AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಸಿಎಂ ಡಿಕೆ ಶಿವಕುಮಾರ್​​ರಿಂದಲೇ ಡ್ಯಾಂಗಳು ತುಂಬಿ ತುಳುಕುತ್ತಿವೆ: ಕುಮಾರಸ್ವಾಮಿ ವ್ಯಂಗ್ಯ

ಕೆಆರ್​ಎಸ್​ ಡ್ಯಾಂಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ ವಿಚಾರಕ್ಕೆ ಸಂಬಂಧಿಸಿ ದೆಹಲಿಯಲ್ಲಿ ಕೇಂದ್ರ ಸಚಿವ ಹೆಚ್​.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. ಹಾಗೂ ಕರ್ನಾಟಕ ತಮಿಳುನಾಡಿಗೆ ಯಾವತ್ತೂ ಸಮಸ್ಯೆ ಮಾಡಿಲ್ಲ. ನೀರು ಬಳಕೆ ಮಾಡುವ ದೃಷ್ಟಿಯಿಂದ ಮೇಕೆದಾಟು ಯೋಜನೆಗೆ ತಮಿಳುನಾಡು ಒಪ್ಪಬೇಕು ಎಂದು ಆಗ್ರಹಿಸಿದ್ದಾರೆ.

ಡಿಸಿಎಂ ಡಿಕೆ ಶಿವಕುಮಾರ್​​ರಿಂದಲೇ ಡ್ಯಾಂಗಳು ತುಂಬಿ ತುಳುಕುತ್ತಿವೆ: ಕುಮಾರಸ್ವಾಮಿ ವ್ಯಂಗ್ಯ
ಹೆಚ್​ಡಿ ಕುಮಾರಸ್ವಾಮಿ
H P
| Edited By: |

Updated on:Jul 22, 2024 | 12:51 PM

Share

ಬೆಂಗಳೂರು, ಜುಲೈ.22: ಕೆಆರ್‌ಎಸ್‌ ಡ್ಯಾಂ (KRS Dam) ತುಂಬಿ 123 ಅಡಿಗೇರಿದೆ. ಒಂದು ಅಡಿ ನೀರು ಬಂದ್ರೂ ರಾಜ್ಯದ ಹೆಮ್ಮೆಯ ಕೃಷ್ಣರಾಜ ಸಾಗರ ಜಲಾಶಯ ಸಂಪೂರ್ಣ ಭರ್ತಿಯಾಗಲಿದೆ. ಜುಲೈ 27ಕ್ಕೆ ಕಾವೇರಿಗೆ ಸಿಎಂ ಸಿದ್ದರಾಮಯ್ಯ (Siddaramaiah) ಬಾಗಿನ ಅರ್ಪಿಸಲಿದ್ದಾರೆ. ಹೀಗಾಗಿ ಇವತ್ತು ಆ ಕಾರ್ಯಕ್ರಮದ ಸಿದ್ಧತೆಯನ್ನ ಜಲಸಂಪನ್ಮೂಲ ಸಚಿವ DK ಶಿವಕುಮಾರ್‌ ಪರಿಶೀಲಿಸಿದರು. ಇನ್ನು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಕೆಆರ್​ಎಸ್​ ಡ್ಯಾಂಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಗ್ಗೆ ದೆಹಲಿಯಲ್ಲಿ ಕೇಂದ್ರ ಸಚಿವ ಹೆಚ್​.ಡಿ.ಕುಮಾರಸ್ವಾಮಿ (HD Kumaraswamy) ವ್ಯಂಗ್ಯವಾಡಿದ್ದಾರೆ.

ಡಿಸಿಎಂ ಡಿಕೆ ಶಿವಕುಮಾರ್ ಅವರಿಂದಲೇ ಇಂದು ಡ್ಯಾಂಗಳು ತುಂಬಿ ತುಳುಕುತ್ತಿವೆ. ಗಂಗಾ ಆರತಿ ರೀತಿ ಕಾವೇರಿ ಆರತಿ ಮಾಡಿದ್ರೆ ಒಳ್ಳೆಯ ವಿಚಾರ. 5-6 ದಿನದಿಂದ ತಮಿಳುನಾಡುಗೆ 5,6 ಟಿಎಂಸಿ ನೀರು ಹೋಗ್ತಿದೆ. ಜೂನ್, ಜುಲೈ ತಿಂಗಳಿನ ಪಾಲಿಗಿಂತ ಹೆಚ್ಚು ನೀರು ಹೋಗಿದೆ ಎಂದು ಹೆಚ್​ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ತಮಿಳುನಾಡು ಸಿಎಂ ಸ್ಟಾಲಿನ್​​​ಗೂ ನಾನು ಹೇಳಿದ್ದು ಇಷ್ಟೇ. ತಮಿಳುನಾಡು ಸಿಎಂ ಕರ್ನಾಟಕದ ಬಗೆಗಿನ ನಡವಳಿಕೆ‌ ತಿದ್ದುಕೊಳ್ಳಲಿ. ಕರ್ನಾಟಕ ತಮಿಳುನಾಡಿಗೆ ಯಾವತ್ತೂ ಸಮಸ್ಯೆ ಮಾಡಿಲ್ಲ. ನೀರು ಬಳಕೆ ಮಾಡುವ ದೃಷ್ಟಿಯಿಂದ ಮೇಕೆದಾಟು ಯೋಜನೆಗೆ ತಮಿಳುನಾಡು ಒಪ್ಪಬೇಕು. ರಾಜ್ಯ ಸರ್ಕಾರ ಚಿಲ್ಲರೆ ರಾಜಕಾರಣ ಮಾಡುತ್ತಿದೆ. ಕೇಂದ್ರ ಸರ್ಕಾರದ ಮಂತ್ರಿಗಳ ಬಗ್ಗೆ ಲಘುವಾಗಿ ಮಾತನಾಡ್ತಿದ್ದಾರೆ ಎಂದು ದೆಹಲಿಯಲ್ಲಿ ಕೇಂದ್ರ ಸಚಿವ ಹೆಚ್​.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: ಗಂಗಾರತಿ‌ ಮಾದರಿಯಲ್ಲಿ ಕೆಆರ್​ಎಸ್ ಜಲಾಶಯದಲ್ಲಿ ಕಾವೇರಿ ಆರತಿ: ಡಿಸಿಎಂ ಡಿಕೆ ಶಿವಕುಮಾರ್ ಘೋಷಣೆ

ಸರ್ಕಾರ ಪ್ರವಾಸೋದ್ಯಮಕ್ಕೆ ಉತ್ತೇಜಿಸಲು ಕಾವೇರಿ ಬೃಂದಾವನ ಉನ್ನತೀಕರಣಕ್ಕಾಗಿ ಯೋಜನೆ ರೂಪಿಸ್ತಿದೆ. ಖಾಸಗಿ ಸಹಭಾಗಿತ್ವದಲ್ಲಿ ಅಮ್ಯೂಸ್‌ಮೆಂಟ್ ಪಾರ್ಕ್ ನಿರ್ಮಿಸಲಾಗ್ತಿದೆ. ಆದರೆ, ಯಾರನ್ನೂ ಒಕ್ಕಲು ಎಬ್ಬಿಸಲ್ಲ ಅಂತಾ ಕೆಆರ್​ಎಸ್ ಭೇಟಿ ವೇಳೆ ಜಲಸಂಪನ್ಮೂಲ ಸಚಿವ ಡಿಕೆ ಸ್ಪಷ್ಟಪಡಿಸಿದಾರೆ. ಅಲ್ಲದೇ ಗಂಗಾರತಿ ಮಾದರಿಯಲ್ಲೇ ಕಾವೇರಿ ಆರತಿ ಯೋಜನೆಯನ್ನೂ ಜಲಸಂಪನ್ಮೂಲ ಇಲಾಖೆ ಹಾಕಿಕೊಂಡಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:34 pm, Mon, 22 July 24

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ