AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗರೇ ಎಚ್ಚರ: ಬೇಸಿಗೆ ರಜೆ ಬಂತೆಂದು ಕುಟುಂಬ ಸಮೇತ ಊರು, ಪ್ರವಾಸ ಹೋಗೋ ಮುನ್ನ ಪೊಲೀಸರ ಈ ಸಲಹೆ ಗಮನಿಸಿ

ಇದು ಶಾಲಾ ಮಕ್ಕಳಿಗೆ ಬೇಸಿಗೆ ರಜೆಯ ಸಮಯ. ಜೊತೆಗೆ, ಹಬ್ಬ ಹರಿದಿನ ಎಂದು ಸಾಲು ರಜೆಗಳಿರುವ ಸಮಯ. ಈ ಸಂದರ್ಭದಲ್ಲಿ ಮನೆಗೆ ಬೀಗ ಹಾಕಿ ಊರಿಗೆ ಅಥವಾ ಬೇರೆ ಕಡೆ ಪ್ರವಾಸ ತೆರಳುವವರಿಗೆ ಬೆಂಗಳೂರು ಪೊಲೀಸರು ಮಹತ್ವದ ಸಲಹೆ ಸೂಚನೆ ನೀಡಿದ್ದಾರೆ. ಅವುಗಳು ಏನೆಂಬುದು ಇಲ್ಲಿದೆ.

ಬೆಂಗಳೂರಿಗರೇ ಎಚ್ಚರ: ಬೇಸಿಗೆ ರಜೆ ಬಂತೆಂದು ಕುಟುಂಬ ಸಮೇತ ಊರು, ಪ್ರವಾಸ ಹೋಗೋ ಮುನ್ನ ಪೊಲೀಸರ ಈ ಸಲಹೆ ಗಮನಿಸಿ
ಬೆಂಗಳೂರು ಪೊಲೀಸ್ ಆಯುಕ್ತ ಬಿ ದಯಾನಂದ್
Follow us
Ganapathi Sharma
|

Updated on: Apr 09, 2025 | 8:06 AM

ಬೆಂಗಳೂರು, ಏಪ್ರಿಲ್ 9: ಬೇಸಗೆ ರಜೆಯ (Summer Holidays) ಸಂದರ್ಭದಲ್ಲಿ ಬೆಂಗಳೂರು (Bengaluru) ನಿವಾಸಿಗಳು ಮನೆಯ ಭದ್ರತೆ ಬಗ್ಗೆ ಸಾಕಷ್ಟು ಎಚ್ಚರದಿಂದ ಇರಬೇಕು ಎಂದು ಬೆಂಗಳೂರು ಪೊಲೀಸ್ ಆಯುಕ್ತ ಬಿ ದಯಾನಂದ್ ಸಲಹೆ ನೀಡಿದ್ದಾರೆ. ನಗರದಲ್ಲಿ ಇತ್ತೀಚೆಗೆ ನಡೆದ ಅಪರಾಧ ಕೃತ್ಯಗಳ ಮತ್ತು ಕಳ್ಳತನ ಪ್ರಕರಣಗಳ ಬಗ್ಗೆ ಪತ್ರಿಕಾಗೋಷ್ಠಿ ಮೂಲಕ ಮಾಹಿತಿ ನೀಡಿದ ಅವರು, ಸಾರ್ವಜನಿಕರು ಏನೇನು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಎಂಬ ಬಗ್ಗೆ ಸಲಹೆಯನ್ನೂ ನೀಡಿದ್ದಾರೆ. ವಿಶೇಷವಾಗಿ, ಮನೆಗೆ ಬೇಗ ಹಾಕಿ ಊರಿಗೆ ಅಥವಾ ಪ್ರವಾಸಕ್ಕೆ ತೆರಳುವ ಮುನ್ನ ಬೆಂಗಳೂರು ನಿವಾಸಿಗಳು ಹೆಚ್ಚಿನ ಎಚ್ಚರಿಕೆ ವಹಿಸಬೇಕು ಎಂದು ಅವರು ಸೂಚನೆ ನೀಡಿದ್ದಾರೆ.

ದೀರ್ಘ ಅವಧಿಗೆ ಪ್ರವಾಸ ತೆರಳುವ ಸಂದರ್ಭದಲ್ಲಿ ಮನೆಯಲ್ಲಿ ಬೆಳೆಬಾಳುವ ವಸ್ತುಗಳನ್ನು ಇಡಬೇಡಿ. ಅವುಗಳನ್ನು ಬ್ಯಾಂಕಿನಲ್ಲಿ ಅಥವಾ ಲಾಕರ್‌ಗಳಲ್ಲಿ ಇಡುವುದು ಸೂಕ್ತ ಎಂದು ಅವರ ಸಲಹೆ ನೀಡಿದ್ದಾರೆ.

ಹೆಚ್ಚು ದಿನ ಪ್ರವಾಸ ಹೋಗುವುದಿದ್ದರೆ ಪೊಲೀಸರಿಗೆ ಮಾಹಿತಿ ನೀಡಿ

ಮನೆಗೆ ಗುಣಮಟ್ಟದ ಬೀಗ ಅಳವಡಿಸಬೇಕು. ಸಿಸಿಟಿವಿ ಕ್ಯಾಮೆರಾ ಅಳವಡಿಸಿಕೊಳ್ಳಿ. ಬೀಗದ ಕೀಯನ್ನು ಮನೆ ಪಕ್ಕದಲ್ಲಿ ಎಲ್ಲೋ ಇಟ್ಟು ಹೋಗುವ ಅಭ್ಯಾಸ ಮಾಡಬೇಡಿ. ಒಂದಕ್ಕಿಂತ ಹೆಚ್ಚು ದಿನ ಪ್ರವಾಸ ಹೋಗುವುದಿದ್ದರೆ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿ ತೆರಳಿ. ಇಂಥ ಸಂದರ್ಭದಲ್ಲಿ ಆ ಪ್ರದೇಶದಲ್ಲಿ ಗಸ್ತು ನಡೆಸುವುದು ಪೊಲೀಸರಿಗೂ ಸುಲಭವಾಗುತ್ತದೆ ಎಂದು ದಯಾನಂದ್ ಹೇಳಿದ್ದಾರೆ.

ಇದನ್ನೂ ಓದಿ
Image
ಇಂದು, ನಾಳೆ ಬೆಂಗಳೂರಿನ ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ
Image
ಬೆಂಗಳೂರು ಮೈಸೂರು ರೈಲು ಪ್ರಯಾಣಿಕರಿಗೆ ಸಂಕಷ್ಟ
Image
ಎಲ್​​​ಪಿಜಿ ಸಿಲಿಂಡರ್ ಬೆಲೆ 50 ರೂ ಹೆಚ್ಚಳ
Image
ಪೆಟ್ರೋಲ್, ಡೀಸಲ್ ಮೇಲೆ ಅಬಕಾರಿ ಸುಂಕ 2 ರೂ ಹೆಚ್ಚಳ

ಮನೆ ಕೆಲಸದವರ ನೇಮಕದ ವೇಳೆ ಇರಲಿ ಎಚ್ಚರ: ದಯಾನಂದ್

ಕಷ್ಟಪಟ್ಟು ಸಂಪಾದಿಸಿದ ಹಣ, ಚಿನ್ನವನ್ನು ಒಂದು ಸಣ್ಣ ಅಜಾಗರೂಕತೆಯಿಂದ ಕಳೆದುಕೊಳ್ಳಬೇಡಿ. ಕಳ್ಳರು ಕೇವಲ ಹೊರಗಿನಿಂದ ಬರುವವರಷ್ಟೇ ಅಲ್ಲ, ಮನೆಯಲ್ಲಿಯೂ ಇರಬಹುದು. ಹೀಗಾಗಿ ಮನೆ ಕೆಲಸದವರನ್ನು ನೇಮಿಸಿಕೊಳ್ಳುವ ಮುನ್ನ ಅವರ ಪೂರ್ವಾಪರವನ್ನು ಸರಿಯಾಗಿ ತಿಳಿದುಕೊಳ್ಳಿ. ಮನೆಯಲ್ಲಿ ಎಲ್ಲಿಂದರಲ್ಲಿ ಕೆಲಸದವರನ್ನು ಓಡಾಡಲು ಬಿಡಬೇಡಿ. ಬೆಲೆಬಾಳುವ ವಸ್ತುಗಳನ್ನು ಅವರಿಗೆ ಕಾಣುವಂತೆ ಇಡುವುದು, ಪ್ರದರ್ಶಿಸುವುದು ಮಾಡಬೇಡಿ ಎಂದು ಪೊಲೀಸ್ ಆಯುಕ್ತರು ಸಲಹೆಗಳನ್ನು ನೀಡಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಮೈಸೂರು ರೈಲು ಪ್ರಯಾಣಿಕರಿಗೆ ಸಂಕಷ್ಟ

ಬೆಂಗಳೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಮನೆಗಳ್ಳತನ ಪ್ರಕರಣಗಳು ಹೆಚ್ಚಾಗುತ್ತಿವೆ. ಕೆಲವು ದಿನಗಳ ಹಿಂದಷ್ಟೇ ಭರ್ಜರಿ ಕಾರ್ಯಾಚರಣೆ ನಡೆಸಿದ್ದ ಪೊಲೀಸರು ನೇಪಾಳಿ ಗ್ಯಾಂಗನ್ನು ಬಂಧಿಸಿದ್ದರು. ಈ ಗ್ಯಾಂಗ್ ಮನೆಗೆ ನುಗ್ಗಿ ಚಿನ್ನ, ಬೆಳ್ಳಿ ಹಾಗೂ ಇತರ ಆಭರಣ ವಸ್ತುಗಳನ್ನು ಕಳವು ಮಾಡುತ್ತಿತ್ತು. ಇದೀಗ ಬೇಸಿಗೆ ರಜೆ ಸಂದರ್ಭದಲ್ಲಿ ಇಂತಹ ಗ್ಯಾಂಗ್​​ಗಳು ಇನ್ನಷ್ಟು ಸಕ್ರಿಯವಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಪೊಲೀಸರು ಸಾರ್ವಜನಿಕರಿಗೆ ಸಲಹೆ ಸೂಚನೆಗಳನ್ನು ನೀಡಿದ್ದಾರೆ.

ವರದಿ: ಪ್ರದೀಪ್ ಚಿಕ್ಕಾಟಿ, ‘ಟಿವಿ9’

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Daily Devotional: ಶನಿ ಅಥವಾ ಸಾಡೇಸಾತಿಯಿಂದ ಪಾರಾಗಲು ಏನು ಮಾಡಬೇಕು?
Daily Devotional: ಶನಿ ಅಥವಾ ಸಾಡೇಸಾತಿಯಿಂದ ಪಾರಾಗಲು ಏನು ಮಾಡಬೇಕು?
Daily Horoscope: ಇಂದಿನ ದ್ವಾದಶ ರಾಶಿಗಳ ಫಲಾಫಲವನ್ನು ತಿಳಿಯಿರಿ
Daily Horoscope: ಇಂದಿನ ದ್ವಾದಶ ರಾಶಿಗಳ ಫಲಾಫಲವನ್ನು ತಿಳಿಯಿರಿ
ಹೆಂಡತಿ, ಮಕ್ಕಳು ಇರುವ ಮನು ಹಿಂದೆ ಯಾಕೆ ಹೋದೆ? ಉತ್ತರಿಸಿದ ಸಂತ್ರಸ್ತ ಮಹಿಳೆ
ಹೆಂಡತಿ, ಮಕ್ಕಳು ಇರುವ ಮನು ಹಿಂದೆ ಯಾಕೆ ಹೋದೆ? ಉತ್ತರಿಸಿದ ಸಂತ್ರಸ್ತ ಮಹಿಳೆ
ಕೇರಳದ ಸಮುದ್ರದಲ್ಲಿ ಹೊತ್ತಿ ಉರಿದ ಬೃಹತ್ ಹಡಗು; 4 ಜನ ನಾಪತ್ತೆ
ಕೇರಳದ ಸಮುದ್ರದಲ್ಲಿ ಹೊತ್ತಿ ಉರಿದ ಬೃಹತ್ ಹಡಗು; 4 ಜನ ನಾಪತ್ತೆ
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್