ಬೆಳ್ಳಂದೂರು ಜಮೀನು ಡಿನೋಟಿಫಿಕೇಷನ್ ಪ್ರಕರಣ; ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರಾದ ಬಿ.ಎಸ್ ಯಡಿಯೂರಪ್ಪ
ಬೆಳ್ಳಂದೂರು ಬಳಿಯ ಜಮೀನು ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ.
ಬೆಂಗಳೂರು: ಬೆಳ್ಳಂದೂರು (Bellanduru) ಬಳಿಯ ಜಮೀನು ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ (BS Yadiyurappa) ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ಯಡಿಯೂರಪ್ಪ ಅವರಿಗೆ ಜಾಮೀನು ಕೋರಿ ಬಿಎಸ್ವೈ ಪರ ವಕೀಲರ ಅರ್ಜಿ ಸಲ್ಲಿಸಿದ್ದಾರೆ. ಆಕ್ಷೇಪಣೆಗಳಿದ್ದರೆ ಸಲ್ಲಿಸಲು ಅಭಿಯೋಜಕರಿಗೆ ಕೋರ್ಟ್ ಸೂಚನೆ ನೀಡಿದೆ. ವಿಚಾರಣೆಯನ್ನು ಜನಪ್ರತಿನಿಧಿಗಳ ಕೋರ್ಟ್ ಜೂನ್ 18ಕ್ಕೆ ಮುಂದೂಡಿದೆ.
ಬೆಳ್ಳಂದೂರು ಬಳಿಯ ಜಮೀನು ಡಿನೋಟಿಫಿಕೇಷನ್ ಪ್ರಕರಣ ಏನು ?
2000-01ರಲ್ಲಿ ಐಟಿ ಪಾರ್ಕ್ಗೆಂದು ಕೆಐಎಡಿಬಿ ಸ್ವಾಧೀನ ಮಾಡಿಕೊಂಡ ಬೆಳ್ಳಂದೂರು, ದೇವರಬೀಸನಹಳ್ಳಿಯಲ್ಲಿ ಭೂಮಿಯನ್ನು ಯಡಿಯೂರಪ್ಪ ಡಿಸಿಎಂ ಆಗಿದ್ದಾಗ 4.30 ಎಕರೆಯಷ್ಟು ಭೂಮಿಯನ್ನು ಡಿನೋಟಿಫೈ ಮಾಡಿದ್ದಾರೆಂದು 2013ರಲ್ಲಿ ವಾಸುದೇವರೆಡ್ಡಿ ಖಾಸಗಿ ದೂರು ಸಲ್ಲಿಸಿದ್ದರು. ಈ ಸಂಬಂಧ ನ್ಯಾಯಾಲಯ ಬಿ.ಎಸ್.ಯಡಿಯೂರಪ್ಪಗೆ ಸಮನ್ಸ್ ಜಾರಿಗೊಳಿಸಿತ್ತು.
ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 2:31 pm, Fri, 17 June 22