ಬೆಳ್ಳಂದೂರು ಜಮೀನು ಡಿನೋಟಿಫಿಕೇಷನ್ ಪ್ರಕರಣ; ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರಾದ ಬಿ.ಎಸ್​​ ಯಡಿಯೂರಪ್ಪ

| Updated By: ವಿವೇಕ ಬಿರಾದಾರ

Updated on: Jun 17, 2022 | 2:34 PM

ಬೆಳ್ಳಂದೂರು ಬಳಿಯ ಜಮೀನು ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್​​ ಯಡಿಯೂರಪ್ಪ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ.

ಬೆಳ್ಳಂದೂರು ಜಮೀನು ಡಿನೋಟಿಫಿಕೇಷನ್ ಪ್ರಕರಣ; ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರಾದ ಬಿ.ಎಸ್​​ ಯಡಿಯೂರಪ್ಪ
ಬಿಎಸ್ ಯಡಿಯೂರಪ್ಪ
Follow us on

ಬೆಂಗಳೂರು: ಬೆಳ್ಳಂದೂರು (Bellanduru) ಬಳಿಯ ಜಮೀನು ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್​​ ಯಡಿಯೂರಪ್ಪ (BS Yadiyurappa) ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ಯಡಿಯೂರಪ್ಪ ಅವರಿಗೆ ಜಾಮೀನು ಕೋರಿ ಬಿಎಸ್​ವೈ ಪರ ವಕೀಲರ ಅರ್ಜಿ ಸಲ್ಲಿಸಿದ್ದಾರೆ. ಆಕ್ಷೇಪಣೆಗಳಿದ್ದರೆ ಸಲ್ಲಿಸಲು ಅಭಿಯೋಜಕರಿಗೆ ಕೋರ್ಟ್ ಸೂಚನೆ ನೀಡಿದೆ. ವಿಚಾರಣೆಯನ್ನು ಜನಪ್ರತಿನಿಧಿಗಳ ಕೋರ್ಟ್ ಜೂನ್ 18ಕ್ಕೆ ಮುಂದೂಡಿದೆ.

ಇದನ್ನು ಓದಿ: ರಾಹುಲ್ ಗಾಂಧಿ ಇಡಿ ವಿಚಾರಣೆ ಖಂಡಿಸಿ ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ; ವಿಚಾರಣೆ ಮಾಡಬಾರದೆಂಬ ಒತ್ತಡ‌ ಒಂದು ರೀತಿ ಗೂಂಡಾಗಿರಿ ಎಂದ ಕೆ.ಎಸ್.ಈಶ್ವರಪ್ಪ

ಬೆಳ್ಳಂದೂರು ಬಳಿಯ ಜಮೀನು ಡಿನೋಟಿಫಿಕೇಷನ್ ಪ್ರಕರಣ ಏನು ?

2000-01ರಲ್ಲಿ ಐಟಿ ಪಾರ್ಕ್​ಗೆಂದು ಕೆಐಎಡಿಬಿ ಸ್ವಾಧೀನ ಮಾಡಿಕೊಂಡ ಬೆಳ್ಳಂದೂರು, ದೇವರಬೀಸನಹಳ್ಳಿಯಲ್ಲಿ ಭೂಮಿಯನ್ನು ಯಡಿಯೂರಪ್ಪ ಡಿಸಿಎಂ ಆಗಿದ್ದಾಗ 4.30 ಎಕರೆಯಷ್ಟು ಭೂಮಿಯನ್ನು ಡಿನೋಟಿಫೈ ಮಾಡಿದ್ದಾರೆಂದು 2013ರಲ್ಲಿ ವಾಸುದೇವರೆಡ್ಡಿ ಖಾಸಗಿ ದೂರು ಸಲ್ಲಿಸಿದ್ದರು. ಈ ಸಂಬಂಧ ನ್ಯಾಯಾಲಯ ಬಿ.ಎಸ್.ಯಡಿಯೂರಪ್ಪಗೆ ಸಮನ್ಸ್ ಜಾರಿಗೊಳಿಸಿತ್ತು.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:31 pm, Fri, 17 June 22