AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೂರು ಟ್ರಾಫಿಕ್ ಕೇಸ್​: ಬೈಕ್​ ಬಾಳುವ ಬೆಲೆಯಷ್ಟೇ ಶೇ 50 ಆಫರ್​ನಲ್ಲಿ ದಂಡ ಕಟ್ಟಿದ ಮಾಲೀಕ, ಎಷ್ಟು ಗೊತ್ತಾ?

ಬೆಂಗಳೂರು ಪೊಲೀಸರು ಟ್ರಾಫಿಕ್ ದಂಡದ ಮೇಲೆ 50% ರಿಯಾಯಿತಿಗೆ ಮೊದಲ ದಿನದಿಂದಲೇ ವಾಹನ ಸವಾರರಿಂದ ಅದ್ಭುತ ಪ್ರತಿಕ್ರಿಯೆ ದೊರೆತಿದೆ. ಸದ್ಯ ಒಂದೇ ವಾಹನದ ಮೇಲೆ ಇದ್ದ 100 ಕೇಸ್​ಗೆ ಪೊಲೀಸರು ಮಾಲೀಕನಿಂದ ಬರೋಬರಿ 46,500 ರೂ. ದಂಡ ಕಟ್ಟಿಸಿಕೊಂಡಿದ್ದಾರೆ. ಆಗಸ್ಟ್ 23 ರಿಂದ ಸೆಪ್ಟೆಂಬರ್ 9ರ ವರೆಗೆ ಈ ರಿಯಾಯಿತಿ ಇರಲಿದೆ.

ನೂರು ಟ್ರಾಫಿಕ್ ಕೇಸ್​: ಬೈಕ್​ ಬಾಳುವ ಬೆಲೆಯಷ್ಟೇ ಶೇ 50 ಆಫರ್​ನಲ್ಲಿ ದಂಡ ಕಟ್ಟಿದ ಮಾಲೀಕ, ಎಷ್ಟು ಗೊತ್ತಾ?
ದಂಡ ಕಟ್ಟಿದ ವ್ಯಕ್ತಿ
ರಾಚಪ್ಪಾಜಿ ನಾಯ್ಕ್
| Updated By: ಗಂಗಾಧರ​ ಬ. ಸಾಬೋಜಿ|

Updated on:Aug 28, 2025 | 6:37 PM

Share

ಬೆಂಗಳೂರು, ಆಗಸ್ಟ್​ 28: ಟ್ರಾಫಿಕ್ ಫೈನ್​ಗೆ ಬೆಂಗಳೂರು ಪೊಲೀಸರ ಶೇಕಡಾ 50 ರಿಯಾಯಿತಿಗೆ  (Traffic Fine Discount) ವಾಹನ ಸವಾರರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈ ಉಪಕ್ರಮವನ್ನು ಸದುಪಯೋಗಪಡಿಸಿಕೊಂಡು ಸವಾರರು ಬಾಕಿ ದಂಡ (Fine) ಪಾವತಿಸುವ ಮೂಲಕ ಅರ್ಧದಷ್ಟು ಹಣ ಉಳಿತಾಯ ಮಾಡುತ್ತಿದ್ದಾರೆ. ಇಲ್ಲೊಬ್ಬರು ಸವಾರರು, ತಮ್ಮ ಒಂದೇ ವಾಹನದ ಮೇಲಿದ್ದ 100 ಕೇಸ್​ಗೆ ಬರೋಬರಿ 46,500 ರೂ. ದಂಡ ಕಟ್ಟಿದ್ದಾರೆ.

ಶೇಕಡಾ 50 ರಿಯಾಯಿತಿಯಲ್ಲಿ ಬೈಕ್ ಮಾಲೀಕನಿಂದ ಹೆಚ್.ಎ.ಎಲ್ ಟ್ರಾಫಿಕ್ ಪೊಲೀಸರು ದಂಡ ಕಟ್ಟಿಸಿಕೊಂಡಿದ್ದಾರೆ. ಬಾಕಿ ದಂಡ ಪಾವತಿಗೆ ಸರ್ಕಾರ ಆಗಸ್ಟ್ 23 ರಿಂದ ಸೆಪ್ಟೆಂಬರ್​ 9ರ ವರೆಗೆ 50% ರಿಯಾಯಿತಿ ನೀಡಿದೆ. ಹೀಗಾಗಿ ಬಾಕಿ ಉಳಿಸಿಕೊಂಡ ದಂಡವನ್ನು ವಾಹನ ಮಾಲೀಕರು ಪಾವತಿಸುತ್ತಿದ್ದಾರೆ.

ಇದನ್ನೂ ಓದಿ: ಟ್ರಾಫಿಕ್ ಫೈನ್‌ ಶೇ 50ರ ರಿಯಾಯಿತಿಗೆ ಭರ್ಜರಿ‌ ರೆಸ್ಪಾನ್ಸ್: ನಾಲ್ಕೇ ದಿನದಲ್ಲಿ ಸಂಗ್ರಹವಾದ ದಂಡವೆಷ್ಟು ಗೊತ್ತಾ?

ಇದನ್ನೂ ಓದಿ
Image
ಹೆಬ್ಬಾಳದಲ್ಲಿ ತಪ್ಪುತ್ತಿಲ್ಲ ಟ್ರಾಫಿಕ್ ಗೋಳು! ಡ್ರೋನ್ ವಿಡಿಯೋ ವೈರಲ್
Image
ಟ್ರಾಫಿಕ್ ಫೈನ್ ಶೇ 50ರ ರಿಯಾಯಿತಿಯಿಂದ ಅಪಾಯವೆಂದ ತಜ್ಞರು: ಕಾರಣ ಏನು?
Image
ಸಾಲು ಸಾಲು ರಜೆ: ಊರಿಗೆ ತೆರಳುತ್ತಿರುವ ಜನ, ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್
Image
ಟ್ರಾಫಿಕ್ ಫೈನ್ ರಿಯಾಯಿತಿ: ಸುಲಭವಾಗಿ ಪಾವತಿಸೋದು ಹೇಗೆಂದು ಇಲ್ಲಿದೆ ಮಾಹಿತಿ

ಕಳೆದ ವರ್ಷದಂತೆಯೇ ಈ ವರ್ಷ ಕೂಡ ಸಂಚಾರ ಪೊಲೀಸರು ಶೇ 50ರಷ್ಟು ರಿಯಾಯಿತಿ ಘೋಷಣೆ ಮಾಡಿದ್ದರು. ಬೆಂಗಳೂರಿನಲ್ಲಿ ಬಾಕಿ ಉಳಿದಿದ್ದ ದಂಡ ವಸೂಲಿಗೆ ಪೊಲೀಸ್​ ಇಲಾಖೆ 50% ರಿಯಾಯಿತಿ ನೀಡಿದೆ. ಸದ್ಯ ಇದಕ್ಕೆ ಸವಾರರಿಂದ ಭರ್ಜರಿ‌ ರೆಸ್ಪಾನ್ಸ್ ಸಿಗುತ್ತಿದೆ. ಪರಿಣಾಮ ಆರಂಭವಾಗಿ 4 ದಿನಗಳಲ್ಲಿ 14,89,36,300 ರೂ ಹಣ ಬಾಕಿ ದಂಡ ಸಂಗ್ರಹವಾಗಿತ್ತು. ಆ ಮೂಲಕ 5,25,551 ಬಾಕಿ ಕೇಸ್‌ಗಳಿಗೆ ವಾಹನ ಮಾಲೀಕರು ದಂಡ ಪಾವತಿ ಮಾಡಿದ್ದಾರೆ.

ನಿಮ್ಮ ಬಾಕಿ ದಂಡವನ್ನು ರಿಯಾಯಿತಿಯೊಂದಿಗೆ ಪಾವತಿ ಮಾಡುವ ವಿಧಾನ

  • ಈ ಕೆಳಗಿನ ಮೊಬೈಲ್ ಆ್ಯಪ್‌ಗಳನ್ನು ಬಳಸಿ (ಪ್ಲೇ ಸ್ಟೋರ್ ಮತ್ತು ಅಪಲ್ ಸ್ಟೋರ್‌ನಲ್ಲಿ ಲಭ್ಯ)
  • ಕರ್ನಾಟಕ ರಾಜ್ಯ ಪೊಲೀಸ್ ಆ್ಯಪ್​, ಆಸ್ಟಮ್ (BTP/ಟ್ರಾಫಿಕ್ ಉಲ್ಲಂಘನೆ ವ್ಯವಸ್ಥೆ)

ಪ್ರಕ್ರಿಯೆ

  • ನಿಮ್ಮ ವಾಹನದ ಸಂಖ್ಯೆಯನ್ನು ನಮೂದಿಸಿ.
  • ನಿಮ್ಮ ವಾಹನದ ಫೋಟೋ, ವಿವರಗಳನ್ನು ಪರಿಶೀಲಿಸಿ.
  • ರಿಯಾಯಿತಿಯೊಂದಿಗೆ ದಂಡವನ್ನು ಪಾವತಿಸಿ.
  • ಯಾವುದೇ ಸಂಚಾರ ಪೊಲೀಸ್ ಠಾಣೆಗೆ ಭೇಟಿ ನೀಡಿ ಮುಖೇನ ಪಾವತಿಸಬಹುದು.
  • ಅಥವಾ ನಗರದ ಇನ್ಸಾಂಟ್ರಿ ರಸ್ತೆ, “ಜೆಡಿಯನ್ ಎಕ್ಸ್‌ಪ್ರೆಸ್ ಹತ್ತಿರ ಮೊದಲನೇ ಮಹಡಿಯಲ್ಲಿರುವ ಸಂಚಾರ ನಿರ್ವಹಣಾ ಕೇಂದ್ರ (TMC)ಗೆ ಭೇಟಿ ನೀಡಬಹುದಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:35 pm, Thu, 28 August 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ