಆಗುವುದಿಲ್ಲ. ಕೇವಲ ತೋರ್ಪಡಿಕೆಗಾಗಿ ಎಸಿಬಿ ದಾಳಿಗಳು ನಡೆಯುತ್ತಿವೆ ಎಂದು ಗಂಭೀರ ಆರೋಪ ಮಾಡಿದರು. ಬಿಡಿಎ ದಲ್ಲಾಳಿಗಳ ಮೇಲೆ ನಡೆದ ಎಸಿಬಿ ದಾಳಿಯ ಕುರಿತು ಪ್ರತಿಕ್ರಿಯಿಸಿದ ಅವರು, ಕೇವಲ ಎಸಿಬಿ ದಾಳಿ ನಡೆಸಿದರೆ ಪರಿಣಾಮ ಸಿಗಲ್ಲ. ಏನು ಕ್ರಮ ಆಗಿದೆ ಅನ್ನೋದು ಯಾರಿಗೂ ಮಾಹಿತಿ ಇಲ್ಲ ಎಂದರು.

ಎಚ್​ಡಿಕೆ ಹೇಳಿಕೆಗೆ ಪ್ರತಿಕ್ರಿಯಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ, ಈ ಹಿಂದೆ ಎಸಿಬಿ ದಾಳಿಗಳು ಹೇಗೆ ನಡೆದಿತ್ತು ಎಂಬುದು ಗೊತ್ತಿಲ್ಲ. ಆದರೆ ಈಗ ಮಾತ್ರ ಎಸಿಬಿ ದಾಳಿಗಳು ಪ್ರಾಮಾಣಿಕವಾಗಿ ನಡೆಯುತ್ತಿವೆ. ತಪ್ಪಿತಸ್ಥರ ವಿರುದ್ಧ ಎಫ್​ಐಆರ್​ ದಾಖಲಿಸಿ ಕ್ರಮಕೈಗೊಳ್ಳುತ್ತಿದ್ದೇವೆ ಎಂದು ವಿಧಾನಸೌಧದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಭ್ರಷ್ಟಾಚಾರ ನಿಗ್ರಹ ದಳವು ನೇರವಾಗಿ ಮುಖ್ಯಮಂತ್ರಿಗಳ ಅಧೀನಕ್ಕೆ ಬರುತ್ತದೆ. ತಪ್ಪಿತಸ್ಥರ ಮೇಲೆ ಕ್ರಮ ಜರುಗಿಸುವ ಕೆಲಸ ಪ್ರಾಮಾಣಿಕವಾಗಿ ನಡೆಯುತ್ತಿದೆ ಎಂದರು.

ಬಿಡಿಎ ದಲ್ಲಾಳಿಗಳು, ಏಜೆಂಟ್​ಗಳ ಮೇಲೆ ದಾಳಿ

ಬೆಂಗಳೂರು ನಗರದಲ್ಲಿ ಬಿಡಿಎ ಮಧ್ಯವರ್ತಿಗಳು, ಏಜೆಂಟ್‌ಗಳ ಮನೆ ಮೇಲೆ ಎಸಿಬಿ ದಾಳಿ ಮಾಡಿದೆ. ಎಸ್​ಪಿ ಉಮಾ ಪ್ರಶಾಂತ್ ನೇತೃತ್ವದಲ್ಲಿ 100ಕ್ಕೂ ಹೆಚ್ಚು ಎಸಿಬಿ ಅಧಿಕಾರಿಗಳಿಂದ 9 ಕಡೆ ದಾಳಿ ಮಾಡಲಾಗಿದೆ. ಚಾಮರಾಜಪೇಟೆಯ ಬಿ.ಎನ್.ರಘು, ಆರ್​.ಟಿ.ನಗರ ಬಳಿಯ ಮನೋರಾಯನಪಾಳ್ಯದ ಮೋಹನ್, ದೊಮ್ಮಲೂರಿನ ಮನೋಜ್, ಆರ್.ಆರ್.ನಗರದ ತೇಜು, ಮಲ್ಲತ್ತಹಳ್ಳಿಯ ಮುನಿರತ್ನ ಅಲಿಯಾಸ್ ರತ್ನವೇಲು, ಮುದ್ದಿನಪಾಳ್ಯದ ಅಶ್ವತ್ಥ್ ಹಾಗೂ ಚಿಕ್ಕಹನುಮಯ್ಯ, ಚಾಮುಂಡೇಶ್ವರಿನಗರದ ರಾಮು ಮತ್ತು ಚಾಮುಂಡೇಶ್ವರಿ ನಗರ, ಬಿಡಿಎ ಲೇಔಟ್​ನ ಲಕ್ಷ್ಮಣ ಅವರ ಮನೆಗಳ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಇದನ್ನೂ ಓದಿ: ACB Raid: 20 ವರ್ಷಗಳ ಹಿಂದೆ ಮನೆಮನೆಗೆ ಪೇಪರ್, ಹಾಲು ಹಾಕುತ್ತಿದ್ದ ಬಿಡಿಎ ಮಧ್ಯವರ್ತಿ ಮೋಹನ್ ಮನೆಯಲ್ಲಿ ಇಂದು 4.5 ಕೆಜಿ ಚಿನ್ನ ಪತ್ತೆ!

ಇದನ್ನೂ ಓದಿ: ಎಸಿಬಿ ದಾಳಿಯಿಂದ ಏನು ಪ್ರಯೋಜನ ಎಂದ ಜೆಡಿಎಸ್ ನಾಯಕ ಎಚ್​ಡಿಕೆಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಖಡಕ್ ಉತ್ತರ

Published On - 1:08 pm, Tue, 22 March 22

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್