ವಿಧಾನಸೌಧ ಎರಡನೇ ಮಹಡಿಯಲ್ಲಿ‌ ಪತ್ತೆಯಾಯ್ತು ಬಿಯರ್ ಬಾಟಲ್! ವೈರಲ್ ಆಯ್ತು ಫೋಟೋ!

ಶಕ್ತಿ‌ಸೌಧದಲ್ಲಿ‌ ಮದ್ಯಪಾನ ಮಾಡಿದ್ದು‌ ಯಾರು? ಕುಡಿದ‌ ಬಾಟಲ್ ಬಿಟ್ಟು ಹೋಗಿರುವ ಕುಡುಕರು ಯಾರು? ಎಂಬ ಬಗ್ಗೆ ಚರ್ಚೆಯಾಗುತ್ತಿದ್ದು, ಈ ಬಗ್ಗೆ ಸ್ಪೀಕರ್ ಕಚೇರಿಯಿಂದ ತನಿಖೆಗೆ ಸೂಚನೆ ನೀಡುವ ಸಾಧ್ಯತೆ ಇದೆ.

ವಿಧಾನಸೌಧ ಎರಡನೇ ಮಹಡಿಯಲ್ಲಿ‌ ಪತ್ತೆಯಾಯ್ತು ಬಿಯರ್ ಬಾಟಲ್! ವೈರಲ್ ಆಯ್ತು ಫೋಟೋ!
ವಿಧಾನಸೌಧ ಎರಡನೇ ಮಹಡಿಯಲ್ಲಿ‌ ಬಿಯರ್ ಬಾಟಲ್
Follow us
TV9 Web
| Updated By: preethi shettigar

Updated on:Sep 13, 2021 | 12:49 PM

ಬೆಂಗಳೂರು: ವಿಧಾನಸೌಧದ ಎರಡನೇ ಮಹಡಿಯ 208ನೇ ಕೊಠಡಿ‌ ಬಳಿ ಬಿಯರ್ ಬಾಟಲ್ (Beer Bottle) ಪತ್ತೆಯಾಗಿದೆ. ಸದ್ಯ ಬಿಯರ್ ಬಾಟಲ್‌ ಫೋಟೋ ವೈರಲ್ ಆಗಿದೆ. ಈಗಾಗಲೇ ಸ್ಥಳದಲ್ಲಿದ್ದ ಬಿಯರ್ ಬಾಟಲ್​ಗಳನ್ನು ತೆಗೆಯಲಾಗಿದೆ. ಅಲ್ಲದೆ ಈ ಜಾಗವನ್ನು ಸ್ವಚ್ಛತಾ ಸಿಬ್ಬಂದಿಗಳು ಶುಚಿಗೊಳಿಸಿದ್ದಾರೆ.

ಶಕ್ತಿ‌ಸೌಧದಲ್ಲಿ‌ ಮದ್ಯಪಾನ ಮಾಡಿದ್ದು‌ ಯಾರು? ಕುಡಿದ‌ ಬಾಟಲ್ ಬಿಟ್ಟು ಹೋಗಿರುವ ಕುಡುಕರು ಯಾರು? ಎಂಬ ಬಗ್ಗೆ ಚರ್ಚೆಯಾಗುತ್ತಿದ್ದು, ಈ ಬಗ್ಗೆ ಸ್ಪೀಕರ್ ಕಚೇರಿಯಿಂದ ತನಿಖೆಗೆ ಸೂಚನೆ ನೀಡುವ ಸಾಧ್ಯತೆ ಇದೆ. ವಿಧಾನಸೌಧ ಪೋಲಿಸರು ಈ ಬಗ್ಗೆ ತನಿಖೆ ನಡೆಸುವ ಸಾಧ್ಯತೆ ಇದೆ.

ಈಗಾಗಲೇ ವಿಧಾನಸೌಧದಲ್ಲಿ ಎತ್ತಿಗಾಡಿ ಚಲೋ ಪ್ರತಿಭಟನೆ ನಡೆಯುತ್ತಿದ್ದು, ಇದೀಗ ಬಿಯರ್ ಬಾಟಲ್ ಕಂಡು ಬಂದಿರುವುದು ಮತ್ತೊಂದು ಚರ್ಚೆಗೆ ಕಾರಣವಾಗಿದೆ.

ಎತ್ತಿನಗಾಡಿ ಚಲೋ ಪ್ರತಿಭಟನೆ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಇಂದು ವಿಧಾನಸೌಧಕ್ಕೆ ಚೊಚ್ಚಲ ಪ್ರವೇಶ ಮಾಡುತ್ತಿದ್ದಾರೆ. ಆದರೆ ಮೊದಲ ದಿನವೇ ಅವರಿಗೆ ಪ್ರತಿಪಕ್ಷ ಮತ್ತು ರೈತರ ಕಡೆಯಿಂದ ಪ್ರತಿಭಟನೆ, ಧರಣಿಗಳನ್ನು ಎದುರಿಸುವಂತಾಗಿದೆ. ಇಂದಿನಿಂದ ಉಭಯ ಸದನಗಳ ವಿಧಾನಮಂಡಲ ಅಧಿವೇಶನ ಆರಂಭವಾಗುತ್ತಿರುವ ಹಿನ್ನೆಲೆ ಕಾಂಗ್ರೆಸ್ ನಾಯಕರು ಎತ್ತಿನಗಾಡಿ ಚಲೋ ಪ್ರತಿಭಟನೆ ನಡೆಸುತ್ತಾರೆ. ಇಂದಿನಿಂದ ಸೆ.24ರವರೆಗೆ ವಿಧಾನಮಂಡಲ ಅಧಿವೇಶನ ನಡೆಯಲಿದೆ. ಬೆಲೆ ಏರಿಕೆಯನ್ನು ಖಂಡಿಸಿ ಕೈ ನಾಯಕರು ಎತ್ತಿನ ಬಂಡಿಯನ್ನು ಏರಿ ವಿಧಾನಸಭೆ ಕಲಾಪಕ್ಕೆ ಹೊರಟಿದ್ದಾರೆ. ಈ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಾನು ದೇಶದ ಧ್ವನಿಯಾಗಿ ಕೆಲಸ ಮಾಡುತ್ತಿದ್ದೇನೆ. ಸರ್ಕಾರ ಪ್ರತಿದಿನ ಜನರ ಪಿಕ್ಪಾಕೆಟ್ ಮಾಡುತ್ತಿದೆ ಎಂದು ಹೇಳಿದರು.

ತೈಲ ಬೆಲೆ ಏರಿಕೆಯಿಂದ ಅಗತ್ಯ ವಸ್ತುಗಳ ಬೆಲೆ ಹೆಚ್ಚಾಗುತ್ತಿದೆ. ಈ ಸರ್ಕಾರಕ್ಕೆ ಕಣ್ಣು, ಕಿವಿ ಇಲ್ಲ. ಈ ಸರ್ಕಾರ ಕೆಳಗಿಳಿಸುವವರೆಗೂ ನಾವು ಹೋರಾಡುತ್ತೇವೆ ಎಂದು ಹೇಳಿಕೆ ನೀಡಿದ ಡಿಕೆಶಿ, ಪೆಟ್ರೋಲ್, ಡೀಸೆಲ್ ದರ 75 ರೂ.ಗೆ ಇಳಿಕೆಯಾಗಬೇಕು ಎಂದರು.

ಬೆಲೆ ಏರಿಕೆಯಿಂದ ಭವಿಷ್ಯದಲ್ಲಿ ಎತ್ತಿನಗಾಡಿಯೇ ಗಟ್ಟಿ ಎಂಬ ಸಂದೇಶವನ್ನು ರವಾನಿಸುತ್ತಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಎತ್ತಿನಗಾಡಿಯನ್ನು ಏರಿ ಪ್ರತಿಭಟನೆ ನಡೆಸುತ್ತಿದ್ದಾರೆ. ತಮ್ಮ ಅಧಿಕೃತ ನಿವಾಸದಿಂದ ವಿಧಾನಸೌಧದತ್ತ ತೆರಳಿದ ಸಿದ್ದರಾಮಯ್ಯಗೆ ಎಸ್.ಆರ್.ಪಾಟೀಲ್. ಎಂ‌.ಬಿ.ಪಾಟೀಲ್ ಮತ್ತು ಪರಿಷತ್ ಸದಸ್ಯ ನಜಿರ್ ಅಹಮದ್ ಸಾಥ್ ನೀಡುತ್ತಿದ್ದಾರೆ.

ಎರಡು ಎತ್ತಿನಗಾಡಿಗೆ ಅವಕಾಶ ಸದ್ಯ ಕಾಂಗ್ರೆಸ್‌ನ ಎತ್ತಿನಗಾಡಿ ಚಲೋವಿಧಾನಸೌಧದತ್ತ ತೆರಳಿದೆ. ಕೇವಲ 2 ಎತ್ತಿನ ಗಾಡಿಯಲ್ಲಿ ತೆರಳುವುದಕ್ಕೆ ಮಾತ್ರ ಅವಕಾಶ ಇದೆ. ಹೀಗಾಗಿ ಒಂದೇ ಎತ್ತಿನ ಬಂಡಿಯಲ್ಲಿ ಡಿಕೆಶಿ ಮತ್ತು ಸಿದ್ದರಾಮಯ್ಯ ತೆರಳಿದ್ದಾರೆ.

ಪ್ರತಿಭಟನಾಕಾರರನ್ನು ತಡೆದ ಪೊಲೀಸರು ನಾಲ್ಕು ಎತ್ತಿನ ಗಾಡಿ ಸಹಿತ ನೂರಕ್ಕೂ ಅಧಿಕ ಪ್ರತಿಭಟನಾಕಾರರನ್ನು ವಿಂಡ್ಸನ್ ಮ್ಯಾನರ್ ಸರ್ಕಲ್ ಬಳಿ ಪೊಲೀಸರು ತಡೆದು, ಬ್ಯಾರಿಕೆಡ್ ಹಾಕಿ ಬಂದ್ ಮಾಡಿದ್ದಾರೆ. ಜೊತೆಗೆ ಚಾಲುಕ್ಯ ಸರ್ಕಲ್ ಬಳಿ ಎತ್ತಿನ ಗಾಡಿಯನ್ನು ತಡೆದ ಪೋಲಿಸರು ಬ್ಯಾರಿಕೆಡ್ ಹಾಕಿದ್ದಾರೆ.

ಇದನ್ನೂ ಓದಿ: ವಿಧಾನಸೌಧದೊಳಗೆ ಎತ್ತಿನಗಾಡಿ ಬಿಟ್ಟರೆ ಏನಾಗುತ್ತೆ, ಆಕಾಶ ಬಿದ್ದು ಹೋಗುತ್ತಾ; ಸಿದ್ದರಾಮಯ್ಯ ಕಿಡಿ

ಕೋಡಿಹಳ್ಳಿ ಚಂದ್ರಶೇಖರ್​​ ನೇತೃತ್ವದಲ್ಲಿ ಇಂದು ವಿಧಾನಸೌಧಕ್ಕೆ ರೈತರ ಮುತ್ತಿಗೆ; ಕೇಂದ್ರದ ಕೃಷಿ ನೀತಿ ವಿರುದ್ಧ ಪ್ರತಿಭಟನೆ

Published On - 12:16 pm, Mon, 13 September 21

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ