Yuva Nidhi Scheme: ಯುವನಿಧಿ ಯೋಜನೆಗೆ ಈವರೆಗೆ 6062 ಅಭ್ಯರ್ಥಿಗಳು ನೋಂದಣಿ
ಯುವನಿಧಿ ಯೋಜನೆ (Yuva Nidhi Scheme)ಗೆ ಬರೊಬ್ಬರಿ 6062 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಪದವಿ ಹಾಗೂ ಡಿಪ್ಲೊಮಾ ಅರ್ಹ ಫಲಾನುಭವಿಗಳು ಸೇವಾಸಿಂಧು ಪೋರ್ಟಲ್ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಜೊತೆಗೆ ಯಾವುದೇ ಅಡಚಣೆ ಇಲ್ಲದೆ ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ ಎಂದು ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ತಿಳಿಸಿದೆ.

ಬೆಂಗಳೂರು, ಡಿ.28: ವಿಧಾನಸೌಧದ ಬ್ಯಾಂಕ್ವೆಟ್ಹಾಲ್ನಲ್ಲಿ ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆಗೆ ಡಿ.26 ರಂದು ಸಿಎಂ ಸಿದ್ದರಾಮಯ್ಯ (Siddaramaiah) ಅವರು ಚಾಲನೆ ನೀಡಿದ್ದರು. ಇಂದಿನವರೆಗೆ ಯುವನಿಧಿ ಯೋಜನೆ (Yuva Nidhi Scheme)ಗೆ ಬರೊಬ್ಬರಿ 6062 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಪದವಿ ಹಾಗೂ ಡಿಪ್ಲೊಮಾ ಅರ್ಹ ಫಲಾನುಭವಿಗಳು ಸೇವಾಸಿಂಧು ಪೋರ್ಟಲ್ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಜೊತೆಗೆ ಯಾವುದೇ ಅಡಚಣೆ ಇಲ್ಲದೆ ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ ಎಂದು ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ತಿಳಿಸಿದೆ.
ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳೇನು?
ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು 2022-23ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಪದವಿ ಪಡೆದಿರಬೇಕು. ಅದೇ ಶೈಕ್ಷಣಿಕ ವರ್ಷದಲ್ಲಿ ಪದವಿ ಪಡೆದು 6 ತಿಂಗಳು ಪೂರೈಸಿರಬೇಕು. ಉನ್ನತ ಶಿಕ್ಷಣ ವ್ಯಾಸಂಗಕ್ಕೆ ಸೇರಿದವರು ಕೂಡ ಅರ್ಜಿ ಸಲ್ಲಿಸಬಹುದು. ಯಾವುದೇ ಉದ್ಯೋಗಕ್ಕೆ ಸೇರದೆ ಇರುವವರು ಅರ್ಹರಾಗುತ್ತಾರೆ. ಪದವಿ ಮತ್ತು ಡಿಪ್ಲೋಮಾ ತೇರ್ಗಡೆ ಆದವರಿಗೆ ಮಾತ್ರ ಇಲ್ಲಿ ಅವಕಾಶವಿದೆ.
ಇದನ್ನೂ ಓದಿ:Yuvanidhi Application: ಯುವನಿಧಿ ಸ್ಕೀಂಗೆ ಅರ್ಜಿ ಹಾಕುವುದು ಎಲ್ಲಿ, ಹೇಗೆ?
ಇನ್ನು ನಿರುದ್ಯೋಗಿ ಪದವೀಧರರಿಗೆ ಮಾಸಿಕ 3 ಸಾವಿರ ಆರ್ಥಿಕ ನೆರವು. ಹಾಗೂ ಡಿಪ್ಲೋಮಾ ಪೂರೈಸಿದವರಿಗೆ ಮಾಸಿಕ 1,500 ರೂ. ಆರ್ಥಿಕ ನೆರವು ಸಿಗಲಿದೆ. ಯುವನಿಧಿ ಯೋಜನೆಗೆ ಪ್ರಸಕ್ತ ಸಾಲಿ ವರ್ಷದಲ್ಲಿ 250 ಕೋಟಿ ರೂ. ಹಾಗೂ ಮುಂದಿನ ವರ್ಷಕ್ಕೆ 1,250 ಕೋಟಿ ರೂ. ವೆಚ್ಚ ತಗುಲಲಿದೆ. ಬೆಂಗಳೂರು ಒನ್, ಕರ್ನಾಟಕ ಒನ್, ಸೇವಾಸಿಂಧು ಪೋರ್ಟ್ಗಳಲ್ಲಿ ನೋಂದಣಿ ಮಾಡಿಕೊಳ್ಳಬಹುದಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:34 pm, Thu, 28 December 23